ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಣ್ ಎಸ್.ಜೆ. ಅವರು ಮಂಡಿಸಿದ “ವಸಾಹತುಕಾಲೀನ ಬುಡಕಟ್ಟು ಅಧ್ಯಯನಗಳ ಸ್ವರೂಪ (ವಸಾಹತುಕಾಲೀನ ದಕ್ಷಿಣ ಭಾರತದ ಆಯ್ದ ಅಧ್ಯಯನಕಾರರನ್ನು ಪರಿಗಣಿಸಿ)” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. ಅವರು ಹಂಪಿಯ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಎ.ಎಸ್.ಪ್ರಭಾಕರ ಹಾಗೂ ಧಾರವಾಡ ಸ್ನಾತಕೋತ್ತರ ವಿಭಾಗದ ಆಂಗ್ಲ ಭಾಷಾ ವಿಭಾಗ ಪ್ರಾಚಾರ್ಯರು ಹಾಗೂ ವಿಭಾಗ ಮುಖ್ಯಸ್ಥರು ಆದ ಡಾ.ಗುರುನಾಧ ಬಡಿಗೇರರವರ ಮಾರ್ಗದರ್ಶನದಲ್ಲಿ ಅಧ್ಯಯನ ಕೈಗೊಂಡಿದ್ದರು. ಅವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಡಿಕೆ ತಯಾರಿ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತೀಚೆಗೆ ಯಡಾಡಿ-ಮತ್ಯಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 100 ಸ್ವಯಂಸೇವಕರು ಸಾಂಪ್ರದಾಯಿಕವಾಗಿ ಮಡಿಕೆ ತಯಾರಿಕೆ ಮಾಡುವ ಬಗ್ಗೆ ತಿಳಿದುಕೊಂಡರು. ಮಡಿಕೆ ತಯಾರಿಕೆಯ ಪ್ರಾತ್ಯಕ್ಷಿಕೆಯನ್ನು ಗಂಗೆ ಕುಲಾಲ್ತಿ ಯಡಾಡಿ ಅವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ, ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹರೀಶ್ ಕಾಂಚನ್, ಸಿಸ್ಟಮ್ ನಿರ್ವಾಹಕ ರಕ್ಷಿತ್ ಕಾಂಚನ್, ಕುಶ ಪೂಜಾರಿ, ಶಿಬಿರಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಎಂ.ಜಿ.ಎಂ ಸಂಧ್ಯಾ ಕಾಲೇಜು ಮತ್ತು ಐಸಿಎಐ ಉಡುಪಿ ಶಾಖೆ (SIRC) ಅವರ ಸಂಯುಕ್ತ ಆಶ್ರಯದಲ್ಲಿ “ಕೇಂದ್ರ ಬಜೆಟ್ ವಿಶ್ಲೇಷಣೆ” ಕುರಿತು ವಿದ್ಯಾರ್ಥಿ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಿಎ ವೆಂಕಟರಮಣ ಕಾಮತ್ ಅವರು ಭಾಗವಹಿಸಿ ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳು, ಆರ್ಥಿಕ ಪರಿಣಾಮಗಳು ಹಾಗೂ ವಿದ್ಯಾರ್ಥಿಗಳಿಗೆ ಅದರ ಮಹತ್ವದ ಕುರಿತು ಸಮಗ್ರವಾಗಿ ವಿವರಿಸಿದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಅವರು ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳಲ್ಲಿ ಆರ್ಥಿಕ ಜ್ಞಾನವನ್ನು ವಿಸ್ತರಿಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು. ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ ಶೆಟ್ಟಿ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎಸ್‌ಐಸಿಎಎಸ್‌ಎ ಖಜಾಂಚಿ ಅಶ್ವಥ್ ಶೆಟ್ಟಿ ಅತಿಥಿ ಪರಿಚಯ ನೀಡಿದರು. ಐಸಿಎಐ ಉಡುಪಿ ಶಾಖೆಯ ಎಸ್‌ಐಸಿಎಎಸ್‌ಎ ಅಧ್ಯಕ್ಷರಾದ ಸಿಎ ಮಾಧುರಿ ಪ್ರಭು ಅವರು ಅತಿಥಿಗಳನ್ನು ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಮಂಗಳವಾರ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಊರ ಪರ ಊರಿನ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಹಿತಿ, ವಾಗ್ಮಿ, ವಿಮರ್ಶಕ, ಅಂಕಣಗಾರರಾಗಿ ಸಾಹಿತ್ಯ ಲೋಕಕ್ಕೆ ಬಹು ದೊಡ್ಡ ಕೊಡುಗೆ ನೀಡಿದವರು ಕೋಣಿ ಶಿವಾನಂದ ಕಾರಂತರು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು ಅವರು ಕುಂದಾಪುರದ ಶ್ರೀ ಕುಂದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕೋಣಿ ಶಿವಾನಂದ ಕಾರಂತರಿಗೆ ಸಾರ್ವಜನಿಕ ನುಡಿ ನಮನ ಕಾರ್ಯಕ್ರಮದಲ್ಲಿ ಕಾರಂತರ ಸಾಧನೆ ಬಣ್ಣಿಸಿದರು. ಅಧ್ಯಯನಶೀಲರಾಗಿ ತಮ್ಮ ಪಾಂಡಿತ್ಯದಿಂದ ಯುವ ಬರಹಗಾರರಿಗೆ ಪ್ರೇರಣೆ ತುಂಬುತ್ತಿದ್ದ ಕಾರಂತರು ಹಲವಾರು ಲೇಖಕರ ಕೃತಿಗಳ ವಿಮರ್ಶೆ ಮಾಡಿ ತಿದ್ದಿ ಪ್ರೋತ್ಸಾಹಿಸುವ ಮೂಲಕ ಸ್ಫೂರ್ತಿ ತುಂಬುತ್ತಿದ್ದರು. ಅವರ ಪ್ರಕಟಿತ ಕೃತಿಗಳು ಅಮೂಲ್ಯವಾಗಿದ್ದವು. ಗಂಗೊಳ್ಳಿಯಲ್ಲಿ ನಡೆದ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ “ಗಂಗಾವಳಿ” ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಕೋ. ಶಿವಾನಂದ ಕಾರಂತರ ಕುರಿತು ಪುಸ್ತಕ ಪ್ರಕಟಣೆ ಮಾಡಿದ್ದೆವು. ಅವರ ಅಗಲಿಕೆ ಕುಟುಂಬಕ್ಕೆ ಮಾತ್ರವಲ್ಲ ಸಮಾಜಕ್ಕೂ ದೊಡ್ಡ ನಷ್ಟ. ಅವರ ಅಮೂಲ್ಯ ಮಾರ್ಗದರ್ಶನ ಸ್ಮರಿಸೋಣ ಎಂದರು. ಕಮಲಾಕರ ಚಿಕ್ಕಮಗಳೂರು ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಹಳ್ಳಿಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳುಗೋಡು ಎಂಬಲ್ಲಿ ಜರುಗಿತು. ಕಮಲಶಿಲೆ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಎಸ್. ಸಚ್ಚಿದಾನಂದ ಛಾತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಪಡೆದ ಅನುಭವವನ್ನು ತಮ್ಮ ವ್ಯಾಸಂಗದ ನಂತರವು ಸೇವೆ, ಅನುಕಂಪದ ಸಾರ್ಥಕ ಜೀವಿಯಾಗಬೇಕು. ಆ ಮೂಲಕ ಹಳ್ಳಿಗಳ ಉದ್ಧಾರದ ನೆಲೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಎಸ್. ಅನುಪಮ ಶೆಟ್ಟಿ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಬಿರದಲ್ಲಿ ತೊಡಗಿಕೊಳ್ಳುವುದರಿಂದ ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಜುನಾಥ ಶೆಟ್ಟಿ, ನಾಗೇಶ್ ನಾಯ್ಕ್ ಶ್ರೀನಿವಾಸ ಆಚಾರಿ, ಕೃಷ್ಣ ಛಾತ್ರಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಡ್ಲೂರಿನಲ್ಲಿ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ವಿಡಿಯೋ ವೈರಲ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಕಂಡ್ಲೂರು ಪೇಟೆಯಲ್ಲಿರುವ ಸೆಲೂನ್‌ನಲ್ಲಿ ಫೆ.22ರಂದು ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಹೇಳಿದ ವಿಷಯವನ್ನು ವಿಡಿಯೋ ಚಿತ್ರೀಕರಣ ಮಾಡಿ, ಅದನ್ನು ಸಾರ್ವಜನಿಕವಾಗಿ ಪ್ರಚೋದನೆಗೊಳಿಸಿ ಗಲಾಟೆ ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಕುಂದಾಪುರ ಗ್ರಾಮಾಂತರ ಪೊಲೀಸರು, ಸೆಲೂನಿನ ಮಾಲಕ ಕಂಡ್ಲೂರು ಜನತಾ ಕಾಲೋನಿ ನಿವಾಸಿ ಶಶಾಂಕ ಭಂಡಾರಿ (30) ಹಾಗೂ ಕಾವ್ರಾಡಿ ಗ್ರಾಮದ ಮರಾಸಿ ಉದ್ದಿನಮಕ್ಕಿಯ ಪ್ರಮೋದ ಡಿಸೋಜ (25) ಎಂಬುವರನ್ನು