Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಈ ನೆಲದ ಸಂಸ್ಕೃತಿಯ ಬೇರಾದ ಯಕ್ಷಗಾನದಂತಹ ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಂಡಾಗ ನಮ್ಮ ನೆಲದ ಭಾಷೆ ಸಂಸ್ಕೃತಿಯನ್ನು ಸಂರಕ್ಷಿಸಿ ಬೆಳೆಯುದಕ್ಕೆ ಸಾಧ್ಯ. ನಮ್ಮ ನೆಲದ ಸಂಸ್ಕೃತಿಯ ಪ್ರತೀಕವಾದ ಯಕ್ಷಗಾನ ಕಲೆಯಲ್ಲಿ ವಿದ್ಯಾರ್ಥಿಗಳು ಆಸಕ್ತಿ ಹೊಂದಿ ಈ ನೆಲದ ಭಾಷೆ ಸಂಸ್ಕೃತಿಯ ಏಳಿಗೆಗೆ ಕಟಿಬದ್ದರಾಗಬೇಕು. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಒಳಗೊಳ್ಳದ ಶಿಕ್ಷಣ ಪರಿಪೂರ್ಣತೆಯನ್ನು ಕಂಡುಕೊಳ್ಳಲು ಸಾಧ್ಯವಿಲ್ಲ. ಎಲ್ಲವೂ ಪೂರವಾಗಿ ಇದ್ದಾಗಲೇ ಮಕ್ಕಳ ಕಲಿಕೆ ಉತ್ತಮವಾಗುತ್ತದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಬೈಂದೂರು ಯಕ್ಷ ಗುರುಕುಲದ ಸಹಯೋಗದಲ್ಲಿ ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ರಿ. ಆಯೋಜಿಸಿರುವ ಕಿಶೋರ ಯಕ್ಷಗಾನ ಸಂಭ್ರಮ -2024ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಂತರ ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್ ಮಾತನಾಡಿ, ಇದುವರೆಗೂ ಜಿಲ್ಲೆಯಾದ್ಯಂತ ಒಟ್ಟು 91 ಪ್ರೌಢಶಾಲೆಗಳ 2,500 ವಿದ್ಯಾರ್ಥಿಗಳು ಯಕ್ಷಗಾನ ತರಬೇತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.    ಕುಂದಾಪುರ: ಇಲ್ಲಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಗಸ್ಟ್ 16 ರಂದು ನೇಮಕಾತಿ ಅಧಿಸೂಚನೆ ಹೊರಡಿಸಿ, ಸೆಪ್ಟಂಬರ್ 19 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 1ನೇ ಹಂತದಲ್ಲಿಯೇ “Application Successfully Uploaded’’ ಎಂಬ ಮೇಸೆಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 225 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 101 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ ಜನವರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಬೇಳೂರು ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ಆಟೋರಿಕ್ಷಾ ಅಡ್ಡ ಬಂದ ನಾಯಿ ತಪ್ಪಿಸುವ ಭರದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಮಗುಚಿದ ಪರಿಣಾಮ ಐವರು ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ. ಕೋಟ ಕಡೆಯಿಂದ ಬೇಳೂರು ಕಡೆಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು, ರಸ್ತೆಗೆ ಅಡ್ಡ ಬಂದ ನಾಯಿಯನ್ನು ಕಂಡು ಆಟೋ ರಿಕ್ಷಾವನ್ನು ರಸ್ತೆಯ ತೀರಾ ಬಲ ಬದಿಗೆ ಚಲಾಯಿಸಿ, ರಸ್ತೆಯ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದೆ ಪರಿಣಾಮ ಆಟೋ ರಿಕ್ಷಾವು ಪಲ್ಟಿಯಾಗಿ ಬಿದ್ದು ಅದರಲ್ಲಿರುವ ಪ್ರಯಾಣಿಕರಾದ ಶ್ರೀಲತಾ, ಅನುಷಾ, ಗೌತಮಿ, ಶ್ರೀಜನ್ಯ, ರಿಕ್ಷಾ ಚಾಲಕ ಸದಾಶಿವ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ಕೊಡಲೇ ಕೋಟೇಶ್ವರದ ಎನ್‌ ಆರ್‌ ಆಚಾರ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಿಕ್ಷಾ ಚಾಲಕನನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ದಾಖಲಾಗಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಮರವಂತೆ ಗ್ರಾಮದ ನಿರೋಣಿ ಬುಕ್ಕಿಮನೆ ಎಂಬಲ್ಲಿ ಜಗನ್ನಾಥ ದೇವಾಡಿಗ (55) ಅವರು ಸೋಮವಾರದಂದು ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಮಧ್ಯಪಾನ ಚಟ ಹೊಂದಿದ್ದು ತನ್ನ ಹೆಂಡತಿ, ಮಕ್ಕಳು ತನ್ನ ಜೊತೆ ಇಲ್ಲದೇ ಇರುವ ವಿಚಾರದಲ್ಲಿ ಕೊರಗಿನಿಂದ ಜಿಗುಪ್ಪೆಗೊಂಡು ಕೃತ್ಯ ಎಸಗಿದ್ದಾರೆ ಎಂದು ಸಹೋದರಿ ಗಿರಿಜಾ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.   ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ಸಕಾಲ ಸಂಬAಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಪಡೆಯಲು  ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.  ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ 2024 ನೇ ಸಾಲಿನಲ್ಲಿ ವಿತರಿಸಿರುವ ಬಸ್ಸು ಪಾಸುಗಳ ಅವಧಿಯು 2024 ರ ಡಿಸೆಂಬರ್ 31 ಕ್ಕೆ ಮುಕ್ತಾಯಗೊಂಡಿದ್ದು, 2025 ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 01 ರಿಂದ ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ 2024 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು 2025 ರ ಫೆಬ್ರವರಿ 28 ರವರೆಗೆ ಮಾನ್ಯ ಮಾಡಲಾಗುವುದು ಎಂದು ಮಂಗಳೂರು ಕ.ರಾ.ರ.ಸಾ. ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಾರ್ಕಳ ಯಕ್ಷ ರಂಗಾಯಣವು ತಾನು ಸಿದ್ದಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 3 ಜನ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-1, ಬೆಳಕಿನ ವಿನ್ಯಾಸ-1, ರಂಗಸಜ್ಜಿಕೆ-ಪರಿಕರ-1) ಹಾಗೂ 12 ಮಂದಿ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ 18 ರಿಂದ 32 ವರ್ಷದೊಳಗಿನ ಕಲಾವಿದರು ಮತ್ತು 25 ರಿಂದ 40 ವರ್ಷದೊಳಗಿನ ತಂತ್ರಜ್ಞರಿAದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟಿçÃಯ ನಾಟಕ ಶಾಲೆಯ ಪದವಿ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಹಾಗೂ ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಹಾಗೂ ಆಯಾ ತಾಂತ್ರಿಕ ವಿಷಯಗಳಲ್ಲಿ ಪರಿಣಿತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ. ಆಸಕ್ತ ಕಲಾವಿದರು ಬಿಳಿ ಹಾಳೆಯ ಮೇಲೆ ಸ್ವವಿವರದೊಂದಿಗೆ ಜನವರಿ 15 ರ ಒಳಗಾಗಿ ವಿಶೇಷ ಕರ್ತವ್ಯಾಧಿಕಾರಿ, ಯಕ್ಷ ರಂಗಾಯಣ ಕಛೇರಿ, ಕೋಟಿ ಚೆನ್ನಯ ಥೀಂ ಪಾರ್ಕ್, ಕಸಬಾ ಗ್ರಾಮ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಸಾಹಿತ್ಯದಲ್ಲಿ ಕುವೆಂಪು ಅವರು ಒಬ್ಬ ಮೇರು ಕವಿಯಾಗಿದ್ದು, ಅವರ ಶ್ರೀ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿಯಂತಹ ಮುಖ್ಯ ಕಾದಂಬರಿಗಳನ್ನು ಓದಿ ಬದುಕಿನ ಆಗಾಧತೆ ಮತ್ತು ವಿಸ್ತರತೆಯನ್ನು ತಿಳಿದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪುರವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, ಸಾಂಕೇತಿಕವಾಗಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕುವೆಂಪುರವರು ಕರ್ನಾಟಕದಲ್ಲಿ ಮಾತ್ರವಲ್ಲದೇ ಭಾರತದ ಸಾಹಿತ್ಯದಲ್ಲೇ ಉತ್ತಮ ಹೆಸರನ್ನು ಪಡೆದವರು. ತಮ್ಮ ಸಾಹಿತ್ಯದ ಮೂಲಕ ಕನ್ನಡಿಗರಲ್ಲಿ ಕನ್ನಡಾಭಿಮಾನ ಮೂಡಿಸಿ, ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ನಿರ್ದೇಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಹಾಲಿ ಅಧ್ಯಕ್ಷ ಹರ್ಕೂರು ಮಂಜಯ್ಯ ಶೆಟ್ಟಿ ನೇತೃತ್ವದ ತಂಡ ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದೆ. ಆಡಳಿತ ಮಂಡಳಿಗೆ ಸಾಮಾನ್ಯ ಸ್ಥಾನದಿಂದ ರಘುರಾಮ ದೇವಾಡಿಗ ಆಲೂರು, ಸತೀಶ ಶೆಟ್ಟಿ ಅಲೂರು, ಸೂಲ್ಯ ಪೂಜಾರಿ ನಾರ್ಕಳಿ ಹರ್ಕೂರು, ಗೋಪಾಲ ಆಲಿಯಾಸ್ ಗೋವಿಂದ ಹಳ್ಳದನೀರು, ಹೊಯ್ಯಾಣ, ಸಂತೋಷ ಕುಮಾರ ಶೆಟ್ಟಿ ಆಲೂರು, ಚಂದ್ರಶೇಖರ ಶೆಟ್ಟಿ ಎಮ್, ಹಕ್ರಮನೆ, ಗೋಳಿಕೆರೆ ಅಲೂರು, ಅಮರನಾಥ ಶೆಟ್ಟಿ ನಾರ್ಕಳಿ ಹಳ್ಳಿಜಡ್ಡು ಹರ್ಕೂರು ಆಯ್ಕೆಯಾದರು. ಮಹಿಳಾ ಮೀಸಲು ಸ್ಥಾನದಿಂದ ಅಕ್ಕಯ್ಯ ಯಾನೆ ಆಶಾ ಸಸಿಹಿತ್ತು, ಆಲೂರು. ಲಲಿತಾ ಕುಲಾಲ, ಪೇಟೆ ಆಲೂರು, ಹಿಂದುಳಿದ ವರ್ಗ ಪ್ರವರ್ಗ-ಎ ಮೀಸಲು ಸ್ಥಾನದಿಂದ ರಾಜೇಶ ಎನ್.ಡಿ ಆಲೂರು, ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನದಿಂದ ಮಂಜಯ್ಯ ಶೆಟ್ಟಿ ಹೊಸಿಮನೆ ಹರ್ಕೂರು, ಪ.ಜಾತಿ ಮೀಸಲು ಸ್ಥಾನದಿಂದ ಸುರೇಶ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಾರಾಹಿ ಕಾಲುವೆಯಲ್ಲಿ ಈ ತನಕ ನೀರು ಹಾಯಿಸದಿರುವುದರಿಂದ ಹಿಂಗಾರು ಬಿತ್ತನೆ ಮಾಡಿರುವ ರೈತರು ಕಂಗಾಲಾಗಿದ್ದಾರೆ. ಈ ನೀರನ್ನೇ ನಂಬಿ ಸಾವಿರಾರು ಎಕ್ರೆ ಅಡಿಕೆ ತೋಟ ಮಾಡಿದ್ದು ತೋಟಗಳಿಗೆ ನೀರಿನ ಕೊರತೆಯಾಗಿದೆ. ಹಾಗಾಗಿ ವಾರಾಹಿ ಕಾಲುವೆಗೆ ತಕ್ಷಣ ನೀರು ಹಾಯಿಸುವಂತೆ ರಾಜ್ಯ ನೀರಾವರಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರಿಗೆ ಕುಂದಾಪುರದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಚ್‌. ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ ಅವರು ಮನವಿ ಮಾಡಿದ್ದಾರೆ. 2014 ನೇ ಸಾಲಿನಲ್ಲಿ ವಾರಾಹಿ ಯೋಜನೆ ಉದ್ಘಾಟನೆಗೊಂಡು ಕಾಲುವೆಗೆ ನೀರು ಹಾಯಿಸಲಾಗಿತ್ತು.ಪ್ರಾರಂಭದ 2 ವರ್ಷದಲ್ಲಿ ಖಾಸಗಿಯವರ ಹಿತಾಸಕ್ತಿಗೆ ಕಾಲುವೆಗೆ ನೀರು ಹಾಯಿಸಲು ಅನಗತ್ಯ ವಿಳಂಬ ಮಾಡುತ್ತಿದ್ದರು.ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನಾನೂಕೂಲವಾಗುತಿತ್ತು. 2016 ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಮನವಿ ಮೇರೆಗೆ ಅಂದಿನ ನೀರಾವರಿ ಸಚಿವರು ಈ ವಿಚಾರದ ಕುರಿತು ಅಧಿಕಾರಿಗಳ, ಜನಪ್ರತಿನಿಧಿಗಳ ಮತ್ತು ರೈತರ ಸಭೆ ಕರೆದು ಪ್ರತಿ ವರ್ಷ ಕಾಲುವೆಗೆ ನೀರು ಹಾಯಿಸಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ  ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಸ್ಟೇಟ್ ಹಾಸ್ಟೆಲ್ ಪೊರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತಿಪರ ಕೋರ್ಸು, ಮತ್ತು ಸ್ನಾತಕೋತ್ತರ ಕೋರ್ಸಿನ, ವಿದ್ಯಾರ್ಥಿಗಳಿಗೆ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ನೆಲ ಮಹಡಿ ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-230370 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಛೇರಿ…

Read More