Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಆರ್ಮಿ ಶಿರೂರು ಗ್ರಾಮದ ನಿವಾಸಿ ಮೂಸಾ ಅವರ ಪುತ್ರ ಮೊಹಮ್ಮದ್ ಅದ್ವಾನ್ (34) ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಕೆಲಸ ಮಾಡಿಕೊಂಡಿದ್ದು, ಡಿ. 31ರಂದು ಸಂಜೆ 6 ಗಂಟೆಗೆ ಶಿರೂರಿನ ಮನೆಯಿಂದ ಬಟ್ಟೆ ವ್ಯಾಪಾರದ ಕೆಲಸಕ್ಕೆ ಹೋಗುವುದಾಗಿ ಹೋದವರು ಕಾಣೆಯಾಗಿದ್ದಾರೆ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರ ಬಗ್ಗೆ ಮಾಹಿತಿ ಸಿಕ್ಕವರು ಬೈಂದೂರು ಪೊಲೀಸ್ ಠಾಣೆ (08254-251033) ಸಂಪರ್ಕಿಸಲು ಪೋಲೀಸರು ಕೋರಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಟಾಟಾ ಕನ್ಸಲ್ಟೆನ್ಸೀಸ್ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಮಾಜಿ ಸಿ.ಇ.ಒ. ಹಾಗೂ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ನಿರ್ದೇಶಕರಾದ ರಾಜೇಶ್ ಗೋಪಿನಾಥನ್ ಅವರು ತಮ್ಮ ಕುಟುಂಬದೊಂದಿಗೆ ಇತ್ತೀಚಿಗೆ ಭೇಟಿ ನೀಡಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಆಶೀರ್ವದಿಸಿದರು. ದೇವಸ್ಥಾನದ ಮ್ಯಾನೇಜರ್ ನಟೇಶ್ ಕಾರಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಗಿಡಮೂಲಿಕೆಗಳನ್ನು ಬರಿ ಔಷಧ ಮಾತ್ರವಲ್ಲದೆ ಪೌಷ್ಟಿಕಾಂಶಯುಕ್ತ ಆಹಾರದ ರೀತಿಯು ಸೇವನೆ ಮಾಡುತ್ತಾರೆ, ನೈಸರ್ಗಿಕವಾಗಿ ಸಿಗುವ ಪೂರಕ ಔಷಧ ಇದಾಗಿದೆ. ಆದರೆ ಅದನ್ನು ಹೇಗೆ ಸೇವಿಸಬೇಕು ಎನ್ನುವ ಅರಿವು ನಮ್ಮಲ್ಲಿರಬೇಕು ಎಂದು ಅಮೆರಿಕಾದ ಓಹಿಒ ಸೆಂಟ್ರಲ್ ಸ್ಟೇಟ್ ವಿಶ್ವವಿದ್ಯಾಲಯದ ಜೀವಶಾಸ್ತ್ರ ಪ್ರಾಧ್ಯಾಪಕ ಡಾ. ಶರತ್ ಕೃಷ್ಣನ್ ಮಾತನಾಡಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ದ್ರವ್ಯಗುಣ ವಿಜ್ಞಾನ ವಿಭಾಗ ಮತ್ತು ಬೆಂಗಳೂರಿನ ಹಿಮಾಲಯ ವೆಲ್‌ನೆಸ್ ಕಂಪನಿ ಆಶ್ರಯದೊಂದಿಗೆ ಧನ್ವಂತರಿ ಹಾಲ್‌ನಲ್ಲಿ ಶುಕ್ರವಾರ ನಡೆದ ’ಆಳ್ವಾಸ್ ಸಂಜೀವಿನಿ 2025- ಸಸ್ಯ ವರ್ಗೀಕರಣ ಮತ್ತು ಔಷಧಜ್ಞಾನ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು. ಔಷಧೀಯ ಗಿಡಮೂಲಿಕೆಗಳನ್ನು ಅವಶ್ಯಕತೆಗಿಂತ ಹೆಚ್ಚು ಸೇವನೆ ಮಾಡಿದರೆ ವಿಷಕಾರಿ ಪರಿಣಾಮವನ್ನು ಬೀರುತ್ತದೆ. ಈ ರೀತಿಯ ಜ್ಞಾನ ಸಾಮಾನ್ಯ ಜನರಲ್ಲಿ ಮೂಡಿಸಬೇಕು. ಹಾಗಾಗಿ ಪ್ರತಿ ಗಿಡಮೂಲಿಕೆಯ ಬಗ್ಗೆ ನಮಗೆ ಅರಿವು ಇರಬೇಕು ಎಂದರು. ಔಷಧೀಯ ಗುಣವಿರುವ ಗಿಡಗಳನ್ನು ಗುರುತಿಸುವುದು ತುಂಬಾ ಕಠಿಣ ವಿಚಾರ. ಆದರೆ ನಮ್ಮ ಭಾರತದಲ್ಲಿ ಪುರಾತನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ  ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ  ಸಮುದಾಯ ಅಭಿವೃದ್ಧಿಯ ಜ್ಞಾನದೀಪ  ಕಾರ್ಯಕ್ರಮದ ಮೂಲಕ ಶಾಲೆಗಳಿಗೆ ಬೆಂಚು ಡೆಸ್ಕ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ  ಹೆಗ್ಗಡೆ ಅವರು ಮಂಜೂರು ಮಾಡಿದ್ದು, ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ರೂ. 