ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಕೃಷಿಕರನ್ನು ಕಾಣಬಹುದು ಆದರೆ ಕೃಷಿ ಕೂಲಿ ಕಾರ್ಮಿಕರನ್ನು ಯಾರೊಬ್ಬರು ಗುರುತಿಸುವುದಿಲ್ಲ ಆದರೆ ಪಂಚವರ್ಣ ಸಂಘಟನೆ ರೈತರೆಡೆಗೆ ಮೂಲಕ ಅಂತವರನ್ನು ಹುಡುಕಿ ಗುರುತಿಸಿ ಗೌರವಿಸುವ ಕಾರ್ಯ ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 57ನೇ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿ, ಕೃಷಿ ಕಾಯಕ ನಡೆಸುವ ಕೂಲಿ ಕಾರ್ಮಿಕರ ಸ್ಥಿತಿಗತಿಯನ್ನುಅರಿಯುವರು ವಿರಳ ಪ್ರಸ್ತುತ ಕೂಲಿ ಕಾರ್ಮಿಕರು ಕೊರತೆ ಇದ್ದು ಈ ಬಗ್ಗೆ ರೈತ ಸಮುದಾಯ ವಿಶೇಷ ಕಾಳಜಿ ಅಗತ್ಯ ಎಂದರಲ್ಲದೆ ಪಂಚವರ್ಣ ಸಂಘಟನೆ ಸಾಮಾಜಿಕ ಬದ್ಧತೆ ಎಲ್ಲರಿಗೂ ಮಾದರಿ ಎಂದರು. ಈ ಸಂದರ್ಭದಲ್ಲಿ ಹಂದಟ್ಟು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಕೊಂಡು ಹೋಗಿದ್ದರು. ಈ ದೃಶ್ಯಾವಳಿಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ, ಪ್ರಮುಖ ಆರೋಪಿ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸ್ಕ್ರಿಮೊಹಮ್ಮದ್ ಸಿನಾನ್ (20) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ನೈರ್ಮಲ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸಹಾಯಕಿ ಪ್ರಾಧ್ಯಾಪಕಿಯಾಗಿರುವ ಸುಜಲಾ ನಂದಿನಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ವಿವರವಾಗಿ ತಿಳಿಸಿದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರು ತಮ್ಮಲ್ಲಿರುವ ಸಂದೇಹಗಳನ್ನು ಪ್ರಶ್ನೆ ಕೇಳುವ ಮೂಲಕ ಬಗೆಹರಿಸಿಕೊಂಡರು. ಸಹ ಶಿಕ್ಷಕಿ ರಮಣಿ ಅವರು ಪ್ರಾರ್ಥಿಸಿ, ಸಹಶಿಕ್ಷಕಿ ಪೂರ್ಣಿಮಾ ಶೇಟ್ ಅವರು ನಿರೂಪಿಸಿ, ಸಹಶಿಕ್ಷಕ ಸಾಗರ್ ಅವರು ವಂದನಾರ್ಪಣೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್‌ಬಹದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಶುಕ್ರವಾರದಂದು ಗೌರವ ಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಗಾಂಧೀಜಿ ಮತ್ತು ಲಾಲ್‌ಬಹದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಹಾಗೆಯೇ ಗಾಂಧೀಜಿ ಮತ್ತು ಶಾಸ್ತ್ರಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಪ್ರಾಂಶುಪಾಲರು, ಆಡಳಿತ ನಿರ್ದೇಶಕರು, ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನದಂದು ಕಾಲೇಜಿನ ಐಕ್ಯೂಎಸಿ, ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ, ಲಯನ್ಸ್ ಕ್ಲಬ್ ಕೋಟೇಶ್ವರ ಹಾಗೂ ಲಯನ್ಸ್ ಕ್ಲಬ್ ಕೋಟ ಗಿಳಿಯಾರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತೀಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಜಯಕರ್ ಶೆಟ್ಟಿ ಅವರು ರಕ್ತದಾನದ ಮಹತ್ವವನ್ನು ಹಾಗೂ ರಕ್ತದಾನ ಮಾಡಿದ ದಾನಿಗಳ ಆರೋಗ್ಯ ವೃದ್ಧಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಅವರು ಮಾತನಾಡಿ, ಆರೋಗ್ಯವಂತ ವ್ಯಕ್ತಿಗಳು ನಿಯಮಾನುಸಾರ ರಕ್ತದಾನ ಮಾಡುವುದರ ಮೂಲಕ ಸಮಾಜಕ್ಕೆ ಅಮೂಲ್ಯವಾದ ಸೇವೆ ಸಲ್ಲಿಸಬಹುದೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಡಾ. ಚೇತನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ,ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್ ನಿಷ್ಮಾ ಪೂಜಾರಿ ಅವರು ನವೆಂಬರ್‌ನಲ್ಲಿ ಭೂತಾನ್‌ನಲ್ಲಿ ನಡೆಯಲಿರುವ ಭಾರತ–ಭೂತಾನ್ ಯುವ ಸ್ನೇಹ ಶಿಬಿರಕ್ಕೆ (ಯುವ ವಿನಿಮಯ ಕಾರ್ಯಕ್ರಮ) ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಆಯ್ಕೆಯಾಗಿರುವ ನಾಲ್ವರು ಕೆಡೆಟ್‌ಗಳಲ್ಲಿ ನಿಷ್ಮಾ ಅವರೂ ಒಬ್ಬರಾಗಿದ್ದು, ಆಳ್ವಾಸ್ ಎನ್‌ಸಿಸಿ ಘಟಕದ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಾಧನೆಗಳ ಸಾಲಿಗೆ ಮತ್ತೊಂದು ಹೆಗ್ಗಳಿಕೆ ಸೇರ್ಪಡೆಯಾಗಿದೆ. ಭಾರತ ಮತ್ತು ಭೂತಾನ್ ದೇಶಗಳ ಯುವಜನರು ಹಾಗೂ ಎನ್‌ಸಿಸಿ ಕೆಡೆಟ್‌ಗಳ ನಡುವೆ ಸ್ನೇಹ, ಸಾಂಸ್ಕೃತಿಕ ವಿನಿಮಯ, ಪರಸ್ಪರ ತಿಳುವಳಿಕೆ ಮತ್ತು ಸಹಕಾರವನ್ನು ವೃದ್ಧಿಸುವ ಉದ್ದೇಶದಿಂದ ಯುವ ಸ್ನೇಹ ಶಿಬಿರವನ್ನು ಆಯೋಜಿಸಲಾಗುತ್ತದೆ. ವಿವಿಧ ದೇಶಗಳ ಕೆಡೆಟ್‌ಗಳು ಹಾಗೂ ಯುವ ಪ್ರತಿನಿಧಿಗಳೊಂದಿಗೆ ಸಂವಾದ, ಸಾಂಸ್ಕೃತಿಕ ವಿನಿಮಯ, ತಂಡ ಚಟುವಟಿಕೆಗಳು ಮತ್ತು ವಿವಿಧ ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶವನ್ನು ಈ ಶಿಬಿರ ಒದಗಿಸುತ್ತದೆ. ಈ ಮೂಲಕ ಯುವಜನರಲ್ಲಿ ನಾಯಕತ್ವ ಗುಣ, ತಂಡಸ್ಫೂರ್ತಿ, ಸಾಂಸ್ಕೃತಿಕ ಅರಿವು ಹಾಗೂ ಅಂತಾರಾಷ್ಟ್ರೀಯ ಸ್ನೇಹದ ಮನೋಭಾವ ಬೆಳೆಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸೇವಾ, ಸುಶಾಸನ ಮತ್ತು ಬಡವರ ಕಲ್ಯಾಣದ ಆಡಳಿತದ 25 ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ, ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಅಂಗನ್ ಉತ್ಸವ ನೆರವೇರಿತು. ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು, “ಮೋದಿಜಿ ಅವರ ನೇತೃತ್ವದಲ್ಲಿ ಅಂಗನವಾಡಿ ವ್ಯವಸ್ಥೆಗೆ ಹೊಸ ಆಯಾಮ ಸಿಕ್ಕಿದೆ. ಪೋಷಣ್ ಅಭಿಯಾನದ ಮೂಲಕ ಅಪೌಷ್ಟಿಕತೆ ಮುಕ್ತ ಭಾರತದ ಸಂಕಲ್ಪ ಸಾಕಾರವಾಗುತ್ತಿದೆ ಎಂದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು, “ಅಧಿಕಾರಕ್ಕಾಗಿ ಅಲ್ಲ, ಸೇವೆಗಾಗಿಯೇ 25 ವರ್ಷ. ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಮೋದಿಜಿ ತೋರಿದ ಅಭಿವೃದ್ಧಿ ಮಾದರಿ ಇಂದು ಜಗತ್ತಿಗೇ ಮಾದರಿಯಾಗಿದೆ” ಎಂದರು. ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ “ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಸಾರಸತ್ವ ಲೋಕದ ಬಹುಮುಖ ಪ್ರತಿಭೆ ಕಂಚಿನ ಕಂಠದ ಕನ್ನಡದ ಲೇಖಕ, ಶಿಕ್ಷಕ ವಿಠ್ಠಲ್ ಗಾಂವ್ಕರ್ ಇವರ ಅಸ್ಮಿತೆಯ ಸ್ಮರಣೆಯು 1998 -99 ಪುನರ್ ಮಿಲನ ಸ್ನೇಹ ಬಳಗ ಇವರಿಂದ ಗಾಯನ ನುಡಿನಮನ ಇತ್ತೀಚಿಗೆ ಪಡುಕರೆ ಶಾಲಾ ಕೆ.