ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನೆ ಪ್ರವೇಶಿಸಿ ಕಳ್ಳತನಕ್ಕೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಶಿರೂರು ಗ್ರಾಮದ ಕೋಣಮಕ್ಕೆ ಎಂಬಲ್ಲಿ 25 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಕಳ್ಳತನ ಮಾಡುವ ಉದ್ದೇಶದಿಂದ ಮನೆಯ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿ, ಮನೆಯೊಳಗಿನ ಕಪಾಟು ತೆರೆದು ಕಳ್ಳತನಕ್ಕೆ ಪಯತ್ನಿಸುತ್ತಿದ್ದಾಗ ಮನೆಯವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ ಹಿಂಬಾಗಿಲಿನಿಂದ ಓಡಿ ಹೋಗಿರುವುದಾಗಿದೆ. ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆಯನ್ನು ಮಾನ್ಯ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ಐ.ಪಿ.ಎಸ್. ರವರ ಅದೇಶದ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ ನಾಯಕ್ ಉಡುಪಿ ಜಿಲ್ಲೆ ಅವರ ನಿರ್ದೇಶನದಂತೆ ಮತ್ತು ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಹೆಚ್.ಡಿ. ಕುಲಕರ್ಣಿ ಉಪವಿಭಾಗರವರ ಮತ್ತು ಶಿವಕುಮಾರ್ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರು ಅವರ ಮಾರ್ಗದರ್ಶನದಲ್ಲಿ ಬೈಂದೂರು ಠಾಣೆಯ ಪಿ ಎಸ್ ಐ ರವರಾದ ಸುನೀಲ್ ಕುಮಾರ್ ಬಿ.ವೈ ರವರ ನೇತ್ರತ್ವದಲ್ಲಿ ಬೈಂದೂರು ಠಾಣೆಯ ಪಿ.ಎಸ್.ಐ ರವರಾದ ನವೀನ ಪಿ. ಬೋರಕರ ಮತ್ತು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತಾ ಕಲಾ ಸಂಘದ ವತಿಯಿಂದ ಸೀರೆಗೆ ಕುಚ್ಛ ಕಟ್ಟುವ ಎಂಬ್ರಾಯ್ಡರಿ ಡಿಸೈನ್ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಇತ್ತೀಚಿನ ಕಾಲಮಾನದಲ್ಲಿ ವಿದ್ಯಾರ್ಥಿಗಳು ಒತ್ತಡ ಪರಿಸ್ಥಿತಿಯನ್ನು ನಿಭಾಯಿಸಲು ಹಾಗೂ ತಾಳ್ಮೆ, ಶ್ರದ್ಧೆಯನ್ನು ಅಳವಡಿಸಿಕೊಳ್ಳಲು ಇಂತಹ ಕೆಲವೊಂದು ಡಿಸೈನಿಂಗ್ ಕಲಿಯುವುದು ಅನಿವಾರ್ಯ ಎಂದು ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾದ ಸಂಪನ್ಮೂಲ ವ್ಯಕ್ತಿ ಶ್ರೀಮತಿ ರೇವತಿ ಡಿ. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ವೈಯಕ್ತಿಕವಾಗಿ ಹಾಗೂ ಗುಂಪು ವಿಭಾಗದಲ್ಲಿ ಸೀರೆಗೆ ಕುಚ್ಛ ಕಟ್ಟುವ ವಿನ್ಯಾಸದಲ್ಲಿ ಉತ್ಸುಕತೆಯಿಂದ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಲಲಿತಾ ಕಲಾ ಸಂಘದ ಸಂಯೋಜಕರಾದ ದೀಪಿಕಾ ಜಿ., ರಕ್ಷಿತ್ ರಾವ್, ನಿರ್ಮಲ ಬಿಲ್ಲವ, ಪ್ರೀತಿ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಪ್ರಿಯಾ ಸ್ವಾಗತಿಸಿ, ಯಕ್ಷಿತಾ ಅತಿಥಿ ಪರಿಚಯಿಸಿ, ಪಲ್ಲವಿ ವಂದಿಸಿ, ವಾಣಿಶ್ರೀ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಅಬಕಾರಿ ಇಲಾಖೆಯ ಮಂಗಳೂರು ವಿಭಾಗದ ಜಂಟಿ ಆಯುಕ್ತ ಎ.ಎನ್ ನಾಗೇಶ್ ದಂಪತಿಗಳು ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೋದಿಸಿ ಪ್ರಸಾದ ನೀಡಿ ಗೌರವಿಸಿದರು. ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಭುಜಂಗ ಗುರಿಕಾರ, ಅರ್ಚಕ ಪ್ರತಿನಿಧಿ ಅರವಿಂದ ಜೋಗಿ, ರಾಘವೇಂದ್ರ ಜೋಗಿ, ವಿಜಯ ಜೋಗಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಪಾಂಡೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶು ಆಸ್ಪತ್ರೆ ನೀಡಬೇಕು ಎಂದು ಪಾಂಡೇಶ್ವರ ವಿಶೇಷ ಗ್ರಾಮ ಸಭೆಯಲ್ಲಿ ಆಗ್ರಹ ಕೇಳಿ ಬಂತು. ಶುಕ್ರವಾರ ಪಾಂಡೇಶ್ವರ ಗ್ರಾ.ಪಂ ಸಭಾಂಗಣದಲ್ಲಿ ವಿಶೇಷ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿ ನಮ್ಮ ಗ್ರಾಮದಲ್ಲಿ ಈವರೆಗೆ ಸ್ಥಳೀಯವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶು ಆಸ್ಪತ್ರೆ ಇಲ್ಲವಾಗಿದೆ ಈ ಬಗ್ಗೆ ನಿರ್ಣಯ ಕೈಗೊಂಡು ಸರಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಸಾಸ್ತಾನ ಟೋಲ್ ಸುತ್ತಮುತ್ತ ಹಾಗೂ ಪಂಚಾಯತ್ ವ್ಯಾಪ್ತಿಯ ಕೆಲ ಅಂಗಡಿ ಮುಂಗಟ್ಟುಗಳ ಆಸುಪಾಸು ಕಸ ಹಾಗೂ ಎಳನೀರಿನ ಬೊಂಡದ ರಾಶಿಯಿಂದ ಪರಿಸರ ಮಲಿನಗೊಳ್ಳುತ್ತಿದೆ ಈ ಬಗ್ಗೆ ಸಂಬಂಧಪಟ್ಟ ಟೋಲ್ ಹಾಗೂ ಅಂಗಡಿಮುಂಗಟ್ಟುಗಳಿಗೆ ನೋಟಿಸ್ ಮೂಲಕ ಜಾಗೃತಿ ಮೂಡಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಇದೀಗ ವಿಪರೀತ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದೆ ಕುಡಿಯುವ ನೀರಿನ ಅಭಾವ ತಪ್ಪಿಸಲು ಏನು ಕ್ರಮ ಕೈಗೊಂಡಿದ್ದಿರಿ,ಜಲಜೀವನ್ ಯೋಜನೆ ಟ್ಯಾಪ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ವ್ಯವಹಾರ ಕ್ಷೇತ್ರದ ಹೊಸ ಮಾದರಿಗಳು ಎಂಬ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರ ನಡೆಯಿತು. ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಡಾ. ಲೋಕೇಶ್ ಪ್ರಸ್ತುತ ವ್ಯವಹಾರ ಕ್ಷೇತ್ರದ ವಿವಿಧ ಮಾದರಿಗಳನ್ನು ವಿವರಿಸಿ ಮಾತನಾಡಿ, ವ್ಯವಹಾರ ರಂಗದಲ್ಲಿ ಬದಲಾವಣೆಗಳು ನಿರಂತರವಾಗಿ ನಡೆಯುತ್ತಿರುತ್ತದೆ ಯಾವುದೇ ಹೊಸ ವ್ಯವಹಾರ ಮಾದರಿಯ ಅನ್ವೇಷಣೆ ಹಾಗೂ ಚಾಲ್ತಿಯಲ್ಲಿರುವ ಮಾದರಿಗಳಲ್ಲಿನ ಬದಲಾವಣೆಗಳು ಹಲವಾರು ಸವಾಲುಗಳನ್ನು ಸೃಷ್ಟಿಸುತ್ತದೆ ಹಾಗೂ ಹೊಸ ಅವಕಾಶಗಳನ್ನು ತೆರೆದುಕೊಡುತ್ತದೆ. ಉದ್ಯಮ ರಂಗದ ಮಾದರಿಗಳಲ್ಲಾಗುವ ವ್ಯತ್ಯಾಸವು ಉದ್ದಿಮೆದಾರರ, ಉದ್ಯೋಗಿಗಳ, ಗ್ರಾಹಕರ ಹಾಗೂ ಉದ್ಯೋಗ ಆಕಾಂಕ್ಷಿಗಳ ಜೀವನದ ಮೇಲೆ ಪ್ರಭಾವವನ್ನು ಬೀರುತ್ತದೆ. ಕ್ರಿಯಾತ್ಮಕ ವ್ಯವಹಾರ ಕ್ಷೇತ್ರದ ಬದಲಾವಣೆಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದ್ದರಿಂದ ಈ ನೂತನ ಮಾದರಿಗಳು ಹೇಗೆ ಹುಟ್ಟಿಕೊಳ್ಳುತ್ತವೆ ಹಾಗೂ ಈ ಮಾದರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡಾಗ ಮಾತ್ರ ಬದುಕು ಪರಿಪೂರ್ಣವಾಗಲು ಸಾಧ್ಯ. ಆಲಿಸುವಿಕೆ, ಓದು, ನೋಡುವ ಆಸಕ್ತಿ ಈ ಕೌಶಲಗಳನ್ನು ಬೆಳೆಸಿಕೊಂಡಾಗ ಬರವಣಿಗೆ ಕೌಶಲ ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗವು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಡಾ| ಶಿವರಾಮ ಕಾರಂತ ಪ್ರತಿಷ್ಠಾನ – ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಬರವಣಿಗೆ ಕೌಶಲ’ ಎನ್ನುವ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಸಮಾರೋಪ ನುಡಿಗಳನ್ನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯದರ್ಶಿ ದಿನಕರ್ ಆರ್. ಶೆಟ್ಟಿ ಆಶಯ ನುಡಿಗಳನ್ನಾಡಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕುಂದಾಪುರ ತಾಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಗುರುವಾರದಂದು ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಬಿವೇರ್ ಆಫ್ ಪ್ಲಾಸ್ಟಿಕ್ ಅಸುರ ಎಂಬ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಬೇರೂ ಕಲೆಕ್ಟಿವ್ ಸಂಯೋಜಕರಾದ ಕ್ಲೈವ್ ಕ್ರಾಸ್ಟಾ ತಮ್ಮ ತಂಡದವರಿಂದ ವಿದ್ಯಾರ್ಥಿಗಳಿಗೆ ಯಕ್ಷಗಾನ ರೂಪದಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಅದರಿಂದ ಆಗುವ ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಎನ್.ಎಸ್. ಎಸ್ ಘಟಕದ ಸಂಯೋಜಕರು ಬೋಧಕ ಬೋಧಕೇತರ ಸಿಬ್ಬಂಧಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆನ್ ಲೈನ್ ಮೂಲಕ ಬಿಟ್ ಕಾಯಿನ್ ಖರೀದಿ ಮಾಡಿ ಹಣವನ್ನು ದ್ವಿಗುಣ ಮಾಡಿ ಕೊಡುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ ಚಂದ್ರಿಕಾ (38) ಅಂಕದಕಟ್ಟೆ ಹಾಗೂ ಭಾಸ್ಕರ (45) ಶಿವಮೊಗ್ಗ ವಿರುದ್ಧ ಯಶೋದಾ ಹಾಲಾಡಿ ದೂರು ನೀಡಿದ್ದಾರೆ. ಅಂಕದಕಟ್ಟೆಯ ಸಮೀಪ ಚಂದ್ರಿಕಾ ಅವರ ಕಚೇರಿಗೆ ಬೈಂದೂರಿನ ಸ್ವದೀಪ್ ಶೆಟ್ಟಿ ಅವರು ಹಣ ನೀಡುವಂತೆ ಹೇಳಿದ್ದು, ಬಳಿಕ ಕೆಲವು ನಕಲಿ ಕಾಗದ ಪತ್ರ ಸೃಷ್ಟಿಸಿದ ಚಂದ್ರಿಕಾ ಇದು ಕಾನೂನಾತ್ಮಕ ವ್ಯವಹಾರವಾಗಿದ್ದು, ಲೈಸೆನ್ಸ್ ಇರುವುದಾಗಿ ಸುಳ್ಳು ಹೇಳಿ ನಂಬಿಸಿದ್ದಾರೆ. 2024ರ ಡಿ.11 ರಂದು 3.80 ಲಕ್ಷ ರೂ., ಹಂತ- ಹಂತವಾಗಿ ಒಟ್ಟು 17 ಲಕ್ಷ ರೂ. ಪಡೆದಿದ್ದಾರೆ. ಈ ಬಗ್ಗೆ ಬಾಂಡ್ ನೀಡದೇ, ಮಾ.16ಕ್ಕೆ ಕಚೇರಿಗೆ ಹೋದಾಗ ಅಲ್ಲಿ ಚಂದ್ರಿಕಾ ಹಾಗೂ ಭಾಸ್ಕರ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ. ನನ್ನ ಅಣ್ಣ ಶಂಕರ ನಾಯ್ಕ, ಪತ್ನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೈಂಟ್ ಥಾಮಸ್ ಕಿಂಡರ್‌ಗಾರ್ಟನ್ ಶಾಲೆಯಲ್ಲಿ “ಲಿಟಲ್ ವಿಂಗ್ಸ್ ಗ್ರಾಜುಯೇಶನ್ 2026” ಪದವಿ ಪ್ರದಾನ ಸಮಾರಂಭವು ಗುರುವಾರ ಶಾಲೆಯ ಆಡಿಯಟೋರಿಯಂನಲ್ಲಿ ಸಂಭ್ರಮದಿಂದ ನೆರವೇರಿತು. ಪುಟ್ಟ ಮಕ್ಕಳ ಉತ್ಸಾಹ, ಸಂಭ್ರಮ, ಪೋಷಕರ ಹರ್ಷ ಹಾಗೂ ಶಿಕ್ಷಕರ ಸಮರ್ಪಣೆ ಒಂದಾಗಿ ಈ ಕಾರ್ಯಕ್ರಮವು ಸ್ಮರಣೀಯವಾಗಿಸಿತು . