ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಲಾರಿ ಮತ್ತು ಕೋರೆ ಮಾಲಕರ ಸಂಘದ ನೇತೃತ್ವದಲ್ಲಿ ಮರಳು & ಕೆಂಪುಕಲ್ಲು ಸಮಸ್ಯೆಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಡಿಸೆಂಬರ್ 7ರ ಶನಿವಾರ ಬೆಳಿಗ್ಗೆ 9-30ಕ್ಕೆ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೈಂದೂರು ಬೈಪಾಸ್ನಿಂದ ಪ್ರತಿಭಟನೆ ಹೊರಟು ತಾಲೂಕು ಆಡಳಿತ ಸೌಧದ ಎದುರು ಸೇರಿ ಪ್ರತಿಭಟನೆ ನಡೆಸಿ ಬಳಿಕ ಬೈಂದೂರು ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಲಾರಿ ಮತ್ತು ಕೋರೆ ಮಾಲಕರ ಸಂಘದ ಸದಸ್ಯರು, ಕಟ್ಟಡ ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದು 5 ವರ್ಷದ ಹಿಂದೆ 3A ಅಡಿಯಲ್ಲಿ ಕೃಷಿ ಅಭಿವೃದ್ಧಿ ಮತ್ತು ಮನೆ ನಿರ್ಮಾಣಕ್ಕೆ ಕೆಂಪು ಕಲ್ಲು ಶಿಲೆ ಕಲ್ಲು ತೆಗೆದು ಸಾಗಾಟ ಮಾಡಲು ಪರವಾನಿಗೆ ನೀಡಲಾಗಿದೆ. ಪ್ರಸ್ತುತ ಕಳೆದ ಒಂದುವರೆ ವರ್ಷದಿಂದ ಯಾವುದೋ ಕಾರಣ ನೀಡಿ ಪರವಾನಿಗೆಗಳನ್ನು ರದ್ದು ಮಾಡಲಾಗಿದೆ. ಈ ಒಂದು ವರ್ಷದ ಹಿಂದೆ ಇದರ ಸಲುವಾಗಿ ಉಡುಪಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ಪ್ರೌಢಶಾಲಾ ವಿಭಾಗದ ’ಸಿದ್ಧಿಸೌರಭ’ ವಾರ್ಷಿಕೋತ್ಸವ ಸಮಾರಂಭವು ಬಹಳ ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮಕ್ಕೆ ತುರುವೆಕೆರೆ ಮಾದಿಹಳ್ಳಿಯ ರಾಮಕೃಷ್ಣ ಮಠದ ಶ್ರೀ ಧರ್ಮಾವೃತಾನಂದ ಸ್ವಾಮಿಗಳು ಮತ್ತು ದಾವಣಗೆರೆಯ ಶೈಕ್ಷಣಿಕ ಸಲಹೆಗಾರರೂ ಹಾಗೂ ತರಬೇತುದಾರರಾದ ಜಗನ್ನಾಥ ನಾಡಿಗೇರರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ, ಹಲವಾರು ಸಂಸ್ಥೆಗಳನ್ನು ದಕ್ಷವಾಗಿ ಮುನ್ನೆಡೆಸಿದ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಮಾಜಿ ಉಪಾಧ್ಯಕ್ಷರಾಗಿದ್ದು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಅಭಿವೃದ್ಧಿಗಾಗಿ ಬಹುವಾಗಿ ಶ್ರಮಿಸಿದ ’ಸ್ವಪ್ನ ಶಿಲ್ಪಿ’ಡಾ. ಹೆಚ್ ಶಾಂತಾರಾಮರನ್ನು ಸಂಸ್ಥೆಯ ವತಿಯಿಂದ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಎನ್. ಪಿ. ನಾರಾಯಣ ಶೆಟ್ಟಿ ಅವರು ಎಚ್ ಶಾಂತಾರಾಮರ ಬಗ್ಗೆ ತಿಳಿಸುತ್ತಾ, ಸಾಗರದಂತಹ ವ್ಯಕ್ತಿತ್ವವುಳ್ಳ ನಡೆದಾಡುವ ವಿಶ್ವಗ್ರಂಥ ಎಚ್. ಶಾಂತಾರಾಮರು. ಇವರು ಹಟ್ಟಿಅಂಗಡಿಯನ್ನು ಬಹಳವಾಗಿ ಪ್ರೀತಿಸುತ್ತಾರೆ. ಸಾಹಿತ್ಯಕ್ಕೆ ಬಹಳ ಕೊಡುಗೆಗಳನ್ನಿತ್ತವರು. ಹತ್ತಾರು ಸಂಸ್ಘಸಂಸ್ಥೆಗಳನ್ನು ದಕ್ಷವಾಗಿ ಮುನ್ನಡೆಸಿದವರು. ಈ ವಿದ್ಯಾಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿ ಚಂದ್ರ ಬೋವಿ (55) ಅವರು ಎದೆ ನೋವು ಕಾಣಿಸಿಕೊಂಡು ಮೃತಪಟ್ಟಿ ದ್ದಾರೆ. ಬುಧವಾರ ಬೆಳಗ್ಗಿನ ಜಾವ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು ಕೂಡಲೆ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಲ್ಪಾಡಿ ಅರಣ್ಯ ಘಟಕದ ಉಪವಲಯ ಅರಣ್ಯಾಧಿಕಾರಿ ಹೇಮಾ ಅವರು ಅರಣ್ಯ ಪಾಲಕ ರಾಘವೇಂದ್ರ ಅವರ ಬೈಕಿನ ಹಿಂಬದಿ ಕುಳಿತು, ಹೆಬ್ರಿ ತಾ। 9ನೇ ಮೈಲುಕಲ್ಲು ಬಳಿ ಅರಣ್ಯ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭ ಗಣೇಶ ಅವರು ಚಲಾಯಿಸುತ್ತಿದ್ದ ಪಿಕಪ್, ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು. ಇಬ್ಬರನ್ನು ಸ್ಥಳೀಯರು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ವತಿಯಿಂದ ಗಿರಿಜನ ಉಪಯೋಜನೆಯಡಿ ಗ್ರಾಮೀಣ ಭಾಗದ ಪರಿಶಿಷ್ಠ ಪಂಗಡದ ರೈತರಿಗೆ ಶೇ.90 ರಷ್ಟು ಸಹಾಯಧನದೊಂದಿಗೆ 10+1 ಕುರಿ/ಮೇಕೆ ಘಟಕ ಪೂರೈಕೆ ಯೋಜನೆಯನ್ನು ಅನುಷ್ಟಾನಗೊಳಿಸಲು ಪರಿಶಿಷ್ಠ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದೇ ಇರುವ ಜಿಲ್ಲೆ /ತಾಲೂಕುಗಳಲ್ಲಿಯೂ ಸಹ ಕುರಿ ಸಾಕಾಣಿಕೆದಾರರುಗಳನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮದ ವ್ಯಾಪ್ತಿಯಲ್ಲಿರುವ ಪಶು ಆಸ್ಪತ್ರೆ / ಪಶು ಚಿಕಿತ್ಸಾಲಯ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ದೂರವಾಣಿ ಸಂಖ್ಯೆ: 9449157129 ಅನ್ನು ಸಂಪರ್ಕಿಸಬಹುದಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಹೊಸದಾಗಿ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ (ನಿ) ಸ್ಥಾಪನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ ಸ್ಥಾಪನೆಯಿಂದ ಕಾರ್ಮಿಕರು, ಹೊರ ಗುತ್ತಿಗೆದಾರರು, ವಿವಿಧ ಆರ್ಥಿಕ ಲಾಭಗಳನ್ನು ಪಡೆಯಲು ಅನುಕೂಲವಾಗುವ ದರ ಜೊತೆಗೆ ಸರಕಾರದ ವಿವಿಧ ಇಲಾಖೆಗಳು ಹಾಗೂ ಇವುಗಳ ಅಧೀನದಲ್ಲಿ ಬರುವ ನಿಗಮ ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರ ಸೇವೆಗಳನ್ನು ಒದಗಿಸಲು ಅನುಕೂಲವಾಗಲಿದೆ. ಹೊರಗುತ್ತಿಗೆದಾರರ ವೇತನ ಪಾವತಿ, ಇ.ಎಸ್.ಐ, ಪಿ.ಎಫ್ ಮುಂತಾದ ಶಾಸನಾತ್ಮಕ ಸೌಲಭಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಎಚ್ಐವಿ / ಏಡ್ಸ್ ಅರಿವು ಕಾರ್ಯಕ್ರಮ ಬುಧವಾರದಂದು ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಇಂದಿನ ಯುವ ಸಮೂಹ ಹೇಗೆ ತಮ್ಮನ್ನು ಸಮಾಜದ ಆರೋಗ್ಯವಂತ ಪೀಳಿಗೆಯಾಗಿ ಮಾರ್ಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಸರಕಾರಿ ತಾಲ್ಲೂಕು ಆಸ್ಪತ್ರೆಯ ಕೌನ್ಸಿಲರ್ ಆಗಿರುವ ನಳಿನಾಕ್ಷಿ ಅವರು ಎಚ್ಐವಿ ಹಾಗೂ ಏಡ್ಸ್ ಬಗ್ಗೆ ಸವಿಸ್ತಾರವಾಗಿ ಮಾಹಿತಿ ತಿಳಿಸಿ ಅದರ ಮುನ್ನೆಚ್ಚರಿಕೆಯ ಆವಶ್ಯಕತೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದದರು. ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸಿನಲ್ಲಿ ಎಚ್ಐವಿಯ ಅರಿವು ಅತ್ಯವಶ್ಯಕ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತಾಯಿ ಮರಣ ತನಿಖಾ ಸಮಿತಿ ಸಭೆ, ಜಿಲ್ಲಾ ಲಸಿಕಾ ಕಾರ್ಯಪಡೆ ಸಮಿತಿ ಸಭೆ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಯಿ ಮತ್ತು ಮಕ್ಕಳ ಮರಣವನ್ನು ತಡೆಗಟ್ಟಲು ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಇವುಗಳ ಜೊತೆಗೆ ತಮ್ಮ ಮಗುವಿನ ಆರೈಕೆ ಕೈಗೊಳ್ಳುವ ಕುರಿತು ಮಾಹಿತಿಗಳನ್ನು ಒದಗಿಸಬೇಕು ಎಂದರು. ಬಾಲ…
