ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹರಿ ಓಂ ಗಂಗೊಳ್ಳಿ ಇವರ ಆಶ್ರಯದಲ್ಲಿ ಬೆಂಗಳೂರಿನ ಪೈ ಗ್ರೂಪ್ ಆಫ್ ಹೋಟೆಲ್ಸ್ನ ಮಾಲಕ ಎಂ. ಜಿ. ಜಗನ್ನಾಥ ಪೈ ಹಾಗೂ ಜಿ. ವಿವೇಕಾನಂದ ನಾಯಕ್ ಸಹಕಾರದೊಂದಿಗೆ ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗಂಗೊಳ್ಳಿಯ ಜಿಎಸ್ಬಿ ಸಮಾಜ ಬಾಂಧವರಿಗಾಗಿ ಭಾನುವಾರ ಜರಗಿದ ಸತತ 6ಷನೇ ವರ್ಷದ 30 ಗಜಗಳ ಕ್ರಿಕೆಟ್ ಪಂದ್ಯಾಟ ’ಹರಿ ಓಂ ಟ್ರೋಫಿ-2025’ದಲ್ಲಿ ಗಂಗೊಳ್ಳಿಯ ವಿ.ಕೆ.ಪೋವಾಸ್ ತಂಡ ಜಯಶಾಲಿಯಾಗಿ ಸತತ 5ನೇ ವರ್ಷ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದ ಫೈನಲ್ ಹಣಾಹಣಿಯಲ್ಲಿ ವಿ.ಕೆ.ಪೋವಾಸ್ ತಂಡವು ಗಂಗೊಳ್ಳಿಯ ಸಾನಿಧ್ಯ ಅಕೌಟೆಂಟ್ ತಂಡವನ್ನು ಸೋಲಿಸಿತ್ತು. ಗಂಗೊಳ್ಳಿಯ ಶ್ರೀ ಪಾರ್ಥಸಾರಥಿ ಇಲೆವೆನ್ ತಂಡ ತೃತೀಯ ಸ್ಥಾನಿಯಾಯಿತು. ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ವಿ.ಕೆ.ಪೋವಾಸ್ ತಂಡದ ಎಂ.ನಾಗೇಶ ಪೈ ಪಡೆದುಕೊಂಡರೆ, ಉತ್ತಮ ದಾಂಡಿಗ ಪ್ರಶಸ್ತಿಯನ್ನು ಸಾನಿಧ್ಯ ಅಕೌಟೆಂಟ್ ತಂಡದ ಎನ್.ಅನಂತ ನಾಯಕ್ ಮತ್ತು ಎಂ.ಅನಂತ ಪೈ ಪಡೆದುಕೊಂಡರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಸಂರಕ್ಷಣೆ ಮಾಡುವುದು ಪೋಷಕರು ಅಧಿಕಾರಿಗಳು ಸೇರಿದಂತೆ ನಾಗರೀಕ ಸಮಾಜದ ಜವಾಬ್ದಾರಿಯಾಗಿದೆ. ಇದನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ಹೇಳಿದರು. ಅವರು ನಗರದ ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಹಯೋಗದಲ್ಲಿ ಮಕ್ಕಳ ರಕ್ಷಣೆ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿ (ಪಿಎಸ್ಐ) ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಾಮಾಣಿಕತೆ ಎನ್ನುವುದು ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ. ನಾವು ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ಕುಟುಂಬದಲ್ಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24ನೇ ಸಾಲಿನಲ್ಲಿ ಮತ್ಸ್ಯಾಶ್ರಯ ವಸತಿ ಯೋಜನೆಯಡಿಯಲ್ಲಿ ಯಾವುದೇ ಮನೆಗಳು ಮಂಜೂರಾಗಿರುವುದಿಲ್ಲ. 2024- 25ನೇ ಸಾಲಿನ ಆಯವ್ಯಯ ಭಾಷಣದಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಲು ಸಹಾಯ ನೀಡಲಾಗುವುದೆಂದು ಘೋಷಿಸಲಾಗಿದೆ. 