Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊಂಕಣಿ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ಕರಾವಳಿ ಶಾಸಕರ ನಿಯೋಗ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಸಚಿವರನ್ನು ಭೇಟಿಯಾಗಿ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವುದು ಇದು ಅಭಿವೃದ್ಧಿ ದೃಷ್ಟಿಯಿಂದ ಅವಶ್ಯಕವೆಂದು ಸಂಸದರು ಮತ್ತು ಶಾಸಕರು ಸಚಿವಗೆ ಮನವರಿಕೆ ಮಾಡಿದ್ದು, ಪ್ರಸ್ತಾಪವನ್ನು ಸರಕಾರದ ಮುಂದಿರಿಸುವುದಾಗಿ ತಿಳಿಸಿದ್ದಾರೆ. ಸಂಸದರೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೂಳೆ, ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡಿದೆ. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು ಉತ್ತಮ. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ…

Read More

ಕುಂದಾಪ್ರ ಟಡಾಟ್‌ ಕಾಂ ಸುದ್ದಿ.ಕುಂದಾಪುರ: ಸರ್ಜನ್ ಆಸ್ಪತ್ರೆ ಕೋಟೇಶ್ವರದಲ್ಲಿ ವಿಶ್ವ ಮೂತ್ರಪಿಂಡದ ದಿನಾಚರಣೆಯನ್ನು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನವರು ನಡೆಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಡಾ. ವಿಶ್ವೇಶ್ವರ ರಾವ್ ಸರ್ಜನ್, ಡಾ.ವಿಲಾಸ್ ರಾವ್ ಸರ್ಜನ್, ಮಾಲತಿ ಮತ್ತು ಲಲಿತಾ ನರ್ಸಿಂಗ್ ಸೂಪರಿಂಟೆಂಡೆಂಟ್, ಸರ್ಜನ್ ಆಸ್ಪತ್ರೆ ಕೋಟೇಶ್ವರ ಹಾಗೂ ಹಿರಿಯ ವಯಸ್ಕರು, ಕೀರ್ತನ ಹಾಗೂ ರಕ್ಷಿತಾ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಉಪನ್ಯಾಸಕರು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 3 ನೇ ಸೆಮಿಸ್ಟರ್ ಬಿಎಸ್ ಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಮೂತ್ರಪಿಂಡದ ಕಾಯಿಲೆಗಳ ನಿರ್ವಹಣೆ ಹಾಗೂ ತಡೆಗಟ್ಟುವಿಕೆ,ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು ಡಾ. ವಿಶ್ವೇಶ್ವರ ರಾವ್ ಅವರು ಮೂತ್ರಪಿಂಡದ ಕಾಯಿಲೆಯ ಆರಂಭಿಕ ಪತ್ತೆ ಮತ್ತು ನಿರ್ವಹಣೆಯ ಬಗ್ಗೆ ತಿಳಿಸಿದರು . ಕಾರ್ಯಕ್ರಮವನ್ನು ಆಯೇಷಾ ರಫೀದ ನಿರೂಪಸಿ, ಅಂಕಿತ ಸ್ವಾಗತಿಸಿದರು,

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳಿಂದ ಮಂಗಳೂರು ವಿವಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಎಂಕಾಮ್ ವಿಭಾಗದ ಪರೀಕ್ಷೆಯಲ್ಲಿ ಪ್ರತೀಕ್ಷಾ ಪಿಎಸ್ ದ್ವಿತೀಯ ರ‍್ಯಾಂಕ್, ಕೀರ್ತನಾ ಬಿಸಿಎ ವಿಭಾಗದ ಪರೀಕ್ಷೆಯಲ್ಲಿ ಐದನೇ ರ‍್ಯಾಂಕ್ ಹಾಗೂ ಸಚಿನ್ ವಿಎನ್ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಮಂಗಳೂರು ಬಿಸಿಎ ವಿಭಾಗದ ಪರೀಕ್ಷೆಯಲ್ಲಿ ನಾಲ್ಕನೇ ರ‍್ಯಾಂಕ್ ಪಡೆದು ಸಂಸ್ಥೆಯ ಕೀರ್ತಿಯನ್ನು ಬೆಳಗಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಊರ್ಜಿತ ಗೊಳಿಸಿಕೊಂಡು ಪುಟ್ಟ ಪುಟ್ಟ ಹಣತೆಗಳಾಗಿ ಬೆಳಗಿ ಸಂಸ್ಥೆಯ ಕೀರ್ತಿ ಪತಾಕೆಯನ್ನು ಬೆಳಗಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಮಂಡಳಿ, ಪ್ರಾಂಶುಪಾಲರು, ಉಪ – ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರಕಾರಿ ನೌಕರರು ಪ್ರತಿದಿನ ಕೆಲಸದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ನೌಕರರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರು ದೈಹಿಕವಾಗಿ ಸದೃಢರಾಗುವುದರೊಂದಿಗೆ, ಒತ್ತಡರಹಿತವಾಗಿ ಲವಲವಿಕೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು. ನೌಕರ ಆರೋಗ್ಯವಾಗಿದ್ದಲ್ಲಿ ಅವರುಗಳ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಸೋಲು-ಗೆಲುವುಗಳ ಬಗ್ಗೆ ಗಮನಹರಿಸದೇ ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡು ಸಕ್ರೀಯವಾಗಿ ಭಾಗವಹಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಂಟರ ಸಂಘ ರಿ. ಹೈದರಾಬಾದ್ ವತಿಯಿಂದ ಸಂಘದ ಆಡಳಿತ ಕಚೇರಿಯಲ್ಲಿ ಯುವ ಸಂಘಟಕ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಹೈದರಾಬಾದ್ ಬಂಟರ ಸಂಘದ ಅಧ್ಯಕ್ಷರಾದ ಶಂಕರ ಶೆಟ್ಟಿ ಅವರು ಸನ್ಮಾನಿಸಿದರು. ಈ ಸಂದರ್ಭ ಹೈದರಾಬಾದ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ರತ್ನಾಕರ ರೈ, ಕೋಶಾಧಿಕಾರಿ ರವಿರಾಜ್ ಶೆಟ್ಟಿ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು ಜಯರಾಮ ಶೆಟ್ಟಿ, ಅಣ್ಣಪ್ಪ ಶೆಟ್ಟಿ ಮಲ್ಯಾಡಿ, ಉದಯ್ ಕುಮಾರ್ ಶೆಟ್ಟಿ ಹಕ್ಲಾಡಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾವು ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು. ಭೂತಕಾಲದಲ್ಲಿ ಏನು ಮಾಡಿದೆ ಎನ್ನುವುದಕ್ಕಿಂತ ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಏನು ಮಾಡುತ್ತಿರುವೆ ಮತ್ತು ಮಾಡ ಹೊರಟಿದ್ದೇವೆ ಎನ್ನುವುದು ಮುಖ್ಯ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ನಡೆದ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸಾಮರ್ಥ್ಯಗಳ ಜೊತೆ ನಾವೇ ಸ್ಪರ್ಧಿಸುತ್ತ ಸತತವಾಗಿ ನಮ್ಮ ಕೌಶಲ್ಯವನ್ನು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಈ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪರಿಶ್ರಮ ಮತ್ತು ಬದ್ಧತೆಯನ್ನು ಹಾಕಬೇಕು ಎಂದು ಅವರು ಅಭಿಪ್ರಾಯಪಟ್ಟರು. ಗುರುಕುಲ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ  ಸುನಿಲ್ ಪ್ಯಾಟ್ರಿಕ್ ಅಧ್ಯಕ್ಷತೆ ವಹಿಸಿದ್ದರು. ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಶುಭ ಹಾರೈಸಿದರು. ವಿವಿಧ ವಿಷಯಗಳ ಶಿಕ್ಷಕರು ಸಂಬಂಧಪಟ್ಟ ಪಠ್ಯಗಳನ್ನು ಪರಿಚಯಿಸಿದರು. ಶಿಕ್ಷಕಿ ಸುಮಲತಾ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ದೈನಂದಿನ ವಸ್ತುಗಳು ಸೇರಿದಂತೆ ಮತ್ತಿತರ ಸೇವೆಯನ್ನು ಪಡೆಯುವಾಗ ವಸ್ತುಗಳ ಗುಣಮಟ್ಟ ಪರೀಕ್ಷಿಸಿ, ಎಚ್ಚರಿಕೆಯಿಂದ ಖರೀದಿಸಬೇಕು. ಒಂದೊಮ್ಮೆ ಮೋಸವಾದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ ರಿ., ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಮಾರುಕಟ್ಟೆಗಳು ಜಾಹೀರಾತು ಹಾಗೂ ಇತರೆ ಮಾಧ್ಯಮಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯಲ್ಲಿ ಬೀದರ್‌ ಜಿಲ್ಲೆಯ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸಂಗೀತ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಅವರಿಗೆ ಪ್ರದಾನ ಮಾಡಲಾಯಿತು. ಡಾ. ಗಣೇಶ್‌ ಗಂಗೊಳ್ಳಿ ಅವರು ಕಳೆದ 32 ವರ್ಷದ ಜಾನಪದ ಸಂಗೀತ ಕ್ಷೇತ್ರದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಳ್ಳಿ ಶಿವಪ್ರಕಾಶ್, ಅಕಾಡಮಿಯ ಸದಸ್ಯರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ – ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಎನ್‌. ಗಣೇಶ್‌ ಗಂಗೊಳ್ಳಿ ಆಯ್ಕೆ – https://kundapraa.com/?p=83002

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮರವಂತೆಯ ಸವಿತಾ ಕೆ. ಅವರು “ದಿ ರೋಲ್ ಆಫ್ ಜಾಬ್ ಸಾಟಿಸ್ಫ್ಯಾಕ್ಷನ್ ಇನ್ ಲಿಂಕಿಂಗ್ ಪ್ರೊಫೆಷನಲ್ ಐಡೆಂಟಿಟಿ ಅಂಡ್ ಬರ್ನ್ ಔಟ್: ಡೆವಲಪ್ಮೆಂಟ್ ಅಂಡ್ ವಾಲಿಡೇಷನ್ ಆಫ್ ಅ ಪ್ರೊಫೆಷನಲ್ ಐಡೆಂಟಿಟಿ ಸ್ಕೇಲ್ ಫಾರ್ ಹೈಯರ್ ಸೆಕೆಂಡರಿ ಟೀಚರ್ಸ್” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕಾಗಿ ಪೆರಿಯಾರ್ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿದೆ. ಅವರು ಪೆರಿಯಾರ್ ವಿಶ್ವವಿದ್ಯಾಲಯದ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಜೆ. ವೆಂಕಟಾಚಲಂ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಚಂದ್ರಕಾಂತ ಕೆ. ಹಾಗೂ ಸರಸ್ವತಿ ದಂಪತಿಯ ಪುತ್ರಿಯಾಗಿರುವ ಸವಿತಾ ಕೆ ಅವರು ಅಂಕೋಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕಿಶನ್ ಅವರ ಪತ್ನಿ ಆಗಿದ್ದಾರೆ. ಸವಿತಾ ಈ ಹಿಂದೆ ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.

Read More