ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ನೂತನ ರಾಷ್ಟೀಯ ಸೇವಾ ಯೋಜನೆ ಹಾಗೂ ರೆಡ್ಕ್ರಾಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ ಕುವೆಂಪು ಸಭಾಭವನದಲ್ಲಿ ನೆರವೇರಿತು. ಯನಪೋಯ ವಿಶ್ವವಿದ್ಯಾಲಯದ ರಾಷ್ಟೀಯರಾಷ್ಟೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕಿ ಹಾಗೂ ವಿಸ್ತರಣೆ ಮತ್ತು ಔಟ್ರೀಚ್ ಚಟುವಟಿಕೆಗಳ ನಿರ್ದೇಶಕಿ ಹಾಗೂ ಆಳ್ವಾಸ್ನ ಹಿರಿಯ ವಿದ್ಯಾರ್ಥಿನಿ ಡಾ. ಅಶ್ವಿನಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜು ಅವಧಿಯಲ್ಲಿ ನೀಡಲ್ಪಡುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಂಡರೆ, ಅದು ಜೀವನದ ದಿಕ್ಕನ್ನೇ ಬದಲಿಸಬಲ್ಲದು. ಎನ್ಎಸ್ಎಸ್ನಂತಹ ವೇದಿಕೆಗಳು ವಿದ್ಯಾರ್ಥಿಗಳಿಗೆ ನಾಯಕತ್ವ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಭಾವನೆ ಬೆಳೆಸುತ್ತವೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಅರಿಯುವ ಮತ್ತು ಪರಿಹಾರ ಮಾರ್ಗಗಳನ್ನು ಹುಡುಕುವ ಅಪರೂಪದ ಅವಕಾಶ ಇಲ್ಲಿ ದೊರಕುತ್ತದೆ. ವಿವಿಧ ನವೀನ ಯೋಜನೆಗಳು, ಸಂಶೋಧನಾ ಪ್ರಕಟಣೆಗಳು ಎನ್ಎಸ್ಎಸ್ ಚಟುವಟಿಕೆಗಳ ಮೂಲಕ ಸಾಧ್ಯವಾಗಬಲ್ಲದು. ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡು, ನಂತರ ಪ್ರೀ-ಟೆಸ್ಟ್ ಹಾಗೂ ಪೋಸ್ಟ್-ಟೆಸ್ಟ್ ವಿಧಾನದಲ್ಲಿ ಅಧ್ಯಯನ ನಡೆಸಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರವಾದ ಯಕ್ಷಗಾನವು ಭಾರತವನ್ನು ಪ್ರತಿನಿಧಿಸಿದ ಬೆಂಗಳೂರಿನ ಯಕ್ಷದೇಗುಲ ತಂಡವು ಇಸ್ರೇಲ್ನಲ್ಲಿ ತನ್ನ ರೋಮಾಂಚಕ ಮತ್ತು ವರ್ಣಮಯ ಪ್ರದರ್ಶನಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸಿತು. ಕಂಸವಧೆ ಮತ್ತು ಅಭಿಮನ್ಯು ಕಾಳಗ ಯಕ್ಷಗಾನ ಪ್ರದರ್ಶನ ನೀಡಿತು. ನವೆಂಬರ್ 2 ರಂದು ಪೆಟಾ ಟಿಕ್ವಾದಲ್ಲಿ ನಡೆದ ಹಡೋಫೆನ್ ಫ್ರಿಂಜ್ ರಂಗಭೂಮಿ ಉತ್ಸವದಲ್ಲಿ ಉದ್ಘಾಟನಾ ಪ್ರದರ್ಶನವನ್ನು ಪ್ರದರ್ಶಿಸಿತು. ಈ ಪ್ರದರ್ಶನದ ಯಶಸ್ವಿ ಮತ್ತು ಅಪಾರ ಜನರ ಪ್ರಶಂಸೆಗೆ ಕಾರಣವಾಯಿತು. ಈ ಸುದ್ಧಿ ಹರಡುತ್ತಿದ್ದಂತೆ ನವೆಂಬರ್ 3 ರಂದು ಹೈಪಾ ನಗರ ಮತ್ತು 4 ರಂದು ಅಶ್ಕೆಲೋನ್ನಲ್ಲಿ ನಡೆದ ಪ್ರದರ್ಶನದಲ್ಲಿ ಪ್ರೇಕ್ಷಕರು ಬಹಳವಾಗಿ ಸೇರಿ ಹೆಚ್ಚಿನವರು ನಿಂತು ನೋಡಬೇಕಾಯಿತು. ಭಾರತದ ಯಕ್ಷಗಾನ ತಂಡವು ಹಡೋಫೆನ್ ಫ್ರಿಂಜ್ ಉತ್ಸವದ ನಾಲ್ಕನೆ ಆವೃತ್ತಿಯಲ್ಲಿ ಭಾಗವಹಿಸಿದ ಏಕೈಕ ಅಂತರರಾಷ್ಟ್ರೀಯ ತಂಡವಾಗಿದೆ. ಇದರಿಂದ ಇಸ್ರೇಲಿ ಪ್ರೇಕ್ಷಕರಲ್ಲಿ ಭಾರತೀಯ ಸಂಸ್ಕೃತಿಯ ಬೆಳೆಯುತ್ತಿರುವ ಅನುರಣನವನ್ನು ಒತ್ತಿ ಹೇಳುತ್ತದೆ. ಇಸ್ರೇಲ್ ನಗರಗಳ ಪುರಸಭೆಗಳು ಮತ್ತು ಹಡೋಫೆನ್ ರಂಗಮಂದಿರದ ಸಹಯೋಗದೊಂದಿಗೆ ಇಸ್ರೇಲ್ನಲ್ಲಿರುವ ಭಾರತದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತ್ರಾಸಿ ಪ್ರೈ ಓವರ್ ಬಳಿ ಗಂಗೊಳ್ಳಿ ಪೊಲೀಸ್ ಠಾಣೆಯ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಚಲಿಸುತ್ತಿದ್ದ ಲಾರಿ ತ್ರಾಸಿ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹೃದಯಾಘಾತ ಅಥವಾ ಯಾವುದೇ ಅನಾರೋಗ್ಯದಿಂದ ಈ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿಯನ್ನು ದಾವಣಗೆರೆ ಮೂಲದ ಚಾಲಕ ಮನ್ಸೂರ್ ಆಲಿ ಎಂದು ಗುರುತಿಸಲಾಗಿದೆ. ತೌಡು ತುಂಬಿದ ಲಾರಿಯಲ್ಲಿ ಅವರು ಮಂದಾರ್ತಿ ಕಡೆಗೆ ಸಾಗುತ್ತಿದ್ದರು. ಇಲ್ಲಿನ ಲಕ್ಷ್ಮಿ ಫೀಡ್ಸ್ ಕಾರ್ಖಾನೆಗೆ ಲೋಡ್ ತಲುಪಿಸಬೇಕಾಗಿತ್ತು. ಆದರೆ ಸಕಾಲದಲ್ಲಿ ಲಾರಿ ತಲುಪದ ಕಾರಣ, ವಿಚಾರಣೆ ನಡೆಸಿದಾಗ ಚಾಲಕ ಮೃತಪಟ್ಟಿರುವುದು ಗೊತ್ತಾಗಿದೆ . ಮನ್ಸೂರ್ ಅಲಿ ಅವರಿಗೆ ಇರಬಹುದಾದ ಅನಾರೋಗ್ಯ ಅಥವಾ ಹೃದಯಘಾತದಿಂದ ಈ ಸಾವು ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಬೆಳಗಿನ ವೇಳೆ ಮೃತಪಟ್ಟರೂ ಲಾರಿ ಚಾಲಕನನ್ನು ಯಾರೂ ಗಮನಿಸದೆ ಸಂಜೆಯ ವೇಳೆಯಲ್ಲಿ ಬೇರೆ ಲಾರಿ ಚಾಲಕರು ಗಮನಿಸಿ ಗಂಗೊಳ್ಳಿ ಪೊಲೀಸ್ ಠಾಣೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರದ ಅನುದಾನವನ್ನು ಕಾಯದೇ ಸರಕಾರೇತರ ಸಂಸ್ಥೆಗಳ ಸಹಯೋಗ ಪಡೆದು ಸರಕಾರಿ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯ ನಿರಂತರ ಒದಗಿಸಿದ್ದಲ್ಲಿ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್ ಅಲ್ಲಿ ನಡೆದ ಸಮೃದ್ಧ ಬೈಂದೂರು ಪರಿಕಲ್ಪನೆಯ “300 ಟ್ರೀಸ್” ಯೋಜನೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಯೂಥ್ ಫಾರ್ ಸೇವಾ ಬೆಂಗಳೂರು ಹಾಗೂ ಸ್ವಯಂ ಸ್ಫೂರ್ತಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ಯೂಥ್ ಫಾರ್ ಸೇವಾ ಹಾಗೂ ಸ್ವಯಂ ಸ್ಫೂರ್ತಿ ಫೌಂಡೇಶನ್ ಇವರ ಸರಕಾರಿ ಶಾಲೆ ಉಳಿಯುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಬಹಳ ಮಹತ್ತರವಾದದ್ದು ಎಂದು ಅಭಿಪ್ರಾಯಪಟ್ಟರು. ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಶಾಲಾ ಪರಿಕರಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿ.ಪಂ., ಕುಂದಾಪುರ ತಾ.ಪಂ., ಆಲೂರು ಗ್ರಾ.ಪಂ. ಹಾಗೂ ಗುಜ್ಜಾಡಿ ಪಶು ಚಿಕಿತ್ಸಾಲಯದ ಸಂಯುಕ್ತ ಆಶ್ರಯದಲ್ಲಿ ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆಗಳಲ್ಲಿ ಸಾಕು ನಾಯಿ, ಬೀದಿ ನಾಯಿಗಳು ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ ಶುಕ್ರವಾರ ನಡೆಯಿತು. ಗುಜ್ಜಾಡಿ ಗ್ರಾ.ಪಂ. ಅಧ್ಯಕ್ಷ ತಮ್ಮಯ್ಯ ದೇವಾಡಿಗ ಶಿಬಿರವನ್ನು ಉದ್ಘಾಟಿಸಿ, ಶುಭಹಾರೈಸಿದರು. ಗುಜ್ಜಾಡಿಪಶು ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಅರುಣ್ ಕೆ.ಪಿ. ಅವರು, ರೇಬಿಸ್ ರೋಗದಿಂದ ಉಂಟಾಗುವ ದುಷ್ಟರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಜಲಜಾ ಮೊಗವೀರ, ಗ್ರಾಪಂ. ಸದಸ್ಯರು, ಪಿಡಿಒ ಶೋಭಾ, ಕಾರ್ಯದರ್ಶಿ ಶಕುಂತಲಾ, ಸಿಬಂದಿ, ಪಶು ಸಖಿ, ಗ್ರಾಪಂ ಸಿಬ್ಬಂದಿಗಳು, ಪಶು ಚಿಕಿತ್ಸಾಲಯದ ಸಿಬ್ಬಂದಿಗಳು, ಸಂಜೀವಿನಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಟು ಕಡೆಗಳಲ್ಲಿ ನಡೆದ ಲಸಿಕಾ ಶಿಬಿರದಲ್ಲಿ ಸುಮಾರು 110 ನಾಯಿಗಳಿಗೆ ಲಸಿಕೆ ನೀಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ವಿದ್ಯಾ ಸಂಘ ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟವು ವಿಜೃಂಭಣೆಯಿಂದ ನಡೆಯಿತು. ಸಮಾರಂಭವನ್ನು ಭಾರತೀಯ ಮಿಲಿಟರಿಯಲ್ಲಿ ಆಡಳಿತಾತ್ಮಕ ಸಹಾಯಕ ಅಧಿಕಾರಿಯಾಗಿ ಜಾಮ್ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಹೆಮ್ಮೆಯ ಹಳೆಯ ವಿದ್ಯಾರ್ಥಿ ಎಸ್.ಜಿ.ಟಿ. ಶ್ರೀಕಾಂತ್ ಮಧ್ಯಸ್ಥ ಅವರು ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ, ಮಾತನಾಡಿ, ಕ್ರೀಡೆಯು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆಯಿಂದ ಕಲಿಯುವ ಶಿಸ್ತು, ಸಂಯಮ ಮತ್ತು ಸವಾಲುಗಳನ್ನು ಎದುರಿಸುವ ಮನೋಭಾವವು ಮಿಲಿಟರಿ ಸೇವೆ ಸೇರಿದಂತೆ ಯಾವುದೇ ಉನ್ನತ ಸಾಧನೆಗೆ ಬುನಾದಿಯಾಗುತ್ತದೆ. ಕ್ರೀಡೆಯಲ್ಲಿ ಸಕ್ರಿಯರಾಗಿದ್ದರಿಂದಲೇ ನಾನು ಭಾರತೀಯ ಮಿಲಿಟರಿ ವೃತ್ತಿಯನ್ನು ಆಯ್ಕೆ ಮಾಡಲು ಸಾಧ್ಯವಾಯಿತು. ವಿದ್ಯಾರ್ಥಿ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದ ಬಹುಮಾನ ಪಡೆದಿದ್ದನ್ನು ಸ್ಮರಿಸಿದ ಅವರು, ತಮ್ಮ ಈ ಸಾಧನೆಗೆ ಸಹಕರಿಸಿದ ಎಲ್ಲ ದೈಹಿಕ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿ, ವಿದ್ಯಾರ್ಥಿಗಳು ಕೇವಲ ಗೆಲುವಿಗಾಗಿ ಅಲ್ಲದೇ ಉತ್ತಮ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕೆಂದು ಕರೆ ನೀಡಿದರು. ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಇವರ ಆಶ್ರಯದಲ್ಲಿ ನಡೆದ 2025 26ನೇ ಸಾಲಿನ ಕಲಾ ಪ್ರತಿಬೋತ್ಸವದ ಜಿಲ್ಲಾ ಮಟ್ಟದ ಬಾಲ ಪ್ರತಿಭೆಯ ಕರ್ನಾಟಕ ಶಾಸ್ತ್ರೀಯ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಅವರು ದ್ವಿತೀಯ ಸ್ಥಾನವನ್ನು ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರು ಗಂಗೊಳ್ಳಿಯ ಸಾಕ್ಸೋಫೋನ್ ಕಲಾವಿದ ಮಾಧವ ಜಿ. ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಯನ್ನು ಶಾಲಾ ಎಸ್ಡಿಎಂಸಿ ಬಳಗ ಮುಖ್ಯೋಪಾಧ್ಯಾಯರು ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಪಾರು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಅಂಪಾರಿನ ಸಂಜಯಗಾಂಧಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಮಕ್ಕಳ ಆರೋಗ್ಯದ ಮಹತ್ವ ಕುರಿತು ಅತ್ಯಂತ ಯಶಸ್ವಿ ಮತ್ತು ಮಾಹಿತಿಪೂರ್ಣ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮತ್ತು ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ನಿವೃತ್ತ ಅರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರು ಮಕ್ಕಳ ಆರೋಗ್ಯದ ಬಗ್ಗೆ ಪರಿಣಾಮಕಾರಿಯಾಗಿ ಮಾತನಾಡಿ, “ಉತ್ತಮ ಆರೋಗ್ಯ ಅಥವಾ ಯೋಗಕ್ಷೇಮ ಎಂದರೆ ಕೇವಲ ದೈಹಿಕವಾಗಿ ಮಾತ್ರವಲ್ಲದೆ, ಮಾನಸಿಕ ಮತ್ತು ಸಾಮಾಜಿಕವಾಗಿಯೂ ಆರೋಗ್ಯವಾಗಿರುವುದು. ಆರೋಗ್ಯಕರ ಸಮತೋಲಿತ ಆಹಾರ, ವೈಯಕ್ತಿಕ ಸ್ವಚ್ಛತೆ ಮತ್ತು ಉತ್ತಮ ಜೀವನಶೈಲಿಯ ಮಹತ್ವವನ್ನು ಸರಳ ಉದಾಹರಣೆಗಳೊಂದಿಗೆ ವಿವರಿಸಿದರು. ಪೋಷಕರು ಮಕ್ಕಳ ಆಹಾರ ಪದ್ಧತಿಯಲ್ಲಿ ಪೌಷ್ಟಿಕಾಂಶಯುಕ್ತ ತರಕಾರಿಗಳು ಮತ್ತು ಹಣ್ಣುಗಳನ್ನು ಸೇರಿಸುವ ಅಗತ್ಯದ ಬಗ್ಗೆ ತಿಳುವಳಿಕೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ನ ಕೋಶಾಧಿಕಾರಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ವಹಿಸಿ ಮಾತನಾಡಿ, ಇಂತಹ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಅಂತರ್ ಶಾಲಾ ಸಾಂಸ್ಕೃತಿಕ ಸ್ಪರ್ಧೆ ‘ವಿಕ್ಟರಿ-2025’ ಕಾಲೇಜು ಆಡಿಟೋರಿಯಂನಲ್ಲಿ ಜರುಗಿತು. ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜನೆಗೊಂಡ ಈ ಸಾಂಸ್ಕೃತಿಕ ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ಗೆದ್ದರೆ ಆತ್ಮವಿಶ್ವಾಸ ಮೂಡಿಸುತ್ತದೆ ನಿಜ ಆದರೆ ಸೋತರೇ ಹತಾಶರಾಗಬೇಡಿ. ನಿಮ್ಮ ಭವಿಷ್ಯದ ಹಾದಿಗೆ ಈ ಸ್ಪರ್ಧೆ ಮಹತ್ವದ ಮೈಲುಗಲ್ಲು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಹಿರಿಯ ರಸಾಯನಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣಕರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ವೆಂಕಟರಮಣ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್ ಶೆಟ್ಟಿ, ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್ ಅವರನ್ನು ಉಡುಪಿ ಓಸಿಯನ್ ಪರ್ಲ್ ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ನಿರ್ಣಯಿಸಲಾಯಿತು. ಖಜಾಂಚಿಯಾಗಿ ಜ್ಞಾನಸುಧಾ ಸಂಸ್ಥೆಯ ಡಾ. ಸುಧಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಕ್ರಿಯೇಟಿವ್ ಸಂಸ್ಥೆಯ ಅಶ್ವತ್ ಎಸ್. ಎಲ್, ಸಹಕಾರ್ಯದರ್ಶಿಗಳಾಗಿ ಕ್ರಿಯೇಟಿವ್ ಸಂಸ್ಥೆಯ ಡಾ. ಗಣನಾಥ್ ಶೆಟ್ಟಿ, ಸುಜ್ಞಾನ ಸಂಸ್ಥೆಯ ಪ್ರತಾಪ್ ಚಂದ್ರ ಶೆಟ್ಟಿಸ, ಉಪಾಧ್ಯಕ್ಷರುಗಳನ್ನಾಗಿ ಸುಜ್ಞಾನ ಸಂಸ್ಥೆಯ ರಮೇಶ್ ಶೆಟ್ಟಿ, ಎಕ್ಸಲೆಂಟ್ ಕುಂದಾಪುರದ ದೀಪಾ ಎಂ. ಹೆಗಡೆ, ಅಮೃತ ಭಾರತಿ ಹೆಬ್ರಿಯ ಸತೀಶ್ ಪೈ ಹಾಗೂ ರಾಜೇಶ್ವರಿ ಸಂಸ್ಥೆ ಕಾರ್ಕಳದ ದೇವಿಪ್ರಸಾದ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಸಮಿತಿಯ ಗೌರವ ಉಪಾಧ್ಯಕ್ಷರಾದ ರಾಧಕೃಷ್ಣ ಶೆಣೈ, ಫಾದರ್ ವಿನ್ಸೆಂಟ್ ಕ್ರಾಸ್ತ,…
