Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟ ರಿ., ಇದರ ನೂತನ ಅಧ್ಯಕ್ಷರಾಗಿ ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕು ಸಭಾಂಗಣದಲ್ಲಿ ನಡೆದ ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟದ ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕುಂಭಾಶಿ ಗ್ರಾ.ಪಂ. ಅಧ್ಯಕ್ಷೆ ಶ್ವೇತಾ ಎಸ್.ಆರ್., ಉಪಾಧ್ಯಕ್ಷರಾಗಿ ಕಾಲ್ತೋಡು ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ, ಕೋಟೇಶ್ವರ ಗ್ರಾ.ಪಂ ಸದಸ್ಯೆ ರಾಗಿಣಿ ದೇವಾಡಿಗ, ತಲ್ಲೂರು ಗ್ರಾ.ಪಂ. ಸದಸ್ಯ ಉದಯ ಕುಮಾರ್ ತಲ್ಲೂರು, ಕಾರ್ಯದರ್ಶಿಗಳಾಗಿ ಹಂಗಳೂರು ಗ್ರಾ.ಪಂ.ಸದಸ್ಯ ರೋಶನ್, ಹಟ್ಟಿಯಂಗಡಿ ಗ್ರಾ.ಪಂ.ಅಧ್ಯಕ್ಷೆ ಅಮೃತ ಭಂಡಾರಿ, ಕಿರಿಮಂಜೇಶ್ವರ ಗ್ರಾ.ಪಂ.ಸದಸ್ಯ ಆನಂದ ಪೂಜಾರಿ, ಖಜಾಂಚಿಯಾಗಿ ಹೇರೂರು ಗ್ರಾ.ಪಂ. ಸದಸ್ಯ ಸೂಲಿಯಣ್ಣ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಂಚಾಲಕರು: ವಂಡ್ಸೆ ವಲಯ-ಅಂಪಾರು ಗ್ರಾ.ಪಂ. ಸದಸ್ಯ ಕಿರಣ್ ಹೆಗ್ಡೆ, ಕುಂದಾಪುರ ವಲಯ- ಕಾಳಾವರ ಗ್ರಾ.ಪಂ. ಸದಸ್ಯ ರಮೇಶ ಶೆಟಿ ವಕ್ವಾಡಿ, ಬೈಂದೂರು ವಲಯ-ಹಳ್ಳಿಹೊಳೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಾರದಲ್ಲಿ ಎರಡು ದಿನ ಸಂಚರಿಸುವ ಕೊಚುವೆಲಿ-ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಲ್-ಕೊಚುವಲಿ ಗರೀಬ್‌ರಥ್ ರೈಲಿಗೆ ಮಂಗಳವಾರ ಬೆಳಿಗ್ಗೆ ೬ಕ್ಕೆ ಮೂಕಾಂಬಿಕಾ ರೈಲು ನಿಲ್ದಾಣ ಬೈಂದೂರಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ರೈಲು ಮೂಕಾಂಬಿಕಾ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಬಗ್ಗೆ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ವಿಶೇಷ ಮುತುವರ್ಜಿವಹಿಸಿದ್ದರು. ಸಂಸದರ ಮನವಿ ಮೆರೆಗೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ನೀಡಿತ್ತು. ಇದು ಈ ಭಾಗದ ಪ್ರಯಾಣಿಕರ ಹಲವು ವರ್ಷಗಳ ಕನಸು ನನಸಾಗಿದೆ. ಮುಂಬೈ, ಶಬರಿಮಲೈಗೆ ಹೋಗುವ ಯಾತ್ರಾರ್ಥಿಗಳಿಗೆ ಈ ರೈಲು ಸೇವೆಯಿಂದ ಬಹಳಷ್ಟು ಅನುಕೂಲವಾಗಿದೆ ಎಂದು ಪ್ರತಿಕ್ರೀಯಿಸಿದ ಮೂಕಾಂಬಿಕಾ ಯಾತ್ರಿ ಸಂಘದ ಗೌರವಾಧ್ಯಕ್ಷ ಕುಂಜಾಲು ವೆಂಕಟೇಶ ಕಿಣಿ, ಸಂಸದರಿಗೆ ವಿಶೇಷವಾದ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಘದ ಅಧ್ಯಕ್ಷ ಜಯಾನಂದ ಹೋಬಳಿದಾರ್, ಉಪಾಧ್ಯಕ್ಷ ಯು. ಉದಯಶಂಕರ್ ಪಡಿಯಾರ್, ಕಾರ್ಯದರ್ಶಿ ಪ್ರಕಾಶ ಪೂಜಾರಿ ಹಾಗೂ ನಿಲ್ದಾಣದ ಟ್ಯಾಕ್ಸಿ, ಆಟೋರಿಕ್ಷಾ ಚಾಲಕ- ಮಾಲಕ ಸಂಘದ ಪದಾಧಿಕಾರಿಗಳು, ಸದಸ್ಯರು, ನಿಲ್ದಾಣದ ಸಿಬ್ಬಂದಿಗಳು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ.7: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ಅನುಕೂಲವಾಗುವಂತೆ ಈಗಾಗಲೇ ರಚಿಸಲಾಗಿರುವ ವಿವಿಧ ತಂಡಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಇಂದು ಕುಂದಾಪುರದ ಭಂಡಾಕರ್ಸ್ ಕಾಲೇಜಿನಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬAಧಿಸಿದAತೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ಈಗಾಗಲೇ, ಮಾದರಿ ನೀತಿ ಸಂಹಿತೆ, ಸೆಕ್ಟರ್ ಅಧಿಕಾರಿಗಳ ತಂಡ, ಪೊಲೀಸ್ ತಂಡ, ಫ್ಲೆöÊಯಿಂಗ್ ಸ್ಕಾ÷್ವಡ್ ತಂಡ, ವೀಡಿಯೋ ವೀಕ್ಷಣಾ ತಂಡ ಸೇರಿದಂತೆ ಹಲವು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅದರಂತೆ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಕರ್ತವ್ಯ ನಿರ್ವಹಣೆ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಅಸ್ಪದ ನೀಡದೇ, ಅಗತ್ಯವಿದ್ದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆ ಮತ್ತು ದೇವಾಲಯಗಳು ಅಭಿವೃದ್ಧಿಗೊಂಡರೇ ಇಡೀ ಗ್ರಾಮವೇ ಅಭಿವೃದ್ಧಿ ಹೊಂದುತ್ತದೆ. ಈ ನಿಟ್ಟಿನಲ್ಲಿ ಸುದೀರ್ಘ 18 ವರ್ಷಗಳ ಇತಿಹಾಸವಿರುವ ಈ ಶಾಲೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದೇವಾನಂದ್ ಶೆಟ್ಟಿ ಹೇಳಿದರು. ಕೋಳ್ಕೆರೆ ರತ್ನಾಕರ್ ಶೆಟ್ಟಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಇವರಿಂದ ನಡೆಸಲ್ಪಟ್ಟ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ನೂತನ ಆಡಳಿತ ಮಂಡಳಿಯಾದ ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್ಗೆ ಹಸ್ತಾಂತರ ಮಾಡುವ ಕಾರ‍್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಕೆಆರ್ಎಸ್ಎಂಇ ಟ್ರಸ್ಟ್ನ ಅಧ್ಯಕ್ಷೆ ಗಿರಿಜಾ ಆರ್ ಶೆಟ್ಟಿ, ಶಾಲಾ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ, ಟ್ರಸ್ಟ್ನ ಸದಸ್ಯರುಗಳಾದ ಅಬ್ದುಲ್ ಜುನೈದ್, ಮೋಸಸ್ ಮನೋಹರ ಇವರು ಶಾಲೆಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. ನೂತನ ಆಡಳಿತ ಮಂಡಳಿಯಾದ ಬ್ರಹ್ಮಶ್ರೀ ಎಜುಕೇಶನಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮಾ.6: ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ ಉಪ್ಪುಂದ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ಮನ್ಮಹಾ ರಥೋತ್ಸವ ಸೋಮವಾರ ಸಕಲ ವಾದ್ಯಘೋಷಗಳೊಂದಿಗ ವಿಜಂಭೃಣೆಯಿಂದ ನಡೆಯಿತು. ಸುಮಾರು 25ವರ್ಷಗಳ ಬಳಿಕ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವ ನಡೆದಿದ್ದು ದೇವಸ್ಥಾನವನ್ನು ಹೂವಿನ ಅಲಂಕಾರದಲ್ಲಿ ಶೃಂಗರಿಸಲಾಗಿತು. ಸಾವಿರಾರು ಭಕ್ತಾಧಿಗಳು ಆಗಮಿಸಿ ಅಮ್ಮನವರ ದರುಶನ ಪಡೆದು ಅನ್ನಪ್ರಸಾದ ಪಡೆದರು. ಸ್ಥಳೀಯ ಸಂಘ ಸಂಸ್ಥೆಯ ಸದಸ್ಯರು, ಭಕ್ತಾಧಿಗಳು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಹಣ್ಣುಕಾಯಿ ಹಾಗೂ ವಿವಿಧ ಸೇವೆಗಳು ಪ್ರಾರಂಭಗೊಂಡಿತ್ತು. ಬೆಳಗ್ಗೆ ಪರವಾರ ಗಣಗಳಾದ ಚಂಡಿಕಾಯೈ, ಅಂಬಿಕಾಯೈ, ಮಹಾಸಿಂಹಾಯ, ಗಣಪತಿ, ದಕ್ಷಿಣ ಮೂರ್ತಿ, ಇಂದ್ರ, ಅಗ್ನಿ, ಯಮ, ನಿರ್ಯತಿ, ವರುಣ, ವಾಯು, ಸೋಮ, ಈಶಾನ, ಬ್ರಹ್ಮ, ಅನಂತ, ವೀರಭದ್ರ, ವಿಘ್ನೇಶ, ಬ್ರಾಹ್ಮಿ, ಮಹೇಶ್ವರೀ, ಕೌಮಾರ್ಯೆ, ವೈಷ್ಣವಿ, ವರಾಹಿ, ಇಂದ್ರಾಣಿ, ಚಾಮುಂಡಿ, ಮಾತೃಭ್ಯೋ, ಲೋಕ ಮಾತೃಭ್ಯೋ, ಸರ್ವಮಾತೃಭ್ಯೋ, ಸರ್ವಮಾತೃಗಣೇಭ್ಯೋ, ಲಕ್ಷ್ಮೈ, ಭೂಚರ್ಯೆ, ಖೇಚರ್ಯ, ಶಾಸ್ತಾರ, ದುರ್ಗಾ, ಸ್ಕಂದ, ಧನಧಾಯಿ, ಮುಂಡಿನಿ, ಹಾದಿನ್ರಿ, ಮೋದಿನಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನವದೆಹಲಿಯ ತಾಲ್ಕೋತ್ಕರ್ ಕ್ರೀಡಾಂಗಣದಲ್ಲಿ ಭಾರತ ಸರ್ಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯ, ಕರ್ನಾಟಕ ಸರ್ಕಾರ ವತಿಯಿಂದ ಜಂಟಿಯಾಗಿ ಜರುಗಿದ ದೆಹಲಿ ಕನ್ನಡ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಸಿಎ ರಮಾನಂದ ಪ್ರಭು ಅವರನ್ನು ಸನ್ಮಾನಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂಕಾಂಬಿಕಾ ರೋಡ್ ರೈಲ್ವೇ ನಿಲ್ದಾಣದಲ್ಲಿ ಮುಂಬೈ ಲೋಕಮಾನ್ಯ ತಿಲಕ್ – ಕೊಚುವೆಲಿ – ಮುಂಬೈ ಲೋಕಮಾನ್ಯ ತಿಲಕ್ ಗರೀಬ್ ರಥ ರೈಲು ( ರೈಲು ಸಂಖ್ಯೆ 12201/12202) ವಾರದ ನಾಲ್ಕು ದಿನ ಬೈಂದೂರು ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿದೆ. ಈ ಬಗ್ಗೆ ಆದೇಶವಾಗಿರುವುದಾಗಿ ಬೈಂದೂರು ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘ ತಿಳಿಸಿದೆ. ಗರೀಬ್ ರಥ ರೈಲು ಬೈಂದೂರಿನಲ್ಲಿ ನಿಲುಗಡೆಗೆ ಶ್ರಮವಹಿಸಿದ ನಮ್ಮ ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಹಾಗೂ ಸಹಕರಿಸಿದ ಕೇಂದ್ರ ರೈಲ್ವೆ ಮಂತ್ರಿಗಳಾದ ಅಶ್ವಿನಿ ವೈಶ್ಯವ್ ಅವರಿಗೆ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘ ಬೈಂದೂರು ವತಿಯಿಂದ ಅಭಿನಂದನೆ ಸಲ್ಲಿಸುತ್ತೇವೆ. ಮುಂಬೈ ಹಾಗೂ ಕೇರಳ ಪ್ರವಾಸ ಮಾಡುವ ಬೈಂದೂರು ತಾಲೂಕಿನ ಪ್ರಯಾಣಿಕರು ಹವಾನಿಯಂತ್ರಿತ ಗರೀಬ್ ರಥ ರೈಲಿನ ಸದುಪಯೋಗ ಪಡೆದುಕೊಳ್ಳಬೇಕಾಗಿ ಮನವಿ ಮಾಡುತ್ತೇವೆ. ಬೈಂದೂರು ಮೂಕಾಂಬಿಕಾ ರೋಡ್ ನಿಲ್ದಾಣದಲ್ಲಿ ದಾದರ್ ಸೆಂಟ್ರಲ್ – ತಿರುನವಲ್ಲಿ ಎಕ್ಸ್ಪ್ರೆಸ್, ಎರುನಾಕುಲಂ – ಹಜರತ್ ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು, ಬೆಂಗಳೂರು-ಮೈಸೂರುಮಂಗಳೂರು-ಮುರುಡೇಶ್ವರ ರೈಲು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೇಸಿಐ ಉಪ್ಪುಂದ,ಸ್ವಸ್ತಿ ಶ್ರೀ ಜ್ಯುವೆಲ್ಲರ್ ನೇರಳಕಟ್ಟೆ, ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಕರ್ಕುಂಜೆ, ಪ್ರಾಥಮಿಕ ಆರೋಗ್ಯ ಕೇಂದ್ರ ವಂಡ್ಸೆ, ಚಾಲಕರು ಮತ್ತು ಮಾಲಕರು ಸರ್ಕಲ್ ಫ್ರೆಂಡ್ಸ್ ನೇರಳಕಟ್ಟೆ, ಟೆಂಪಲ್ ಫ್ರೆಂಡ್ಸ್ ನೇರಳಕಟ್ಟೆ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಕುಂಜೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಶಾಲೆಗೆ ವಿವಿಧ ಕೊಡುಗೆಗಳನ್ನು ಹಸ್ತಾಂತರಿಸಲಾಯಿತು. ಜೇಸಿಐ ಉಪ್ಪುಂದದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಕಾರೀಕಟ್ಟೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪ್ರಮೋದ್ ಚಂದ್ರ ಶೆಟ್ಟಿ ಇವರು ನೆರವೇರಿಸಿದ್ದರು. ಮುಖ್ಯ ಅತಿಥಿಗಳಾದ ಕೆನರಾ ಬ್ಯಾಂಕ್ ಸಹಾಯಕ ಮಹಾ ಪ್ರಬಂಧಕ ಶ್ರೀಜಿತ್ ಕೆ ಶಾಲೆಗೆ ವಿವಿಧ ಕೊಡುಗೆಗಳನ್ನು ಹಸ್ತಾಂತರಿಸಿದರು. ಶಾಲೆಗೆ ಕುರ್ಚಿಗಳನ್ನು ನೀಡಿದ ಶ್ರೀಜಿತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ,ಮಾ.5: ಎಸ್.