ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತಮಿಳು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಕನ್ನಡ ಚಿತ್ರರಂಗದ ಖ್ಯಾತ ನಟ ರಿಷಬ್ ಶೆಟ್ಟಿ ಇನ್ನಿತರರು ಭಾನುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ, ನಟ ಪ್ರಮೋದ್ ಶೆಟ್ಟಿ, ಜ್ಯೂ. ಎನ್ಟಿಆರ್ ತಾಯಿ ಶಾಲಿನಿ ಹಾಗೂ ಪತ್ನಿ, ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ರಿಷಬ್ ಶೆಟ್ಟಿ ಮೊದಲಾದವರು ಜೊತೆಗಿದ್ದರು. ದೇಗುಲದ ವತಿಯಿಂದ ನಟರನ್ನು ಸ್ವಾಗತಿಸಿಕೊಂಡು ಬಳಿಕ ಗೌರವಿಸಲಾಯಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಲ್ಲಿನ ಶ್ರೀ ಕೃಷ್ಣಮಠಕ್ಕೆ ತೆಲುಗು ಚಿತ್ರರಂಗದ ಪ್ರಸಿದ್ದ ನಟ ಜ್ಯೂನಿಯರ್ ಎನ್ಟಿಆರ್ ಅವರು ತಮ್ಮ ಕುಟುಂಬ, ಪ್ರಶಾಂತ್ ನೀಲ್ ಅವರೊಂದಿಗೆ ಶನಿವಾರ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ತಮ್ಮ ತಾಯಿ ಶಾಲಿನಿ ನಂದಾಮುರಿ ಅವರೊಂದಿಗೆ ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹಲವು ವರ್ಷಗಳಿಂದ ನನ್ನ ಅಮ್ಮನಿಗೆ ಮಗನನ್ನೊಮ್ಮೆ ಕೃಷ್ಣಮಠಕ್ಕೆ ಕರೆದುಕೊಂಡು ಬರಬೇಕು ಎಂಬ ಆಸೆ ಇದ್ದು ಅದು ಇವತ್ತು ಈಡೇರಿದೆ.ಶ್ರಾವಣ ಮಾಸದ ವಿಶೇಷ ದಿನ ಹರಕೆ ಈಡೇರಿದ್ದು ಸಂತೋಷವಾಗಿದೆ. ನನ್ನ ಅಮ್ಮನ ಪೂರ್ವಿಕರು ಮೂಲತಃ ಕುಂದಾಪುರದವರು. ಕೃಷ್ಣಮಠಕ್ಕೆ ಭೇಟಿಕೊಟ್ಟು ಮನಃಶಾಂತಿ ಸಿಕ್ಕಿದೆ ಎಂದರು. ರಿಷಬ್ ಶೆಟ್ಟಿ ತುಂಬಾ ಇಷ್ಟಪಟ್ಟ ದೇವರು ಕೊಟ್ಟ ಗೆಳೆಯ. ಅವರೊಂದಿಗೆ ಮಠಕ್ಕೆ ಬಂದಿರುವುದು ಖುಷಿಯಾಗಿದೆ. ನಿರ್ದೇಶಕ ಪ್ರಶಾಂತ್ ನೀಲ್ ಕೂಡ ನಮ್ಮ ಜೊತೆಗಿದ್ದಾರೆ. ರಿಷಬ್ ಅವರ ಮುಂದಿನ ಸಿನಿಮಾ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದ ಅವರು, ರಿಷಬ್ ಗೆ ನ್ಯಾಷನಲ್ ಅವಾರ್ಡ್ ಬಂದಿರೋದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಸರ್ಕಾರವು ದೇಶದ ಯುವಶಕ್ತಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಕೇಂದ್ರ ಬಜೆಟ್ನಲ್ಲಿ ಸುಮಾರು 2ಲಕ್ಷ ಕೋಟಿ ರೂ. ಅನುದಾನ ಮೀಸಲಿರಿಸಿದೆ, ಅದರಲ್ಲಿ ಕೌಶಲ್ಯಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಯುವಕ ಯುವತಿಯರು ಅದನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಉನ್ನತ ಉದ್ಯೋಗ ಪಡೆಯಲು ಮುಂದಾಗಬೇಕು ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಹೇಳಿದರು. ಇಲ್ಲಿನ ಜೆಎನ್ಆರ್ ಕಲಾಮಂದಿರದಲ್ಲಿ ಶನಿವಾರ ಸಮೃದ್ಧ ಬೈಂದೂರು ಆಶ್ರಯದಲ್ಲಿ ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಹಾಗೂ ಆಜಿನೋರಾಹ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಅಂತರಾಷ್ಟ್ರೀಯ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಶೇ.75ರಷ್ಟು ಜನರು ಕೃಷಿಯಾಧಾರಿತ ಉದ್ಯೋಗ ನಡೆಸುತಿದ್ದರೇ, ಕೇವಲ ಶೇ.03ರಷ್ಟು ಜನರಿಗೆ ಮಾತ್ರ ಸರ್ಕಾರ ಉದ್ಯೋಗ ನೀಡುತ್ತಿದೆ, ಇನ್ನುಳಿದ ಶೇ.22ರಷ್ಟು ಜನರು ಖಾಸಗಿ ವಲಯದಲ್ಲಿ ಉದ್ಯೋಗವನ್ನು ಅವಲಂಬಿಸಿದ್ದಾರೆ. ಇಂತಹ ಯುವಶಕ್ತಿಗೆ ಕೌಶಲ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಯುವಕರು ಸರ್ಕಾರಿ ಉದ್ಯೋಗಕ್ಕೆ ಕಾಯದೇ ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಖಾಸಗಿ ವಲಯದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳ ಜೀವನದಲ್ಲಿ ತಂಡ ನಿರ್ಮಾಣವು ಅತ್ಯಂತ ಮುಖ್ಯವಾದ ಭಾಗ. ಇದು ನಮಗೆ ಹೆಚ್ಚು ಗುರಿ ಸಾಧಿಸಲು ಪರಸ್ಪರ ಸಹಾಯ ಮಾಡಿಕೊಳ್ಳಲು ಮತ್ತು ಒಟ್ಟಾಗಿ ಯಶಸನ್ನು ಕಾಣಲು ನೆರವಾಗುತ್ತದೆ. ಇದರ ಜೊತೆಯಲ್ಲಿ ತಂಡ ನಿರ್ಮಾಣವು ಪರಸ್ಪರ ಸಹಾಯ ಮನೋಭಾವನೆ ರೂಪಿಸುವುದಲ್ಲದೆ ಇಂತಹ ಸಹಯೋಗವು ಗೆಲುವಿಗೆ ಮತ್ತು ಸಂತ್ರಪ್ತಿಗೆ ದಾರಿ ಮಾಡುತ್ತದೆ ಎಂದು ಉಡುಪಿಯ ಫ್ರೀಲೆನ್ಸ್ ತರಬೇತುದಾರರಾದ ಜಯಕಿಶನ್ ಭಟ್ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ “ಟೀಮ್ ಬಿಲ್ಡಿಂಗ್” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭದಲ್ಲಿ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪೂಜಾ ಕುಂದರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ : ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಲು ಇಚ್ಛಿಸುವ ಎಲ್ಲಾ ವರ್ಗದ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆ. ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆ. ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ 2 ಹೆ. ಪ್ರದೇಶದ ವರೆಗೆ ಶೇ. 90 ಹಾಗೂ 2 ಹೆ. ಮೇಲ್ಪಟ್ಟು 5 ಹೆ. ವರೆಗೆ ಶೇ. 45 ಸಹಾಯಧನ ನೀಡಲಾಗುವುದು. ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪೆನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಬೇಕು. ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವುದರಿಂದ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ರೈತರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಶಾನಬದ್ಧ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ –ಎಸ್.ಎಸ್.ಪಿ ತಂತ್ರಾಂಶದಲ್ಲಿ ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ:0820-2573596, ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಚರಿಸಲು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹಿರಿಯ ನಾಗರೀಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅಕ್ಟೋಬರ್ 1 ರಂದು ನಗರದ ಎಂ.ಜಿ.ಎಂ ನ ರವೀಂದ್ರ ಕಲಾ ಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಅಂದು ಬೆಳಗ್ಗೆ 9 ರಿಂದ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸಹ ಉಪನ್ಯಾಸಕರಿಂದ ಏರ್ಪಡಿಸಲಾಗುವುದು ಎಂದರು. ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಹಿರಿಯ ನಾಗರಿಕರಿಗೆ ಕ್ರೀಡಾ ಸ್ಪರ್ಧೆಗಳು ಸೆಪ್ಟೆಂಬರ್ 4 ರಂದು ನಗರದ ಅಜ್ಜರಕಾಡುವಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಇದರ ವತಿಯಿಂದ ಗ್ರಾಮೀಣ ಭಾಗದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಂದೂರು ಇಲ್ಲಿನ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟನ್ನು ವಿತರಿಸಲಾಯಿತು ಹಾಗೂ ಜೆಸಿ ಶಿರೂರು ವತಿಯಿಂದ ಮಕ್ಕಳಿಗೆ ಐಡಿ ಕಾರ್ಡನ್ನು ವಿತರಿಸಲಾಯಿತು. ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ವಿನಾಯಕ ಗಾಣಿಗ ಅವರು ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷರಾದ ಮೋಹನ ರೇವಣಕರ್ , ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಬಿಲ್ಲವ, ಜೆಸಿಐ ಅಧ್ಯಕ್ಷರಾದ ಸತೀಶ್ ಕೊಠಾರಿ, ಮಂಜುನಾಥ ಗಾಣಿಗ ಆರೋಗ್ಯ ಮೇಲ್ವಿಚಾರಕರು ಪ್ರಾಥಮಿಕ ಆರೋಗ್ಯ ಕೇಂದ್ರ ಬ್ರಹ್ಮಾ ವರ, ಉದಯಮಾಕೋಡಿ ಅಧ್ಯಕ್ಷರು ಮಾನಸ ಮಿತ್ರ ಮಂಡಳಿ ಉಪಸ್ಥಿತರಿದ್ದರು. ಸುರೇಶ್ ಮಾ ಕೋಡಿ ವೇದಿಕೆಗೆ ಆಹ್ವಾನಿಸಿ, ಹೆರಿಯ ಪೂಜಾರಿ ಕಾರ್ಯಕ್ರಮ ನಿರೂಪಿಸಿ , ಗೋಪಾಲ ಗಾಣಿಗ ಧನ್ಯವಾದ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ ಪ್ರೌಢ ಶಾಲಾ ಬಾಲಕ –ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ಶಾಲೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಮಣ್ಯ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ. ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಅವರು ಕಾರ್ಯಕ್ರಮ ನಿರೂಪಣೆ ಗೈದರು, ದೈಹಿಕ ಶಿಕ್ಷಣ ಶಿಕ್ಷಕ ನಾಗೇಂದ್ರ ಅವರು ವಂದನಾರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಫ್ರೆಂಡ್ಸ್ ಕೊಲ್ಲೂರು ನೇತೃತ್ವದಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್ ರೇಡ್ ಕ್ರಾರ್ಸ್ ಸೊಸೈಟಿ ಕುಂದಾಪುರ ಸಹಯೋಗದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜರುಗಿತು. ಕಾರ್ಯಕ್ರಮವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಉದ್ಘಾಟಿಸಿದರು. ಕೊಲ್ಲೂರು ಫ್ರೆಂಡ್ಸ್ ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಶೇರುಗಾರ್, ಉಪಾಧ್ಯಕ್ಷ ನಾಗೇಶ್ ದಳಿ, ಕೊಲ್ಲೂರಿನ ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಶೇಖರ್ ಅಡಿಗ, ಜೀಪು ಚಾಲಕ ಮಾಲಕರ ಸಂಘದ ಅಧ್ಯಕ್ಷ ಕಿಶನ್ ಶೆಟ್ಟಿ, ಟ್ಯಾಕ್ಸಿ ಚಾಲಕ ಮಾಲಕರ ಸಂಘದ ನಾಗೇಶ್ ಬಾಳಿಗ, ಆಟೋ ಚಾಲಕ ಮಾಲಕರ ಸಂಘದ ಸುರೇಶ, ಮಹಿಳಾ ಮಂಡಲದ ಅಧ್ಯಕ್ಷೆ ಲತಾ ಶೆಟ್ಟಿ, ಗ್ರೀಷ್ಮ ಗಿರಿಧರ್ ಭೀಡೆ, ನವಶಕ್ತಿ ಮಹಿಳಾ ವೇದಿಕೆಯ ಅಧ್ಯಕ್ಷೆ ಗ್ರೀಷ್ಮ ಗಿರಿಧರ್ ಭೀಡೆ, ಡಾ. ಶ್ರೀಕಾಂತ್, ಎಸ್. ಜಯಕರ ಶೆಟ್ಟಿ ರೆಡ್ ಕ್ರಾಸ್…
