ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೈಲು ಡಿಕ್ಕಿ ಹೊಡೆದು ಯುವಕ ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರಿನಲ್ಲಿ ನಡೆದಿದೆ. ಮೃತನನ್ನು ಬಿಜೂರು ಗ್ರಾಮದ ದೀಟಿಮನೆ ನಿವಾಸಿ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ವೃತ್ತಿ ಮಾಡಿಕೊಂಡಿರುವ ಅವರು ಕಲ್ಲಂಗಡಿ ಬೆಳೆಗಾರರು. ಫೆ.4ರಂದು ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭ ರೈಲ್ವೆ ಹಳಿಯ ವಾಹನ ನಿಲ್ಲಿಸಿ ತಾನು ಬೆಳೆದ ಕಲ್ಲಂಗಡಿ ಹಣ್ಣು ಲೋಡ್ ಮಾಡಿ ರಸ್ತೆಯಲ್ಲಿ ಜತೆ ಕೆಲಸಗಾರ ರೊಂದಿಗೆ ಮಾತನಾಡಿಕೊಂಡು ಹೋಗೋಣ ಎಂದು ರೈಲ್ವೆ ಹಳೆ ದಾಟುವ ವೇಳೆ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ತಪ್ಪಿಸಿಕೊಳ್ಳಲು ಅವರು ಯತ್ನಿಸಿದರಾದರೂ ದುರ್ದೈವ ಎಂಬಂತೆ ಮುಖ ಭಾಗಕ್ಕೆ ರೈಲು ಡಿಕ್ಕಿ ಹೊಡೆದು ಉರುಳಿದ್ದು, ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಸಹೋದರ ವಿಕ್ರಮ್ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ ವತಿಯಿಂದ ಉಡುಪಿಯ ಕೊಳಲಗಿರಿಯ ಸಮೀಪ ಇರುವ ಹೋಂ ಡಾಕ್ಟರ್ ಫೌಂಡೇಶನ್ನ ಆಡಳಿತಕ್ಕೂಳಪಟ್ಟ ಸ್ವರ್ಗ ಅಸಹಾಯಕರ ಅರಮನೆ ಅನಾಥಾಶ್ರಮಕ್ಕೆ 35000 ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ ವಾಟರ್ ಫಿಲ್ಟರ್ ಹಾಗೂ ಆಶ್ರಮಕ್ಕೆ ಬೇಕಾದ 10000 ಮೌಲ್ಯದ ದಿನಬಳಕೆಯ ವಸ್ತುಗಳನ್ನು ಸಂಘದ ವತಿಯಿಂದ ಸಂಘದ ಗೌರವಾಧ್ಯಕ್ಷರಾದ ವತ್ಸಲಾ ದಯಾನಂದ ಶೆಟ್ಟಿ ಹೋಮ್ ಡಾಕ್ಟರ್ ಫೌಂಡೇಶನ್ ನ ಆಡಳಿತ ನಿರ್ದೇಶಕ ಡಾ. ಶಶಿಕಿರಣ್ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ , ನಿಮಿತ ಶೆಟ್ಟಿ ಮತ್ತು ಸ್ವರ್ಗ ಆಶ್ರಮದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅನಿವಾರ್ಯ ವೆಚ್ಚಗಳಿಗೆ ಹಣ ವ್ಯಹಿಸಿ ಹಾಗೂ ಐಷರಾಮಿ ವೆಚ್ಚವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ನೆಮ್ಮದಿಯ ಜೀವನ ಸಾಧ್ಯ. ಹಣವನ್ನು ಸಂಪಾದಿಸುವುದು ಕಲೆ, ಆದರೆ ಅದನ್ನು ಸಮರ್ಪಕವಾಗಿ ಬಳಸುವುದು ಮಹಾನ್ ಕಲೆ ಎಂದು ಆರ್ಥಿಕ ಸಾಕ್ಷರತಾ ತಜ್ಞೆ ಸಪ್ನಾ ಶೆಣೈ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಘಟಕ – ಸಕ್ಷಮ ವೇದಿಕೆಯ ಅಡಿಯಲ್ಲಿ ಮೂಡುಬಿದಿರೆ ಇನ್ನರ್ ವ್ಹೀಲ್ ಕ್ಲಬ್ ಹಾಗೂ ಮೂಡುಬಿದಿರೆ ಬಂಟ್ಸ್ ಮಹಿಳಾ ಸಂಘದ ಸಹಯೋಗದಲ್ಲಿ ಕಾಲೇಜಿನ ಕುವೆಂಪು ಸಭಾಭವನದಲ್ಲಿ ಬುಧವಾರ ’ಆರ್ಥಿಕ ಅರಿವಿನ ಮೂಲಕ ಮಹಿಳೆಯರ ಬಲಪಡಿಸುವಿಕೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು ಹೆಚ್ಚಿನ ಸಮಯ ಹಣವನ್ನು ಸಂಪಾದಿಸಲು ಮತ್ತು ಖರ್ಚು ಮಾಡಲು ಕಳೆಯುತ್ತೇವೆ. ಬಹುತೇಕ ಜನರು “ಆದಾಯ – ಖರ್ಚು – ಉಳಿವು” ಎಂಬ ನೀತಿಯಂತೆ ಜೀವನ ಸಾಗಿಸುತ್ತಾರೆ. ಆದರೆ, ಇದು ಹೆಚ್ಚು ಆರ್ಥಿಕ ಒತ್ತಡವನ್ನು ತರಬಲ್ಲದು. ಬದಲಾಗಿ, “ಆದಾಯ – ಉಳಿವು – ಖರ್ಚು” ಎಂಬ ತತ್ವವನ್ನು ಅನುಸರಿಸಿದರೆ ಸುಖ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ರಾಮಕ್ಷತ್ರಿಯ ಮಹಾಸಂಘ ರಿ. ಕುಂದಾಪುರ ಮತ್ತು ರಾಮಕ್ಷತ್ರಿಯ ಸಂಘಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಐಎಎಸ್, ಐಪಿಎಸ್, ಐಎಫ್ಎಸ್, ಕೆಎಎಸ್ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಒಂದು ದಿನದ ಉಚಿತ ಮಾಹಿತಿ ಕಾರ್ಯಗಾರವು ಫೆ.09 ಆದಿತ್ಯವಾರದಂದು ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 2-30ರ ವರೆಗೆ ಬ್ರಹ್ಮಾವರ ತಾಲೂಕಿನ ಉಪ್ಪೂರು ರಾಮಕ್ಷತ್ರಿಯ ಸಭಾಭವನದಲ್ಲಿ ನಡೆಯಲಿದೆ. ಬೆಂಗಳೂರಿನ ಐ.ಎ.ಎಸ್ ದರ್ಶನ ಸಂಸ್ಥೆಯ ಮುಖ್ಯಸ್ಥರಾದ ದರ್ಶನ್ ಗರ್ತಿಕೆರೆ ಈ ಕಾರ್ಯಗಾರ ನಡೆಸಿಕೊಡಲಿದ್ದಾರೆ. ಇವರೊಂದಿಗೆ ನಮ್ಮ ಸಮಾಜದ ಸಾಧಕರು ಉನ್ನತ ಹುದ್ದೆಯಲ್ಲಿರುವವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಸ್ಪರ್ಧಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷರಾದ ಎಚ್.ಆರ್. ಶಶಿಧರ ನಾಯ್ಕ, ಕಾರ್ಯದರ್ಶಿ ಶ್ರೀಧರ್ ಪಿ.ಎಸ್ ಅವರು ಕೋರಿದ್ದಾರೆ. ಕಾರ್ಯಗಾರದ ಉದ್ಘಾಟನೆಯನ್ನು ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷರಾದ ಎಚ್.ಆರ್. ಶಶಿಧರ ನಾಯ್ಕ ಅವರು ನೆರವೆರಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಡುಪಿ ರಾಮಕ್ಷತ್ರಿಯ ಸಂಘ ರಿ. ಅಧ್ಯಕ್ಷರಾದ ಕೆ.ಟಿ. ನಾಯ್ಕ ಅವರು ವಹಿಸಲಿದ್ದಾರೆ. ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಿ. ಮೈಸೂರಿನ ನಲಿಕಲಿ ಶಿಕ್ಷಕರ ಸಮಿತಿ ವತಿಯಿಂದ ಹಮ್ಮಿಕೊಂಡ ಚಿತ್ರ ಕೊಂದು ಕಥೆ ರಾಜ್ಯಮಟ್ಟದ ಶಾರ್ಟ್ ವಿಡಿಯೋ ಕಥಾ ಸ್ಪರ್ಧೆಯಲ್ಲಿ ಆರಾಧ್ಯ ಎ. ಎಂ. ಅವಳು ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈಕೆ ತಗ್ಗರ್ಸೆ ಗ್ರಾಮದ ಹಳ್ಳಿ ಹೊಸೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರ ವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನಸಭೆ ಸಚಿವಾಲಯದ ವೆಬ್ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025 ನೇ ಫೆಬ್ರವರಿ 12 ರಂದು ಸಂಜೆ 5.00 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಚಿಂತನೆಗಳಿಲ್ಲದ ಮನುಷ್ಯ, ಮನಸ್ಸಿಲ್ಲದ ದೇಹ ಯಾವಾಗಲೂ ನಿರ್ಜಿವ ಸ್ಥಿತಿಯಲ್ಲಿರುತ್ತದೆ. ಹಣದ ವ್ಯಾಮೋಹದಿಂದ ದೂರವಾದಾಗ ಸಾಹಿತ್ಯ, ನೃತ್ಯ, ಸಂಗೀತಗಳು ಮೌಲ್ಯವಾಗಿ ಕೊರೆಯುತ್ತಿರುತ್ತದೆ. ಶ್ರೀಮಂತಿಕೆಯ ಉದ್ದೇಶಕ್ಕಿಂತ ಧೀಮಂತ ಮನುಷ್ಯರಾಗುವ ಕನಸು ಕಾಣುವಂತಾಗಬೇಕು ಎಂದು ಮೂಡಬಿದ್ರೆ ಆಳ್ವಾಸ ಶಿಕ್ಷಣ ಪ್ರತಿಷ್ಠಾನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನರಾಂ ಸುಳ್ಯ ಹೇಳಿದರು. ಲಾವಣ್ಯ ಬಂದೂರು ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಬಂದೂರು ತಾಲೂಕು ಘಟಕ ಹಾಗೂ ಅಶೋಕ ಜ್ಯುವೆಲ್ಲರ್ಸ್ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಜೆಎನ್ಆರ್ ಕಲಾಮಂದಿರದ ಹೊರಾಂಗಣದಲ್ಲಿ ಮೂಡಬಿದ್ರೆ ಆಳ್ವಾಸ ಶಿಕ್ಷಣ ಪ್ರತಿಷ್ಠಾನ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳ ನಾಟಕ ಪ್ರದರ್ಶನದ ಪೂರ್ವದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ರಂಗಭೂಮಿ ಶ್ರಮಜೀವಿಗಳ ಲೋಕ. ವೇದನೆಯನ್ನು ಹಾಡಾಗಿಸಿ, ಸಮುದಾಯವನ್ನು ತಲುಪುವ ಪ್ರಕ್ರಿಯೆಯಲ್ಲಿ ಅದು ನಿರತವಾಗಿದೆ. ಸುಖ:-ದುಖ:ವನ್ನು ಚಂದವಾಗಿ ಅಭಿವ್ಯಕ್ತಿಗೊಳಿಸಲು ರಂಗಭೂಮಿಯಿಂದ ಮಾತ್ರ ಸಾಧ್ಯ ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಗುಜ್ಜಾಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಅಕ್ಷರ ದಾಸೋಹ ಯೋಜನೆಗೆ ಅನುಕೂಲ ಆಗುವಂತೆ ಮಕ್ಕಳಿಗೆ ಊಟ ಬಡಿಸಲು ಸ್ಟೀಲಿನ ಟ್ರಾಲಿ ಮತ್ತು ಪಾತ್ರೆಯನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ನ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ಅವರು ಸ್ಟೀಲಿನ ಟ್ರಾಲಿ ಮತ್ತು ಪಾತ್ರೆಯನ್ನು ಶಾಲೆಯ ಮುಖ್ಯ ಶಿಕ್ಷಕ ಗಂಗಾಧರ ಬಂಟ ಮತ್ತು ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಅವರಿಗೆ ಹಸ್ತಾಂತರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ್ ಚಿತ್ತಾಲ್, ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್. ಮೇಸ್ತ, ಗಂಗೊಳ್ಳಿ ರೋಟರಿ ಕ್ಲಬ್ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ನಡೆಸಿದ ‘ಶೂಟಿಂಗ್ ಸ್ಟಾರ್ಸ್ 2025’ ರಾಷ್ಟ್ರೀಯ ಮಟ್ಟದ ಚಲನಚಿತ್ರ ನಿರ್ಮಾಣ ಮತ್ತು ಸಾಕ್ಷ್ಯಚಿತ್ರ ಸ್ಪರ್ಧೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜು ಪದವಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್ ಆದರು. ಶೂಟಿಂಗ್ ಸ್ಟಾರ್ಸ್ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗೆ ಭಾಜನರಾದರು. ಫೋಟೊಗ್ರಪಿ: ಸ್ಪೂರ್ತಿ – (ಪ್ರಥಮ), ಟ್ರೈಲರ್ ಮೇಕಿಂಗ್: ಸ್ಪೂರ್ತಿ ಮತ್ತು ತಂಡ (ದ್ವಿತೀಯ), ಆರ್.ಜೆ ಹಂಟ್ – ದಿಶಾ (ದ್ವಿತೀಯ), ನ್ಯೂಸ್ ಆ್ಯಂಕರಿಂಗ್ – ರಿಶಾಂತ್ (ಪ್ರಥಮ), ಸ್ವಾತಿ (ದ್ವಿತೀಯ) ಸ್ಥಾನ ಪಡೆದರು.ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ, ಪ್ರಾಚರ್ಯ ಕುರಿಯನ್ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವವು ಫೆಬ್ರವರಿ 4 ರಿಂದ 6ರ ವರೆಗೆ ನಡೆಯಲಿದೆ. ಫೆ. 5 ರಂದು ಊರಿನ ಹಾಗೂ ಪರವೂರಿನ ಭಕ್ತಾದಿಗಳು ದೇವಿಗೆ ಹರಕೆ, ಪೂಜೆಗಳನ್ನು ನೆರೆವೇರಿಸಲು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್ಶಾಪ್ಗಳು ತೆರೆದಿದ್ದಲ್ಲಿ ಮ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಹಾಗೂ ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ಶಾಪ್ಗಳ ಮದ್ಯಮಾರಾಟವನ್ನು…
