Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪ್ಪುನೀರುನುಗ್ಗಿತೊಂದರೆಗೀಡಾಗಿರುವ ಪುರಸಭೆ ವ್ಯಾಪ್ತಿಯ ಕೋಡಿ ಪ್ರದೇಶಕ್ಕೆ ಶಾಸಕ ಕಿರಣ್‌ ಕುಮಾರ ಕೊಡ್ಗಿ ಅವರು ಇತ್ತೀಚಿಗೆ ಭೇಟಿ ನೀಡಿ ಪರಿಶೀಲಿಸಿದರು. ಕೋಡಿ ನಾಗಜಟ್ಟಿಗೇಶ್ವರ, ಕೋಡಿ ಚಕ್ರೇಶ್ವರಿ ದೇವಳ ವಠಾರ ಹಾಗೂ ಸೋನ್ಸ್ ಶಾಲೆ ವಠಾರದಲ್ಲಿನ ಹತ್ತಾರು ಎಕರೆ ಭತ್ತದ ಕೃಷಿಭೂಮಿಗೆ ಉಪ್ಪು ನೀರು ನುಗ್ಗಿ ಹಾನಿಗೀಡಾಗಿರುವುದು ಹಾಗೂ ಕುಡಿಯುವ ನೀರಿನ ಬಾವಿ ಕೆಟ್ಟು ಹೋಗಿರುವುದನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ಅವರು ಕೋಡಿ ಹಿನ್ನೀರು ವ್ಯಾಪ್ತಿಯ ನದಿದಂಡೆ ರಚನೆ ಕುರಿತಂತೆ 2024ರಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನದಿದಂಡೆಗೆ ತಡೆಗೋಡೆ ಹಾಗೂ ರಿಂಗ್‌ರೋಡ್ ಪ್ರಸ್ತಾವನೆ ಕುರಿತಂತೆ ಸಂಬಂಧಿತ ಇಲಾಖಾ ಸಚಿವರೊಂದಿಗೆ ಚರ್ಚಿಸಿದ್ದೇನೆ. ತುರ್ತಾಗಿ ಉಪ್ಪು ನೀರು ಒಳನುಗ್ಗದಂತೆ ತಡೆಯಲು ಸಂಬಂಧಿತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು. ಕೋಡಿಯ ಸಾಮಾಜಿಕ ಕಾರ್ಯ ಕರ್ತ ಅಶೋಕ ಪೂಜಾರಿ ಮನವಿ ಸಲ್ಲಿಸಿ ಕಳೆದ 2 ದಶಕಗಳಿಂದ ತೊಂದರೆ ಅನುಭವಿಸುತ್ತಿದ್ದು, ಶಾಶ್ವತ ಯೋಜನೆ ರೂಪಿಸಿ ಸಮಸ್ಯೆ ಬಗೆಹರಿಸಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ಮತ್ತು ಬಿ.ಸಿ.ಎ. ಪದವಿಯಲ್ಲಿ ಎರಡು ವಿದ್ಯಾರ್ಥಿಗಳು ರ‍್ಯಾಂಕ್‌ ಗಳಿಸಿದ್ದಾರೆ. ಮೊಳಹಳ್ಳಿಯ ನಾಗೇಶ್ವರ ಉಡುಪ ಹಾಗೂ ಸವಿತಾ ಎನ್. ಉಡುಪ ದಂಪತಿಗಳ ಪುತ್ರಿ ರಶ್ಮಿ ಉಡುಪ ಬಿ.ಕಾಂ. ಪದವಿಯಲ್ಲಿ 6ನೇ ರ‍್ಯಾಂಕ್‌, ಯಡಮೊಗೆಯ ಪುರುಷೋತ್ತಮ ಕನ್ನಂತ ಹಾಗೂ ನಾಗರತ್ನ ದಂಪತಿಗಳ ಪುತ್ರಿ ಕೀರ್ತನಾ ಬಿ.ಸಿ.ಎ. ಪದವಿಯಲ್ಲಿ 5ನೇ ರ‍್ಯಾಂಕ್‌ಗಳಿಸಿದ್ದಾರೆ. ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತುಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ,ಎಡ್ ಪ್ರಶಿಕ್ಷಣಾರ್ಥಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ತ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ “ಗೌರವಾನ್ವಿತ ಶಿಕ್ಷಕ ವೃತ್ತಿಯನ್ನು ತಾವು ಆಯ್ದುಕೊಂಡಿರುವುದಕ್ಕೆ ನೀವು ಅದೃಷ್ಟ್ಶಾಲಿಗಳು, ಏಕೆಂದರೆ ಶಿಕ್ಷಕರಾಗುವ ಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ಈ ಸುಂದರ ಕಡಲ ತೀರ ಪರಿಸರದಲ್ಲಿ ಉತ್ತಮ ಶಿಕ್ಷಣ ಪಡೆದು ನೀವು ಉತ್ತಮ ಶಿಕ್ಷಕರಾಗಿ. ನಿಮ್ಮಲ್ಲಿ ಶಿಸ್ತು ಮತ್ತು ಸಂಶೋಧನಾ ಪ್ರವೃತ್ತಿಗಳನ್ನು ಬೆಳೆಸಿಕೊಂಡು ನಮ್ಮಲ್ಲಿರುವ ಸಂಪನ್ಮೂಲ ಉಪನ್ಯಾಸಕರನ್ನು ಬಳಸಿಕೊಂಡು ದೇಶದ ಸತ್ಪ್ರಜೆಗಳಾಗಿ. ಅಂದರೆ ಶಿಲ್ಪಿಯು ಕಲ್ಲು ಬಂಡೆಯಿಂದ ಬೇಡವಾದ ಭಾಗವನ್ನು ತೆಗೆದು ಹಾಕಿ ಸುಂದರ ಮೂರ್ತಿಯನ್ನು ಕೆತ್ತುವ ಹಾಗೆ ನೀವು ನಿಮ್ಮ ಮನಸ್ಸಿನಿಂದ ಬೇಡವಾದ ಕೆಟ್ಟ ವಿಚಾರಗಳನ್ನು ತೆಗೆದುಹಾಕಿ ಸುಂದರವಾದ ಬದುಕನ್ನು ಕಟ್ಟಿಕೊಂಡು ಹೋಗಿ” ಎಂದು ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಹಾಜಿ ಕೆ. ಮೊಹಿದ್ದೀನ್ ಬ್ಯಾರಿ ಅನುದಾನಿತ ಕನ್ನಡ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ವಿನೂತನವಾದ ಕಾರ್ಯಕ್ರಮ. ಇವತ್ತಿನ ಆಹಾರ ಪದ್ದತಿ, ಜೀವನ ಶೈಲಿಗೆ ಇಂಥಹ ಕಾರ್ಯಕ್ರಮಗಳು ಅನಿವಾರ್ಯ. ಗ್ರಾಮದ ಒಂಟಿಯಾಗಿರುವ ವ್ಯಕ್ತಿಗಳ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಸದಾ ನಿಗಾ ಇಡುವ ಈ ಯೋಜನೆಗೆ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ ಸದಾ ನಿಮ್ಮ ಜೊತೆ ಇರಲಿದೆ. ವಂಡ್ಸೆಯಲ್ಲಿ ಎಸ್.ಎಲ್.ಆರ್.ಎಂ ಯೋಜನೆ ಮಾದರಿಯಾಗಿ ಮೂಡಿಬಂದಿದೆ. ಅದೇ ರೀತಿ ಕ್ಲಸ್ಟರ್ ಮಟ್ಟದ ಉಪಶಾಮಕ ಆರೈಕೆ ಯೋಜನೆಯೂ ಕೂಡಾ ಯಶಸ್ವಿಯಾಗಲಿ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿದರು. ರಾಜ್ಯದಲ್ಲಿ ಪ್ರಥಮವಾಗಿ ವಂಡ್ಸೆ ಕ್ಲಸ್ಟರ್‌ನಲ್ಲಿ ಅನುಷ್ಟಾನ ಆಗುತ್ತಿರುವ ಸಮಗ್ರ ಆರೋಗ್ಯ ಮತ್ತು ಉಪಶಾಮಕ ಆರೈಕೆ (ಪಾಲಿಯೇಟಿವ್ ಕೇರ್ ಯೂನಿಟ್) ದೀರ್ಘಕಾಲಿನ ಕಾಯಿಲೆ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೋಗ್ಯದ ಮೇಲೆ ನಿಗಾ ವಹಿಸುವ ಸಲುವಾಗಿ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾದ ವ್ಯಕ್ತಿಗಳನ್ನು ವೈದ್ಯಕೀಯ ಪರೀಕ್ಷಿಸುವ ಪ್ರಕ್ರಿಯೆಗೆ ವಂಡ್ಸೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಸೌಕೂರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಶಿಬಿರದಲ್ಲಿ ವಿದ್ಯಾರ್ಥಿಗಳು ಕೈಗೊಂಡ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕು ಸಾರ್ಥಕ. ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಮೌಲ್ಯಗಳನ್ನು ಕಲಿಯುವ ಮತ್ತು ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳುವ ವಿಷಯ ಪ್ರಮುಖವಾದವು. ವಿವಿಧ ಕ್ಷೇತ್ರಗಳಲ್ಲಿ ಲಭ್ಯ ಇರುವ ಅವಕಾಶಗಳನ್ನು ತಮ್ಮ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ಬಳಸಿಕೊಳ್ಳುವ ಕುರಿತು ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿ ಇರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಭಾಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಯಡ್ತರೆ ಪ್ರಧಾನ ಕಛೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆಯನ್ನು ಸಂಘದ ಅಧ್ಯಕ್ಷರಾದ ಟಿ. ನಾರಾಯಣ ಹೆಗ್ಡೆ ಅವರು ನೆರವೇರಿಸಿದರು. ಅರ್ಚಕರಾದ ಕೇಂಜ ಶ್ರೀಧರ ತಂತ್ರಿಗಳು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ನಿರ್ದೇಶಕರಾದ ಅರುಣ ಕುಮಾರ್‌, ಎಮ್.