85,000  ಮೌಲ್ಯದ 10 ಸೆಟ್ ಬೆಂಚು ಡೆಸ್ಕ್ ವಿತರಣೆ  ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಜನಜಾಗೃತಿ ವೇದಿಕೆಯ ಪದಾಧಿಕಾರಿ ವೆಂಕಟೇಶ್ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಂಡ್ಸೆ ವಲಯ ಮೇಲ್ವಿಚಾರಕರಾದ ಚಂದ್ರ ಮಧುವನ, ವಂಡ್ಸೆ ಒಕ್ಕೂಟದ ದಾಮೋದರ್, ಗಿರೀಶ್, ನಯನ, ಸೇವಾಪ್ರತಿನಿಧಿ ಯಶೋಧಾ, ವನಿತಾ, ಮಮತಾ, ನಾಗರತ್ನ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಎಸ್.ಡಿಎಂಸಿ ಅವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ  ಉಡುಪಿ  ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರಾವಣಿ ಮಂಜುನಾಥ ನಾಯಕ್ ಇವರು ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ನೀಡಲಾಗುವ ಪ್ರೋತ್ಸಾಹಧನಕ್ಕೆ 2024 ನೇ ಕ್ಯಾಲೆಂಡರ್ ವರ್ಷದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಅಥವಾ ಪದಕ ಪಡೆದ ಅರ್ಹ ಕ್ರೀಡಾಪಟುಗಳಿಂದ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ದೃಢೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ:0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಭಯ ಇಲ್ಲದೆ ಎದುರಿಸುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೆಚ್ಚಿನ ಪ್ರೇರಣೆ, ಪ್ರೋತ್ಸಾಹ ವಿದ್ಯಾರ್ಥಿಗಳಿಗೆ ದೊರೆಯುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇರುವ ಸಮಯವನ್ನು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಂಡು, ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಅಂಕಗಳನ್ನು ಪಡೆಯುವಂತಾಗಬೇಕು ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ ನಾಯ್ಕ್ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪ್ರೇರಣಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಕೆ. ರಾಮನಾಥ ನಾಯಕ್ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಶಿಕ್ಷಣ ಸಂಯೋಜಕ ಶೇಖರ್ ಮತ್ತು ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ಪ್ರದೀಪ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಗಂಗೊಳ್ಳಿ ಕ್ಲಸ್ಟರ್‌ನ ವಿವಿಧ ಶಾಲೆಗಳ ಸುಮಾರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣ ಸ್ವಾಮಿ ವಂಡ್ಸೆ ಜ.3ರಂದು ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಹಣಕಾಸು ಆಯೋಗದ ಸದಸ್ಯರುಗಳಾದ ಮೊಹಮ್ಮದ್ ಸನಾವುಲ್ಲ ಐಎಎಸ್‌, ಆರ್‌ಎಸ್‌ ಪೋಂಡೆ, ರಾಜ್ಯ ಹಣಕಾಸು ಆಯೋಗದ ಸಮಾಲೋಚಕರಾದ ಎಮ್‌. ಕೆಕೆಂಪೇಗೌಡ, ಸಿ. ಜಿ ಸುಪ್ರಸನ್ನ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಕೆ. ಯಾಲಕ್ಕಿ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಹುಕ್ಕೇರಿ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್‌. ಜನಾರ್ಧನ್, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಚಿತ್ತೂರು ಗ್ರಾ.ಪಂ. ಅಧ್ಯಕ್ಷ ರವೀಂದ್ರ ಶೆಟ್ಟಿ, ಇಡೂರು ಗ್ರಾ.ಪಂ.ಅಧ್ಯಕ್ಷೆ ಆಶಾ ಆಚಾರ್ಯ, ಕೆರಾಡಿ ಗ್ರಾ.ಪಂ. ಅಧ್ಯಕ್ಷ ಸುದರ್ಶನ ಶೆಟ್ಟಿ, ಆಲೂರು ಗ್ರಾ.ಪಂ. ಅಧ್ಯಕ್ಷ ರಾಜೇಶ್ ದೇವಾಡಿಗ, ಹಕ್ಲಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ದೇವಾಡಿಗ, ವಂಡ್ಸೆ ಗ್ರಾ.ಪಂ. ಉಪಾಧ್ಯಕ್ಷ ಮತ್ತು ಸದಸ್ಯರು ಹಾಗೂ ವಂಡ್ಸೆ, ಚಿತ್ತೂರು, ಇಡೂರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬವಲಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರೂ.12 ಲಕ್ಷ ವೆಚ್ಚದಲ್ಲಿ ನಿರ್ಮಾಣದಗೊಂಡ ದಿ. ಗಂಟಿಹೊಳೆ ನಾರಾಯಣ ಶೆಟ್ಟಿ ಸ್ಮರಣಾರ್ಥ ಶ್ರೀಮತಿ ಗೀತಾ ಗೋಕುಲ ಶೆಟ್ಟಿ ಮೇಲ್ಗಾಯಾಡಿ ಮತ್ತು ಹಳೆ ವಿದ್ಯಾರ್ಥಿಗಳು ಸೇರಿ ನಿರ್ಮಿಸಿದ ನೂತನ ‘ಬ್ರಿಥಿ ವೇದಿಕೆ’ ಲೋಕಾರ್ಪಣೆಗೊಳಿಸಲಾಯಿತು. ನೂತನ ವೇದಿಕೆ ಉದ್ಘಾಟಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಬ್ರಿಥಿ ವೇದಿಕೆಯ ಮಹಾಪೋಷಕರಾದ ಗೋಕುಲ ಶೆಟ್ಟಿ. ಜಿ ಅವರು ಮಾತನಾಡಿ, ಒಂದು ಸರ್ಕಾರಿ ಶಾಲೆ ಉಳಿಸಲು ನಾವೆಲ್ಲರೂ ಕಂಕಣಬದ್ಧರಾಗೋಣ. ಅಧ್ಯಾಪಕರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳ ನಡುವಿನ ಪರಸ್ಪರ ಹೊಂದಾಣಿಕೆ ಹಾಗೂ ಸಹಕಾರ ಭಾವನೆಯಿಂದ ಸರಕಾರಿ ಕನ್ನಡ ಶಾಲೆಯನ್ನು ಉಳಿಸಬಹುದು ಎಂದು ಮನವಿ ಮಾಡಿದರು. ಧ್ವಜಾರೋಹಣವನ್ನು ಸ.ಹಿ.ಪ್ರಾ ಶಾಲೆ ಬವಳಾಡಿಯ ಎಸ್.ಡಿ.ಎಂ,ಸಿ ಅಧ್ಯಕ್ಷರಾದ ರಾಘವೇಂದ್ರ ಗಾಣಿಗ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೂರು ಗ್ರಾ.ಪಂ. ಅಧ್ಯಕ್ಷರಾದ ಚೆಣ್ಣಮ್ಮ ವಹಿಸಿದ್ದರು. ಈ ವೇಳೆ ಬಿಜೂರು ಪಂಚಾಯತ್ ಉಪಾಧ್ಯಕ್ಷ ರಂಜಿತ್ ಹೊಸ್ಕೋಟೆ, ಸದಸ್ಯರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಪುಟಾಣಿಗಳು ತಮ್ಮ ಪುಷ್ಪವಾಟಿಕಾದಲ್ಲಿ ಹಣ್ಣುಗಳ ದಿನವನ್ನು ಅತ್ಯಂತ ವಿಭಿನ್ನವಾಗಿ ಆಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಜಂಟಿ ಕಾರ್ಯನಿರ್ವಾಹಕರಾದ ಅನುಪಮ. ಎಸ್ .ಶೆಟ್ಟಿ ಮಾತನಾಡಿ, ಆರೋಗ್ಯದ ದೃಷ್ಟಿಯಿಂದ ಆಯಾಯ ಕಾಲಕ್ಕೆ ಸಿಗುವ ಹಣ್ಣುಗಳನ್ನು ಸಮಯೋಚಿತವಾಗಿ ಬಳಸುವ ಪ್ರವೃತ್ತಿಯನ್ನು ನಾವು ನಮ್ಮ ಹಿರಿಯರಿಂದ ಕಲಿತಿದ್ದೇವೆ. ಪುಟಾಣಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಹಣ್ಣುಗಳ ಮಹತ್ವವನ್ನುಈ ರೀತಿಯಾಗಿ ಪ್ರಾತ್ಯಕ್ಷಿಕೆಯ ಮೂಲಕ ಮಕ್ಕಳಿಗೆ ತಿಳಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು. ಜೊತೆಗೆ ಹಣ್ಣುಗಳ ಮಹತ್ವವನ್ನು ವಿದ್ಯಾರ್ಥಿಗಳು ನೃತ್ಯ , ಪಾತ್ರಾಭಿನಯವನ್ನು ಮಾಡುವ ಮೂಲಕ ಎಲ್ಲರಿಗೂ ಅರ್ಥಪೂರ್ಣವಾಗಿ ಮನವರಿಕೆ ಮಾಡಿಸಿದರು. ಒಟ್ಟಿನಲ್ಲಿ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳ ಮೂಲಕ ಹಣ್ಣುಗಳ ಮಹತ್ವವನ್ನು ಅರ್ಥಪೂರ್ಣವಾಗಿ ಅರಿತರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್, ಪ್ಯಾಟ್ರಿಕ್ ಸಂಯೋಜಕಿ ವಿಶಾಲ ಶೆಟ್ಟಿ, ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಶಿಕ್ಷಕಿ ರೇಣುಕಾ ನಿರೂಪಿಸಿ, ವಂದಿಸಿದರು.

Read More