ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆನ್ ಲೈನ್ ಮೂಲಕ ಬಿಟ್ ಕಾಯಿನ್ ಖರೀದಿ ಮಾಡಿ ಹಣವನ್ನು ದ್ವಿಗುಣ ಮಾಡಿ ಕೊಡುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ ಚಂದ್ರಿಕಾ (38) ಅಂಕದಕಟ್ಟೆ ಹಾಗೂ ಭಾಸ್ಕರ (45) ಶಿವಮೊಗ್ಗ ವಿರುದ್ಧ ಯಶೋದಾ ಹಾಲಾಡಿ ದೂರು ನೀಡಿದ್ದಾರೆ. ಅಂಕದಕಟ್ಟೆಯ ಸಮೀಪ ಚಂದ್ರಿಕಾ ಅವರ ಕಚೇರಿಗೆ ಬೈಂದೂರಿನ ಸ್ವದೀಪ್ ಶೆಟ್ಟಿ ಅವರು ಹಣ ನೀಡುವಂತೆ ಹೇಳಿದ್ದು, ಬಳಿಕ ಕೆಲವು ನಕಲಿ ಕಾಗದ ಪತ್ರ ಸೃಷ್ಟಿಸಿದ ಚಂದ್ರಿಕಾ ಇದು ಕಾನೂನಾತ್ಮಕ ವ್ಯವಹಾರವಾಗಿದ್ದು, ಲೈಸೆನ್ಸ್ ಇರುವುದಾಗಿ ಸುಳ್ಳು ಹೇಳಿ ನಂಬಿಸಿದ್ದಾರೆ. 2024ರ ಡಿ.11 ರಂದು 3.80 ಲಕ್ಷ ರೂ., ಹಂತ- ಹಂತವಾಗಿ ಒಟ್ಟು 17 ಲಕ್ಷ ರೂ. ಪಡೆದಿದ್ದಾರೆ. ಈ ಬಗ್ಗೆ ಬಾಂಡ್ ನೀಡದೇ, ಮಾ.16ಕ್ಕೆ ಕಚೇರಿಗೆ ಹೋದಾಗ ಅಲ್ಲಿ ಚಂದ್ರಿಕಾ ಹಾಗೂ ಭಾಸ್ಕರ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ. ನನ್ನ ಅಣ್ಣ ಶಂಕರ ನಾಯ್ಕ, ಪತ್ನಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೈಂಟ್ ಥಾಮಸ್ ಕಿಂಡರ್‌ಗಾರ್ಟನ್ ಶಾಲೆಯಲ್ಲಿ “ಲಿಟಲ್ ವಿಂಗ್ಸ್ ಗ್ರಾಜುಯೇಶನ್ 2026” ಪದವಿ ಪ್ರದಾನ ಸಮಾರಂಭವು ಗುರುವಾರ ಶಾಲೆಯ ಆಡಿಯಟೋರಿಯಂನಲ್ಲಿ ಸಂಭ್ರಮದಿಂದ ನೆರವೇರಿತು. ಪುಟ್ಟ ಮಕ್ಕಳ ಉತ್ಸಾಹ, ಸಂಭ್ರಮ, ಪೋಷಕರ ಹರ್ಷ ಹಾಗೂ ಶಿಕ್ಷಕರ ಸಮರ್ಪಣೆ ಒಂದಾಗಿ ಈ ಕಾರ್ಯಕ್ರಮವು ಸ್ಮರಣೀಯವಾಗಿಸಿತು . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮದೂರು ಭಾರತ್ ಮಾತಾ ಪ್ರೌಢಶಾಲೆಯ ಸಂಚಾಲಕರಾದ ಫಾದರ್ ಜೋಸೆಫ್ ಮಟ್ಟಮ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಮ್ಮ ಭಾಷಣದಲ್ಲಿ ಮಕ್ಕಳ ಜೀವನದಲ್ಲಿ ಪ್ರಾಥಮಿಕ ಶಿಕ್ಷಣದ ಮಹತ್ವವನ್ನು ವಿವರಿಸಿ, ಮಕ್ಕಳಿಗೆ ಮನೆಯಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಸಿಕೊಡಬೇಕು. ಮಕ್ಕಳಿಗೆ ಮೌಲ್ಯಯುತವಾದ ಜೀವನ ನಡೆಸಲು ಪ್ರೇರಣೆಯನ್ನು ನೀಡಬೇಕು. ಮಕ್ಕಳ ಚಿಂತನೆಗಳನ್ನ ಬದಲಾಯಿಸಿದರೆ ಮಾತ್ರ ಅದು ಅವರ ಭವಿಷ್ಯಕ್ಕೆ ಒಳ್ಳೆದಾಗಬಹುದು. ಈ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಮೌಲ್ಯಗಳೊಂದಿಗೆ ಶಿಕ್ಷಣ ನೀಡುತ್ತಿದ್ದಾರೆ ಎಂದು ಶ್ಲಾಘಿಸಿ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿರುವ ಶಾಲೆಯ ಪ್ರಾಂಶುಪಾಲರಾದ ಫಿಲಿಪ್ ನೆಲ್ಲಿವಿಲ್ಲ ಅವರು ಮಾತನಾಡಿ, ಇಂದು ನಮ್ಮ ಪುಟ್ಟ ಮಕ್ಕಳ ಮೊದಲ ಸಾಧನೆಯನ್ನು ಸಂತೋಷ ಮತ್ತು ಹೆಮ್ಮೆಯಿಂದ ಆಚರಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’ ಕೃಷಿಸಿರಿ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಟ ಸ್ವರಾಜ್ ಶೆಟ್ಟಿ, ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆಳ್ವಾಸ್‌ನಷ್ಟು ಪ್ರೋತ್ಸಾಹ ನೀಡುವ ಸಂಸ್ಥೆ ಬೇರೊಂದಿಲ್ಲ. ಶಿಕ್ಷಣದೊಂದಿಗೆ ಮೌಲ್ಯಗಳನ್ನೂ ಬೆಳೆಸುವ ಮೂಲಕ, ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವ ಕಾರ್ಯವನ್ನು ಸಂಸ್ಥೆ ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದರು. ಜೀವನದಲ್ಲಿ ಸೋಲುಗಳು ಸಹಜ. ಆದರೆ ಸೋಲಿಗೆ ಎದೆಗುಂದದೆ ಧೈರ್ಯದಿಂದ ಎದುರಿಸಬೇಕು. ಪ್ರತಿಯೊಂದು ಅನುಭವವೂ ಹೊಸ ಪಾಠ ಕಲಿಸುತ್ತದೆ. ಇಷ್ಟವಿಲ್ಲದ ವಿಷಯಗಳಲ್ಲಿ ತೊಡಗಿಕೊಳ್ಳಬೇಡಿ. ನಿಮ್ಮ ಆಸಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿ ಮುಂದುವರಿಯಿರಿ. ಸಾಧ್ಯವಾದರೆ ಇತರರನ್ನು ಪ್ರೀತಿಸಿ, ಯಾವುದೇ ಸಂದರ್ಭದಲ್ಲೂ ದ್ವೇಷಕ್ಕೆ ಅವಕಾಶ ಕೊಡಬೇಡಿ. ಸತ್ಯ, ಪ್ರಾಮಾಣಿಕತೆ, ಸಹಾನುಭೂತಿ ಮತ್ತು ದಯೆ ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಜೀವನ ನಿರ್ಮಾಣ ಸಾಧ್ಯ, ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಆಳ್ವಾಸ್ ಸಂಸ್ಥೆಯ ಸಾಧನೆಯಲ್ಲಿ ವಿದ್ಯಾರ್ಥಿಗಳ ಕೊಡುಗೆ ಅಪಾರ. ಆದ್ದರಿಂದ ನಿಮ್ಮ ಮೇಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ನಗರಸಭಾ ನಿಧಿಯ ಶೇ.5ರ ವಿಕಲಚೇತನ ಕಲ್ಯಾಣ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ, ನಿವೇಶನ ಖರೀದಿ, ವಿಕಲಚೇತನ ಬೆನ್ನುಹುರಿ ಮುರಿತಕ್ಕೆ ಒಳಗಾದ ಶಾಶ್ವತ ಅಂಗವಿಕಲತೆ ಹೊಂದಿದ ಫಲಾನುಭವಿಗಳ ಪೋಷಕರಿಗೆ ಪೋಷಣಾ ಭತ್ಯೆ ಹಾಗೂ ಅಂಗವಿಕಲರಿಗೆ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಲು ಏಪ್ರಿಲ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಏಪ್ರಿಲ್ 2 ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಇಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆ, ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು udupi.nic.in ವೆಬ್‌ಸೈಟ್‌ಗೆ ಭೇಟಿ ನೀಡಿ, ಉದ್ಯೋಗ ಮೇಳ-2026 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಜಿಲ್ಲಾ ವ್ಯವಸ್ಥಾಪಕರು, ಮೊ.