Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ಗ್ರಾಮದ ಸಾಯಿ ಗ್ರೀಮ್ – ಕಾರು ಶೋರೂಂನ ಬೀಗವನ್ನು ಒಡೆದು ಕಳ್ಳತನಕ್ಕೆ ಯತ್ನಿಸಿದ ಘಟನೆ ಫೆ. 19ರ ಬೆಳಗ್ಗಿನ ಜಾವ 2.02 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ. ಆರೋಪಿಗಳಿಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರಾಗಿದ್ದು, ಮಳಿಗೆಯ ಬೀಗವನ್ನು ಕಬ್ಬಿಣದ ರಾಡ್ ಹಾಗೂ ಸುತ್ತಿಗೆಯಿಂದ ಒಡೆಯುತ್ತಿರುವುದು ಕೆಮರಾದಲ್ಲಿ ಪತ್ತೆಯಾಗಿದೆ. ಕಳ್ಳತನಕ್ಕೆ ಯತ್ನಿಸುತ್ತಿರುವ ದೃಶ್ಯವನ್ನು ಮಳಿಗೆಯ ಪಾಲುದಾರ ನಾಗೇಂದ್ರ ಅವರು ಮೊಬೈಲ್‌ನಲ್ಲಿ ನೋಡಿ ಕೂಡಲೇ ಮಾಲಕರಾದ ನಿತಿನ್ ಅವರಿಗೆ ತಿಳಿಸಸಿದರು. ಕೂಡಲೇ ನಿತಿನ್ ಹಾಗೂ ನಾಗೇಂದ್ರ ಸ್ಥಳಕ್ಕೆ ಬಂದಿದ್ದು, ಅವರನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ. ಬೆಳಿಗ್ಗೆ ಕುಂದಾಪುರ ಪೋಲೀಸರು ಬಾಲಕರಿಬ್ಬರನ್ನು ಪತ್ತೆಹಚ್ಚಿ, ವಿಚಾರಣೆ ಬಳಿಕ ರಿಮ್ಯಾಂಡ್‌ ಹೋಮ್‌ಗೆ ಕಳುಹಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣ, ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಇಂತಹ ಕ್ಯಾಂಪುಗಳು ದೊಡ್ಡ ಮಟ್ಟದಲ್ಲಿ ಸಹಕಾರಿಯಾಗುತ್ತದೆ. ಶಿಬಿರದ ಯಶಸ್ಸಿಗೆ ಸಹಕರಿಸಿದ ಊರಿನ ಪ್ರತಿಯೊಬ್ಬರ ಶ್ರಮ ಉಲ್ಲೇಖನೀಯ ಎಂದು ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು. ಅವರು ಇಲ್ಲಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉದಯ್ ಕುಮಾರ್ ಶೆಟ್ಟಿ ಕೊತ್ತಾಡಿ, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ ವಡ್ಡರ್ಸೆ, ವೇಣುಗೋಪಾಲ ಶೆಟ್ಟಿ ಬನ್ನಾಡಿ,  ವಂಡಾರಿನ ಕೃಷ್ಣಪ್ರಸಾದ್ ಕ್ಯಾಶ್ಯು ಇಂಡಸ್ಟಿçಯ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ,  ಸಿ.ಎ. ಬ್ಯಾಂಕ್ ಕೋಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ವಡ್ಡರ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಮನವಿ ಮೇರೆಗೆ ಆರಂಭಗೊಂಡಿರುವ ಕುಂಭ ಮೇಳ ವಿಶೇಷ ರೈಲಿನಲ್ಲಿ ಒತ್ತಡ ಹೆಚ್ಚಿರುವುದರಿಂದ ಮತ್ತೊಂದು ರೈಲಿನ ವ್ಯವಸ್ಥೆ ಮಾಡುವಂತೆ ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ದಕ್ಷಿಣ ರೈಲ್ವೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದರಿಂದ ಟಿಕೆಟ್ ಅಸಂಖ್ಯರಿಗೆ ಪಯಣ ವಂಚಿತ ಬೆಳೆಸುವ ಅವಕಾಶ ಲಭಿಸಲಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು 10 ನೇ ತರಗತಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ವಿಭಾಗದ ವತಿಯಿಂದ ‘ಇನ್ಸ್‌ಪೀರಿಯಾ – 2025’ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು. ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಪಾನ್ ಮೂಲದ ಸಕ್ರಾ ವರ್ಲ್ಡ್ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಯುಚಿ ನಗಾನೊ ಮುಖ್ಯ ಅತಿಥಿಯಾಗಿ ಮಾತನಾಡಿ, ಕೃತಕ ಬುದ್ಧಿಮತ್ತೆ ಹಾಗೂ ಇನ್ನಿತರ ತಂತ್ರಜ್ಞಾನಗಳ ಪ್ರಗತಿಯೊಂದಿಗೆ ಆರೋಗ್ಯ ನಿರ್ವಹಣಾ ಕ್ಷೇತ್ರವು ಬಹಳಷ್ಟು ಮುಂದುವರಿದಿದೆ. ವೈದ್ಯಕೀಯ ಕ್ಷೇತ್ರವು ಸೋಂಕುಗಳನ್ನು ತಡೆಗಟ್ಟಿ ರೋಗಿಯ ಚೇತರಿಕೆಗೆ ಗಮನ ನೀಡುವುದರೊಂದಿಗೆ ಆಸ್ಪತ್ರೆಗಳು ಮನೆಯ ವಾತಾವರಣವನ್ನು ಕಲ್ಪಿಸಿಕೊಡುವಂತಿರಬೇಕು. ಆಸ್ಪತ್ರೆ ನಿರ್ವಹಣೆಯ ಕುರಿತು ಸೂಕ್ಷ್ಮದೃಷ್ಠಿ ಬೆಳೆಸಿಕೊಳ್ಳಲು ನಮ್ಮಲ್ಲಿರುವ ಜ್ಞಾನ, ಕನಸುಗಳು ಹಾಗೂ ಆಶಯಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹೆಚ್ಚಿನ ಆಸ್ಪತ್ರೆಗಳನ್ನು ಕಾರ್ಪೋರೇಟ್ ಸಂಸ್ಥೆಗಳು ನಿರ್ವಹಿಸುವುದರಿಂದ ಜನಸಾಮಾನ್ಯರಿಗೆ ವ್ಯವಸ್ಥೆಗಳು ಬಳಸಿಕೊಳ್ಳಲು ಅನುಕೂಲಕರವಾಗಿಲ್ಲ. ಆಸ್ಪತ್ರೆಯ ನಿರ್ವಾಹಕರು ರೋಗಿಗಳ ಮೇಲೆ ಸಹಾನುಭೂತಿಯ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಹೊಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತಿಹಾಸವನ್ನು ಅರ್ಥಮಾಡಿಕೊಳ್ಳುವುದು ಅನುಭವಿಸುವುದು ಇತರರಿಗೆ ಹೇಳುವುದು ನಮ್ಮ ಜವಾಬ್ದಾರಿ ಎನ್ನುವುದನ್ನು ಮರೆತುಬಿಟ್ಟೆದ್ದೇವೊ ಅನ್ನುವಷ್ಟರ ಮಟ್ಟಿಗೆ ಇತಿಹಾಸದ ನೆನಪುಗಳು ನಮ್ಮಿಂದ ದೂರವಾಗುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ & ಸಾಯನ್ಸ್ ಕಾಲೇಜು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬೆಂಗಳೂರು ಹಾಗೂ ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ಅಧ್ಯಾಪಕರ ಸಂಘ ಇವರ ಸಹಯೋಗದೊಂದಿಗೆ ನಡೆದ ಕಾಲೇಜಿನ ಆರ್‌.ಎನ್‌. ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾದ 3 ದಿನಗಳ ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನದ ಉದ್ಘಾಟಿಸಿ ಮಾತನಾಡಿದರು. ನಮ್ಮ ಐತಿಹಾಸಿಕ ದಾಖಲೆಗಳು ಪರಂಪರೆ, ಸಂಸ್ಕೃತಿ ಮತ್ತು ವಾಸ್ತು ಶಿಲ್ಪಗಳ ಮಹತ್ವವನ್ನು ಕುರಿತು ವಿಶೇಷ ಅಧ್ಯಯನಗಳ ಅವಶ್ಯಕತೆ ಇದೆ. ಇತಿಹಾಸವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿಯನ್ನು ಅರಿತು ಆ ನೆಲೆಯಲ್ಲಿ ಕಾರ್ಯಪ್ರವೃತ್ತರಾಗೋಣ ಎಂದು ಹೇಳಿದರು. 35ನೇ ವಾರ್ಷಿಕ ಮಹಾಅಧೀವೆಶೇನದ ಸರ್ವಾಧ್ಯಕ್ಷತೆಯನ್ನು ಮಂಗಳೂರು ಹಾಗೂ ದೆಹಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ಶಿವರಾತ್ರಿ ಸೇವಾ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ 3ನೇ ವರ್ಷದ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಗುರುವಾರ ಪ್ರಾರಂಭವಾಯಿತು. ಮೀನ ಲಗ್ನ ಸುಮೂಹೂರ್ತದಲ್ಲಿ ದೀಪ ಸ್ಥಾಪನೆಯೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕ ರವೀಶ್ ಭಟ್ ಅವರು ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೇವಾ ಸಮಿತಿ ಅಧ್ಯಕ್ಷ ವಿ. ನಾಗರಾಜ ಖಾರ್ವಿ, ಗೌರವಾಧ್ಯಕ್ಷ ರಾಜ ಗಂಗೊಳ್ಳಿ, ದುರ್ಗರಾಜ ಪೂಜಾರಿ, ವರದಾ ಶೇರುಗಾರ್, ನಾಗೇಶ ಖಾರ್ವಿ ದಾಕುಹಿತ್ಲು, ಸುಬ್ಬ ಖಾರ್ವಿ ಗುಡ್ಡೆಕೇರಿ, ಶ್ರೀಧರ ಖಾರ್ವಿ ದಾಕುಹಿತ್ಲು, ಸಮಿತಿ ಸದಸ್ಯರು, ವಿವಿಧ ಭಜನಾ ಮಂಡಳಿಗಳ ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು. 