Author: ನ್ಯೂಸ್ ಬ್ಯೂರೋ

ತ್ರಾಸಿ-ಮರವಂತೆ ಹಾಗೂ ಸೋಮೇಶ್ವರ ಬೀಚ್ ಸಂಬಂಧಿಸಿದಂತೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ವೀಕ್ಷಿಸಿ ಬಗ್ಗೆ ಅಧಿಕಾರಿಗಳೊಂದಿಗೆ ರೂಪುರೇಷೆಗಳ ಕುರಿತಾಗಿ ಚರ್ಚಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಆಯೋಜಿಸಲಾಗುತ್ತಿರುವ ಕುಂದಗನ್ನಡ ಉತ್ಸವದಲ್ಲಿ ಮೂವರು ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಗೋಪ್ರೇಮಿ ಸಮಾಜ ಸೇವಕ ಸಂಜೀವ ದೇವಾಡಿಗ, ಪಡುಕೋಣೆಯ ಖ್ಯಾತ ನಾಟಿ ವೈದ್ಯ ಮ್ಯಾಕ್ಸಿಮ್ ಒಲಿವೆರಾ ಹಾಗೂ ಜೀವರಕ್ಷಕ ಮುಳುಗುತಜ್ಞ ದಿನೇಶ್ ಖಾರ್ವಿ ಅವರನ್ನು ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪಡುಕೋಣೆ ನಿವಾಸಿ ಮಾಕ್ಷಿಮ್ ಒಲಿವೆರಾ ಅವರು ಕಳೆದ 25 ವರ್ಷಗಳಿಂದ ನಾಟಿ ಔಷಧವನ್ನು ಅತ್ಯಂತ ಕಡಿಮೆ ದರದಲ್ಲಿ ನೀಡುತ್ತಾ ಬರುತ್ತಿದ್ದಾರೆ. ತಮ್ಮ 20ನೇ ವಯಸ್ಸಿನಲ್ಲಿಯೇ ಪ್ರಕೃತಿಯಲ್ಲಿ ಸಿಗುವ ಔಷಧ ಗಿಡಗಳ ಮಾಹಿತಿಯನ್ನು ಪಡೆದುಕೊಂಡು ಕ್ರಮೇಣ ತಂದೆಯ ಕಾಲದ ನಂತರ ಸ್ವತಂತ್ರವಾಗಿ ನಾಟಿ ಔಷಧವನ್ನು ನೀಡುತ್ತಾ ಬಂದಿದ್ದಾರೆ. ಅವರಿಂದ ವಿವಿಧ ರೋಗಗಳಿಗೆ ಔಷಧ ಪಡೆದುಕೊಳ್ಳಲು ದೂರದ ಊರುಗಳಿಂದಲೂ ರೋಗಿಗಳು ಅರಸಿ ಬರುತ್ತಾರೆ. ಸಂಜೀವ ದೇವಾಡಿಗ ಅವರು ವೃತ್ತಿಯಲ್ಲಿ ಬೈಕ್ ಮೆಕ್ಯಾನಿಕ್. ಆದರೆ ರಸ್ತೆಯಲ್ಲಿ ಅಪಘಾತಕ್ಕೀಡಾಗುವ ಅನಾಥ ಗೋವುಗಳಿಗೆ ಸಂಜೀವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯಶಸ್ವಿಯಾಗಿ ಆಯೋಜಿಸಲಾಗುತ್ತಿರುವ ಕುಂದಗನ್ನಡ ಉತ್ಸವವನ್ನು ಈ ಭಾರಿಯೂ ಅದ್ದೂರಿಯಾಗಿ ನಡೆಸಲು ತಯಾರಿ ನಡೆಸಲಾಗಿದೆ. ಅಕ್ಟೋಬರ್ 29ರಂದು ಯುಎಇ ಅಜ್ಮನ್ ನಗರದಲ್ಲಿ ಬೆಳಿಗ್ಗೆ 11ರಿಂದ ಸಂಜೆ 6 ಗಂಟೆಯ ತನಕ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಗಲ್ಫ್ ದೇಶದಲ್ಲಿ ಮಂದರ್ತಿ ಮೇಳದಿಂದ ಮೊದಲ ಭಾರಿಗೆ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಮೇಳದ ಕಲಾವಿದರು ಹಾಗೂ ಅನಿವಾಸಿ ಭಾರತೀಯ ಕಲಾವಿದರಿಂದ ‘ಪಾಪಣ್ಣ ವಿಜಯ – ಗುಣಸುಂದರಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಂದು ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು ಈ ವೇಳೆ ವಿವಿಧ ಕ್ಷೇತ್ರಗಳ ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಆಯೋಜಿಸಲಾಗುತ್ತಿರುವ ಈ ಅದ್ದೂರಿ ಸಮಾರಂಭದಲ್ಲಿ ಸಂಸ್ಥೆಯ ಪೋಷಕರು, ಗೌರವಾಧ್ಯಕ್ಷರು ಸೇರಿದಂತೆ ವಿವಿಧ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಸದಸ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕಾರ್ಕಳ: ದೇಶಕ್ಕಾಗಿ ನಾವು, ಸೇವೆಗೆ ಸದಾ ಸಿದ್ಧ ಎಂಬ ಘೋಷವಾಕ್ಯದೊಂದಿಗೆ ಕಾರ್ಯಚರಿಸುವ ದೇಶದ ಬಹುದೊಡ್ಡ ಸ್ವಯಂ ಸೇವಕ ಸಂಘಟನೆಯಾದ “ರಾಷ್ಟ್ರೀಯ ಸೇವಾ ಯೋಜನೆ” ಯ ನೂತನ ಘಟಕದ ಉದ್ಘಾಟನೆ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನೆರವೇರಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಎನ್‌.