ಸಿ ಕುಂದರ್ ಸಭಾಂಗಣದಲ್ಲಿ ಜರುಗಿತು. ಈ ವೇಳೆ ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ ಸಿ. ಕುಂದರ್ ಪಡುಕರೆ ಗಾಂವ್ಕರ್ ಭಾವಚಿತ್ರಕ್ಕೆ ದಿಪ ಬೆಳಗಿಸಿ ಮಾತಾನಾಡಿ, ಪ್ರೌಢ ಶಾಲೆಯಲ್ಲಿ ಸುದೀರ್ಘ 29 ವಸಂತಗಳ ಸೇವೆ ಸಲ್ಲಿಸಿ ಕರಾವಳಿಯ ಭಾಗದ ಸಹಸ್ರ-ಸಹಸ್ರ ವಿದ್ಯಾರ್ಥಿಗಳಿಗೆ ಜ್ಞಾನ ಧಾರೆ ಎರೆದ ಗುರುವಾಗಿದ್ದರು ಎಂದು ಭಾವನಮನ ನುಡಿ ಸಮರ್ಮಿಸಿದರು. ನೇರ ಹಾಗೂ ನಿಷ್ಟುರದ ನಡೆ-ನುಡಿ ಹೊಂದಿರುವ ವಿಠ್ಠಲ್ ಗಾಂವಕಾರರು ವಿದ್ಯಾರ್ಥಿಗಳ ಕಲಿಕೆಗೆ ವಿಶೇಷವಾದ ಕಾಳಜಿ ವಹಿಸಿದವರು ಎಂದು ಮೊದಲ ಬ್ಯಾಚಿನ ವಿದ್ಯಾರ್ಥಿ ಶಿಕ್ಷಕ ನರೇಂದ್ರ ಕುಮಾರ್ ಕೋಟ ಮಾತಾನಾಡಿ ಮಣೂರು ಪಡುಕರೆ ಹೆಸರನ್ನು ಶಾಶ್ವತಗೊಳಿಸಿದವರು ಎಂದರು. ಕನ್ನಡ ಸಾಹಿತ್ಯ ಪರಂವರೆಗೆ ಸುಮಾರು ೩೮ ಕೃತಿಗಳನ್ನು ರಚಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪುರಸಭೆ ಸದಸ್ಯರಾಗಿ ಮೂರು ಅವಧಿಗೆ ಕಾರ್ಯನಿರ್ವಹಿಸಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆಜಿ ನಿತ್ಯಾನಂದ (ನಿತ್ಯಣ್ಣ) (62) ಅವರು ಅನಾರೋಗ್ಯದಿಂದ ಗುರುವಾರ ಆಸ್ಪತ್ರೆಯಲ್ಲಿ ನಿಧನರಾದರು. ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ಗುರುತಿಸಿಕೊಂಡಿದ್ದ ಅವರು, ಎನ್‌ಎಸ್‌ಐಯು, ಯುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹೋಟೇಲ್ ಹಾಗೂ ಬಸ್ ಉದ್ಯಮಿಯಾಗಿದ್ದ ಅವರು ಉತ್ತಮ ಕಬಡ್ಡಿ ಆಟಗಾರರಾಗಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಕಾರ್ಯನಿರ್ವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕದ ಯುವಜನರಿಗೆ ಉದ್ಯೋಗ ಮತ್ತು ವೃತ್ತಿ ಅವಕಾಶಗಳನ್ನು ಅವರದೇ ಪ್ರದೇಶದಲ್ಲಿ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ Jobs Express 2026 – ಜಾಬ್ ಮೇಳ, ತಾಲೂಕಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಐಎಂಜೆ ಇನ್ಸ್ಟಿಟ್ಯೂಷನ್ಸ್, ಕುಂದಾಪುರ ಹಾಗೂ 1M1B (A Million for a Billion) Foundation ವತಿಯಿಂದ, ಕರ್ನಾಟಕ ಸರ್ಕಾರ, ಮೈಕ್ರೋಸಾಫ್ಟ್ ಹಾಗೂ MeitY ಸಹಭಾಗಿತ್ವದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವು ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು, ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಕೈಗಾರಿಕೆಗಳ ಪ್ರಮುಖ ಕಂಪನಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವ ಮಹತ್ವದ ವೇದಿಕೆಯಾಯಿತು. ಉದ್ಯೋಗ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ:Jobs Express 2026ಕ್ಕೆ ಒಟ್ಟು 1,526 ಮಂದಿ ನೋಂದಣಿ ಮಾಡಿಕೊಂಡಿದ್ದು, 1000ಕ್ಕೂ ಮಂದಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಸಕ್ರಿಯವಾಗಿ ಭಾಗವಹಿಸಿದರು. ಭಾಗವಹಿಸಿದ ಅಭ್ಯರ್ಥಿಗಳು ವಿವಿಧ ಕಂಪನಿಗಳ ಉದ್ಯೋಗಾವಕಾಶಗಳಿಗೆ ಒಟ್ಟು 2,728 ಅರ್ಜಿಗಳನ್ನು ಸಲ್ಲಿಸಿದರು. ವಿವಿಧ ಹುದ್ದೆಗಳು ಮತ್ತು ಕಂಪನಿಗಳ ನೇಮಕಾತಿ ಪ್ರಕ್ರಿಯೆಯ ಆಧಾರದ…