ಎಚ್. ಗುರುದತ್ತ, ಡಿ. ಸದಾಶಿವ ಶೇರುಗಾರ್, ಹೆರಿಯ ದೇವಾಡಿಗ, ವಸಂತ ಕುಮಾ‌ರ್ ಶೆಟ್ಟಿ, ಚಿಕ್ಕು ಪೂಜಾರಿ, ನಾಗರಾಜ ಶೆಟ್ಟಿ, ಸತೀಶ್ ಯಡ್ತರೆ, ಶಂಕರ ನಾಯ್ಕ, ಜ್ಯೋತಿ ಪೂಜಾರಿ, ಎಚ್.ವಿಜಯಾ ಶೇರುಗಾರ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಮಾ.15 ರಿಂದ ಮಾ. 24ರವರೆಗೆ ನಡೆಯಲಿರುವ ರಥೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮಾ.9 ರಂದು ದೇಗುಲದ ಕಚೇರಿಯಲ್ಲಿ ನಡೆಯಿತು. ಮಾ. 22ರಂದು ಬೆಳಗ್ಗೆ 11.15ಕ್ಕೆ ರಥಾರೋಹಣ ನಡೆಯಲಿದೆ. ಸಂಜೆ 5ಗಂಟೆಗೆ ಮಹಾರಥೋತ್ಸವ ನಡೆಯಲಿದೆ. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ವಿವಿಧ ಯೋಜನೆ ಬಗ್ಗೆ ಮಾಹಿತಿ ನೀಡಿದರಲ್ಲದೇ ಕೊಲ್ಲೂರು ಜಾತ್ರೆಗೆ ಇಲಾಖೆಗಳ ಸಹಕಾರ ಕೋರಿದರು. ದೇಗುಲದ ಸಮಿತಿ ಸದಸ್ಯರಾದ ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ ಮಹಾಲಿಂಗ ನಾಯ್ಕ, ಸುಧಾ ಕೆ., ಧನಾಕ್ಷೀ ದೇಗುಲದ ಸಂತೋಷ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 2024-25ನೇ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಂಸನಾ ಕಾರ್ಯಕ್ರಮವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಮಾರಂಭದಲ್ಲಿ ನಮ್ಮ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ ಅವರು ಮಕ್ಕಳಿಗೆ ಮುಂಬರುವ ಪರೀಕ್ಷೆಗೆ ಶುಭ ಹಾರೈಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ಸರ್ವರನ್ನು ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ಹಾಗೂ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಂಗೀತ ಶಿಕ್ಷಕಿ ರಮಣಿ ಪ್ರಾರ್ಥನೆಗೈದರು. ಪ್ರೌಢಶಾಲಾ ಸಹಶಿಕ್ಷಕಿ ಪ್ರತಿಭಾ ಪೈ ನಿರೂಪಿಸಿ, ಪ್ರೌಢಶಾಲಾ ಸಹಶಿಕ್ಷಕಿ ಆಶಾ ಬಾಯಿ ಧನ್ಯವಾದ ಸಮರ್ಪಣೆ ಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024 -25 ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಸತೀಶ್ ಎನ್. ಶೇರೆಗಾರ್ ಮಾತನಾಡಿ,  ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತುಬದ್ಧ ಜೀವನ ಶೈಲಿ, ಒಳ್ಳೆಯ ಆಹಾರ ಕ್ರಮ ಮತ್ತು ಸದಾ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯದಿಂದಿರಬಹುದು ಎಂದು ತಿಳಿಸಿದರು. ಭಂಡಾರ್ಕಾರ್ಸ್ ಕಾಲೇಜು ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ಮತ್ತು ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾ ಸಾಧಕರು ಕ್ರೀಡಾ ಜ್ಯೋತಿ ಸ್ತಂಭಕ್ಕೆ ಜ್ಯೋತಿ ಬೆಳಗುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ವನಿತಾ ವಂದಿಸಿದರು.

Read More