Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ಗೀತೆ (ಗುಂಪು ವಿಭಾಗ) ಸ್ಪರ್ಧೆಗೆ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. 2025ರ ಬಹುನಿರೀಕ್ಷೆಯ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಕರಾವಳಿ ಸಿನಿಮಾ ಕೂಡ ಜಾಗ ಗಿಟ್ಟಿಸಿಕೊಂಡಿರುವುದು ವಿಶೇಷ. ಪೋಸ್ಟರ್ಸ್ ಮತ್ತು ಟೀಸರ್ ಮೂಲಕ ಈಗಾಗಲೇ ಕುತೂಹಲ ಹೆಚ್ಚಿಸಿರುವ ಕರಾವಳಿ ಹೊಸ ವರ್ಷದ ಪ್ರಯುಕ್ತ ಮತ್ತೊಂದು ಭರ್ಜರಿ ಟೀಸರ್ ಮೂಲಕ ಸಿನಿ ಅಭಿಮಾನಿಗಳ ಮುಂದೆ ಬಂದಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಗುರುದತ್ ಗಾಣಿಗ ನಿರ್ದೇಶನದ ಕರಾವಳಿಯ ವಿಭಿನ್ನವಾದ ಟೀಸರ್ ಆಕರ್ಷಕವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸಾಮಾನ್ಯವಾಗಿ ಟೀಸರ್ ನಾಯಕ, ನಾಯಕಿ ಅಥವಾ ಸಿನಿಮಾದ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕೃತವಾಗಿರುತ್ತದೆ. ಆದರೆ ಕರಾವಳಿಯಿಂದ ಬಂದಿರುವ ಹೊಸ ಟೀಸರ್ ಒಂದು ಪ್ರತಿಷ್ಠಿಯ ವಸ್ತುವಿನ ಮೇಲೆ ಇರುವುದು ವಿಶೇಷ. ಸದ್ಯ ರಿಲೀಸ್ ಆಗಿರುವ ಟೀಸರ್ ನಲ್ಲಿ ಪ್ರತಿಷ್ಠಿಯ ಕುರ್ಚಿ ಹೈಲೆಟ್. ಅದು ಬರಿ ಕುರ್ಚಿಯಲ್ಲ ಪ್ರತಿಷ್ಠಿಯ ಪಿಚಾಚಿ ಎನ್ನುವ ಸಂಭಾಷಣೆಯಿಂದ ಟೀಸರ್ ಪ್ರಾರಂಭವಾಗುತ್ತೆ. ಪ್ರತಿಷ್ಠೆಯ ಕುರ್ಚಿ ಮೇಲೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವೀಯತೆಗಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಬೆಳೆದು ಉಳಿದವರನ್ನು ಕೂಡ ಬೆಳೆಸುತ್ತಾ ಸಾಗುವಲ್ಲಿ ಜೀವನದ ನಿಜವಾದ ಸಾರ್ಥಕತೆ ಅಡಗಿದೆ ಎಂದು ಉದ್ಯಮಿ ಮೌಲಾನ ಇಬ್ರಾಹಿಂ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್​.ವಿ.ಎಸ್ ಅಸೋಸಿಯೇಷನ್ ವತಿಯಿಂದ ನಡೆದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಬದುಕಿನಲ್ಲಿ ಏರಿಳಿತಗಳು ಸಾಮಾನ್ಯ. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಧೃತಿ ಗೆಡದೆ ನಮ್ಮ ಗುರಿಯ ಕಡೆ ನಾವು ಮುಂದುವರಿಯಬೇಕು ಎಂದು ಅವರು ಅಭಿಪ್ರಾಯ ಪಟ್ಟರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮೌಲಾನ ಇಬ್ರಾಹಿಂ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ 94 ವಿದ್ಯಾರ್ಥಿಗಳಿಗೆ 6.50 ಲಕ್ಷ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಂಚಾಲಕ ಎನ್. ಸದಾಶಿವ ನಾಯಕ್ ಪ್ರಸ್ತಾವಿಕ ಮಾತುಗಳನ್ನಾಡಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಖಾಸಗಿ ಬಸ್ಸಿನ (ಸಿಸಿಟಿ) ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಕುಂದಾಪುರದ ನಿವಾಸಿ ಸುಧೀಂದ್ರ (40) ಡಿ.4 ರ ಬೆಳಗ್ಗೆ ಕೆಲಸಕ್ಕೆ ತೆರಳಿದವರು ನಾಪತ್ತೆಯಾಗಿದ್ದು, ಅದಾಗಿ 25 ದಿನ ಕಳೆದರೂ ಇನ್ನೂ ಇವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಡಿ.5 ರಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಮನೆಯಿಂದ ತೆರಳುವಾಗ ಕಪ್ಪು- ಬಿಳಿ ಬಣ್ಣದ ಬಟ್ಟೆ ಧರಿಸಿದ್ದು, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಬಲಗೈನಲ್ಲಿ ಆಂಜನೇಯ ದೇವರ ಟ್ಯಾಟೂ ಇದೆ. ತಾಯಿ ಮೀನಾಕ್ಷಿ (72) ಅವರು ನೀಡಿದ ದೂರಿನಂತೆ ಕುಂದಾಪುರ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ತಾಲೂಕಿನ ಬನ್ನಾಡಿ ಗ್ರಾಮದ ಉಪ್ಲಾಡಿ ತೆಂಕಬೆಟ್ಟು ಎಂಬಲ್ಲಿ ಸ್ಕೂಟರ್ ಪಲ್ಟಿ ಆಗಿ ಸಹಸವಾರ ಬೇಬಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ಸವಾರ ರಾಜು ಅವರಿಗೆ ತರುಚಿದ ಗಾಯವಾಗಿದೆ. ಈ ಬಗ್ಗೆ ಕೋಟ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಾಂಧಿ ಮೈದಾನದ ಎದುರು ಸರ್ವಿಸ್ ರಸ್ತೆಯ ಚರಂಡಿಯ ಮೇಲ್‍ ಹಾಸಿನ ಮೇಲೆ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಅವರು ಡಿ. 27ರಂದು ತೀವ್ರ ಅಸ್ವಸ್ಥಗೊಂಡಿದ್ದು ಸ್ಥಳೀಯರು ಚಿಕಿತ್ಸೆ ಬಗ್ಗೆ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಿನ ಪ್ರಸಿದ್ಧ ನಿಯತಕಾಲಿಕೆಗಳಲ್ಲಿ ಪ್ರಕಟಣೆ ಕಂಡಿರುವ ಲೇಖಕ, ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡರ ಸೈನ್ಯ ಹಿನ್ನೆಲೆಯ ಕಥಾಸಂಕಲನ ‘ಕಂಟೋನ್ಮೆಂಟ್ ಕಥೆಗಳು’ ಜ .5 ಭಾನುವಾರದಂದು ನಾಗೂರು ಕೃಷ್ಣಲಲಿತ ಕಲಾಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಸಮಾರಂಭದಲ್ಲಿ ಕ.ಸಾ.ಪ ಉಡುಪಿ ಜಿಲ್ಲೆಯ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅವರು ಕೃತಿ ಲೋಕಾರ್ಪಣೆ ಮಾಡಲಿರುವರು. ಲಾವಣ್ಯ ಬೈಂದೂರು ಅಧ್ಯಕ್ಷ ಬಿ. ನರಸಿಂಹ ನಾಯಕ್ ಅಧ್ಯಕ್ಷತೆ ವಹಿಸಲಿರುವರು ಹಾಗೂ ಸುರಭಿ ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಡಿ.29: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರ ಮಂಡಳಿ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಗದೀಶ್‌ ಪೂಜಾರಿ ನೇತೃತ್ವದ 13 ಮಂದಿಯ ತಂಡ ಗೆಲುವು ಸಾಧಿಸಿದೆ. ಸಾಮಾನ್ಯ ಮೀಸಲು ಕ್ಷೇತ್ರದಿಂದ ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಸತೀಶ್‌ ಕುಮಾರ್‌ ಶೆಟಿ, ಶ್ರೀನಿವಾಸ ಪೂಜಾರಿ, ಗಣೇಶ್‌ ಪೂಜಾರಿ, ಪ್ರಭಾಕರ ಎಂ. ಖಾರ್ವಿ, ಹರಿಶ್ಚಂದ್ರ ಆಚಾರ್ಯ ಆಯ್ಕೆಗೊಂಡರು. ಮಹಿಳಾ ಮೀಸಲು ಕ್ಷೇತ್ರದಿಂದ ಲಕ್ಷ್ಮೀ, ಶಕುಂತಲಾ ಆಯ್ಕೆಗೊಂಡರು. ಪ್ರವರ್ಗ ಎ ಮೀಸಲು ಕ್ಷೇತ್ರದಿಂದ ಗಣೇಶ್‌ ಪೂಜಾರಿ, ಪ್ರವರ್ಗ ಬಿ. ಮೀಸಲು ಕ್ಷೇತ್ರದಿಂದ ವೀರೇಂದ್ರ ಹೆಗ್ಡೆ ಆಯ್ಕೆಗೊಂಡರು. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ರಾಮ ಕಂತಿಹೊಂಡ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಸುರೇಶ್‌ ನಾಯ್ಕ್‌ ಆಯ್ಕೆಗೊಂಡರು. ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಸುನೀಲ್ ಕುಮಾರ್ ಸಿ. ಎಮ್ ಚುನಾವಣಾ ಅಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್‌ ಅಳ್ವೆಗದ್ದೆ ಸಹಕರಿಸಿದರು. ಹೈಕೋರ್ಟ್‌ ಮಧ್ಯಂತರ ಆದೇಶದಲ್ಲಿ ಸಂಘದಲ್ಲಿ ಒಂದಿಷ್ಟು ಸದಸ್ಯರಿಗೆ ಮತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಇ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನವದೆಹಲಿ ನವೆಂಬರ್ 2024 ರಲ್ಲಿ ಏರ್ಪಡಿಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಕುಂದಾಪುರ-ಕೋಣಿ ಗ್ರಾಮದ ಅಕ್ಷಯ ಪೂಜಾರಿ ತೇರ್ಗಡೆ ಹೊಂದಿ ಸಿಎ ಪದವಿ ಪಡೆದಿದ್ದಾರೆ. ಕುಂದಾಪುರದ ಮೆ| ಟಿ. ಎನ್. ಪ್ರಭು ಎಂಡ್ ಕೋ. ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ತರಬೇತಿ ಪಡೆದು ಸಾಧನೆ ಮಾಡಿದ್ದಾರೆ. ಈತ ಕೋಣ್ಸಾಲ್ ಮನೆ, ಕೋಣಿ ಬಾಬು ಪೂಜಾರಿ ಮತ್ತು ಪದ್ದು ಪೂಜಾರಿ ಅವರ ಪುತ್ರ. ಲೆಕ್ಕ ಪರಿಶೋಧಕ ಟಿ. ಎನ್. ಪ್ರಭು ಹಾಗೂ ಸಂಸ್ಥೆಯ ಸಹೋದ್ಯೋಗಿಗಳು ಇವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐ.ಸಿ.ಎ.ಐ. ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶ್ರವಣ್ ಶೆಟ್ಟಿ, ಅರುಣ್ ಶೆಟ್ಟಿ, ಮತ್ತು ಅರುಣ್ ಕುಮಾರ್ ಉತ್ತೀರ್ಣರಾಗಿದ್ದಾರೆ. ಅವರ ಸಾಧನೆಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಸಂಸ್ಥೆಯ ಪರವಾಗಿ ಅಭಿನಂದಿಸಿದ್ದಾರೆ.

Read More