Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಸುಷ್ಮಾ ಅವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಹಾಗೂ ಗ್ರೂಪ್ 2 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈಕೆ ಹಾಲಾಡಿಯ ಸಂಜೀವ ಹಾಗೂ ಹೇಮಾವತಿ ದಂಪತಿಗಳ ಪುತ್ರಿ. ಕಾಲೇಜಿನಲ್ಲಿ ಓದುತ್ತಿರುವಾಗಲೇ ಪದವಿಯ ಜೊತೆಗೆ ಪರೀಕ್ಷೆಯನ್ನು ತೇರ್ಗಡೆ ಹೊಂದಿ, ನಿರಂತರ ಪರಿಶ್ರಮ ಹಾಗೂ ಶೃದ್ಧೆಯಿಂದ ಅಧ್ಯಯನ ನಡೆಸಿ ಈ  ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಯನ್ನು ಶಾಸ್ತ್ರೋಕ್ತವಾಗಿ ಆಚರಿಸಲಾಯಿತು. ವಿದ್ಯಾರ್ಥಿ ವೃಂದದವರು ಭಕ್ತಿಗೀತಾ ಗಾಯನ, ಉಪವಾಸ, ಶಿವಸ್ತೋತ್ರ ಪಠಣದ ಮುಖೇನ ಆದಿಯೋಗಿಯನ್ನು ಆರಾಧಿಸಿ, ಕೃತಾರ್ಥತೆ ಹೊಂದಿದರು. ಸಂಜೆಯ ಭಜನಾ ಕಾರ್ಯಕ್ರಮದ ಅವಧಿಯಲ್ಲಿ ಶಿವಾರಾಧನೆಯ ಕ್ರಮವನ್ನು ಬಣ್ಣಿಸುತ್ತಾ ಶಿವಪೂಜೆ ಮತ್ತು ಶಿವಭಜನೆ ಕೇವಲ ಒಂದು ದಿನದ್ದಲ್ಲ, ನಮ್ಮ ಜೀವನವೇ ಒಂದು ಶಿವಪೂಜೆಯಾಗಬೇಕು. ಶಂಕರನೆಂದರೆ ಉತ್ತಮವಾದದ್ದನ್ನು ಮಾಡುವವನೆಂದರ್ಥ. ಸಮಾಜದ, ದೇಶದ ಹಿತವನ್ನು ಕಾಪಾಡುವ ಕಾರ್ಯಗಳ ಮೂಲಕ ಸದಾ ಶಂಕರನನ್ನು ಆರಾಧಿಸಬೇಕು ಮತ್ತು ಅನುಸರಿಸಬೇಕು. ಅಂತಸಾಕ್ಷಿ ಸ್ವರೂಪದಲ್ಲಿದ್ದು ನಮ್ಮನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯುವವ ಶಿವನಾಗಿದ್ದಾನೆ. ಭಗೀರಥನ ಪ್ರಾರ್ಥನೆಗೆ ಓಗೊಟ್ಟು ಧರೆಗೆ ಧುಮುಕಿದ ಗಂಗೆಯನ್ನು ಶಿರದೊಳು ಧರಿಸಿ ಭೂಮಾತೆಗೆ ನಿಧಾನವಾಗಿ ನೀರನ್ನು ಇಳಿಸಿದವನು ಗಂಗಾಧರ. ದೇಶದ ರಕ್ಷಣೆಯನ್ನು ಉತ್ತರ ದಿಕ್ಕಿನಲ್ಲಿ ಸದಾ ನಡೆಸುತ್ತಿರುವವನು ಕೈಲಾಸ ಪರ್ವತವಾಸಿ ಈಶನಾಗಿದ್ದಾನೆ. ಸಮುದ್ರಮಥನದ ಕಾಲದಲ್ಲಿ ಉತ್ಪನ್ನವಾದ ವಿಷವನ್ನು ಕುಡಿದು ಜಗತ್ತನ್ನು ರಕ್ಷಿಸಿದವನು ನೀಲಕಂಠನಾಗಿದ್ದಾನೆ. ಮಾರ್ಕಂಡೇಯನ ರಕ್ಷಣೆಗೆ ನಿಂತು ಯಮನನ್ನೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಣ್ಣ ಕೈಗಾರಿಕೆಗಳ ಉದ್ಯಮಗಳನ್ನು ಉತ್ತೇಜಿಸಲು ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರಗಳು ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಉದ್ದಿಮೆದಾರರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಕಡಿಯಾಳಿ ಜಂಕ್ಷನ್‌ನ ದಿ ಓಷನ್ ಪರ್ಲ್ ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕರ್ನಾಟಕ ಸರಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಹಯೋಗದಲ್ಲಿ ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು (ಆರ್.