ಎಸ್‌.ಎಸ್‌ ರಾಜ್ಯ ಸಂಯೋಜನಾಧಿಕಾರಿ ಡಾ. ಗುಬ್ಬಿಗೂಡು ರಮೇಶ್‌ ಸಿ ಜಿ ಅವರು ಯುವ ಪೀಳಿಗೆಯಲ್ಲಿ ಒಂದು ಉತ್ಕೃಷ್ಟವಾದ ಚೇತನ ಶಕ್ತಿಯಿದೆ. ಸಮಾಜಕ್ಕಾಗಿ ನಾವು ಏನನ್ನಾದರೂ ಮಾಡಬೇಕು. ಅದು ಶಾಶ್ವತವಾಗಿ ಉಳಿಯುವಂತದ್ದಾಗಿರಬೇಕು. ಅದಕ್ಕಾಗಿ ವಿದ್ಯಾರ್ಥಿಗಳು ಸೇವೆಯೆಂಬ ಮಹಾಯಜ್ಞದಲ್ಲಿ ತೊಡಗಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ಭಾಗಿಗಳಾಗಬೇಕೆಂದು ಎನ್‌.ಎಸ್‌.ಎಸ್‌ ಸ್ವಯಂ ಸೇವಕರಿಗೆ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಶ್ರೀ ರಾಜು ಅವರು ರಾಷ್ಟ್ರೀಯ ಸೇವಾ ಯೋಜನೆಯಿಂದ ಗ್ರಾಮೀಣ ಪ್ರದೇಶ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಾಯವಾಗುತ್ತದೆ. ಇದರಿಂದ ಉತ್ತಮ ಸಮಾಜದ ನಿರ್ಮಾಣವಾಗುತ್ತದೆ. ಅಂತಹ ಪುಣ್ಯಕಾರ್ಯದಲ್ಲಿ ನಾವೆಲ್ಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಬಿಜೂರು, ಸ.ಹಿ.ಪ್ರಾ ಶಾಲೆ ಕಾಲ್ತೊಡು ಹಾಗೂ ಸ.ಹಿ.ಪ್ರಾ ಶಾಲೆ ಜಡ್ಕಲ್’ನಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯವನ್ನೊಳಗೊಂಡ ಒಳಗೊಂಡ ಒಟ್ಟು 7.5 ಲಕ್ಷ ವೆಚ್ಚದ ‘ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ’ಕ್ಕೆ ಇತ್ತೀಚಿಗೆ ಚಾಲನೆ ನೀಡಲಾಯಿತು. ಶಾಸಕ ಗುರುರಾಜ್ ಗಂಟಿಹೊಳೆ ಅವರು ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ವೇಳೆ ಶಾಲೆಗಳ ಮುಖ್ಯೋಪಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸರಕಾರಿ ಶಾಲೆ ಮಕ್ಕಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹತ್ವಾಕಾಂಕ್ಷೆಯಿಂದ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯುವಂತಾಗಲಿ -…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮ ಪಂಚಾಯಿತಿಯ ಪಶ್ಚಿಮ ಘಟ್ಟಗಳ ತಪ್ಪಲಿನ ಕಾಡಿನ ಅಂಚಿನಲ್ಲಿ ಬಹುತೇಕ ಸಮಾಜದ ಕಟ್ಟ ಕಡೆಯ, ಜನವಸತಿಯ ಕೊನೆಯ ಪ್ರದೇಶದಲ್ಲಿ ನೆಲೆಸಿರುವ, ಮಲೆಕುಡಿಯ ಕುಟುಂಬಗಳನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶನಿವಾರ ಭೇಟಿ ಮಾಡಿದರು. ನಗರ ಪ್ರದೇಶದಿಂದ ಬಹುದೂರದ, ಅರಣ್ಯದ ಅತ್ಯಂತ ಒಳಭಾಗದ ಪ್ರದೇಶಗಳಾದ ಪೀತಾಬೈಲು, ತಿಂಗಳ ಮಕ್ಕಿ, ತೆಂಗಮಾರು ಗ್ರಾಮದಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 3 ರಿಂದ 4 ಕಿ.