Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಹೆಚ್. ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿಯವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಶ್ರೀ ಬಿ.ಕೆ . ಹರಿಪ್ರಸಾದ್ ಆದೇಶಿಸಿದ್ದಾರೆ. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಜವಾಬ್ದಾರಿ ನೀಡಲಾಗಿದೆ . ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಅವರು ಈ ಹಿಂದೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ ಅಧ್ಯಕ್ಷರಾಗಿ, ಮಂಗಳೂರು ವಿ.ವಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾಗಿ, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾಗಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಮತ್ತು ಟಿಎಪಿಸಿಎಂಎಸ್ ಲಿ . ಅಧ್ಯಕ್ಷರಾಗಿದ್ದಾರೆ .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಹೋದರತ್ವ ಮತ್ತು ರಕ್ಷಣೆಯ ಸಂಕೇತವಾದ ರಕ್ಷಾ ಬಂಧನ ಹಬ್ಬದ ಅಂಗವಾಗಿ ಬಿಜೆಪಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಲಾಯಿತು. ಕಾರಂತ ಥೀಂ ಪಾರ್ಕ್‌ನಲ್ಲಿದ್ದ ಸಂಸದರನ್ನು ಭೇಟಿ ಮಾಡಿದ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸಂಸದರಿಗೆ ರಾಖಿ ಕಟ್ಟಿ, ಸಿಹಿ ತಿನ್ನಿಸಿ ಶುಭ ಕೋರಿದರು. ಸಹೋದರಿಯರ ರಕ್ಷಣೆ ಮತ್ತು ಸಮಾಜದಲ್ಲಿ ಮಹಿಳೆಯರ ಸುರಕ್ಷತೆಗಾಗಿ ತಮ್ಮ ಜನಸೇವೆ ನಿರಂತರವಾಗಿರಲಿ, ಆಯುಷ್ಯ, ಆರೋಗ್ಯ, ಶಕ್ತಿ ಭಗವಂತ ಕರುಣಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಹಿಳಾ ಮೋರ್ಚಾ ಪದಾಧಿಕಾರಿಗಳಿಗೆ ರಕ್ಷಾ ಬಂಧನದ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ಪ್ರಧಾನ ಕಾರ್ಯದರ್ಶಿಗಳಾದ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಸಾಲಿಯಾನ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲ ಶೆಟ್ಟಿ, ಮಂಡಲ ಉಪಾಧ್ಯಕ್ಷೆ ರೂಪಾ ಬಾಬು ಪೈ, ಮಂಡಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು. ಹೆಜಮಾಡಿ ಮಹೇಶ್ ಶಾಂತಿ ತಂಡ ಶ್ರೀಮಂದಿರದ ಗುರು ಪೀಠಕ್ಕೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಸಂಘದ ವತಿಯಿಂದ ಮಹಾಅನ್ನಸಂತರ್ಪಣೆ ಏರ್ಪಡಿಸಲಾಯಿತು. ಮಂದಿರದ ಅರ್ಚಕರಾದ ಸಂತೋಷ್ ಪೂಜಾರಿ, ಮನೋಹರ್ ಪೂಜಾರಿ ಧಾರ್ಮಿಕ ಕಾರ್ಯದಲ್ಲಿ ಕೈಜೋಡಿಸಿದರು. ಶ್ರೀ ಮಂದಿರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ, ಸಂಘದ ಅಧ್ಯಕ್ಷ ಜಿ. ಸದಾನಂದ ಪೂಜಾರಿ, ಪ್ರದಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವರೊಂದಿಗೆ ನಾರಾಯಣಗುರು ಸಭಾಭವನದ ಅಭಿವೃದ್ಧಿ ಕುರಿತಂತೆ ಸಮಾಲೋಚಿಸಿ ಗುರುಪೂಜೆಯಲ್ಲಿ ಭಾಗಿಯಾದರು. ಯುವ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ, ಮಹಿಳಾ ಘಟಕದ ವಸಂತಿ ಹಂದಟ್ಟು, ಹಿರಿಯರಾದ ಪುಟ್ಟಣ್ಣ ಪೂಜಾರಿ, ತಿಮ್ಮ ಪೂಜಾರಿ, ಸಿದ್ಧಿ ಶ್ರೀನಿವಾಸ್ ಪೂಜಾರಿ, ಕೃಷ್ಣ ಪೂಜಾರಿ.