2025 ರ ಫೆಬ್ರವರಿವರೆಗೆ ಯಾವುದೇ ಮನೆಗಳನ್ನು ಹಂಚಿಕೆ ಮಾಡಿರುವುದಿಲ್ಲ ಎಂದು ಉತ್ತರಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೋಳಿ ಹಬ್ಬದ / ರಂಜಾನ್ ಹಬ್ಬದ ಪ್ರಯುಕ್ತ ಜನರಲ್ಲಿ ಸುರಕ್ಷತೆ ಭಾವನೆ ಮೂಡಿಸುವ ಸಲುವಾಗಿ ಕುಂದಾಪುರ ನಗರ ಹಾಗೂ ಗಂಗೊಳ್ಳಿ ಪೇಟೆ ಪರಿಸರದಲ್ಲಿ ಕುಂದಾಪುರ ಠಾಣೆ ಹಾಗೂ ಗಂಗೊಳ್ಳಿ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆರ್.ಎ.ಎಫ್ ಅಧಿಕಾರಿ, ಸಿಬ್ಬಂದಿಗಳು ಪ್ರತ್ಯೇಕವಾಗಿ ರೂಟ್ ಮಾರ್ಚ್ ನಡೆಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರದಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪಿ ಜಯರಾಮ ಎಂಬಾತನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಸೋಮವಾರ ರಾತ್ರಿ ಸೆರೆ ಹಿಡಿದಿದ್ದಾರೆ. ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಶಂಕರನಾರಾಯಣ ಪಿಎಸ್ಐ ನಾಸೀರ್ ಹುಸೇನ್ ಮತ್ತು ಪೊಲೀಸರ ತಂಡ ದಾಳಿ ನಡೆಸಿದೆ. ರಾತ್ರಿ 8 ಗಂಟೆಗೆ ಪೊಲೀಸರ ತಂಡ ಸ್ಥಳಕ್ಕೆ ಬಂದ ವೇಳೆ ಸಿದ್ದಾಪುರ- ಅಂಪಾರು ಮುಖ್ಯ ರಸ್ತೆಯಿಂದ ಹೊಂಡಾ ಶೋರೂಂ ಬದಿಯಲ್ಲಿ ಹೋಗುವ ಕಾಲು ದಾರಿಯಲ್ಲಿ ಸುಬ್ಬರಾವ್ ಕಾಂಪ್ಲೆಕ್ಸ್ನ ಸರ್ವಿಸ್ ಸ್ಟೇಷನ್ ಪಕ್ಕದ ಖಾಲಿ ಜಾಗದಲ್ಲಿ ಇಂಧನ ಸಾಗಿಸುವ ಟ್ಯಾಂಕರ್ ಹಾಗೂ ಅದರ ಬಳಿ ಆರೋಪಿ ಜಯರಾಮ ಎಂಬಾತ ನಿಂತಿದ್ದ. ಆತ ಟ್ಯಾಂಕರ್ನ ಕೆಳಗಿರುವ ಇಂಧನ ಟ್ಯಾಂಕ್ನಿಂದ ಪೈಪ್ ಹಾಗೂ ಜಾಕ್ ಬಳಸಿ ಕ್ಯಾನ್ಗಳಿಗೆ ಇಂಧನವನ್ನು ತುಂಬಿಸುತ್ತಿರುವುದು ಕಂಡುಬಂದಿದ್ದು, ದಾಳಿ ನಡೆಸಿದ ಪೊಲೀಸರು ಆತನನ್ನು ಸೆರೆಹಿಡಿದರು. ಟ್ಯಾಂಕರ್ ಬಳಿ ಇದ್ದ ಚಾಲಕನಲ್ಲಿ ವಿಚಾರಿಸಿದಾಗ ತಾನು ಪ್ರತಿ ಡಿಸೇಲ್ ಟ್ಯಾಂಕ್ನಿಂದ 20 ಲೀಟರ್ ಡಿಸೇಲನ್ನು ಕಳವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬೀಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಶ್ರೀ ಬಂಡಿಕಡು ಬೊಬ್ಬರ್ಯ ದೇವಸ್ಥಾನ ಸೇವಾ ಸಮಿತಿ ರಿ. ಹಾಗೂ ಮಹಿಳಾ ಸೇವಾ ಸಂಘ ಕಮ್ತೀಯಾರ್ ಬೆಟ್ಟು ಹೋದ್ರಾಳಿ ಬೀಜಾಡಿ ವತಿಯಿಂದ ನಡೆದ ದೇವಸ್ಥಾನದ 14ನೇ ವರ್ಷದ ವರ್ಧಂತ್ಯೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಬಂಡಿಕಡು ಬೊಬ್ಬರ್ಯ ಸೇವಾ ಸಮಿತಿ ತುಂಬಾ ವರುಷದಿಂದ ಬೇಡಿಕೆಯಾದ ದೇವಾಸ್ಥಾನಕ್ಕೆ ಸಮರ್ಪಕ ರಸ್ತೆ ಇಲ್ಲದ ಕಾರಣ ಶಾಸಕರ ಗಮನಕ್ಕೆ ತಂದು ದೇವಸ್ಥಾನಕ್ಕೆ ಸಮರ್ಪಕವಾಗಿ ರಸ್ತೆಯನ್ನು