ಮೀ ಕಾಡು ಕಚ್ಛಾ ದಾರಿಯಲ್ಲಿ ಗುಡ್ಡಗಳನ್ನ ಹತ್ತಿ ಇಳಿದು ನದಿ, ಕೊಳ್ಳಗಳನ್ನು ದಾಟಿ ನಡೆದು ಕುಗ್ರಾಮಕ್ಕೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಆಧುನಿಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಮಲೆಕುಡಿಯ ಮೂಲ ಆದಿ ನಿವಾಸಿಗಳೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿ, ಅವರ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿ, ಬುಡಕಟ್ಟು ಜನಾಂಗದವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುವುದಾಗಿ ತಿಳಿಸಿದರು. ಪಶ್ಚಿಮ ಘಟ್ಟಗಳ ಅಂಚಿನ ಕಾಡಿನ ತೆಂಗಮಾರು ಗ್ರಾಮದಲ್ಲಿ ವಾಸವಾಗಿರುವ ನಾರಾಯಣ ಗೌಡ ಅವರನ್ನು ಸಂಪರ್ಕಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಶಮಿಕಾ ಎಂಟರ್ ಪ್ರೈಸಸ್ ಮೂಲಕ ರಾಧಿಕಾ ಮೂರು ಸಿನಿಮಾಗನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಅವರ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನಟನಾಗಿ ಅಲ್ಲ ನಿರ್ಮಾಪಕನಾಗಿ. ರವಿರಾಜ್ ಅವರಿಗೆ ಸಿನಿಮಾರಂಗ ಹೊಸದೇನಲ್ಲ. ತನ್ನ ಸಹೋದರಿ ರಾಧಿಕಾ ಅವರ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿರುವ ಅನುಭವ ರವಿರಾಜ್ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ರವಿರಾಜ್ ತಂಗಿ ರಾಧಿಕಾ ಜೊತೆ ಕೆಲಸ ಮಾಡಿದ್ದರು ಜೊತೆಗೆ ಸಿನಿಮಾ ವಿತರಣೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಆದರೀಗ ಸ್ವತಂತ್ರ ನಿರ್ಮಾಪಕರಾಗಿ ಚಂದನವನಕ್ಕೆ ಪದಾರ್ಪಣೆ ಮಾಡತ್ತಿದ್ದಾರೆ ರವಿರಾಜ್. ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದು ಈಗಾಗಲೇ ಮೊದಲ ಸಿನಿಮಾದ ಚಿತ್ರೀಕರಣ ಕೂಡ ಮುಗಿಸಿದ್ದಾರೆ. ರವಿರಾಜ್ ತಮ್ಮ ನಿರ್ಮಾಣ ಸಂಸ್ಥೆಗೆ ‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂದು ಹೆಸರಿಟ್ಟಿದ್ದಾರೆ. ಅಂದಹಾಗೆ ಇದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೂಡ್ಸ್ ರೈಲಿನ ಲಾರಿಯಲ್ಲಿ ಬಿಜೂರು ರೈಲ್ವೆ ನಿಲ್ದಾಣದ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ಬಿಜೂರು ನಿಲ್ದಾಣದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿದ್ದರಿಂದ ರೈಲು ನಿಲ್ಲಿಸಿ, ಅಗ್ನಿಶಾಮಕದಳದ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬೈನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಗೂಡ್ಸ್ ರೈಲು ಬಿಜೂರು ನಿಲ್ದಾಣ ಸಮೀಪ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ರೈಲು ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಲಾಯಿತು. ರೈಲಿನ ಮಧ್ಯಭಾಗದ ಲಾರಿಯಲ್ಲಿ ತುಂಬಿಸಲಾಗಿದ್ದ ಆಹಾರ ಸಾಮಾಗ್ರಿಗಳಿಗೆ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟರಲ್ಲಿ ಲಾರಿಯಲ್ಲಿದ್ದ ಭಾಗಶಃ ವಸ್ತುಗಳು ಸುಟ್ಟುಹೊಗಿದ್ದವು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.09: ನಗರದಲ್ಲಿ ಅ.01ರಂದು ರಾಘವೇಂದ್ರ ಶೇರುಗಾರ್ (42) ಯಾನೆ ಬನ್ಸ್ ರಾಘು ಕೊಲೆ ಪ್ರಕರಣದಲ್ಲಿ ಬಂಧಿತ ಇಬ್ಬರು ಆರೋಪಿಗಳಾದ ಶಫಿವುಲ್ಲ ಅಲಿಯಾಸ್ ಆಟೋ ಶಫಿ (40), ಮಹಮ್ಮದ್ ಇಮ್ರಾನ್ (43) ಎಂಬಿಬ್ಬರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯವರಾದ ಶಫಿವುಲ್ಲ ಹಾಗೂ ಮಹಮ್ಮದ್ ಇಮ್ರಾನ್ ಎಂಬಾತನ್ನು ಅ.5ರಂದು ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದು ಅ.6 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಸೋಮವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮೃತ ರಾಘವೇಂದ್ರ ಶೇರಿಗಾರ್ ಅಲಿಯಾಸ್ ಬನ್ಸ್ ರಾಘು ಅವರ ಕಾರಿಗೆ ಆರೋಪಿಗಳ ಕಾರು ತಾಕಿದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಆರೋಪಿ ಶಫಿವುಲ್ಲಾ ಚಾಕುವಿನಿಂದ ರಾಘವೇಂದ್ರ ಶೇರಿಗಾರ್ ಎಂಬುವವರಿಗೆ ಇರಿದಿದ್ದು ವಿಪರೀತ ರಕ್ತಸ್ರಾವವಾಗಿ ಮೃತಪಟ್ಟಿದ್ದರು. ಆರೋಪಿ ಶಾಫಿವುಲ್ಲಾಗೆ ಜುಗಾರಿ ಆಡುವ ಚಟವಿದ್ದು ಆತನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಕರಾವಳಿಯ 600 ಮಂದಿ ನೆಲೆಸಿರುವ ಬಗ್ಗೆ ಮಾಹಿತಿ ಇದ್ದು ಈ ಪೈಕಿ ಕುಂದಾಪುರ, ಬೈಂದೂರು ತಾಲೂಕುಗಳ 75 ಮಂದಿ ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಎಲ್ಲರೂ ಸುರಕ್ಷಿತರಾಗಿರುವ ಮಾಹಿತಿ ದೊರೆಯುತ್ತಿದೆ. ಇಸ್ರೇಲ್‌ನ ಥೆಲ್ ಅವೀವ್ ನಗರ ಹಾಗೂ ಸುಮಾರು 12 ಕೀಮೀ ದೂರದಲ್ಲಿರುವ ಅರ್ಜಲಿಯಾ ಹಾಗೂ ಹಿಪಾ ಭಾಗದಲ್ಲಿ ಹೆಚ್ಚಾಗಿ ಕುಂದಾಪುರ ಬೈಂದೂರು ತಾಲೂಕಿನವರು ವಾಸವಿದ್ದು, ಜೆರುಸಲೇಮ್ ಪ್ರದೇಶದಲ್ಲಿಯೂ ಕೆಲವರು ಇರುವ ಮಾಹಿತಿ ಇದೆ. ಕರಾವಳಿ ಜಿಲ್ಲೆಯವರು ಇರುವ ಕೆಲವು ಪ್ರದೇಶ ಕಡಿಮೆ ಯುದ್ಧಪೀಡಿತವಾಗಿದ್ದು ಬಂಕರ್, ಸೇಫ್ ಹೌಸ್’ಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಇಸ್ರೆಲಿನ ಅರ್ಜಲಿಯಾ ನಗರದಲ್ಲಿ ಹೌಸ್ ನರ್ಸ್ ಆಗಿರುವ ಉಪ್ಪುಂದ ಮೂಲಕ ಕ್ಲಾರೆನ್ಸ್ ಉಪ್ಪುಂದ ಅವರು ಇಸ್ರೆಲಿನ ಸದ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಸದ್ಯ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ. ಸೋಮವಾರ ಸೈರನ್ ಶಬ್ದ ಮಾಡಿದ್ದು ಬಿಟ್ಟರೆ ಸಾರ್ವಜನಿಕರಿಗೆ ಯಾವುದೇ ಸಂದೇಶ ರವಾನಿಸಿಲ್ಲ. ಹಾಗೇನಾದರೂ ಅಪಾಯದ ಸಂಧರ್ಭ…

Read More