ಎ.ಎಂ.ಪಿ) ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಉದ್ದಿಮೆಗಳನ್ನು ಇನ್ನಷ್ಟು ಸ್ಥಾಪಿಸುವ ಮೂಲಕ ಸ್ಥಳಿಯರಿಗೆ ಉದ್ಯೋಗ ದೊರಕಿಸಲು ಮುಂದಾಗಬೇಕು. ಉದ್ಯಮಿಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಕೊಡಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾವಣ್ಯ ರಿ. ಬೈಂದೂರು 48ನೇ ವಾರ್ಷಿಕೋತ್ಸವ ಹಾಗೂ ಬೈಂದೂರು ಮಾಜಿ ಶಾಸಕ ದಿ. ಕೆ. ಲಕ್ಷ್ಮೀನಾರಾಯಣ ಸ್ಮರಣಾರ್ಥ “ರಂಗಪಂಚಮಿ-2025” ರಂಗತೋತ್ಸವ ಮಾರ್ಚ್‌ 1 ರಿಂದ 5ರ ವರೆಗೆ ಶ್ರೀ ಶಾರಾದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯಲಿದೆ. ಮಾರ್ಚ್‌ 1ರಂದು 48ನೇ ವಾರ್ಷಿಕೋತ್ಸವ ಹಾಗೂ ರಂಗೋತ್ಸವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಲಾವಣ್ಯ ಅಧ್ಯಕ್ಷರಾದ ನರಸಿಂಹ ಬಿ. ನಾಯಕ್‌ ಅವರು ವಹಿಸಲಿದ್ದಾರೆ. ಧಾರವಾಡ ಉದ್ಯಮಿ ಯು.ಬಿ.ಶೆಟ್ಟಿ ಅವರು ಉದ್ಘಾಟನೆ ನೆರವೆರಿಸಲಿದ್ದಾರೆ. ಕುಂದಾಪುರ ಪ್ರಥಮ ದರ್ಜೆ ಗುತ್ತಿಗೆದಾರರಾದ ಬಿಜೂರು ರಾಮಕೃಷ್ಣ ಶೇರುಗಾರ್‌ ಅವರು ಶುಭಸಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ರೋಟರಿ ಕ್ಲಬ್‌ ಅಧ್ಯಕ್ಷ ಮೋಹನ್‌ ರೇವಣ್ಕರ್‌ ಇನ್ನಿತರರು ಉಪಸ್ಥಿರಿರುವರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಅಭಿನಂದನೆ ಮಾಡಲಿದ್ದಾರೆ. ಈ ವೇಳೆ ಹಿರಿಯ ಕಲಾವಿದರಾದ ಗೋವಿಂದ ಎಂ. ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ  ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಜಪ್ತಿಯ ಶಶಿಧರ ಉಡುಪ ಹಾಗೂ ಕಾವೇರಿ ಉಡುಪ ಅವರ ಪುತ್ರನಾದ ಶ್ರೀಕಾಂತ್ ಉಡುಪ ಹಾಗೂ ಶಿರೂರಿನ ರಾಜು ಪೂಜಾರಿ ಹಾಗೂ ಸುಶೀಲ ಪೂಜಾರಿ ಅವರ ಪುತ್ರನಾದ ನಿಖಿಲ್ ಆರ್. ಪೂಜಾರಿ ಅವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.  

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ನವ್ಯ ಪೈ 8 (ಪ್ರಥಮ ಸ್ಥಾನ) ಹಾಗೂ ಪ್ರತೀಕ್ಷಾ 9 (10ನೇ ಸ್ಥಾನ) ವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಲಿಯುವ ಪ್ರಕ್ರಿಯೆಯಲ್ಲಿ ಭಯ, ನಾಚಿಕೆ ಹಾಗೂ ತಪ್ಪಿತಸ್ಥ ಭಾವನೆ ಇರಬಾರದು. ತಮಗೆ ಯಾವ ವಿಷಯದ ಬಗೆಗೆ ಜ್ಞಾನ ಬೇಕೋ ಅದರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಪ್ರಯತ್ನಿಸಿ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಪದವಿ ಶಿಕ್ಷಣದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜೇಸಿಐ ಸೆನೆಟರ್ ಸದಾನಂದ ನಾವುಡ ಹೇಳಿದರು. ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು ಕೋಟೇಶ್ವರ ಇಲ್ಲಿನ ಐಕ್ಯೂಎಸಿ ಘಟಕ ಮತ್ತು ಕನ್ನಡ ಸಂಘದ ಸಹಯೋಗದೊಂದಿಗೆ ನಡೆದ ಗುರಿ ಮತ್ತು ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಂಘದ ಅಧ್ಯಕ್ಷ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು ಉಪಸ್ಥಿತರಿದ್ದರು. ಜೇಸಿಐ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ನಿರೂಪಿಸಿದರೆ, ಜೇಸಿ ರಾಕೇಶ್ ಶೆಟ್ಟಿ ವಂದಿಸಿದರು. ನವ್ಯ ಮತ್ತು ತಂಡದವರು ಪ್ರಾರ್ಥಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪಂಚಗಂಗಾವಳಿ ನದಿಯ ಹೂಳೆತ್ತಿ ನದಿಯನ್ನು ರಕ್ಷಣೆ ಮಾಡುವಂತೆ ಪಂಚಗಂಗಾವಳಿ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಆಗ್ರಹಿಸಿದ್ದಾರೆ. ಐದು ನದಿಗಳು ಸೇರುವ ಕುಂದಾಪುರದ ಪಂಚ ಗಂಗಾವಳಿ ನದಿ ಬಹಳ ರಮಣೀಯ. ಸಾವಿರಾರು ಕುಟುಂಬಗಳ ಜೀವನಕ್ಕೆ ಆಶ್ರಯ ನೀಡುವ ತಾಣ. ವಿಹಾರಕ್ಕೂ ಬಹಳ ಅದ್ಭುತವಾದ ಪ್ರದೇಶ. ಆದರೆ ವರ್ಷದಿಂದ ವರ್ಷಕ್ಕೆ ನದಿಯಲ್ಲಿ ಹೂಳು ತುಂಬುತ್ತಾ ಹೋಗಿ ನದಿ ಸಂಪೂರ್ಣ ಕಳಾಹೀನವಾಗಿದೆ. ಹೂಳು ತುಂಬಿದ ಸ್ಥಳ ಗಳಲ್ಲೇ ಗಿಡಗಳು ಬೆಳೆದು ಕಾಡಿನಂತಾಗಿದೆ. ಹೊಸ ಹೊಸ ಕುದುರುಗಳು ಹುಟ್ಟಿವೆ. ಮೀನುಗಾರರಿಗೆ, ಚಿಪ್ಪು ಕಾರ್ಮಿಕರಿಗೆ ಜೀವನ ನಡೆಸಲು ಅನುಕೂಲ ಇಲ್ಲದೇ ನೂರಾರು ಕುಟುಂಬಗಳ ಮೇಲೆ ಪರಿಣಾಮ ಉಂಟಾಗಿದೆ. ಪ್ರವಾಸೋದ್ಯಮಕ್ಕೆ ಬಹಳ ಪ್ರಾಶಸ್ತ್ಯವಾಗಿದ್ದ ಈ ಸ್ಥಳ ಸಂಪೂರ್ಣ ನಿರ್ಲಕ್ಷಕ್ಕೆ ಒಳಪಟ್ಟಿದ್ದು, ಜನರು ಭರವಸೆಯನ್ನೇ ಕಳೆದುಕೊಂಡಂತೆ ಆಗಿದೆ. ನದಿ ಇಳಿತದ ಸಂದರ್ಭದಲ್ಲಂತೂ ಮರುಭೂಮಿಯಂತೆ ಕಾಣಿಸುತ್ತಿದೆ. ಕುಂದಾಪುರದ ಈ ಕೇಂದ್ರ ಸ್ಥಳದಲ್ಲಿ ಬಹಳಷ್ಟು ಯೋಜನೆಗಳ ಅನುಷ್ಠಾನ ಈ ಹಿಂದೆ ಬೇಡಿಕೆ ಇಡಲಾಗಿದ್ದರೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಹಳೆಅಳಿವೆ ಬಳಿ ಯುವಕ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಮೃತ ಯುವಕ ಬೀಜಾಡಿ ಪೆಟ್ಟಿ ಮನೆ ಕುಮಾರ್‌ ಅವರ ಪುತ್ರ ಮೇಘರಾಜ್ (24)ಎಂದು ಗುರುತಿಸಲಾಗಿದೆ. ಅವರು ಬೆಳಗ್ಗೆ ಹಳೆ ಅಳಿವೆ ಬಳಿ ಸಮುದ್ರದಲ್ಲಿ ಮರಣಬಲೆ ಬಿಡಲೆಂದು ಹೋದ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ನೀರುಪಾಲಾಗಿದ್ದಾರೆ. ಸಂಜೆ ವೇಳೆ ಬೀಜಾಡಿ ಸಮೀಪ ಕಡಲ ಎಡಭಾಗದಲ್ಲಿ ಮೃತದೇಹ ದಡ ಸೇರಿದೆ. ಸ್ಥಳಕ್ಕಾಗಮಿಸಿದ ಕರಾವಳಿ ಕಾವಲು ಪಡೆಯ ಸುದರ್ಶನ್ ಎಸ್. ಕುಂದರ್, ಕೃಷ್ಣ ಕಾಂಚನ್, ಸಂತೋಷ್ ಪೂಜಾರಿ, ಸುಧಾಕರ್ ಖಾರ್ವಿ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ವೇದಿಕೆ, ಡೆಕಾಥ್ಲಾನ್ ಮತ್ತು ಏರೋಡೈನಾಮಿಕ್ಸ್  ಸಹಯೋಗದಲ್ಲಿ ಸ್ವರಾಜ್ಯ  ಮೈದಾನದಲ್ಲಿ ಆಳ್ವಾಸ್ ಸಂಸ್ಥೆಯ ಮಹಿಳಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಇಂಡಿಯನ್ ಕೋಸ್ಟ್ ಗಾರ್ಡ್‌ನ ಸಹಾಯಕ ಕಮಾಂಡೆಂಟ್ ಪ್ರಿಯಾ ಮಾತನಾಡಿ, ಮಹಿಳೆಯರು ಈಗ ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಪುರುಷನಷ್ಟೇ ಸಮರ್ಥರಾಗಿ ಎಲ್ಲಾ ಕೆಲಸಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ರಾಷ್ಟ್ರದ ಗಡಿಗಳನ್ನು ಕಾಪಾಡುವುದು ಅತ್ಯಂತ ಕಠಿಣ ಕೆಲಸವಾದರೂ, ಮಹಿಳೆಯರು ಈ ಸವಾಲಿನ ಕೆಲಸಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಸಂಸ್ಥೆಗಳ ಮಹಿಳಾ ಉದ್ಯೋಗಿಗಳಿಂದ ಪಥಸಂಚಲನದೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಆಳ್ವಾಸ್ ಸೆಂಟ್ರಲ್ ಶಾಲೆಯ ಕ್ರೀಡಾ ಶಿಕ್ಷಕರಾದ ಆಶಾ, ಉ? ಕುಮಾರಿ ಮತ್ತು ಚಿತ್ರಾವತಿ, ಆಳ್ವಾಸ್ ಪ್ರಾಥಮಿಕ ಶಾಲೆಯ ಕವಿತಾ, ಆಳ್ವಾಸ್…

Read More