ಪಿ, ನರೇಂದ್ರ ಕುಮಾರ್ ಕೋಟ, ಸತೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,ಕುಂದಾಪುರ: ವಿಶ್ವ ಛಾಯಾಗ್ರಹಣ ಸಪ್ತಾಹದ ಅಂಗವಾಗಿ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (IMJISC) ಛಾಯಾಗ್ರಹಣ ಮತ್ತು ಡಿಜಿಟಲ್ ಕ್ಲಬ್ ವತಿಯಿಂದ ಡಿಜಿಟಲ್ ಮೀಡಿಯಾ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರವನ್ನು Eaeor Tech ಸಂಸ್ಥಾಪಕರಾದ ಅನೀಶ್ ಪುತ್ರನ್ ನಡೆಸಿಕೊಟ್ಟರು. ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಕಲಿಕೆಯನ್ನು ಒಳಗೊಂಡ ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಫೋಟೋಶಾಪ್, ಫೋಟೋ ಎಡಿಟಿಂಗ್ ಮತ್ತು ಡಿಜಿಟಲ್ ಕಂಟೆಂಟ್ ಕ್ರಿಯೇಷನ್‌ನ ಮೂಲ ಕೌಶಲ್ಯಗಳನ್ನು ಪರಿಚಯಿಸಲಾಯಿತು. ಇಂದಿನ ಸೃಜನಶೀಲ ಮತ್ತು ವೃತ್ತಿಪರ ಕ್ಷೇತ್ರಗಳಲ್ಲಿ ಡಿಜಿಟಲ್ ಮೀಡಿಯಾ ಕೌಶಲ್ಯಗಳ ಬೆಳೆಯುತ್ತಿರುವ ಮಹತ್ವವನ್ನು ಅವರು ಒತ್ತಿ ಹೇಳಿದರು. ಕಾರ್ಯಕ್ರಮವನ್ನು ಸಿಬ್ಬಂದಿ ಸಂಯೋಜಕರಾದ ಜಿತೇಶ್ ಕುಮಾರ್ ಎ.ಎಚ್. ಹಾಗೂ ವಿದ್ಯಾರ್ಥಿ ಸಂಯೋಜಕರಾದ ತೃತೀಯ ಬಿಸಿಎ ವಿದ್ಯಾರ್ಥಿ ರಾಹಿಲ್ ಮತ್ತು ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸಾನಿಯಾ ಆಯೋಜಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (ಐಎಂಜೆಐಎಸ್‍ಸಿ) ಮೂಡ್ಲಕಟ್ಟೆ ಸಂಸ್ಥೆಯಲ್ಲಿ ಅಂಗದಾನ ದಿನಾಚರಣೆಯನ್ನು ಆಚರಿಸಲಾಯಿತು. ಯೂತ್ ರೆಡ್ ಕ್ರಾಸ್ ಮತ್ತು ಸಮುದಾಯ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಡಿಜಿಟಲ್ ಪೋಸ್ಟರ್ ರಚನಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಒಟ್ಟು 30 ವಿದ್ಯಾರ್ಥಿಗಳು ಭಾಗವಹಿಸಿ, ಅಂಗದಾನದ ಮಹತ್ವ ಮತ್ತು ಜೀವ ಉಳಿಸುವಲ್ಲಿ ಅದರ ಪಾತ್ರವನ್ನು ಸಾರುವ ಸೃಜನಶೀಲ ಡಿಜಿಟಲ್ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ಕಲೆ ಮತ್ತು ಸೃಜನಶೀಲತೆಯ ಮೂಲಕ ಈ ಮಹತ್ಕಾರ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಪ್ರದರ್ಶನವು ವಿದ್ಯಾರ್ಥಿಗಳಿಗೆ ವೇದಿಕೆಯಾಯಿತು. ಕಾರ್ಯಕ್ರಮಕ್ಕೆ ಯೂತ್ ರೆಡ್ ಕ್ರಾಸ್ ಸಂಘದ ಉಪನ್ಯಾಸಕ ಸಂಯೋಜಕರಾದ ಭಾರತಿ ಮತ್ತು ರಕ್ಷಿತಾ ಹಾಗೂ ಸಮುದಾಯ ಸೇವಾ ಸಂಘದ ಉಪನ್ಯಾಸಕ ಸಂಯೋಜಕರಾದ ಚೈತನ್ಯ ಮತ್ತು ಶ್ವೇತಾ ಅವರು ಮಾರ್ಗದರ್ಶನ ನೀಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದವರಿAದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ, ವಿದೇಶಿ ವಿದ್ಯಾಭ್ಯಾಸ ಸಾಲ, ಸ್ವಾವಲಂಬಿ ಸಾರಥಿ, ವ್ಯಾಪಾರ ಉದ್ದಿಮೆಗಳಿಗೆ ನೇರಸಾಲ, ಸಾಂತ್ವನ ಯೋಜನೆ, ಸಿಖ್ಖ್ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಹಾಗೂ ಗಂಗಾ ಕಲ್ಯಾಣ  ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 55 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), “ಮೌಲಾನಾ ಆಝಾದ್ ಭವನ” ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಜಿಲ್ಲೆ, ಸಹಾಯವಾಣಿ ಸಂಖ್ಯೆ 8277799990 ಮತ್ತು ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0820-2574990 ಅಥವಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯಕುಮಾರ್ ಶೆಟ್ಟಿ, ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಸಂಸ್ಥೆಯ ಉಪಾಧ್ಯಕ್ಷರಾದ ಸುಜಾತ ಕಾಂತು ಬಾಬು ಕಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸ್ಥಾಪಕ ಸದಸ್ಯ ಗೋಪಾಲ ಚಂದನ್ ಮತ್ತು ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ ಸ್ವಾಗತಿಸಿದರು.  ಈ ಸಂದರ್ಭದಲ್ಲಿ ಖ್ಯಾತ ಪ್ರಾಚೀನ ವಸ್ತು ಸಂಗ್ರಹಕಾರ ಜಿ. ಭಾಸ್ಕರ್‌ಕಲೈಕಾರ್, ಗಣೇಶ್ ಮಡಿವಾಳ್ ಮೊದಲಾದವರು ಮತ್ತು ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ರೇವತಿ ಡಿ., ಸಹಾಯಕ ಪ್ರಾಧ್ಯಾಪಕಿ ಸರೋಜ ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ BLA-2 ಕಾರ್ಯಕರ್ತರಿಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭವು ಕೋಟೇಶ್ವರ ಶಾರದಾ ಕಲ್ಯಾಣ ಮಂಟಪದಲ್ಲಿ ಜರುಗಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, “ಪ್ರಜಾಪ್ರಭುತ್ವದ ಆಧಾರವೇ ಮತದಾರರ ಪಟ್ಟಿ. ಒಬ್ಬ ಅರ್ಹ ಮತದಾರನೂ ಹೊರಗುಳಿಯಬಾರದು. BLA-2 ಕಾರ್ಯಕರ್ತರು ಕೊನೆಯ ಹಂತ ಬಾಕಿ ಇರುವುದರಿಂದ ಮನೆ ಮನೆಗೆ ಭೇಟಿ ನೀಡಿ ಖಚಿತ ಮಾಹಿತಿ ಸಂಗ್ರಹಿಸಬೇಕು” ಎಂದರು. ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ BLA -2 ಹಾಗೂ ಘಟನಾಯಕ್ ರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಮಗ್ರ ಮತಪಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಹಾಗೂ ಬಾರಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿ-2026 ಗುರುವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾವಳಿಯನ್ನು ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಶಾಂತಾರಾಮ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, “ಶಿಕ್ಷಣದಷ್ಟೇ ಮಹತ್ವವನ್ನು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೀಡಬೇಕು. ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವವನ್ನು ಬೆಳೆಸಲು ಕ್ರೀಡೆ ಅತ್ಯಗತ್ಯ” ಎಂದರು. ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ “ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.…

Read More