ನಂ: 9844234080 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು/ ಸನ್ನದ್ಧತೆಗಾಗಿ, ಸಾರ್ವಜನಿಕ ಮತ್ತು ಜಾನುವಾರು ಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಸೂಚನೆಗಳನ್ನು ನೀಡಿದೆ. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳನ್ನು ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ ಮುಖಾಂತರ ಬರುವ ಮೆಸೇಜ್‌ಗಳನ್ನು ಗಮನಿಸಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ, ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು : ದೇವಸ್ಥಾನಗಳ ಜೀರ್ಣೋದ್ದಾರ ಮಾಡಿದರೆ ಇಡೀ ಮಾನವ ಕುಲವೇ ಅಭಿವೃದ್ಧಿಯಾದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಗುರುವಾರ ನಡೆದ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗದ ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇವಸ್ಥಾನ ಎಂಬ ಶ್ರದ್ಧಾ ಕೇಂದ್ರಗಳನ್ನು ಅಭಿವೃದ್ಧಿ ಮಾಡಿದರೆ ಇಡೀ ಸಮಾಜಕ್ಕೆ ಶಾಂತಿಯ ಸಂದೇಶ ರವಾನೆಯಾಗುತ್ತದೆ ಎಂದರು. ಮನುಷ್ಯನಿಗೆ ನೆಮ್ಮದ್ದಿ ಕೊಡುವ ಸ್ಥಳಗಳೆಂದರೆ ಒಂದು ಅಮ್ಮನ ಮಡಿಲು, ಮತ್ತೊಂದು ದೇವಸ್ಥಾನಗಳು, ನಮ್ಮಲ್ಲಿರುವ ಕಷ್ಟಗಳನ್ನು ದೇವರ ಬಳಿ ಕೇಳುತ್ತೇವೆ. ದೇವರ ಬಳಿ ನಾವು ಯಾವುದೇ ಮುಚ್ಚುಮರೆ ಮಾಡದೆ ಎಲ್ಲವನ್ನೂ ಹೇಳಿಕೊಳ್ಳುತ್ತೇವೆ. ಇದೇ ದೇವರ ಮಹಿಮೆ ಎಂದು ಸಚಿವರು ಅಭಿಪ್ರಾಯಪಟ್ಟರು. ಮಹಾಲಿಂಗೇಶ್ವರ ದೇವರ, ಗುರು ಹಿರಿಯರ ಹಾಗೂ ತಂದೆ ತಾಯಂದಿರ ಆಶೀರ್ವಾದಿಂದ ನಾನು ಇಷ್ಟರ ಮಟ್ಟಿಗೆ ಬೆಳೆದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಿತ್ರ ಮಂಡಳಿ ಕೋಟ ನೀಡುತ್ತಿರುವ ಸಾಹಿತ್ಯ ಸಾಧಕರಿಗೆ ಈ ವರ್ಷದ ಹುಟ್ಟೂರ ಸಾಹಿತ್ಯ ಸಾಧಕ ಪುರಸ್ಕಾರಕ್ಕೆ ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾಗಿರುವ ನರೇಂದ್ರ ಕುಮಾರ್ ಕೋಟ ಆಯ್ಕೆಯಾಗಿದ್ದಾರೆ. ಉಸಿರು ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಕಳೆದ 25 ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಶಿಬಿರಗಳನ್ನು ನಿರಂತರವಾಗಿ ಆಯೋಜಿಸಿ ಎಳೆಯ ಮಕ್ಕಳಲ್ಲಿ ಕನ್ನಡದ ಪ್ರೀತಿ ಮತ್ತು ಸಾಹಿತ್ಯ ರಚನೆಯ ಅಭಿರುಚಿಯನ್ನು ಮೂಡಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಲ್ಲದೆ ಅವರು ಬರೆದಿರುವ ಅನೇಕ ಕೃತಿಗಳನ್ನು ತಮ್ಮ ಸಂಸ್ಥೆಯ ಮೂಲಕ ಪ್ರಕಟಿಸಿದ್ದಾರೆ. ಅತ್ಯುತ್ತಮ ಸಂಘಟಕರಾಗಿರುವ ಇವರು ಜಿಲ್ಲಾ ಹಾಗೂ ರಾಜ್ಯಮಟ್ಟದ ಅನೇಕ ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿದ್ದಲ್ಲದೆ ಐದು ಕುಂದಾಪ್ರ ಕನ್ನಡ ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾಗಿದೆ. ಹಲವಾರು ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ಮನಸ್ಸುಗಳಿಗೆ ಸ್ಪೂರ್ತಿಯಾಗಿದ್ದಾರೆ. ಬಹುಮುಖ ಪ್ರತಿಭಾವಂತರಾಗಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದ ಇವರ ನಿಷ್ಠೆಯ ಕನ್ನಡ ಪರಿಚಾರಿಕೆಗಾಗಿ ಅರ್ಹರಾಗಿದ್ದಾರೆ. ಇದೇ ಎಪ್ರಿಲ್ 4 ರಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಉಡುಪಿ ಜಿಲ್ಲೆಯಲ್ಲಿ ನಮೂನೆ 50,53 ಹಾಗೂ 57 ರಡಿ ಸಲ್ಲಿಸಿರುವ ಅರ್ಜಿಗಳು ಉಪ ವಿಭಾಗಾಧಿಕಾರಿ ಅಥವಾ ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗಿರುವ 88 ಬಗರ್ ಹುಕುಂ ಅರ್ಜಿಗಳು ತಂತ್ರಾoಶದಲ್ಲಿ ಅಳವಡಿಕೆ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು ಉಡುಪಿ ಜಿಲ್ಲೆಯಲ್ಲಿ ನಮೂನೆ 50,53,ಹಾಗೂ 57 ರಡಿ ಸಲ್ಲಿಸಿರುವ ಅರ್ಜಿಗಳು ಉಪ ವಿಭಾಗಾಧಿಕಾರಿಗಳು / ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗಿ ಬಗರ್ ಹುಕುಂ ತಂತ್ರಾoಶದಲ್ಲಿ ಅಳವಡಿಕೆ ಆಗದೇ ಇದ್ದ 88 ಪ್ರಕರಣಗಳಲ್ಲಿ 10 ಪ್ರಕರಣಗಳು ತಂತ್ರಾoಶದಲ್ಲಿ ಅಳವಡಿಸಲು ಬಾಕಿ ಇರುತ್ತದೆ ಎಂದು ಉತ್ತರಿಸಿದ್ದಾರೆ. ತಂತ್ರಾoಶದಲ್ಲಿ ಸೇರಿಸಲು ಬಾಕಿ ಇರುವ 471 ಅರ್ಹ ಅರ್ಜಿಗಳನ್ನು ಸೇರಿಸಲು ಒತ್ತಾಯ:ನಮೂನೆ 50,53 ಹಾಗೂ 57 ರಲ್ಲಿ ಅರ್ಹ ಅಕ್ರಮ ಸಕ್ರಮ ಅರ್ಜಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ Inspire Award – MANAK ಯೋಜನೆಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅಮಿತ್ ಆರ್. ನಾಯ್ಕ್ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
