ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಹಣವಂತರಿಗಿಂತ ಶುದ್ಧ ನೀರನ್ನು ಸೇವಿಸುವವನೇ ನಿಜವಾದ ಯೋಗವಂತ. ಶುದ್ಧ ಗಾಳಿ ಹಾಗೂ ಶುದ್ಧ ನೀರು ಮನುಷ್ಯನ ಮೂಲಭೂತ ಅವಶ್ಯಕತೆ. ಹಾಗಾಗಿ ಅವು ಸಿಗುವಲ್ಲಿಯೇ ವಾಸ ಮಾಡಬೇಕು. ದುಡ್ಡಿಗಿಂತ ಶುದ್ಧ ನೀರು ಅಗತ್ಯ ಎಂಬುದನ್ನು ಸಮಾಜ ಆಲೋಚಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಕುಡಿಯಲು ಯೋಗ್ಯವಾಗಿರದ ನೀರು ಸಿಗದಿರುವುದು ನಗರ ಜೀವನದ ದೊಡ್ಡ ಅನರ್ಥವಾಗಿದ್ದು, ಯೋಜನಾ ರಹಿತವಾದ ನಗರ ನಿರ್ಮಾಣದಿಂದಾಗಿ ನಗರಗಳು ಕೇವಲ ಮನುಷ್ಯರು ಗುಂಪುಗುಂಪಾಗಿ ಇರುವಂತೆ ಮಾಡಿರುವ ವ್ಯವಸ್ಥೆಗಳಷ್ಟೇ ಆಗಿ ಮಾರ್ಪಟ್ಟಿದೆ. ಹಣದ ಆಸೆಗೆ ನದಿ, ಕೆರೆಗಳನ್ನು ಮುಚ್ಚಿ ನಗರದ ನಿರ್ಮಾಣವನ್ನು ಮಾಡಲಾಗಿದ್ದು, ನಗರಗಳಲ್ಲಿ ಮನುಷ್ಯನ ಮಾಲಿನ್ಯದ ಹರಿವು ಹಾಗೂ ಕಾರ್ಖಾನೆಗಳ ತ್ಯಾಜ್ಯಗಳ ನದಿ ನಿರ್ಮಾಣವಾಗಿದೆ. ಈ ತ್ಯಾಜ್ಯಗಳೆಲ್ಲವೂ ನದಿಯನ್ನು ಸೇರುತ್ತಿದ್ದು, ನೀರಿನ ಪಾತ್ರಗಳನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯ ವತಿಯಿಂದ ನಬಾರ್ಡ್ನ ಸಹಯೋಗದಲ್ಲಿ ಗ್ರಾಹಕರಿಗಾಗಿ ಆರ್ಥಿಕ ಅರಿವು ಕಾರ್ಯಕ್ರಮವು ಉಪ್ಪುಂದ ನಾಡದೋಣಿ ಸಭಾಭವನದಲ್ಲಿ ಗುರವಾರ ನಡೆಯಿತು. ಹಿರಿಯ ಕೃಷಿಕರು ಹಾಗೂ ಹೊಸ್ಕೋಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟೇಶ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯು ಈ ಭಾಗದ ರೈತಾಪಿ ಜನರಿಗೆ ನೀಡುತ್ತಿರುವ ಸೇವೆಗಳನ್ನು ಶ್ಲಾಘಿಸಿದರು. ಬ್ಯಾಂಕಿನ ಹಿರಿಯ ಗ್ರಾಹಕರಾದ ಡಾ. ಯು. ವಿಶ್ವೇಶ್ವರ ಮಯ್ಯ ಅವರನ್ನು ಸನ್ಮಾನಿಸಲಾಯಿತು. ಇತ್ತೀಚಿಗಷ್ಟೇ ಅಪಘಾತದಲ್ಲಿ ಮೃತರಾದ ಶ್ರೀನಿಧಿ ನವೋದಯ ಸ್ವಸಹಾಯ ಗುಂಪಿನ ಸದಸ್ಯ ಹರಿಶ್ಚಂದ್ರ ಖಾರ್ವಿ ಅವರ ಕುಟುಂಬಕ್ಕೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ರೂ. ಒಂದು ಲಕ್ಷ ಚೈತನ್ಯ ವಿಮಾ ಪರಿಹಾರ ಮೊತ್ತವನ್ನು ನೀಡಲಾಯಿತು. ಕೆನರಾ ಬ್ಯಾಂಕಿನ ಆರ್ಥಿಕ ಸಾಕ್ಷರತಾ ಕೇಂದ್ರ ಸಿಬ್ಬಂದಿ ಆಶಾಲತಾ ಮಾತನಾಡಿ, ಅನ್ಲೈನ್ ಬ್ಯಾಂಕಿಂಗ್ನಲ್ಲಿ ನಡೆಯುವ ವಂಚನೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ಆರುಣ್ಯ 2026ರ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಬಂಟರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಆವರ್ಸೆ ಸುಧಾಕರ ಶೆಟ್ಟಿ ಕಾರ್ಯಕ್ರಮವನುದ್ದೇಶಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ ನಾಯಕತ್ವ, ಸೃಜನಶೀಲತೆ, ಸಾಮಾಜಿಕ ಜವಾಬ್ದಾರಿ ಮತ್ತು ಆತ್ಮವಿಶ್ವಾಸ ಬೆಳೆಸುವಂತಾಗಲಿ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕರಾದ ಹೆಚ್ ಜಗದೀಶ್ ಕಾರ್ಯಕ್ರಮ ಕುರಿತು ಕಾಲೇಜಿನಲ್ಲಿ ನಡೆಯುತ್ತಿರುವ ಮ್ಯಾನೇಜ್ಮೆಂಟ್ ಫೆಸ್ಟ್ನಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲು ಉತ್ತಮ ಅವಕಾಶ ದೊರೆಯುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಇದನ್ನು ಕೇವಲ ಮನರಂಜನಾ ಕಾರ್ಯಕ್ರಮ ಅಂತ ತಿಳಿಯುದೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂವಹನ, ನಿರ್ಧಾರ ಕೈಗೊಳ್ಳುವಿಕೆ, ತಂಡದ ಕೆಲಸ ಮತ್ತು ಉದ್ಯಮಶೀಲತೆ ಬೆಳೆಸುವ ಪ್ರಮುಖ ಶೈಕ್ಷಣಿಕ ವೇದಿಕೆಯಾಗಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಹಾಗೂ ಶಿಕ್ಷಣತಜ್ಞರ ಪಾತ್ರವನ್ನು ಸ್ಮರಿಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕತಾರ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಹಾಗೂ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಸಂಯೋಜಿತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ ಈ ಕಾರ್ಯಕ್ರಮವನ್ನು ಅಶೋಕ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಆರಂಭದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಕರ್ನಾಟಕ ಸಂಘ ಕತಾರ್ನ ಮಕ್ಕಳಿಂದ ಸಾಂಪ್ರದಾಯಿಕ ಸ್ವಾಗತ ನೃತ್ಯ ಪ್ರದರ್ಶನಗೊಂಡಿತು. ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಪರಿಚಯಿಸಿದ ಈ ನೃತ್ಯ ಕಾರ್ಯಕ್ರಮ ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು. ಕರ್ನಾಟಕ ಸಂಘ ಕತಾರ್ನ ಪ್ರಧಾನ ಕಾರ್ಯದರ್ಶಿ ಸುಜಿತ್ ಕುಮಾರ್ ಹೊಸದುರ್ಗ ಅವರು ಗಣ್ಯರು, ಮುಖ್ಯ ಅತಿಥಿಗಳು, ಶಿಕ್ಷಕರು ಹಾಗೂ ಸಮುದಾಯದ ಸದಸ್ಯರನ್ನು ಸ್ವಾಗತಿಸಿದರು. ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಅಧ್ಯಕ್ಷೀಯ ಭಾಷಣ ಮಾಡಿ, ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ”ವಂದೇ ಮಾತರಂ” ಗೀತೆಯನ್ನು ಪೂರ್ಣ ಹಾಡಬೇಕೇಂಬ ಕೇಂದ್ರದ ಆದೇಶಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ತಡೆಯೊಡ್ಡಿ ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವುದು ತುಷ್ಟೀಕರಣ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಬಿಜೆಪಿ ಕರ್ನಾಟಕದ ಮಾಧ್ಯಮ ಸಮಿತಿ ಸದಸ್ಯ ಹಾಗೂ ಮಾಧ್ಯಮ ವಕ್ತಾರ ರಮೇಶ್ ಪೂಜಾರಿ ಆರೋಪಿಸಿದ್ದಾರೆ. ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ಎಲ್ಲಾ 6 ಚರಣಗಳನ್ನು ಹಾಡಬೇಕೆಂಬ ಕೇಂದ್ರ ಗೃಹ ಸಚಿವಾಲಯದ ಸ್ಪಷ್ಟ ಮಾರ್ಗದರ್ಶನವನ್ನು ಧಿಕ್ಕರಿಸಿ, ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ನಿರ್ಧಾರವು ಕಾಂಗ್ರೆಸ್ ಪಕ್ಷದ ಹಳೆಯ ತುಷ್ಟೀಕರಣ ರಾಜಕಾರಣದ ಮುಂದುವರಿದ ಭಾಗವಾಗಿದೆ. 