ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಣಹೋಮ ಮತ್ತು ವಿದ್ಯಾ ಸರಸ್ವತಿ ಹೋಮದೊಂದಿಗೆ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವು ಅತ್ಯಂತ ವಿಜ್ರಂಭಣೆಯಿಂದ ನೆರವೇರಿತು. ಪುಟಾಣಿ ಮಕ್ಕಳನ್ನು ಭವ್ಯ ಮೆರವಣಿಗೆಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರ ಅವರು ಮಾತನಾಡಿ, ಶಿಕ್ಷಣ ಕೇವಲ ನಾಲ್ಕು ಗೋಡೆಯ ನಡುವಿನ ಪಾಠ ಪ್ರವಚನಕ್ಕೆ ಸೀಮಿತವಾಗಿರದೆ ಮಕ್ಕಳನ್ನು ಕ್ರೀಡೆ ಸಾಂಸ್ಕೃತಿಕ ರಂಗದಲ್ಲಿಯೂ ಸಜ್ಜುಗೊಳಿಸುವ ಪಣತೊಟ್ಟಿದ್ದೇವೆ, ವಿದ್ಯಾರ್ಥಿಗಳಿಗೆ ಬೇಕಾದ ಇಂಗ್ಲೀಷ್ ಸಂವಹನ ಕೌಶಲ್ಯವನ್ನು ಉತ್ತಮಗೊಳಿಸಲು ಬೇಕಾದ ತರಬೇತಿಯನ್ನು ನಮ್ಮ ಶಾಲೆಯಲ್ಲಿ ನೀಡಲಾಗುತ್ತಿದೆ ಎಂದರು. ಅತಿಥಿಯಾದ ವಿಷ್ಣುಮೂರ್ತಿ ಐತಾಳ್ ಅವರು “ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ” ಎಂದು ಹೇಳುವ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸನ್ನಡತೆಯನ್ನು ಬೆಳೆಸಿಕೊಂಡು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದರು. ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಅವರು ಎಲ್ಲರನ್ನು ಸ್ವಾಗತಿಸುತ್ತಾ, ವಿದ್ಯಾರ್ಥಿಗಳು ಹಿಂದಿನ ವರ್ಷ ಸಾಧಿಸಲಾಗದ ವಿಷಯಗಳನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ದಾನಿಗಳು ಮಕ್ಕಳಿಗೆ ಪುಸ್ತಕ ಮೊದಲಾದ ಶೈಕ್ಷಣಿಕ ಪೂರಕ ವಸ್ತುಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ದಾನಿಗಳ ಉದ್ದೇಶ ಈಡೇರಬೇಕಾದರೆ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಂಡು ಉತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು. ಉಚಿತವಾಗಿ ನೀಡಿದ ಶೈಕ್ಷಣಿಕ ಸಾಮಾಗ್ರಿಗಳ ಬಗ್ಗೆ ತಾತ್ಸಾರ ಮನೋಭಾವ ಬೆಳೆಸಿಕೊಳ್ಳಬಾರದು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿ ಲೈಟ್‌ಹೌಸ್‌ನ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ವತಿಯಿಂದ ಗಂಗೊಳ್ಳಿಯ ಶ್ರೀ ರಾಮ ಮಂದಿರದಲ್ಲಿ ನಡೆದ 22ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಉದ್ಯಮಿ ಶರತ್ ಕುಮಾರ್ ರಾವ್ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ಇದೇ ಸಂದರ್ಭ ಎಸ್‌ಎಸ್‌ಎಲ್‌ಎಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದ ಸುಶ್ಮಿತಾ ಎಸ್. ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ರಿ. ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್‌ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ’ಸತಿ ಉಲೂಪಿʼಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು. ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ. ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ / ಸಿಎಸ್ ಮಾಹಿತಿ ಕಾರ್ಯಕ್ರಮವನ್ನು ಸೋಮವಾರದಂದು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ಎಂದರೇನು?, ಸಿಎ / ಸಿಎಸ್ ಪಠ್ಯ ಕ್ರಮ, ಶೈಕ್ಷಣಿಕ ಅರ್ಹತೆ, ವಿವಿಧ ಹಂತಗಳ ಬಗ್ಗೆ ಹಾಗೆಯೇ ಸಿಎ ಎನ್ನುವುದು ಕಠಿಣವಲ್ಲ, ಅದನ್ನು ಸವಾಲಾಗಿ ಸ್ವೀಕರಿಸಿದರೆ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು ಪ್ರೂಫ್ ಆಲ್ಬನ್ ಆಂಟನಿ ಪೆರೇರಾ ಸಂಪೂರ್ಣವಾಗಿ ಮಾಹಿತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ಉಪಸ್ಥಿತರಿದ್ದರು. ಸಂಖ್ಯಾ ಶಾಸ್ತ್ರ ಉಪನ್ಯಾಸಕಿ ವಿದ್ಯಾಶ್ರೀ ಅತಿಥಿಯನ್ನು ಪರಿಚಯಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ನಿಧಿ ನಿರೂಪಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನಾಗೇಶ್ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಶಿವ ರಂಜನಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ ನಗರೋತ್ಥಾನ 4ನೇ ಹಂತದ ಅನುದಾನದಡಿ ಶೇ. 24.10, ಶೇ.7.25 ಮತ್ತು ಶೇ.5 ಕ್ಕೆ ಮಂಜೂರಾದ ಮೊತ್ತದಲ್ಲಿ ಸರ್ಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ವ್ಯಕ್ತಿ ಸಂಬಂಧಿತ ಸೌಲಭ್ಯಗಳ ಅಡಿಯಲ್ಲಿ ಹೊಲಿಗೆ ಯಂತ್ರ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾತಿ ಮತ್ತು ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ, ಆಧಾರ್‌ಕಾರ್ಡ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮದ ಚಿತ್ರಪಾಡಿಯ ಕಾರ್ತಟ್ಟು ಶ್ರೀ ಅಘೋರೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಧಾರ್ಮಿಕ ಹಾಗೂ ಸಮಾಜ ಸೇವಕ, ಬೆಂಗಳೂರಿನ ಖ್ಯಾತ ಶೇಖರ್ ಆಸ್ಪತ್ರೆಯ ನಿರ್ದೇಶಕ ಡಾ. ಕಾರ್ತಟ್ಟು ಸುರೇಶ್ ಐತಾಳ್ ಆಯ್ಕೆಗೊಂಡರು. ಭಾನುವಾರ ಶ್ರೀ ದೇವಳದ ಸಭಾಂಗಣದಲ್ಲಿ ನಡೆದ ಪದಪ್ರಧಾನ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಕೆ. ಚಂದ್ರಶೇಖರ್ ಕಾರಂತರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಇದರ ಪೂರ್ವಭಾಗಿಯಾಗಿ ದೇವಳದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸೀಯಾಳಾಭಿಷೇಕ, ಗಣಹೋಮ, ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು. ನೂತನ ಅಧ್ಯಕ್ಷರು ತಮ್ಮ ಅಧಿಕಾರ ಅವಧಿಯಲ್ಲಿ ಅನೇಕ ಹೊಸ ಯೋಜನೆಗಳ ಬಗ್ಗೆ ಪ್ರಸ್ತಾವಿಸಿ ಸ್ಥಳೀಯರ ಸಹಕಾರ ಯಾಚಿಸಿದರು. ಸಭೆಯಲ್ಲಿ ದೇವಳದ ಖಜಾಂಚಿ ಪ್ರಭಾಕರ ಮಧ್ಯಸ್ಥ, ಗಾಯತ್ರಿ ಚಂದ್ರಶೇಖರ್ ಕಾರಂತ, ಸುಮಾ ಸುರೇಶ್ ಐತಾಳ್, ಸದಸ್ಯರಾದ ನಿತ್ಯಾನಂದ ನಾಯರಿ, ಪ್ರಕಾಶ್ ಮಧ್ಯಸ್ಥ, ಸುಬ್ರಾಯ ಗಾಣಿಗ, ವಸಂತಿ ನಾಯರಿ, ನಾಗರಾಜ್ ಐತಾಳ್, ವೆಂಕಟೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಸಮರ್ಪಕ ಸಂಚಾರಕ್ಕಾಗಿ ಇಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ನಿರ್ಮಾಣದ ಬೇಡಿಕೆಯಿದ್ದು, ಇಲ್ಲಿನ ನಿರ್ಮಾಣ ಹಂತದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಡಿಪೋ ಮಂಜೂರಾತಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಸಾರಿಗೆ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೈಂದೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದೆ, ಆದರೆ ನಿಲ್ದಾಣದಲ್ಲಿ ನೀರಿನ ಸಮಸ್ಯೆಯಿಂದಾಗಿ ಉದ್ಘಾಟನಾ ಕಾರ್ಯ ವಿಳಂಬಗೊಳ್ಳುತ್ತಿದೆ, ಈ ಬಗ್ಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಭೆಯಲ್ಲಿಯೂ ಸಂಬಂದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ, ಇಲ್ಲಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡಲು ರಾಷ್ರೀಯ ಹೆದ್ದಾರಿ ಪ್ರಾದಿಕಾರದ ಅನುಮತಿ ಅಗತ್ಯವಿದೆ, ಈ ಬಗ್ಗೆ ಶೀಘ್ರ ಪ್ರಾದಿಕಾರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೈನಿಕರು ನಮ್ಮ ಜೀವನದ ಉಸಿರಿನಂತೆ. ನಮ್ಮ ಸುಂದರ ಬದುಕಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ವೀರ ಯೋಧರನ್ನು ನಮ್ಮ ನಿತ್ಯ ಜೀವನದಲ್ಲಿ ಸದಾ ಸ್ಮರಿಸುತ್ತಿರಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಸೈನಿಕ ನಮನ ಮತ್ತು ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಖಾರ್ವಿ, ಎಸ್ ಡಿಎಂಸಿ ಅಧ್ಯಕ್ಷೆ ಸವಿತಾ, ಅರ್ಚನಾ ಮಹಿಳಾ ಮಂಡಲದ ಅಧ್ಯಕ್ಷೆ ಜ್ಯೋತಿ ಆನಂದ, ಶ್ರೀ ಬಸವೇಶ್ವರ ದೇವಸ್ಥಾನದ ಅರ್ಚಕ ಜಗದೀಶ್, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಮುಖ್ಯಸ್ಥ ಈಶ್ವರ ಗಂಗೊಳ್ಳಿ, ಅಂಗನವಾಡಿ ಕಾರ್ಯಕರ್ತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬವಳಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತಿ ಹೊಂದಿದ ಶಿಕ್ಷಕಿ ಕಮಲ ಅವರಿಗೆ ಇತ್ತೀಚಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಸ್‌ಡಿಎಂಸಿಯ ಅಧ್ಯಕ್ಷರಾದ ರಾಘವೇಂದ್ರ ಗಾಣಿಗ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಕುಲ ಶೆಟ್ಟಿ ಜಿ., ಗೌರವಾಧ್ಯಕ್ಷರಾದ ರಘುರಾಮ ಶೆಟ್ಟಿ ಗೋಳಿಕಟ್ಟೆ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಎನ್.ಕೆ. ಬಿಲ್ಲವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕಿಯವರನ್ನು ಹಳೆ ವಿದ್ಯಾರ್ಥಿ ಸಂಘ, ಎಸ್‌ಡಿಎಂಸಿ ಹಾಗೂ ಅಧ್ಯಾಪಕರಿಂದ ಗೌರವಿಸಲಾಯಿತು. ಸಾಕಷ್ಟು ಸಂಖ್ಯೆಯಲ್ಲಿ ಪಾಲಕ ಪೋಷಕರು ಮತ್ತು ಮುದ್ದು ಮಕ್ಕಳು ಹಾಜರಿದ್ದರು. ಎಲ್ಲರೂ ಶಿಕ್ಷಕಿಯ ಗುಣಗಾನ ಮಾಡಿದರು. ಶಿಕ್ಷಕರಾದ ರಾಘವೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿ, ಸುನಿಲ್ ಕುಮಾರ್ ವಂದನಾರ್ಪಣೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಜೂ. 2 ರಂದು ಶಾಲಾ ಪ್ರಾರಂಭೋತ್ಸವವನ್ನು ಆಹ್ಲಾದಕರವಾಗಿ ಆಚರಿಸಲಾಯಿತು. ತರಗತಿಗಳನ್ನು ತೋರಣ, ದೀಪ, ವಿವಿಧ ಭಿತ್ತಿಚಿತ್ರಗಳಿಂದ ಅಲಂಕರಿಸಿ, ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಪುಷ್ಪಾರ್ಚನೆ ನಡೆಸಿ, ತಿಲಕವನ್ನಿಟ್ಟು ತರಗತಿ ಶಿಕ್ಷಕರು ಸ್ವಾಗತಿಸಿದರು. ಮೊದಲ ದಿನವೇ ಮಕ್ಕಳನ್ನು ಶಾಲೆಯತ್ತ ಆಕರ್ಷಿಸುವ ಸಲುವಾಗಿ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಮಕ್ಕಳನ್ನು ಸ್ವಾಗತಿಸುತ್ತಾ, ಮಕ್ಕಳೇ! ದೀರ್ಘಕಾಲದ ರಜೆಯನ್ನು ಆನಂದಿಸಿ, ಈಗ ನಿಮ್ಮ ಶೈಕ್ಷಣಿಕ ಜೀವನದ ಮುಂದಿನ ಹಂತಕ್ಕೆ ಕಾಲಿಡಲು ಬಂದಿದ್ದೀರಿ. ನಿಮ್ಮ ಪ್ರತಿಭೆಯನ್ನು ಸಮಾಜಮುಖಿಯನ್ನಾಗಿಸಿಕೊಳ್ಳಲು, ನಿಮ್ಮೊಳಗಿನ ಜ್ಞಾನವನ್ನು ಅರಿಯಲು, ಅಂತಃಸತ್ತ್ವವನ್ನು ಬೆಳೆಸಿಕೊಳ್ಳಲು ನೀವಿಲ್ಲಿಗೆ ಆಗಮಿಸಿದ್ದೀರಿ. ಆಂಜನೇಯನಂತೆ ಭಕ್ತಿ, ಶಕ್ತಿ, ಯುಕ್ತಿಗಳನ್ನು ನಾವು ಬಳಸಬೇಕು. ಪಾಲಕರಲ್ಲಿ, ಶಿಕ್ಷಕರಲ್ಲಿ, ದೇಶದಲ್ಲಿ ಭಕ್ತಿಯನ್ನೂ, ಸಹಪಾಠಿಗಳಿಗೆ ಸಹಾಯ ಮಾಡಲು ಶಕ್ತಿಯನ್ನೂ, ಯಶಸ್ಸಿಗಾಗಿ ಯುಕ್ತಿಯನ್ನೂ ಸದಾ ಬಳಸಬೇಕು. ಜ್ಞಾನದ ಸದುಪಯೋಗದಿಂದ ಕೀರ್ತಿಯನ್ನು ಸಂಪಾದಿಸಬೇಕೇ ವಿನಃ…