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮದೂರು ಭಾರತ್ ಮಾತಾ ಪ್ರೌಢಶಾಲೆಯ ಸಂಚಾಲಕರಾದ ಫಾದರ್ ಜೋಸೆಫ್ ಮಟ್ಟಮ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಮ್ಮ ಭಾಷಣದಲ್ಲಿ ಮಕ್ಕಳ ಜೀವನದಲ್ಲಿ ಪ್ರಾಥಮಿಕ ಶಿಕ್ಷಣದ ಮಹತ್ವವನ್ನು ವಿವರಿಸಿ, ಮಕ್ಕಳಿಗೆ ಮನೆಯಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಸಿಕೊಡಬೇಕು. ಮಕ್ಕಳಿಗೆ ಮೌಲ್ಯಯುತವಾದ ಜೀವನ ನಡೆಸಲು ಪ್ರೇರಣೆಯನ್ನು ನೀಡಬೇಕು. ಮಕ್ಕಳ ಚಿಂತನೆಗಳನ್ನ ಬದಲಾಯಿಸಿದರೆ ಮಾತ್ರ ಅದು ಅವರ ಭವಿಷ್ಯಕ್ಕೆ ಒಳ್ಳೆದಾಗಬಹುದು. ಈ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಮೌಲ್ಯಗಳೊಂದಿಗೆ ಶಿಕ್ಷಣ ನೀಡುತ್ತಿದ್ದಾರೆ ಎಂದು ಶ್ಲಾಘಿಸಿ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿರುವ ಶಾಲೆಯ ಪ್ರಾಂಶುಪಾಲರಾದ ಫಿಲಿಪ್ ನೆಲ್ಲಿವಿಲ್ಲ ಅವರು ಮಾತನಾಡಿ, ಇಂದು ನಮ್ಮ ಪುಟ್ಟ ಮಕ್ಕಳ ಮೊದಲ ಸಾಧನೆಯನ್ನು ಸಂತೋಷ ಮತ್ತು ಹೆಮ್ಮೆಯಿಂದ ಆಚರಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’ ಕೃಷಿಸಿರಿ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಟ ಸ್ವರಾಜ್ ಶೆಟ್ಟಿ, ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆಳ್ವಾಸ್‌ನಷ್ಟು ಪ್ರೋತ್ಸಾಹ ನೀಡುವ ಸಂಸ್ಥೆ ಬೇರೊಂದಿಲ್ಲ. ಶಿಕ್ಷಣದೊಂದಿಗೆ ಮೌಲ್ಯಗಳನ್ನೂ ಬೆಳೆಸುವ ಮೂಲಕ, ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವ ಕಾರ್ಯವನ್ನು ಸಂಸ್ಥೆ ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದರು. ಜೀವನದಲ್ಲಿ ಸೋಲುಗಳು ಸಹಜ. ಆದರೆ ಸೋಲಿಗೆ ಎದೆಗುಂದದೆ ಧೈರ್ಯದಿಂದ ಎದುರಿಸಬೇಕು. ಪ್ರತಿಯೊಂದು ಅನುಭವವೂ ಹೊಸ ಪಾಠ ಕಲಿಸುತ್ತದೆ. ಇಷ್ಟವಿಲ್ಲದ ವಿಷಯಗಳಲ್ಲಿ ತೊಡಗಿಕೊಳ್ಳಬೇಡಿ. ನಿಮ್ಮ ಆಸಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿ ಮುಂದುವರಿಯಿರಿ. ಸಾಧ್ಯವಾದರೆ ಇತರರನ್ನು ಪ್ರೀತಿಸಿ, ಯಾವುದೇ ಸಂದರ್ಭದಲ್ಲೂ ದ್ವೇಷಕ್ಕೆ ಅವಕಾಶ ಕೊಡಬೇಡಿ. ಸತ್ಯ, ಪ್ರಾಮಾಣಿಕತೆ, ಸಹಾನುಭೂತಿ ಮತ್ತು ದಯೆ ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಜೀವನ ನಿರ್ಮಾಣ ಸಾಧ್ಯ, ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಆಳ್ವಾಸ್ ಸಂಸ್ಥೆಯ ಸಾಧನೆಯಲ್ಲಿ ವಿದ್ಯಾರ್ಥಿಗಳ ಕೊಡುಗೆ ಅಪಾರ. ಆದ್ದರಿಂದ ನಿಮ್ಮ ಮೇಲೆ…