1937ರ ಕೊಲ್ಕತ್ತಾ ಸಿಡಬ್ಲ್ಯೂಸಿ (CWC) ನಿರ್ಣಯದ ನೆಪವೊಡ್ಡಿ, ಬಂಕಿಮಚಂದ್ರ ಚಟ್ಟೋಪಾಧ್ಯಾಯರ ಅಮರ ರಾಷ್ಟ್ರಗೀತೆಯ ಭಾಗಗಳನ್ನು ಕತ್ತರಿಸುವ ಮೂಲಕ ಕಾಂಗ್ರೆಸ್ ಸರ್ಕಾರವು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚಾರಿತ್ರಿಕ ತತ್ವಗಳಿಗೆ ಬಹಿರಂಗ ಅಪಮಾನವೆಸಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ವೇಳೆ ಪೂರ್ತಿ 6 ಚರಣಗಳ ಹಾಡು ಸಾಗುತ್ತಿದ್ದಾಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು ಮಟ್ಟದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕಬಡ್ಡಿ ಪಂದ್ಯಾವಳಿಯು ಗುರುವಾರ ಕಾರ್ಕಳದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾದ ಚೇತನ್ ಹಾಗೂ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರು ಉಡುಪಿ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ರೆಫ್ರಿ ಬೋರ್ಡ್ನ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್, ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲೆ ಅಕ್ಷತಾ ಶೆಣೈ ಉಪಸ್ಥಿತರಿದ್ದರು. ರಾಜ್ಯ ಕಬಡ್ಡಿ ಅಸೋಸಿಯೇಶನ್ನ ತೀರ್ಪುಗಾರರಾದ ಸಂತೋಷ್, ಪ್ರಶಾಂತ್ ಶೆಟ್ಟಿ, ಅಣ್ಣಪ್ಪ ಭಾಗವಹಿಸಿದ್ದರು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿರುವ ಸುಮಾರು 8 ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಸಮರ ಕಲೆಯ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾದ ಶಶಿಧರ್ ಶೆಟ್ಟಿ ಅವರು ಮಾತನಾಡಿ, ಕ್ರಿಯೇಟಿವ್ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಕ್ರಿಯೇಟಿವ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ಸರ್ಕಾರ ಜಾರಿಗೊಳಿಸಿರುವ ಕಾಯಿದೆ ಹಾಗೂ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವಿದ್ದಾಗ ಮಾತ್ರ ಹಿರಿಯರ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ. ಈ ಬಗ್ಗೆ ಜನರಿಗೆ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಹಿರಿಯ ಜೀವಗಳು ತಮ್ಮ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ಜೀವಿಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ತಂದೆ ತಾಯಿಯರ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ನಡೆದ ಆರುಣ್ಯ 2026ರ ಅಂತರ ಕಾಲೇಜು ಮ್ಯಾನೇಜಮೆಂಟ್ ಫೆಸ್ಟ್ ನಲ್ಲಿ ವಕ್ವಾಡಿಯ ಗುರುಕುಲ ಪದವಿಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಾಂಸ್ಕೃತಿಕ, ಮ್ಯಾನೇಜಮೆಂಟ್, ಕಾಮರ್ಸ್, ಐಟಿ ಮತ್ತು ಕ್ರೀಡಾ ವಲಯಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳಾದ ಸ್ಕಿಟ್, ಡ್ಯಾನ್ಸ್, ಸ್ಕ್ವಾಟ್, ಕ್ವಿಜ್, ಪೋಸ್ಟರ್ ಮೇಕಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು, ವೆರೈಟಿ ಶೋ, ಪುಶಪ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಸ್ಕಿಟ್ನಲ್ಲಿ ಪೌರವ್, ಹೇಮಂತ್, ತನುಶಿ, ತನ್ಮಯಿ, ಪುಶಪ್ ಮತ್ತು ಸ್ಕ್ವಾಟ್ ನಲ್ಲಿ ಅನಿಶ್ ಮತ್ತು ಶ್ರಾವ್ಯ, ಕ್ವಿಜ್ ನಲ್ಲಿ ದರ್ಶನ್ ಮತ್ತು ಕುಶಾಲ್, ಡ್ಯಾನ್ಸ್ ನಲ್ಲಿ ಪ್ರಜನ್ಯ, ಸಿರಿಶಾ, ಅಧಿತಿ ಪಟೇಲ್, ಹಿತೈಷಿ, ತನುಶಿ, ತನ್ಮಯಿ, ಪೋಸ್ಟರ್ ಮೇಕಿಂಗ್ ನಲ್ಲಿ ಆದಿತ್ಯ ಎಸ್ ನಾಯ್ಕ್ ಸುಪ್ರೀತ್, ವೈರಟಿ ಶೋನಲ್ಲಿ ನಿತ್ಯ, ಕೀರ್ತನ, ಸ್ಪಂದನ, ವೈಷ್ಣವಿ, ಸುಮಿತ್, ರೋಹನ್, ಭರತ್, ಆದಿತ್ಯ ನಾಯಕ್, ಪ್ರೀತಮ್ ಎಂ, ಭಾಗವಹಿಸಿ ಪ್ರಶಸ್ತಿ ಗೆದ್ದು ಕಾಲೇಜಿಗೆ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯವರು ಗಣೇಶ ಚತುರ್ಥಿಯ ಅಂಗವಾಗಿ ನಡೆಸಿದ ತಾಲೂಕು ಮಟ್ಟದ ಸಾಂಸ್ಕçತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 9 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ವಿಜೇತ ವಿದ್ಯಾರ್ಥಿಗಳ ವಿವರ ಇಂತಿದೆ:ಇಂಗ್ಲೀಷ್ ಭಾಷಣ – ಸ್ಪರ್ಶ, ಪ್ರಥಮ, ಹಿಂದಿ ಭಾಷಣ – ತೃಪ್ತಿ ಶೆಟ್ಟಿ, ದ್ವಿತೀಯ, ಹಿಂದಿ ಭಾಷಣ – ಡಿ. ಸಾನ್ವಿ – ತೃತೀಯ, ದೇಶ ಭಕ್ತಿ ಗೀತೆ – ಸುಮೇಧ ತುಂಗಾ, ದ್ವಿತೀಯ, ಪ್ರತ್ಯುಶ್ – ರೋಪ್ ಸ್ಕಿಪ್ಪಿಂಗ್ – ಪ್ರಥಮ, ಸುಡೊಕೊ – ವನ್ಮಯಿ ದ್ವಿತೀಯ, ಯೋಗ – ಅಕ್ಷತ ಪೈ – ಪ್ರಥಮ, ಗೂಡು ದೀಪ ಧ್ಯಾನ್ – ತೃತೀಯ, ರೂಬಿಕ್ಸ್ ಕ್ಯೂಬ್ – ಪ್ರಜ್ವಲ್ – ತೃತೀಯ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ನಿರ್ದೇಶಕ ಹರೀಶ್ ಮರವಂತೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಪ್ರಕ್ರಿಯೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು. ಈ ಜಮಾಬಂದಿ ಕಾರ್ಯಕ್ರಮದಲ್ಲಿ ವಾರ್ಷಿಕ ಲೆಕ್ಕಪತ್ರಗಳ ಪರಿಶೀಲನೆಯನ್ನು ಜಮಾಬಂದಿ ಅಧಿಕಾರಿ ಜಿಲ್ಲಾ ಯೋಜನಾಧಿಕಾರಿ ಉದಯ್ ಶೆಟ್ಟಿ ನಿರ್ವಹಿಸಿ ಹಿಂದೆ ಪಂಚಾಯತ್ ಜಮಾಬಂದಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಪರಿಶೀಲಿಸುವ ಕಾಲಘಟ್ಟ ಇದಿತು ಆದರೆ ಇಂದು ಮಾಹಿತಿ ಹಕ್ಕಿನಲ್ಲೆ ಸ್ಥಳೀಯಾಡಳಿತದ ಕದ ತಟ್ಟುತ್ತಾರೆ ಈ ಹಿನ್ನಲೆಯಲ್ಲಿ ಜಮಾಬಂದಿ ಔಪಚಾರಿಕವಾಗಿ ನಡಯುತ್ತಿದೆ ಎಂದರು. ಜಮಾಬಂದಿ ಸಹಾಯಕ ಅಧಿಕಾರಿಗಳಾಗಿ ಆನಂದ್ ನಾಯ್ಕ್ ವರದಿ ವಾಚಿಸಿದರು.ಸಹಾಯಕಾಗಿ ಸುಧಾಕರ್ ಆಚಾರ ಸಹಕರಿಸಿದರು. ಪಂಚಾಯತ್ ರಾಜ್ ಇಂಜಿನಿಯರ್ ಹರ್ಷಿತ್, ಆಡಳಿತಾಧಿಕಾರಿ ಪ್ರತಾಪ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಪಂಚಾಯತ್ ಮಾಜಿ ಅಧ್ಯಕ್ಷರು, ಸದಸ್ಯರು, ಸಂಜೀವಿನ ಸಂಘಟನೆ ಪದಾಧಿಕಾರಿಗಳು, ಗ್ರಾಮಸ್ಥರು ಭಾಗಿಯಾದರು. ಜಮಾಬಂದಿಯನ್ನು ಪಂಚಾಯತ್ ಪಿಡಿಒ ಉಮೇಶ್ ನಿರ್ವಹಿಸಿದರು.