27ರಂದು ದೀಪ ವಿಸರ್ಜನೆಯೊಂದಿಗೆ ಭಜನೆಯ ಮಂಗಲೋತ್ಸವ ನಡೆಯಲಿದೆ. ಮಹಾಶಿವರಾತ್ರಿ ಪ್ರಯುಕ್ತ 26ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ವೀರೇಶ್ವರ ದೇವರಿಗೆ ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ ಮತ್ತಿತರ ಪೂಜೆ ಪುನಸ್ಕಾರಗಳು ನಡೆಯಲಿದ್ದು, ಸಂಜೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲೆ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ ಪ್ರಸೂತಿ ತಜ್ಞರಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯದ ಸಮಗ್ರ ಅಧ್ಯಯನದ ಕುರಿತು ಒಂದು ದಿನದ ಕಾರ್ಯಗಾರವು ಇಂದು ನಗರದ ಮಣಿಪಾಲ ಕೆ.ಎಂ.ಸಿ.ಯ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ತಾಯಿ ಹಾಗೂ ಮಕ್ಕಳ ಸಾವುಗಳು ಅತ್ಯಲ್ಪವಿದ್ದು, ಪ್ರತೀ ತಾಯಿ ಹಾಗೂ ಮಗುವಿನ ಸಾವುಗಳನ್ನು ತಡೆಯಲು ಸರ್ವ ಪ್ರಯತ್ನಗಳನ್ನು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಮಾಡಬೇಕು. ಜಿಲ್ಲೆಯಲ್ಲಿ ಹೆರಿಗೆ ಸಮಯದಲ್ಲಿ ಸ್ವಾಭಾವಿಕವಾಗಿ ಆಗುವ ರೀತಿ ಒತ್ತು ನೀಡಬೇಕು. ಒಂದೊಮ್ಮೆ ಅನಿವಾರ್ಯ ತುರ್ತು ಸಂದರ್ಭದಲ್ಲಿ ಮಾತ್ರ ಸಿಜೇರಿಯನ್ ಮಾಡುವ ಮೂಲಕ ಡೆಲಿವರಿ ಮಾಡಿಸಬೇಕು ಎಂದರು. ಹದಿಹರೆಯದ ಯುವ ಹೆಣ್ಣು ಮಕ್ಕಳಿಗೆ ಪೌಷ್ಠಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೀವನ ಮೌಲ್ಯಗಳು ಕಲಿಯುವುದಲ್ಲ, ಪಾಲಿಸುವಂತದದ್ದು. ಹೀಗಾಗಿ ತಂದೆ, ತಾಯಿ, ಗುರುಗಳು ಜೀವನದ ಅತ್ಯಮೂಲ್ಯ ಮೌಲ್ಯ. ಅವರ ಆದರ್ಶ ಬದುಕು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಬೇಕು. ಅದರೊಂದಿಗೆ ವ್ಯಕ್ತಿತ್ವಪೂರ್ಣ ಜೀವನವನ್ನು ಪ್ರಾಮಾಣಿಕವಾಗಿ ರೂಢಿಸಿಕೊಂಡಾಗ ವ್ಯಕ್ತಿಯ ಬದುಕಿಗೆ ಬೆಲೆ ಬರುತ್ತದೆ ಎಂದು ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ವಿನಾಯಕ್ ಭಟ್ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ “ಜೀವನ ಮೌಲ್ಯ” ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಇಂದಿನ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯ ಶಿಕ್ಷಣವನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.  ವಿದ್ಯಾರ್ಥಿಗಳಾದ ಕಾವ್ಯ ಸ್ವಾಗತಿಸಿ, ಸ್ವಾತಿ ಅತಿಥಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.  ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪಗಳು ಪ್ರಾಕೃತಿಕವಾಗಿ ಇದ್ದು, ಇಲ್ಲಿನ ಪ್ರಾಕೃತಿಕ ಸೌಂದರ್ಯ ಸೊಬಗು ಪ್ರವಾಸಿಗರನ್ನು ಮನಸೂರೆಗೊಳಿಸುತ್ತವೆ. ಈ ತಾಣದಲ್ಲಿ ಪ್ರವಾಸಿಗರ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು. ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸಿಗರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಆಧುನಿಕತೆಯ ಸ್ವರೂಪದೊಂದಿಗೆ ಜನಾಕರ್ಷಣೀಯವಾಗಿ ಕೈಗೊಳ್ಳಬೇಕು. ಪ್ರವಾಸಿಗರಿಗೆ ವಾಹನಗಳ ಪಾಕಿಂಗ್ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು. ತ್ರಾಸಿ ಬೀಚ್‌ನ ನಿರ್ವಹಣೆ ಹಾಗೂ ಜಲ ಸಾಹಸ ಚಟುವಟಿಕೆಗಳಿಗೆ ಗುತ್ತಿಗೆ…

Read More