Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ 2026-27ನೇ ಸಾಲಿನ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವುಇತ್ತೀಚೆಗೆ ನಡೆಯಿತು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಕುಸುಮಾ ಮನೋಜ್ ಅಧ್ಯಕ್ಷತೆ ವಹಿಸಿದ್ದರು. ಇಂಟ್ರ್ಯಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಕೌಸಲ್ಯಾ ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲಾ ಡಯಟ್‌ನ ಉಪನ್ಯಾಸಕ ಡಾ. ಕಿಶೋರ್ ಕುಮಾರ್ ಶೆಟ್ಟಿ, ಇಂಟ್ರ್ಯಾಕ್ಟ್ ಕೋ ಆಡಿ೯ನೇಟರ್ ಆನಂದ್ ಎಮ್, ಕ್ಲಬ್‌ನ ಕಾರ್ಯದರ್ಶಿ ಕೆ. ರಾಜಾರಾಮ ಐತಾಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಜಾತ, ಶಿಕ್ಷಣ ತಜ್ಞ ಗಣೇಶ್ ಜಿ, ಸಮಿತಿ ಸದಸ್ಯರಾದ ಸುಲತಾ ಎಸ್ ಹೆಗ್ಡೆ, ಇಂಟ್ರ್ಯಾಕ್ಟ್ ಮಾರ್ಗದರ್ಶಿ ಶಿಕ್ಷಕಿ ಹೆಲೆನ್ ಬಾಂಝ್ ಹಾಗೂ ಹೆಚ್ಚಿನ ರೋಟರಿ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಮೃತಾ ಇವರಿಗೆ ನಗದು ಪುರಸ್ಕಾರ ನೀಡಲಾಯಿತು. ಶಾಲೆಯ ಖೋ ಖೋ ಪಂದ್ಯಾಟದ ಕ್ರೀಡಾಳುಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವುದು ಸಂತೋಷ ಮತ್ತು ಅಭಿನಂದನೀಯ ಸಂಗತಿ. ಈ ನಿಟ್ಟಿನಲ್ಲಿ ಎಸ್.ವಿ ಕಾಮರ್ಸ್ ಕ್ಲಬ್ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಗಂಗೊಳ್ಳಿಯ ಖ್ಯಾತ ಉದ್ಯಮಿ ಸೋಮನಾಥ ಮೇಸ್ತ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ನಡೆದ ಎಸ್‌.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಶುಭಾ ಸಂಸನೆ ಗೈದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಆಶಾ ಸೌಂಡ್ಸ್ ಎಂಡ್ ಲೈಟ್ಸ್ ಮಾಲೀಕರಾದ ನಾರಾಯಣ ಖಾರ್ವಿ ಮತ್ತು ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷರಾದ ಜಿ ಗೋಪಾಲ ಪೂಜಾರಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಪೌರ ಕಾರ್ಮಿಕರಾದ ಅನಿಲ್, ಗಣೇಶ್, ಹರೀಶ್, ಮತ್ತು ಎಸ್.ಎಲ್.ಆರ್. ಎಂ ಘಟಕದ ವಿಜೇತ ಕೆ, ರಮೇಶ್, ಚಂದ್ರ, ಮೂಕಾಂಬಿಕಾ, ಹೇಮಾ, ಗೌರಿ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದಲ್ಲಿ 2026ರ ಜುಲೈ 17 ರಿಂದ 19ರವರೆಗೆ ನಡೆದ ಕರ್ನಾಟಕ ರಾಜ್ಯ ಅಂಡರ್-17 ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರಾಧ್ಯ ಎಸ್. ಶೆಟ್ಟಿ ಅವರು ಅಂಡರ್-17 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಅಂಡರ್-17 ರಾಷ್ಟ್ರೀಯ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಆರಾಧ್ಯ, ಇದೀಗ ಮತ್ತೊಮ್ಮೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯುವ ಮೂಲಕ ತಮ್ಮ ಪ್ರತಿಭೆ, ಶಿಸ್ತು, ಪರಿಶ್ರಮ ಮತ್ತು ಸಮರ್ಪಣೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಟೂರ್ನಮ್ನೆಟ್ ಆರಂಭದಿಂದಲೇ ಆರಾಧ್ಯ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದರು. ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದ ಹಾಗೂ ಬೆಂಗಳೂರು ಅರ್ಬನ್‌ AFM ದೀಪ್ತಾ ಶ್ರೀನಿವಾಸ್ ಅವರನ್ನು ಸೋಲಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಎಲ್ಲರಿಗೂ ತೋರಿಸಿದರು. 7ನೇ ಸುತ್ತಿನಲ್ಲಿ, ಮಂಗಳೂರಿನ 1884 ರೇಟಿಂಗ್ ಹೊಂದಿರುವ ಆರುಶ್ರಿ ಸೆವೆರಿನ್ ಹೆಲೆನ್ ಡಿ ವಿರುದ್ಧ ಅತ್ಯುತ್ತಮ ಮಧ್ಯದಾಟ (Middlegame) ಪ್ರದರ್ಶಿಸಿದರೂ, ಕೊನೆಯ ಹಂತದಲ್ಲಿ ನಡೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು ಗೋಳಿಹೊಳೆ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಜು.29 ರಿಂದ ಸೆ.14ರವರೆಗೆ ನಡೆಯುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ ವೃತಾಚರಣೆಯ ಪೂರ್ವಭಾವಿ ಸಭೆಯು ರವಿವಾರದಂದು ಕುಂದಾಪುರ ಶ್ರೀ ನಾರಾಯಣ ಗುರು ಕಲ್ಯಾಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಾತುರ್ಮಾಸ ಸಮಿತಿ ಅಧ್ಯಕ್ಷರು, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಮಾತನಾಡಿ, ಚಾತುರ್ಮಾಸ ಎನ್ನುವುದು ಶುದ್ಧ ಭಕ್ತಿ, ಪುಣ್ಯದ ಕಾರ್ಯ. ಇಡೀ ಸಮುದಾಯವನ್ನು ಒಗ್ಗೂಡಿಸಿಕೊ೦ಡು ಚಾತುರ್ಮಾಸ ವೃತ ಮಾಡುವ ಮೂಲಕ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಕೈಂಕರ್ಯ ಮಾಡುತ್ತಿದ್ದಾರೆ. 48 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಭಕ್ತಿ-ಭಯ ಸಮ್ಮಿಲನವಾಗಬೇಕಿದೆ. ಬೈಂದೂರು,ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಗ್ಗೆ ಅಗತ್ಯ ತಯಾರಿ ಮಾಡಬೇಕಿದೆ. ಈಗಾಗಾಲೇ ವಿವಿಧ ಸಮಿತಿಗಳು ಸಜ್ಜಾಗಿದೆ. ಪಕ್ಷ, ರಾಜಕೀಯ ಮಿರಿ ಇದೊಂದು ಅಭೂತಪೂರ್ವ ಧಾರ್ಮಿಕ ಸೇವೆಯಾಗಬೇಕು ಎಂದರು. ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಬೈಂದೂರಿನಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಲಾಡಿಯಲ್ಲಿ ಕುಟುಂಬೋತ್ಸವ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ರವಿವಾರ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಹಾಲಾಡಿ ವಾರಾಹಿಯ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜುನಾಥ ಕಾಮತ್, ಜೆಸಿ ರಶ್ಮಿ ಭಟ್ ತಲಾರಿ, ಸರ್ವೋತ್ತಮ ಹೆಗ್ಡೆ, ವಿವೇಕ್ ಮಿಥ್ಯಾಂತ ಮೂಡಲಮಕ್ಕಿ, ಜ್ಞಾನೆೇಶ್ ಶೆಟ್ಟಿ ಹಾಲಾಡಿ, ಯೊಗೀಶ್ ಕಾಂಚನ್ ಶಂಕರನಾರಾಯಣ ಹಾಗೂ ಜೆಸಿ ಪ್ರವೀಣ್ ಬಾಳೆಕೊಡ್ಲು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜೆಸಿಐ ಸದಸ್ಯ ರಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ನಂತರ ಕುಟುಂಬ ಸದಸ್ಯರಿಗಾಗಿ ವಿವಿಧ ಮನರಂಜನಾ ಆಟಗಳು, ಸಂಗೀತ ಕುರ್ಚಿ ಸ್ಪರ್ಧೆ, ಲಕ್ಕಿ ಡ್ರಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅತಿಥಿಗಳು ಮಾತನಾಡಿ, ಜೆಸಿಐ ಸಂಸ್ಥೆಯು ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಶ್ರಮಿಸುತ್ತಿರುವುದನ್ನು ಶ್ಲಾಘಿಸಿದರು. ಶಿಕ್ಷಣ, ಸೇವೆ ಮತ್ತು ಕುಟುಂಬ ಮೌಲ್ಯಗಳ ಬೆಳವಣಿಗೆಯಲ್ಲಿ ಇಂತಹ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದ್ದು, ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. “ಹೊಯ್ಸಳ” ಮತ್ತು “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಸಂಬAಧಿಸಿದAತೆ 2025 ರ ಆಗಸ್ಟ್ 1 ರಿಂದ 2026 ರ ಜುಲೈ 31 ರ ಒಳಗೆ ಪ್ರಕರಣ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜೀವನದಲ್ಲಿ ಕನಸು ಮತ್ತು ಗುರಿ ಇರಿಸಿ ಮುನ್ನಡೆದರೆ ಯಶಸ್ಸು ತಾನಾಗಿಯೇ ಒಲಿದು ಬರುತ್ತದೆ ಎಂದು ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಖ್ಯಸ್ಥ ಸಂಪತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಭಾನುವಾರ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಮತ್ತು ರೋಟರಿ ಕ್ಲಬ್ ಸಾಹೇಬರಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ವಿಶೇಷ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊರ್ವರು ಆತ್ಮ ಸ್ಥೈರ್ಯದ ಜೊತೆಗೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಸೃಷ್ಠಿಸಿಕೊಳ್ಳಬೇಕು, ಜೀವನದಲ್ಲಿ ಯಶಸ್ವಿಯಾಗುತ್ತಾ ಹೊದಾಗ ಕಾಲೇಳೆಯುವ ಮನಸ್ಥಿತಿಯ ವ್ಯಕ್ತಿಗಳು ಎದುರಾಗುತ್ತಾರೆ ಅವರನ್ನು ನಿರ್ಲಕ್ಷಿಸಿ ಮುನ್ನಡೆಯಬೇಕು. ನಮ್ಮ ಜೀವನದಲ್ಲಿ ಸ್ವಾಮೀ ವಿವೇಕಾನಂದರು, ಅಬ್ದುಲ್ ಕಲಾಂ ಅಂತಹ ವ್ಯಕ್ತಿಗಳು ರೋಲ್ ಮಾಡೆಲ್ ಆಗಿ ತೆಗೆದುಕೊಳ್ಳಬೇಕು. ಅತ್ಯಂತ ಕಠಿಣ ಸಂದರ್ಭದಲ್ಲೂ ಹಿಂಜರಿಯದೆ ಸ್ಪಷ್ಟ ಧ್ಯೇಯೋದ್ದೇಶದೊಂದಿಗೆ ಸಾಧನೆಯ ಪಥವನ್ನೆರಬೇಕು ಎಂದರಲ್ಲದೆ ವಿ. ಶೈನ್ ಕೊಚಿಂಗ್ ಸೆಂಟರ್ ಅವರ ಸ್ವಾರ್ಥಕ್ಕೆ ಬಳಸಿಕೊಳ್ಳದೆ ಸಮಾಜದ ಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ / ಸಿಎಸ್ ಕಾರ್ಯಾಗಾರ ನಡೆಯಿತು.  ಸಂಪನ್ಮೂಲ ವ್ಯಕ್ತಿಗಳಾಗಿ ತ್ರಿಷಾ ಕಾಲೇಜಿನ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಆಗಿರುವ CA ಗೋಪಾಲ ಕೃಷ್ಣ ಭಟ್ ವಿದ್ಯಾರ್ಥಿಗಳಿಗೆ CA/CS ಕೋರ್ಸ್‌ನ ಹಂತಗಳು, ಅವಧಿ ಮತ್ತು ಅವಕಾಶಗಳನ್ನು ಕುರಿತು ಸಂಪೂರ್ಣ ಮಾಹಿತಿ ನೀಡಿ, CA / CS ಹೊರತುಪಡಿಸಿ ಪಿಯುಸಿ ನಂತರದ ವಿವಿಧ ಕೋರ್ಸ್ ಗಳ ಕುರಿತು ಸವಿವರವಾಗಿ ಮಾಹಿತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಶಿವರಂಜನಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕಿಯರಾದ ನಿಧಿ ವಂದಿಸಿ, ವಿನಯಾ ಪರಿಚಯಿಸಿ, ವಾಣಿಜ್ಯ ಉಪನ್ಯಾಸಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೇವೆಯಲ್ಲಿ ನಾನಾ ರೀತಿಯ ಸೇವಾ ಕಾರ್ಯಗಳಿವೆ. ಅದರಲ್ಲಿ ಪ್ರಕೃತಿಯನ್ನು ಆರಾಧಿಸುವ ಪರಿಸರ ಸಂರಕ್ಷಿಸುವ ಸೇವೆ ಭಗವಂತನಿಗೆ ಸಲ್ಲಿಸುವ ಪೂಜೆಯಷ್ಟೆ ಶ್ರೇಷ್ಠತೆಯನ್ನು ಪಡೆದುಕೊಂಡಿದೆ. ಇದು ಪ್ರಸ್ತುತ ಪಂಚವರ್ಣ ಸಂಘಟನೆಗಳಿಂದಾಗುತ್ತಿರುವುದು ಶ್ಲಾಘನೀಯ ಎಂದು ಪಾಂಡೇಶ್ವರ ಯೋಗಗುರುಕುಲದ ಮುಖ್ಯಸ್ಥ ಡಾ. ವಿದ್ವಾನ್ ವಿಜಯ ಮಂಜರ್ ಹೇಳಿದರು. ಅವರು ಭಾನುವಾರ ಪಾಂಡೇಶ್ವರ ಹಾಲು ಉತ್ಪಾದಕರ ಸಂಘದ ವಠಾರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 310ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಗೀತಾನಂದ ಫೌಂಡೇಶನ್ ಮಣೂರು ಪೇತ್ರಿ ಅನ್ನಪೂರ್ಣ ನರ್ಸರಿ, ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಹಯೋಗದೊಂದಿಗೆ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯೋಜನೆಯೊಂದಿಗೆ ನಡೆದ ಹಸಿರು ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಸಿರು ಉಳಿಸಿ ಬೆಳೆಸಿದರೆ ಮನುಕುಲ ಸಂಕಷ್ಟದಿಂದ ಪಾರಾಗಬಹುದು ಇಲ್ಲವಾದಲ್ಲಿ ಹಣ ಕೊಟ್ಟು ಆಕ್ಸಿಜನ್ ಕೊಳ್ಳುವ ಕಾಲ ದೂರಿಲ್ಲ ಅದಕ್ಕಾಗಿ ಪ್ರತಿಯೊರ್ವರು ಗಿಡ ನೆಟ್ಟು ಪೋಷಿಸುವ ಕಾರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ವತಿಯಿಂದ ಕಟ್ ಬೆಲ್ತೂರು ಹೊಲಿಗೆ ತರಬೇತಿ ಕೇಂದ್ರದಲ್ಲಿ ಸ್ವದ್ಯೋಗ ಮಾಡಲು ಬ್ಯಾಂಕಿಂಗ್ ಸೌಲಭ್ಯ ಬಗ್ಗೆ ಕರ್ನಾಟಕ ಗ್ರಾಮೀಣ  ವಿಕಾಸ ಹೆಮ್ಮಾಡಿಯ ಶಾಖಾಧಿಕಾರಿಯಾದ ನಾಗರತ್ನಾ ನಾಯಕ್ ಅವರು ಮಾಹಿತಿಯನ್ನು ಹಂಚಿಕೊಂಡರು. ಶಿಬಿರದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಕುಂದಾಪುರ ರಿವರ್ಸೈಡ್ ಇದರ ಅಧ್ಯಕ್ಷ ಸದಾನಂದ ಬಳ್ಕೂರು ಅವರು ಮಾತನಾಡಿ, ಮಹಿಳೆಯರು ಶಿಕ್ಷಣ, ಕೌಶಲ್ಯ, ಆರ್ಥಿಕ ಸ್ವಾವಲಂಬಿಗಳಾಗಿ ಆತ್ಮ ವಿಶ್ವಾಸದ ಮೂಲಕ ಸಬಲರಾದರೆ ಒಂದು ಕುಟುಂಬ ಅಭಿವೃದ್ಧಿ ಹೊಂದಿದಂತೆ.  ಈ ನಿಟ್ಟಿನಲ್ಲಿ ಮಹಿಳೆಯರು ಹೋಲಿಗೆಯನ್ನು ಕಲಿತು ಸ್ವ ಉದ್ಯೋಗವನ್ನು ಆರಂಭಿಸಬಹುದು. ಗಾರ್ಮೆಂಟ್ ಅಥವಾ ಬಟ್ಟೆ ತಯಾರಿಕಾ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಬಹುದು .ಇದರಿಂದ ಕುಟುಂಬದ ಆದಾಯ ಹೆಚ್ಚುವುದರ ಜೊತೆಗೆ ಆತ್ಮ ವಿಶ್ವಾಸವು ವೃದ್ಧಿಯಾಗುತ್ತದೆ ಎಂದು  ಹೇಳಿದರು. ವೇದಿಕೆಯಲ್ಲಿ ಶಿಬಿರದ ತರಬೇತುದಾರರಾದ ಯಾಸ್ಮಿನ್ ಮತ್ತು ಯಶೋಧ ಇವರು ಉಪಸ್ಥಿತರಿದ್ದರು. ನರಸಿಂಹ ಗಾಣಿಗ ಹರೆಗೋಡು ಪ್ರಾಸ್ತವಿಕ ನುಡಿಗಳನ್ನಾಡಿದರು. ಮಾಜಿ ಅಧ್ಯಕ್ಷ ರಾಜು ಪೂಜಾರಿ ರೋಟರಿ ಮಾಹಿತಿಗಳನ್ನು ನೀಡಿದರು. ಮಾಜಿ…

Read More