ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಕುಂದಾಪುರ ಪ್ರವರ್ತಿತ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿಗೆ ಜಿಲ್ಲೆಯ ವಿವಿಧ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ 26 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಬ್ರಹ್ಮಾವರದ ಶ್ರೀ ಜೈಸನ್ ಲುವಿಸ್ ಅವರು ಉಪಪ್ರಾಂಶುಪಾಲರಾಗಿ ನೇಮಕಗೊಂಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಿ, ಸಿ ಇ ಟಿ /ಜೆ ಇ ಇ ಮೈನ್ಸ್ / ನೀಟ್ /ಐ ಐ ಟಿ ಯಲ್ಲಿ ಅತ್ತ್ಯುತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಉಪಪ್ರಾಂಶುಪಾಲರನ್ನು ನೇಮಿಸಲಾಗಿದೆ. ಉಪಾಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಜೈಸನ್ ಲುವಿಸ್ ಸಂಸ್ಥೆಯ ಉತ್ತರೋತ್ತರ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಗುಣಮಟ್ಟದ ಫಲಿತಾಂಶಕ್ಕೆ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವುದಾಗಿ ಹೇಳಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅರಾಟೆ ಹೊಸ ಸೇತುವೆಯಲ್ಲಿ ಕಳೆದ ಜ.21 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಲೂರಿನ ನಿವಾಸಿ ಮಹಾಬಲ ಜೋಯಿಸ್ ಅವರ ಪುತ್ರ ರತ್ನಾಕರ ಜೋಯಿಸ್ (47) ಅವರು ಇತ್ತೀಚಿಗೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಜ.21ರ ಬೆಳಗ್ಗೆ 4.55 ರ ಸುಮಾರಿಗೆ ಅರಾಟೆ ಹೊಸ ಸೇತುವೆಯಲ್ಲಿ ರತ್ನಾಕರ ಅವರು ಚಲಾಯಿಸುತ್ತಿದ್ದ ಕಾರಿಗೆ ರಫೀಕ್ ಎಂಬುವರು ಚಲಾಯಿಸುತ್ತಿದ್ದ ಲಾರಿ ಢಿಕ್ಕಿಯಾಗಿದೆ. ಪರಿಣಾಮ ರತ್ನಾಕರ ಅವರ ತಲೆಗೆ, ಮುಖಕ್ಕೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕುಂದಾಪುರದ ಆಸ್ಪತ್ರೆಗೆ, ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ತಿಂಗಳಿಗೂ ಹೆಚ್ಚು ಕಾಲ ಜೀವನ್ಮರಣ ಹೋರಾಟ ನಡೆಸಿದ ರತ್ನಾಕರ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಕೇಂದ್ರ ಬಜೆಟ್ 2025ರ ಕುರಿತ ಚರ್ಚಾಗೋಷ್ಠಿ ವಿದ್ಯಾಗಿರಿಯ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ (ಎಸ್ಕೆಡಿಆರ್ಡಿಪಿ) ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್, ಕೇಂದ್ರದ ಈ ಭಾರಿಯ ಬಜೆಟ್ ಹಲವು ಕ್ಷೇತ್ರಗಳ ಬೆಳವಣಿಗೆಗೆ ಸಹಕಾರಿಯಾಗಿದೆ. ಆದರೆ ಭಾರತ, 