ಕಲ್ಪಿಸುವಂತೆ ವಿನಂತಿಸಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಶಾಸಕರು ಮಾತನಾಡಿ, ಖಾಸಗಿ ಜಾಗವಾಗಿರುವುದರಿಂದ ಇದನ್ನು ಸಂಬಂಧಪಟ್ಟ ವಾರಿಸುದಾರರ ಜೊತೆಗೆ ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳಬೇಕಾಗಿದ್ದು, ಸರಕಾರದ ಮೂಲಕ ಅನುದಾನವನ್ನು ತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ಮಾತುಗಳನ್ನಾಡಿದರು. ಶ್ರೀ ಬಂಡಿಕಡು ಬೊಬ್ಬರ್ಯ ದೇವಸ್ಥಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯಾವುದೇ ಉದ್ಯಮದಲ್ಲಿ ಯಶಸ್ಸು ಗಳಿಸುವುದಕ್ಕಿಂತಲೂ ಪ್ರಗತಿ ಹೊಂದುವುದು ಮುಖ್ಯ, ಸೋಲು ಕಂಡ ವ್ಯಕ್ತಿ ಗೆಲ್ಲುವ ಗುಟ್ಟನ್ನು ಚೆನ್ನಾಗಿ ಕಲಿಸಬಲ್ಲನು ಎಂದು ದೈಜಿವರ್ಲ್ಡ್ ವಾಹಿನಿಯ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ವಾಲ್ಟರ್ ನಂದಳಿಕೆ ಹೇಳಿದರು. ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ’ಟ್ರೈಬ್ಲೇಜ್ ವಿದ್ಯಾರ್ಥಿ ವೇದಿಕೆವತಿಯಿಂದ ಹಮ್ಮಿಕೊಂಡ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ದೈಜಿವರ್ಲ್ಡ್ ಸಂಸ್ಥೆ ಮುಖಾಂತರ ಕಂಡುಕೊಂಡ ಉದ್ಯಮಶೀಲತೆಯ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಉದ್ಯಮಿಗಳಾಗಲು ಆಶಯ ಹೊಂದಿರುವ ವಿದ್ಯಾರ್ಥಿಗಳು ಶಿಕ್ಷಣದ ಪ್ರಮಾಣ ಪತ್ರಗಳ ಜತೆಗೆ ಆತ್ಮವಿಶ್ವಾಸದೊಂದಿಗೆ ಸಂವಹನ ನಡೆಸುವದನ್ನೂ ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮಕ್ಕೆ ಯಾವುದೇ ಪರ್ಯಾಯ ವಿಧಾನ ಇಲ್ಲ, ಹೊಸ ವಿಷಯಗಳನ್ನು ತಿಳಿದುಕೊಂಡು ಆಯಾ ಕಾಲದ ಪ್ರವೃತ್ತಿಗಳಿಗೆ ಅನುಗುಣವಾಗಿ ನವೀಕರಿಸಿಕ್ಕೊಳ್ಳುವುದು ಯಶಸ್ವಿ ಉದ್ಯಮಕ್ಕೆ ಬಹಳ ಅಗತ್ಯ. ಅವಮಾನಗಳಿಗೆ ಹಿಂಜರಿಯದೆ ಉತ್ಸಾಹವಿರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಹಾಗೂ ಉತ್ತಮ ಜೀವನ ಶೈಲಿಗೆ ಬದಲಾವಣೆಯಾಗಲು ಆರಂಭಿಕ ಹಂತದಲ್ಲಿ ಸ್ವಲ್ಪ ಕ?ವೆನಿಸಿದರೂ ಅಪ್ಡೇಟ್, ಅಪ್ಗ್ರೇಡ್ ಹಾಗೂ ಅಪ್ಲಿಫ್ಟ್ ಎನ್ನುವ ರೂಡಿಯನ್ನು ಪ್ರತಿಯೊಬ್ಬರೂ ಕಂಡುಕೊಳ್ಳಿ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ‘ಪೂರ್ಣದ್ವೈತ – 2025′ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮ್ಯಾನೇಜ್ಮೆಂಟ್, ಐಟಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗುಂಪು ನೃತ್ಯ, ಸಮೂಹ ಗೀತೆ, ಬಿಸಿನೆಸ್ ಪ್ಲಾನ್, ಫ್ಯಾಶನ್ ಶೋ, ಐಟಿ ರಸಪ್ರಶ್ನೆಗಳಲ್ಲಿ ಪ್ರಥಮ ಸ್ಥಾನ ಹಾಗೂ ಬೆಸ್ಟ್ ಮ್ಯಾನೇಜರ್ ದ್ವಿತೀಯ ಸ್ಥಾನದೊಂದಿಗೆ ಸಮಗ್ರ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಈ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿ ಅವರು, ಕಾಲೇಜಿನ ಪ್ರಾಂಶುಪಾಲರದ ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಸಾಂಸ್ಕೃತಿಕ ತಂಡದ ಸಂಯೋಜಕಿಯಾದ ದೀಪಿಕಾ ಜಿ., ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ, ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಜತ್ ಬಂಗೇರ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೇಸಿಗೆ ಕಾಲದಲ್ಲಿ ಜಾತ್ರೆ, ರಥೋತ್ಸವ, ಊರು ಹಬ್ಬ ಸೇರಿದಂತೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳು ಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಸ್ಪೋಟಗೊಳ್ಳುವುದು ಅಥವಾ ಹರಡುವ ಸಾಧ್ಯತೆಗಳು ಇರುತ್ತವೆ. ಇವುಗಳ ಬಗ್ಗೆ ಮುಂಜಾಗ್ರತಾ ವಹಿಸುವ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಹಾಗೂ ಸ್ವಚ್ಛತೆಗೆ ಆದ್ಯತೆಯನ್ನು ನೀಡಬೇಕು ಎಂದರು. ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಅಡಿ ಅನುಮತಿ ಪಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಅಂಚೆ ಕೋಟೇಶ್ವರ ಇಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತ ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಮತ್ತು ಬದುಕು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಪೋಷಕರು ಅತ್ಯಂತ ಗರಿಷ್ಠ ಮಟ್ಟದ ಜಾಗೃತೆಯನ್ನು ವಹಿಸಿ ಕಾಲ ಮಿಂಚುವ ಮೊದಲು ಎಚ್ಚೆತ್ತುಕೊಳ್ಳಬೇಕೆಂದು ಪೋಷಕರಿಗೆ ಹಿತವಚನಗಳನ್ನಾಡಿದರು. ವಿದ್ಯಾರ್ಥಿಗಳ ವಯಸ್ಸೇ ಅವರನ್ನು ಅನುಪಯುಕ್ತ ಆಲೋಚನೆಗಳೆಡೆಗೆ ಆಕರ್ಷಿಸುವ ಈ ಕಾಲಘಟ್ಟದಲ್ಲಿ ಅವರ ಸರ್ವತೋಮುಖ ಅಭಿವೃದ್ಧಿಯಲ್ಲಿ ಪೋಷಕರಾಗಿ ಗಮನಿಸದೇ ಇದ್ದ ಪಕ್ಷದಲ್ಲಿ ಅವನತಿಗೆ ಅದು ಮುನ್ನುಡಿ ಇಟ್ಟಂತಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಪೋಷಕ ಪ್ರತಿನಿಧಿಗಳಾಗಿ ರಾಜೇಶ್ ಮಾರ್ಕೋಡು, ರಾಮ ಶೆಟ್ಟಿಗಾರ, ಕೃಪಾ ಹೆಬ್ಬಾರ್, ಎಸ್.ವಿ. ನಾಗರಾಜ, ಶೃಂಗಾರಿ ಎಸ್., ಶೆಟ್ಟಿ, ಮಂಜುನಾಥ…