ಎಸ್.ಎಫ್ (ಸುನ್ನಿ ಸ್ಟುಡೆಂಟ್ ಫೆಡರೇಶನ್) ಗಂಗೊಳ್ಳಿ ಶಾಖೆ ವತಿಯಿಂದ ಇಲ್ಲಿನ ಸುಲ್ತಾನ್ ಮೊಹಲ್ಲಾದ ಬಿಷಾರತುಲ್ ಅರೇಬಿಕ್ ಮದ್ರಸದಲ್ಲಿ ’ಉಚಿತ ವೃತ್ತಿ ಮಾರ್ಗದರ್ಶನ, ಪ್ರೇರಣಾ ಶಿಬಿರ ಮತ್ತು ವಿದ್ಯಾರ್ಥಿವೇತನ ಜಾಗೃತಿ ಕಾರ್ಯಕ್ರಮ ಭಾನುವಾರ ಜರುಗಿತು. 8 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಈ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಪುತ್ತೂರಿನ ಕಮ್ಯೂನಿಟಿ ಸೆಂಟರಿನ ಪ್ರಧಾನ ಕಾರ್ಯದರ್ಶಿ ಮತ್ತು ಶೈಕ್ಷಣಿಕ ಮಾರ್ಗದರ್ಶಕರಾದ ‘ಹನೀಫ್ ಪುತ್ತೂರು’ ಹಾಗೂ ಸೆಂಟರಿನ ನುರಿತ ಕೌನ್ಸಿಲರ್ ರಾದ ಇಮ್ತಿಯಾಝ್ ಪುತ್ತೂರು ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ, ವೃತ್ತಿ ಮಾರ್ಗದರ್ಶನ, ಕೌನ್ಸಿಲಿಂಗ್, ಜಾಗತಿಕ ಅವಕಾಶಗಳು, ಭವಿಷ್ಯದ ಬೆದರಿಕೆ ಮತ್ತು ತಯಾರಿಯ ಕುರಿತಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಆಗುವಂತೆ ವಿಸ್ತಾರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗಂಗೊಳ್ಳಿ ಜಮತುಲ್ ಮುಸ್ಲಿಮೀನ್ ಕಮಿಟಿಯ ಅಧ್ಯಕ್ಷರಾದ ಪಿ.ಎಮ್. ಹಸೈನಾರ್, ಸುಲ್ತಾನ್ ಮೊಹಲ್ಲಾ ಮಸೀದಿಯ ಇಮಾಮರಾದ ಷರೀಫ್ ಸಹದಿ ಉಸ್ತಾದ್, ಸುನ್ನಿ ಸ್ಟೂಡೆಂಟ್ ಫೆಡರೇಶನ್ ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಅಶಿಮ್ ಗಂಗೊಳ್ಳಿ ಹಾಗೂ ಅಲ್ಪೈನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ನೂತನ ಅಧ್ಯಕ್ಷರಾಗಿ ಜಯಾನಂದ ಹೋಬಳಿದಾರ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರು ಕೆ. ವೆಂಕಟೇಶ್ ಕಿಣಿ, ಕಾರ್ಯದರ್ಶಿ ಪ್ರಕಾಶ್ ಬೈಂದೂರು, ಉಪಾಧ್ಯಕ್ಷರು ಉದಯ್ ಪಡಿಯಾರ್, ಖಜಾಂಚಿ ವಿಜಯ್ ಪೂಜಾರಿ, ಸದಸ್ಯರು ಸಂಜಯ್ ಬೈಂದೂರು, ಶಂಕರ್ ಶೇರುಗಾರ್, ಸುಧಾಕರ್ ಎಚ್. ನಾಗರಾಜ ಶೇಟ್, ಶ್ರೀಕುಮಾರ್ ಬೈಂದೂರು, ಬಾಲಕೃಷ್ಣ ಬೈಂದೂರು ಆಯ್ಕೆಯಾಗಿರುವುದಾಗಿ ಪ್ರಕಟಣೆ ತಿಳಿಸಿದೆ.

Read More