2048ರ ವೇಳೆಗೆ ವಿಕಸಿತ ಭಾರತವಾಗಿ ಬದಲಾಗಿ ಜಾಗತಿಕ ನಾಯಕನಾಗಲು ಜಿಡಿಪಿ ಬೆಳವಣಿಗೆ ದರ 6.7% ದಿಂದ 7% ರಷ್ಟು ಸಾಲುವುದಿಲ್ಲ. ಈ ದೃಷ್ಟಿಯನ್ನು ಸಾಧಿಸಬೇಕಾದರೆ, 12% ದಿಂದ 14% ವರೆಗಿನ ಜಿಡಿಪಿ ಬೆಳವಣಿಗೆ ಅಗತ್ಯ, ಇದು ಪ್ರಸ್ತುತ ಬಜೆಟ್ ನಿಂದ ಸಾಧ್ಯವಿಲ್ಲ ಎಂದರು. ಅಧಿಕಾರಶಾಹಿತ್ವವು ಪ್ರಜಾಪ್ರಭುತ್ವ ವ್ಯವಸ್ಥೆಯ ಬೆನ್ನೆಲುಬಾಗಿದ್ದು ವಿವಿಧ ಕ್ಷೇತ್ರಗಳಾದ್ಯಂತ ಏಕರೂಪದ ಬೆಳವಣಿಗೆಗೆ ಇದು ಪ್ರಮುಖ ಕೊಂಡಿಯಾಗಿದೆ ಎಂದರು. ಶಿಕ್ಷಣ ಮತ್ತು ಆರೋಗ್ಯದ ಮೇಲೆ ಸರ್ಕಾರದ ಗಮನಾರ್ಹ ವ್ಯಯದ ಹೊರತಾಗಿಯೂ, ಅಧಿಕಾರಶಾಹಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಂಭವನೀಯ ಪ್ರಕೃತಿ ವಿಕೋಪದ ಬಗ್ಗೆ ಹವಾಮಾನ ಇಲಾಖೆಯಿಂದ ನೀಡುವ ಮಾಹಿತಿಗಳನ್ನು ಸಾರ್ವಜನಿಕರಿಗೆ ತಲುಪಿಸಿ, ಅವುಗಳಿಂದ ರಕ್ಷಣೆ ಪಡೆಯುವ ಹಾಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಬಿಸಿ ಶಾಖದ ಮಾರುತಗಳು ಬೀಸುತ್ತವೆ ಎಂಬ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ನೀಡಬೇಕು. ಅದರಿಂದ ರಕ್ಷಣೆ ಪಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸಹ ತಿಳಿಸಿ, ಅವುಗಳಿಂದ ಯಾರೊಬ್ಬರಿಗೂ ತೊಂದರೆಯಾಗದAತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಇವುಗಳನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಸೂಚನೆ ನೀಡಿದರು. ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವ ಸಾಧ್ಯತೆಗಳು ಇವೆ. ಈ ದಿನಗಳಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಜನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಉದ್ಯೋಗ ಪಡೆಯುವಲ್ಲಿ ಸ್ವವಿವರ (ರೆಸ್ಯೂಮ್) ತಯಾರಿ ಮಾಡುವುದು ಅತಿ ಮುಖ್ಯ. ತಮ್ಮ ಸ್ವವಿವರ ನೀಡುವಲ್ಲಿ ತಮ್ಮ ವಿದ್ಯಾರ್ಹತೆಯ ಜೊತೆಗೆ ತಮ್ಮಲ್ಲಿರುವ ಕೌಶಲಗಳ ಬಗ್ಗೆ ಹೇಗೆ ಅದರಲ್ಲಿ ಪಡಿಮೂಡಿಸಬೇಕು ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಪ್ಲೇಸ್ಮೆಂಟ್ ವಿಭಾಗದ ಸಂಯೋಜಕ ಮಹೇಶ್ ಕುಮಾರ್ ಹೇಳಿದರು. ಅವರು ಕಾಲೇಜಿನ ಇಂಗ್ಲಿಷ್ ವಿಭಾಗವು ಆಯೋಜಿಸಿದ “ರೆಸ್ಯೂಮ್ ಬಿಲ್ಡಿಂಗ್ ಆಂಡ್ ಪರ್ಸ್ನಲ್ ಬ್ರ್ಯಾಂಡಿಂಗ್” ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮಾತಾನಾಡಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕಿ ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ದೀಪಿಕಾ ಜಿ., ಕಾರ್ಯಕ್ರಮದ ಸಂಯೋಜಕರಾದ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸ್ಟಾಲಿನ್ ಡಿಸೋಜ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸನ್ಮಿತಾ ಸ್ವಾಗತಿಸಿ, ಸ್ವಸ್ತಿಕ್ ವಂದಿಸಿ, ಶ್ರೀರಕ್ಷಾ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯು ಭವಿಷ್ಯದ ಪೀಳಿಗೆಯ ವಿಜ್ಞಾನಿಗಳು ಮತ್ತು ನಾವಿನ್ಯಕಾರರಿಗೆ ಸ್ಪೂರ್ತಿ ನೀಡುವ ವೇದಿಕೆಯಾಗಿಯೂ ಹಾಗೂ ಯುವ ಮನಸ್ಸುಗಳಲ್ಲಿ ವಿಜ್ಞಾನ ಮತ್ತು ಪರಿಶೋಧನೆಯ ಬಗ್ಗೆ ಉತ್ಸಾಹ ತುಂಬುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಒಳಕಾಡು ಸಂಯುಕ್ತ ಪ್ರೌಢಶಾಲೆಯಲ್ಲಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ಮಂಡಳಿ, ಬಾರತೀಯ ವಿಜ್ಞಾನ ಸಂಸ್ಥೆ ಆವರಣ ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ ಸಿ.ವಿ.ರಾಮನ್ ಅವರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು. ಭಾರತೀಯ ಭೌತಶಾಸ್ತ್ರ ವಿಜ್ಞಾನಿ ಸರ್ ಸಿ.ವಿ ರಾಮನ್ ಅವರು, ರಾಮನ್ ಪರಿಣಾಮವನ್ನು ಕಂಡು ಹಿಡಿದ ನೆನೆಪಿಗಾಗಿ ಪ್ರತಿ ವರ್ಷ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸುವುದರಿಂದ ಅವರುಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಮಪೂಜ್ಯ ಯೋಗ ಬ್ರಹ್ಮ ಶ್ರೀ ಋಷಿ ಪ್ರಭಾಕರ್ ಗುರೂಜಿಯವರ ಆಶಿರ್ವಾದದೊಂದಿಗೆ, ಸಿದ್ದ ಸಮಾಧಿ ಯೋಗ ಬೈಂದೂರು ವಲಯದ ಆಚಾರ್ಯ ಶ್ರೀ ಕೇಶವ್ಜೀ ಬೆಳ್ನಿ ಇವರ ನೇತೃತ್ವದಲ್ಲಿ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಸ್ಥಾನಕ್ಕೆ 5ನೇ ವರ್ಷದ ಪಾದಯಾತ್ರೆಯು ಮಾ.2 ಆದಿತ್ಯವಾರ ಬೆಳಿಗ್ಗೆ ಗಂಟೆ 4.00ಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಬರುವ ಮೇ ತಿಂಗಳಿನಲ್ಲಿ ಬೈಂದೂರಿನಲ್ಲಿ ನಡೆಯುವ ವೈಭವದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ನಿಮಿತ್ತ ಕಾರ್ಯಕ್ರಮದ ಸಂಕಲ್ಪದಾರರಿಂದ ಕೊಲ್ಲೂರು ಪಾದಯಾತ್ರೆಯಿಂದ ಮುಂದುವರಿದು ತಿರುಪತಿಗೆ ಪಾದಯಾತ್ರೆ ನಡೆಯುವುದು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜಕಾರಣ ಬೇರೆ ಧರ್ಮ ಬೇರೆ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಒಬ್ಬ ಅಪ್ಪಟ ಹಿಂದೂ ಅದರ ಜೊತೆಯಲ್ಲಿ ಒಬ್ಬ ಅಂಬೇಡ್ಕರ್ ಕೊಟ್ಟ ಸಂವಿಧಾನದ ಆಶಯಗಳನ್ನು ಏತ್ತಿ ಹಿಡಿಯುವ ಜಾತ್ಯತೀತ ಮನಸ್ಥಿತಿಯ ನಾಯಕ. ಬಿಜೆಪಿ ನಾಯಕರುಗಳು ಹಿಂದೂ ಧರ್ಮವನ್ನು ಗುತ್ತಿಗೆ ಪಡೆಯಲಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ಬಿಜೆಪಿಯವರು ಮಾತ್ರ ಹಿಂದೂಗಳು ಉಳಿದವರು ಯಾರೂ ಹಿಂದೂಗಳಲ್ಲಾ ಎನ್ನುವ ಭಾವನೆ ಬಿಜೆಪಿಯವರಲ್ಲಿದೆ. ರಾಜಕೀಯವನ್ನು ಧರ್ಮದ ಜೊತೆ ಬೆರೆಸಿ ಧರ್ಮ ಹಾಗೂ ದೇವರನ್ನು ಬೀದಿಗೆ ತಂದವರು ಬಿಜೆಪಿಯವರು. ಇವತ್ತು ರಾಜ್ಯದಲ್ಲಿ ಒಡೆದ ಮನೆಯಾಗಿರುವ ಬಿಜೆಪಿಗೆ ನಾಯಕತ್ವದ ಕೊರತೆಯಿದ್ದು ಅದನ್ನು ನೀಗಿಸಲು ಡಿ. ಕೆ. ಶಿವಕುಮಾರ್ ರಂತಹ ಜನಪರ ಕಾಳಜಿಯ ನಾಯಕರಿಗೆ ಗಾಳ ಹಾಕುವ ಕೆಲಸ ಬಿಜೆಪಿ ನಾಯಕರುಗಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಹಲವು ಬಣಗಳಾಗಿ ಹಂಚಿ ಹೋಗಿರುವ ಬಿಜೆಪಿ ಒಡೆದ ಮನೆಯಾಗಿದೆ. ಬಿಜೆಪಿ ನಾಯಕರುಗಳದ್ದು ಬೂಟಾಟಿಕೆಯ ಹಿಂದುತ್ವ. ಕೇವಲ ಅಧಿಕಾರಕ್ಕಾಗಿ ಧರ್ಮ, ಧರ್ಮದ ನಡುವೆ, ಜಾತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹವಾಮಾನ ಇಲಾಖೆ ಈ ಕೆಳಕಂಡಂತೆ ಸಲಹೆ-ಸೂಚನೆಗಳನ್ನು ನೀಡಿದೆ. ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ಹಾಗೂ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಬಳಸಬಾರದು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದಲ್ಲಿ 80ನೇ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು. ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗಂಗೊಳ್ಳಿ ಪರ್ಶಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಡಿವಾಳ ವಹಿಸಿದ್ದರು. ಧಾರ್ಮಿಕ ಮುಖಂಡರಾದ ಬಿ. ಸದಾನಂದ ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಜಾನಪದ ಪರಿ?ತ್ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ, ಜಾನಪದ ಗಾಯಕ, ಕಲಾವಿದ ಡಾ. ಸಚಿನ್ ಸಾಲಿಯಾನ್ ಮತ್ತು ಗಾಯಕರು, ತಬಲಾ ವಾದಕ ಬಿ.ಪ್ರಕಾಶ್ ಶೆಣೈ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಯಿತು. ಉಪವಲಯ ಅರಣ್ಯಾಧಿಕಾರಿ ಕೆ. ಸದಾಶಿವ ಮಾವಿನಕಟ್ಟೆ, ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಗಂಗೊಳ್ಳಿ, ಗಂಗೊಳ್ಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ದೇವಸ್ಥಾನದ ಅಧ್ಯಕ್ಷ ಗುರುರಾಜ್ ಗಂಗೊಳ್ಳಿ, ಕಾರ್ಯದರ್ಶಿ ನರಸಿಂಹ…
