ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ಕಿರಣ್ ಕುಮಾರ್ ಎನ್. ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ 2023-24ನೇ ಸಾಲಿನ ಕರ್ನಾಟಕ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್. ಸ್ವಯಂಸೇವಕ ಪ್ರಶಸ್ತಿಯನ್ನು ಪಡೆದಿದ್ದಾರೆ. ಹಿಂದೆ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಅತ್ಯುತ್ತಮ ಸಾಂಸ್ಕೃತಿಕ ಪ್ರತಿಭೆ ಎಂಬ ಮನ್ನಣೆ ಪಡೆದ ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಳಗೆರೆ ಗ್ರಾಮದ ಹಿನ್ಸೋಡಿಯ ನಾಗರಾಜ ಮತ್ತು ಲಕ್ಷ್ಮೀ ದಂಪತಿಯ ಪುತ್ರ. ಇವರಿಗೆ ಕಾಲೇಜಿನ ಅಧ್ಯಕ್ಷ ಬಿ.ಎಮ್ . ಸುಕುಮಾರ್ ಶೆಟ್ಟಿ, ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ, ಮಾರ್ಗದರ್ಶನ ನೀಡಿದ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕೆನರಾ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಅಮ್ಮೆಂಬಳ ಸುಬ್ಬರಾವ್ ಪೈ ಅವರ 174ನೇ ಜನ್ಮದಿನಾಚರಣೆಯನ್ನು ಬ್ರಹ್ಮಾವರದ ರುಡ್ಸೆಟ್ ಸಂಸ್ಥೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸಿಸಿಟಿವಿ ಅಳವಡಿಕೆ, ದುರಸ್ತಿ ಮತ್ತು ಸೇವಾ ತರಬೇತಿ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಹರಾಡಿ ಶಾಖೆಯ ಹಿರಿಯ ಪ್ರಬಂಧಕರಾದ ಮಹೇಂದ್ರ ಬಾಬು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬ್ರಹ್ಮಾವರದ ರೂಪ್ಫ್ಲಾಸ್ಟ್ ಕನ್ಸ್ಟ್ರಕ್ಷನ್ ಕಂಪನಿಯ ಮಾಲೀಕರಾದ ಕೆ. ಸಿ. ಅಮೀನ್ ಹಾಗೂ ಸಂಸ್ಥೆಯ ವ್ಯವಸ್ಥಾಪಕರಾದ ಕಮಲಾ ಕೆ.ಸಿ. ಅಮೀನ್ ಅವರು ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಣ್ಯರು ಅಮ್ಮೆಂಬಳ ಸುಬ್ಬರಾವ್ ಪೈ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿ, ಯುವಜನತೆಯ ಸ್ವಾವಲಂಬನೆಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಹತ್ವವನ್ನು ವಿವರಿಸಿದರು. ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಶುಭ ಹಾರೈಸಿ, ತಮ್ಮ ಕಲಿಕಾ ಅವಧಿಯನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೇರೇಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್ಸೆಟ್ ಸಂಸ್ಥೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ಪ್ರತಿಯೊಂದು ಮನೆಗೂ ನಳ್ಳಿ ನೀರು ಎನ್ನುವ ಮಹತ್ವಕಾಂಕ್ಷಿ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯ ಕಳಪೆ ಕಾಮಗಾರಿ ಹಾಗೂ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣದ ದುರುಪಯೋಗದ ಬಗ್ಗೆ ಸಂಸದರು ಹಾಗೂ ಶಾಸಕರುಗಳು ಮೌನವಹಿಸಿರುವ ಕಾರಣವೇನೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಪ್ರಶ್ನಿಸಿದ್ದಾರೆ. ಪ್ರತಿಯೊಂದು ಗ್ರಾಮ ಪಂಚಾಯತುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕೋಟ್ಯಂತರ ರೂಪಾಯಿ ಅನುದಾನದಡಿ ಪೈಪ್ ಲೈನ್, ನೀರು ಶೇಖರಣ ಟ್ಯಾಂಕ್, ಮನೆ ಮುಂದೆ ನಳ್ಳಿ ಅಳವಡಿಸಲಾಗಿದೆ ಬಿಟ್ಟರೆ ಯಾವ ನಳ್ಳಿಯಲ್ಲೂ ಒಂದು ಹನಿ ನೀರು ಬರುತ್ತಿಲ್ಲ. ಹೆಚ್ಚಿನ ಕಡೆ ಈ ಕಾಮಗಾರಿ ಹೆಸರಲ್ಲಿ ಗುಣಮಟ್ಟದ ಕಾಂಕ್ರೀಟ್ ರಸ್ತೆಗಳನ್ನು ಅಗೆದು ಹಾಕಿ ಅದನ್ನು ಕೂಡ ಸರಿ ಪಡಿಸದೆ ಹಾಗೆಯೇ ಬಿಡಲಾಗಿದೆ. ಇನ್ನು ಎಷ್ಟೋ ಕಡೆ ನೀರಿನ ಮೂಲಗಳನ್ನೇ ಗುರುತಿಸದೆ ನೀರು ಶೇಖರಣ ಟ್ಯಾಂಕ್ ನಿರ್ಮಾಣ ಮಾಡಿ ಈಗ ನೀರಿಲ್ಲದೆ ಟ್ಯಾಂಕ್ ಗಳು ಬಿಸಿಲಿನಲ್ಲಿ ಒಣಗುತ್ತಿವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ವಾರ್ಷಿಕೋತ್ಸವ ‘ಆವಿರ್ಭವ 2026–27’ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಉಡುಪಿ ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾಪ್ರಬಂಧಕರು ಹಾಗೂ ಪ್ರಾದೇಶಿಕ ಮುಖ್ಯಸ್ಥರಾದ ರಮೇಶ್ ವೈದ್ಯ ಅವರು ಮಾತನಾಡಿ, “ಮೂರು ದಶಕಗಳ ಸುದೀರ್ಘ ಪಯಣದಲ್ಲಿಯೂ ಶಿಕ್ಷಣದ ಗುಣಮಟ್ಟವನ್ನು ಒಂದೇ ರೀತಿಯಲ್ಲಿ ಕಾಯ್ದುಕೊಂಡು ಬಂದಿರುವುದು ಸಂಸ್ಥೆಯ ಹೆಗ್ಗಳಿಕೆ. ಕಾಲ ಬದಲಾದರೂ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದ ಸಂಸ್ಥೆಯ ಕಾರ್ಯ ಶ್ಲಾಘನೀಯ” ಎಂದು ರಮೇಶ್ ವೈದ್ಯ ಅವರು ಪ್ರಶಂಸಿದರು. ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಂಡು, ಉತ್ತಮ ನಿರ್ವಹಣೆಯೊಂದಿಗೆ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಆಡಳಿತ ಮಂಡಳಿಯ ಪರಿಶ್ರಮ ನಿಜಕ್ಕೂ ಮೆಚ್ಚುವಂತಹದ್ದು” ಎಂದರು. ಮುಖ್ಯ ಅತಿಥಿ, ಸಂಸ್ಥೆಯ 2016ನೇ ಸಾಲಿನ ಹಳೆ ವಿದ್ಯಾರ್ಥಿ ಹಾಗೂ ಅಕ್ಷಯಕಲ್ಪ ಆರ್ಗ್ಯಾನಿಕ್ ಸಂಸ್ಥೆಯ ಡೈರೆಕ್ಟ್ ಡಿಸ್ಟ್ರಿಬ್ಯೂಷನ್ ವಿಭಾಗದ ಮುಖ್ಯಸ್ಥರಾದ ಚಂದನ್ ಶೆಟ್ಟಿ ಅವರು “ವಿದ್ಯಾರ್ಥಿಗಳಿಗೆ ಬದಲಾಗುತ್ತಿರುವ ಸ್ಪರ್ಧಾತ್ಮಕ ಜಗತ್ತಿಗೆ ಈಗಿನಿಂದಲೇ ಸಿದ್ಧರಾಗುವಂತೆ ಕರೆ ನೀಡಿದರು. ಕೇವಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸೆಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ಪರ್ವ-2026ರ ಅಂಗವಾಗಿ ವಾರ್ಷಿಕ ಕ್ರೀಡೋತ್ಸವವು ನಡೆಯಿತು. ಕೊಲ್ಲೂರು ಪೊಲೀಸ್ ಠಾಣೆಯ ಎ.ಎಸ್.ಐ ನರೇಶ್ ಅವರು ಪಥಸಂಚಲನದ ಗೌರವ ರಕ್ಷೆ ಸ್ವೀಕರಿಸಿ, ಗ್ರಾಮೀಣ ಪ್ರದೇಶದ ಈ ಶಾಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಕ್ರೀಡಾಚಟುವಟಿಕೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಕ್ರೀಡಾಪ್ರತಿಭೆಯನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನಾರ್ಹ ಕಾರ್ಯ ಎಂದರು. ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿದ ಚಿತ್ತೂರು ಪಿಎಂಶ್ರೀ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಶಾಲಾ ವಾರ್ಷಿಕ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಮಹತ್ವವಾದುದು. ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಪೂರ್ತಿಯನ್ನು ವೃದ್ಧಿಸಲು ಅನುಕೂಲ ಎಂದು ಶುಭ ಹಾರೈಸಿದರು. ಮೂಕಾಂಬಿಕಾ ದೇವಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಡಿಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಬ್ಬಯ್ಯ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ, ಸುವರ್ಣನಿಧಿ ಯೋಜನೆಯ ಅಧ್ಯಕ್ಷ ನೇತ್ರಾಡಿ ಸುರೇಂದ್ರ ನಾಯ್ಕ, ಸಭಾಭವನ ಸಮಿತಿ ಅಧ್ಯಕ್ಷೆ ಪ್ರೇಮಾ ಎಸ್ ನಾಯ್ಕ್, ಎಸ್,ಡಿ,ಎಂ.ಸಿ ಉಪಾಧ್ಯಕ್ಷೆ ನಾಗರತ್ನ ಶೆಟ್ಟಿ, ಮೂಕಾಂಬಿಕಾ ಪ್ರೌಢಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹೇರೂರು ಗ್ರಾಮದ ರಾಗಿಹಕ್ಲು ಗದ್ದೆಮನೆ ನಿವಾಸಿ ಸುಮಿತ್ರಾ (26) ಎಂಬ ಯುವತಿಯು ನವೆಂಬರ್ 13 ರಂದು ಬೆಳಗ್ಗೆ 10 ಗಂಟೆಯಿಂದ ಉಡುಪಿ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಕಾಣೆಯಾಗಿರುತ್ತಾಳೆ. 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಉಪ ನಿರೀಕ್ಷಕರು ಮೊ.