ಬಂಧಿಸಿ, ಕುಂದಾಪುರ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸೆಲೂನ್ ಎದುರಗಡೆ ಗುಂಪುಗೂಡಿ, ಬೆದರಿಕೆ ಹಾಕಿರುವ ಬಗ್ಗೆ ಸೆಲೂನ್ ಮಾಲಕ ಶಶಾಂಕ ಭಂಡಾರಿ ನೀಡಿರುವ ಪ್ರತಿ ದೂರಿನಂತೆಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜೀವನದಲ್ಲಿ ಶಿಸ್ತು ಎಂದರೆ ಕೇವಲ ನಿಯಮಗಳನ್ನು ಪಾಲಿಸುವುದು ಮಾತ್ರವಲ್ಲ; ಅದು ವ್ಯಕ್ತಿಯ ಚಿಂತನೆ, ವರ್ತನೆ ಮತ್ತು ಕಾರ್ಯಪದ್ಧತಿಯಲ್ಲಿರುವ ಸುವ್ಯವಸ್ಥೆ ಎಂದು ಚೆನ್ನೈ ಮೂಲದ 11 ವರ್ಷದ ಉದ್ಯಮಿ ಹಾಗೂ ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್ ಹೇಳಿದರು. ಅವರು ಆಳ್ವಾಸ್‌ನ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ವತಿಯಿಂದ ನಡೆದ “ತರಗತಿಯಿಂದ ಸಮ್ಮೇಳನದ ವರೆಗೆ ನನ್ನ ಉದ್ಯಮಶೀಲತಾ ಪ್ರಯಾಣ” ಪ್ರೇರಣಾದಯಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ತನ್ನ ತಂದೆಯ ಉದ್ಯಮಕ್ಕೆ ಸಂಬಂದಿಸಿದ ಸಭೆಗಳಲ್ಲಿ ಭಾಗಿಯಾದ್ದರಿಂದ ತನ್ನದೇ ಆದ ಉದ್ಯಮವನ್ನು ಪ್ರಾರಂಭಿಸಲು ಸ್ಫೂರ್ತಿಯಾಯಿತು ಎಂದರು. ಝೋಝೋ ಕನೆಕ್ಟ್ ವೃತ್ತಿಪರ ನೆಟ್‌ವರ್ಕಿಂಗ್ ಸೇವೆಗಳನ್ನು ಒದಗಿಸುವ ಸಂಸ್ಥೆಯಾಗಿದೆ, ಸಾಂಪ್ರದಾಯಿಕ ಬ್ಯುಸಿನೆಸ್ ಕಾರ್ಡ್ಗಳ ಬದಲಾಗಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲ್ ಕಾರ್ಡ್ ಆಗಿ ಪರಿವರ್ತಿಸುವ ಮೂಲಕ ಜೋಜೋ ಬ್ಯುಸಿನೆಸ್ ಕಾರ್ಡ್ ಕಾರ್ಯನಿರ್ವಹಿಸುತ್ತದೆ ಎಂದರು. ನಾನು ವ್ಯವಹಾರಿಕ ಸಮ್ಮೇಳನಗಳಲ್ಲಿ ಭಾಗಿಯಾಗವುದರ ಮೂಲಕ ಜಾಗತಿಕ ಹೂಡಿಕೆದಾರರು, ಉದ್ಯಮಿಗಳನ್ನು ವಿವಿಧ ಕಂಪನಿಗಳ ಸ್ಥಾಪಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಉಪೇಂದ್ರ ತಮ್ಮ ಕುಟುಂಬದವರೊಂದಿಗೆ ಕುಲದೇವರಾದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳಕ್ಕೆ ಮಂಗಳವಾರ ಭೇಟಿ ನೀಡಿ ಸೇವೆ ಸಲ್ಲಿಸಿದರು. ದೇಗುಲದ ವತಿಯಿಂದ ಪ್ರಸಾದ ವಿತರಿಸಿ ಶಾಲು ಹೋದಿಸಿ ಗೌರವಿಸಲಾಯಿತು. ಆಡಳಿತ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಸದಸ್ಯರಾದ ಶ್ರೀಧರ ರಾವ್ ಕೇರಳ ಹಾಗೂ ದೇಗುಲದ ಮ್ಯಾನೇಜರ್ ಗಣೇಶ್ ಭಟ್ಟ ಮತ್ತಿತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡುವುದು ಸೂಕ್ತ. ಯಾವುದೇ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ನೆರವು ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಉತ್ತಮ ಅರೋಗ್ಯ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅಗತ್ಯವಿರುವವರಿಗೆ ಅವಶ್ಯಕತೆಗನುಗುಣವಾಗಿ ತಲುಪಿಸುವ ಕೆಲಸವಾಗಬೇಕು ಎಂದರು. ಜಿಲ್ಲೆಯಲ್ಲಿ ಪ್ರತಿಯೊಬ್ಬ ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್‌ಗಳನ್ನು ನೀಡಬೇಕು. ಅವರುಗಳಿಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಕಾಲಕಾಲಕ್ಕೆ ನಿರಂತರ ವೈದ್ಯಕೀಯ ತಪಾಸಣೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ನಿಮ್ಮ…