ನಂ: 9080805445 ಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳಿಗೆ ಆಸ್ತಿ-ಪಾಸ್ತಿ ನೀಡುವುದಕ್ಕಿಂತ ಉತ್ತಮ ಸಂಸ್ಕಾರ ನೀಡುವುದು ಅತ್ಯಂತ ಶ್ರೇಷ್ಠ. ಸಂಸ್ಕಾರವೇ ಮಕ್ಕಳ ಬದುಕಿನ ನಿಜವಾದ ಆಸ್ತಿ ಎಂದು ಯಡೂರು ಹೊಸನಗರ ತಾಲೂಕು ಸಮೂಹ ಸಂಪನ್ಮೂಲ ವ್ಯಕ್ತಿ, ಶಿಕ್ಷಕಿ ಹಾಗೂ ಸಾಹಿತಿ ರೇಖಾ ಪ್ರಭಾಕರ್ ಹೇಳಿದರು. ಅವರು ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಯಡಾಡಿ- ಮತ್ಯಾಡಿ ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ಆಯೋಜಿಸಿದ್ದ ‘ಸುಜ್ಞಾನ ದೀಪಾವಳಿ-2026’ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೀಪಾವಳಿ ಕೇವಲ ದೀಪ ಹಚ್ಚಿ ಸಂಭ್ರಮಿಸುವ ಹಬ್ಬವಲ್ಲ. ಅದರ ಹಿಂದೆ ಪೌರಾಣಿಕ ಪರಂಪರೆ, ಕೃಷಿ ಸಂಸ್ಕೃತಿ, ಪ್ರಕೃತಿ ಆರಾಧನೆ ಮತ್ತು ಕೃತಜ್ಞತೆಯ ಭಾವನೆ ಅಡಕವಾಗಿದೆ. ಕರಾವಳಿ ಭಾಗದಲ್ಲಿ ಬಲಿಂದ್ರನ ಸ್ವಾಗತ, ಗದ್ದೆಗಳಿಗೆ ದೀಪವಿಡುವುದು, ನೆಣೆಕೋಲು, ಹೊಲಿರಾಶಿ ಪೂಜೆ, ಧನಲಕ್ಷ್ಮಿ ಆರಾಧನೆ, ತುಳಸಿ ಹಾಗೂ ಗೋ ಪೂಜೆಯಂತಹ ಆಚರಣೆಗಳು ಕೃಷಿ ಬದುಕು ಮತ್ತು ಪ್ರಕೃತಿಯೊಂದಿಗಿನ ನಂಟನ್ನು ಸಾರುತ್ತವೆ. ಆಧುನಿಕ ಜೀವನಶೈಲಿಯಲ್ಲಿ ಮರೆಯಾಗುತ್ತಿರುವ ಇಂತಹ ಸಂಪ್ರದಾಯಗಳ ಹಿಂದಿನ ಮಹತ್ವವನ್ನು ಮಕ್ಕಳಿಗೆ ತಿಳಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಎಲ್ಲರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳ ಸದಸ್ಯತ್ವದ ನೋಂದಣಿ ಪ್ರಕ್ರಿಯೆ ಹಾಗೂ ಸಮಿತಿಗಳನ್ನು ರಚಿಸಿ, ಯುವಜನರನ್ನು ಸಬಲೀಕರಣಗೊಳಿಸಲು ತಳಮಟ್ಟದ ಆಡಳಿತದಲ್ಲಿ ಸಕ್ರೀಯಪಾಲುದಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಭಾರತ್ ಜೋಡೊ ಯುವ ಸಂಘದ ಮಾರ್ಗದರ್ಶಕರಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಗ್ರಾಮ ಪಂಚಾಯತ್ ಹಾಗೂ ನಗರದ ವಾರ್ಡ್ಗಳ ವ್ಯಾಪ್ತಿಯಲ್ಲಿ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಯುವಜನರಲ್ಲಿ ನಾಯಕತ್ವದ ಗುಣ ಬೆಳಿಸಿ, ಅವರುಗಳನ್ನು ಸಬಲೀಕರಣಗೊಳಿಸಿ, ನಾಳಿನ ಸತ್ಪçಜೆಗಳಾಗಿ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು. ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ನಗರದ ವಾರ್ಡ್ಗಳ ವ್ಯಾಪ್ತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸಂಘ ಸ್ಥಾಪಿಸುವ ಗುರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಸಹಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಶಾಲಾ ವಾಹನವನ್ನು ಗುರುವಾರ ಜರಗಿತು. ಶಾಲಾ ಮುಖ್ಯ ಶಿಕ್ಷಕಿ ಶೀಲಾ ಅವರಿಗೆ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಪ್ರಬಂಧಕ ರಾಮಚಂದ್ರ ವೈದ್ಯ ಕೀ ನೀಡುವ ಮೂಲಕ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಉಡುಪಿ ಚೀಫ್ ಮ್ಯಾನೇಜರ್ ಪ್ರಕಾಶ್ಚಂದ್ರ ಶೆಟ್ಟಿ,ಕೋಟ ಶಾಖಾ ಪ್ರಭಂಧಕ ಗುರುರಾ ಸರಳಾಯ, ಅತಿಥಿಗಳಾಗಿ ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾದ ಮುಖ್ಯ ಶಿಕ್ಷಕರಾದ ಪ್ರೇಮಾನಂದ, ರತಿ, ಶಿಕ್ಷಕ ಗಣೇಶ್ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಮೋದ್ ಹಂದೆ,ಶಾಲಾ ವಾಹನ ಸಮಿತಿ ಅಧ್ಯಕ್ಷ ಉಪೇಂದ್ರ ಸೋಮಯಾಜಿ,ಎಸ್ಡಿಎಂಸಿ ಅಧ್ಯಕ್ಷೆ ಮಹಾಲಕ್ಷ್ಮಿ ಸೋಮಯಾಜಿ,ಮಾಜಿ ಪ್ರಾಂಶುಪಾಲ ರಾಘವೇಂದ್ರ ಭಟ್, ಕರ್ಣಾಟಕ ಬ್ಯಾಂಕ್ ನಿವೃತ್ತ ಪ್ರಭಂಧಕ ಕೋಡಿ ಚಂದ್ರಶೇಖರ್ ನಾವಡ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಪುಷ್ಭಾವತಿ ಹೊಳ್ಳ ನಿರೂಪಿಸಿದರು. ಶಿಕ್ಷಕಿ ವಿನಯ ಕುಮಾರಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು ತನ್ನದೇ ಆದ ಕೊಡುಗೆಯನ್ನು ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನವು ಶಾಸ್ತ್ರೀಯ ಶಿಸ್ತು ಮತ್ತು ಜಾನಪದ ಸ್ವಾತಂತ್ರ್ಯದಿಂದ ಜನಮನ್ನಣೆಯನ್ನು ಪಡೆದಿದೆ. ಚೌಕಟ್ಟು ಮೀರಿದರೂ ಸರಿ ತಪ್ಪು ಹೇಳುವ ಕೋರ್ಟು ಸೃಷ್ಟಿಯಾಗಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎಲ್.ಸಾಮಗ ಹೇಳಿದ್ದಾರೆ. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರೊಂದಿಗೆ ಸಂವಾದದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಶಾಸ್ತ್ರೀಯ ಕಲಾವಿದರಿಗೆ ಪಂಚ ತಾರಾ ಆತಿಥ್ಯ, ಯಕ್ಷಗಾನ/ಜನಪದ ಕಲಾವಿದರಿಗೆ ಕಲ್ಯಾಣ ಮಂಟಪದಲ್ಲಿ ಉಳಿದುಕೊಳ್ಳಬಹುದಾದ ವ್ಯವಸ್ಥೆಯ ತಾರತಮ್ಯ ಸಲ್ಲದು. ಯಕ್ಷಗಾನ ಗಂಡಸರಿಗೆ ಸೀಮಿತವಾದ ಕಲೆಯಲ್ಲ, ಎಲ್ಲರಿಗೂ ಸೇರಿದ ಕಲೆ. ಸಾಹಿತ್ಯ ಕಾರ್ಯಕ್ರಮದಲ್ಲಿ ತೊಡಗುವಿಕೆ ಸಂತೋ? ನೀಡುತ್ತದೆ. ಬದುಕಿನಲ್ಲಿ ಉತ್ತಮ ಕಲಾವಿದರಾಗಲು ಅನುಭವ ವಿಸ್ತಾರ, ವೀಕ್ಷಣೆಯ ಕುತೂಹಲ ಬಹುಮುಖ್ಯ ಎಂದರು. ತಮ್ಮ ಸುದೀರ್ಘ ಆರವತ್ತು…
