Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಂಗಭೂಮಿಗಳು ಸಮಾಜಕ್ಕೆ ಹೊಸ ಸಂದೇಶ ನೀಡಿ, ಮನುಷ್ಯನ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುವುದಲ್ಲದೇ, ಜೀವನದಲ್ಲಿನ ಲೋಪದೋಷಗಳನ್ನು ತಿದ್ದಿಕೊಳ್ಳಲು ಸಹಕಾರಿಯಾಗುತ್ತದೆ. ನಿಜ ಜೀವನದ ದುಮ್ಮಾನಗಳನ್ನು ಬಿಂಬಿಸುವ ನಾಟಕಗಳು ಬದುಕಿನ ಅರಿವು ಮೂಡಿಸುತ್ತವೆ. ರಂಗಭೂಮಿಯು ಮನುಷ್ಯನ ಬಗೆ ಬಗೆಯ ಮುಖಗಳನ್ನು ಬಯಲು ಮಾಡುವ ಏಕೈಕ ಮಾಧ್ಯಮ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಲಾವಣ್ಯ ಬೈಂದೂರು ಇದರ 48ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಾಜಿ ಶಾಸಕ ದಿ. ಕೆ. ಲಕ್ಷ್ಮೀನಾರಾಯಣ ಸ್ಮರಣಾರ್ಥ ರಂಗಪಂಚಮಿ -2025ರ ಐದು ದಿನಗಳ ರಂಗೋತ್ಸವದ ನಾಲ್ಕನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಮಕ್ಕಳಿಗೆ ಬಾಲ್ಯದಿಂದಲೇ ರಂಗಶಿಕ್ಷಣ ನೀಡುವುದು ಅಗತ್ಯವಾಗಿದೆ. ಭಾರತೀಯ ಕಲೆ ಮತ್ತು ಸಾಹಿತ್ಯಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಕಾಯ್ದುಕೊಳ್ಳುವಂತಹ ಗಟ್ಟಿ ಬೇರನ್ನು ಹೊಂದಿದೆ. ಇಂದಿನ ಪೀಳಿಗೆ ಕಲೆಯನ್ನು ಮುಂದುವರಿಸುತ್ತಾರೋ ಬಿಡುತ್ತಾರೋ ಎಂಬುದಕ್ಕಿಂತ ಅವುಗಳು ಅವರ ಮನಸ್ಸಿನೊಳಕ್ಕೆ ಹೊಕ್ಕು ಕೂರುತ್ತದೆ. ಅಂತಹ ಕೆಲಸ ನಡೆಸುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ವಿಘ್ನೇಶ್, ಶ್ರದ್ಧಾ, ಸಿಂಚನಾ, ಮನೀಷ್, ಕೌಶಲ್, ಸುರಕ್ಷಾ ಹಾಗೂ ಶ್ರೇಯಸ್ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆಗಳು ಹಾಗೂ ನುರಿತ ತರಬೇತುದಾರರಿಂದ ತರಬೇತಿ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಕ್ತದಾನವು ಜೀವಗಳನ್ನು ಉಳಿಸುವ ಒಂದು ಉದಾತ್ತ ಕಾರ್ಯವಾಗಿದೆ ಮತ್ತು ಸಮುದಾಯದ ಜವಾಬ್ದಾರಿಯ ಪ್ರಜ್ಞೆಯನ್ನು ಹೆಚ್ಚಿಸುತ್ತದೆ ಎಂದು ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಹೇಳಿದರು. ಎಮ್‌ಐಟಿ ಕುಂದಾಪುರದ ಎನ್‌ಎಸ್‌ಎಸ್‌ ಘಟಕವು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮತ್ತು ಲಯನ್ಸ್ ಕ್ಲಬ್ ಹಂಗಳೂರು ಸಹಯೋಗದೊಂದಿಗೆ ಇತ್ತೀಚೆಗೆ ನಡೆದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಜಯಕರ್‌ ಶೆಟ್ಟಿ ಮಾತನಾಡಿ, ನಿಯಮಿತ ರಕ್ತದಾನದ ಅಗತ್ಯತೆ ಮತ್ತು ಜೀವಗಳನ್ನು ಉಳಿಸುವಲ್ಲಿ ಅದರ ಪಾತ್ರದ ಬಗ್ಗೆ ತಿಳಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿಸೋಜ ಅಧ್ಯಕ್ಷೀಯ ಭಾಷಣ ಮಾಡಿ, ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಭಾಗವಹಿಸಲು ಪ್ರೇರೇಪಿಸಿದರು ಮತ್ತು ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಸೇವೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್, ಕಾರ್ಯದರ್ಶಿ ರೋಹನ್ ಡಿ. ಕೋಸ್ಟಾ, ಕಾರ್ಯದರ್ಶಿ ಮ್ಯಾಥ್ಯೂ ಡಿಸೋಜ, ಕಾರ್ಯದರ್ಶಿ ಶಿವರಾಮ್ ಶೆಟ್ಟಿ ಮತ್ತು ಖಜಾಂಚಿ ಪುರಾಣಿಕ್, ಸಿಬ್ಬಂದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೌಕೂರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ವಾರ್ಷಿಕ ವಿಶೇಷ ಶಿಬಿರಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ ಕೊಟ್ಟು ಶಿಬಿರಾರ್ಥಿಗಳೊಂದಿಗೆ ವಿಚಾರ ವಿನಿಮಯ ನಡೆಸಿದರು. ವಿವಿಧ ಸ್ಥಳಗಳಿಂದ ಆಗಮಿಸಿದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸ್ಥಳೀಯರ ಸಹಕಾರದಿಂದ ಮತ್ತು ಎಲ್ಲರ ಪರಿಶ್ರಮದಿಂದ ಶಿಬಿರವು ಯಶಸ್ವಿಯಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಶಾಸಕರನ್ನು ಸ್ಮರಣಿಕೆಯೊಂದಿಗೆ ಸ್ವಾಗತಿಸಿ, ಗೌರವಿಸಿದರು . ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಚಾಲಕರದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ್ ವೈದ್ಯ ಎಂ.,ಹಿರಿಯ ಪ್ರಾಧ್ಯಾಪಕರಾದ ಡಾ ಶೇಖರ್ ಬಿ., ಉಪನ್ಯಾಸಕಿಯಾದ ಶ್ರುತಿ ಆಚಾರ್ಯ ಎನ್. ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ರಕ್ಷಿತ್, ಘಟಕ 1 ಮತ್ತು 2 ರ ಸಂಯೋಜನಾಧಿಕಾರಿಗಳಾದ ರೋಹಿಣಿ ಹಾಗೂ ನಿರಂಜನ ಶರ್ಮಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರು ತಮ್ಮ ದೈನಂದಿನ ವ್ಯವಹಾರಗಳಿಗೆ ಬ್ಯಾಂಕುಗಳಿಗೆ ಬಂದಾಗ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ, ಅವರುಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಪೂರಕ ವಾತಾವರಣ ಕಲ್ಪಿಸಿದಾಗ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕುಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗದರ್ಶನದ ಅನ್ವಯ ಠೇವಣಿ ಒಟ್ಟು ಮೊತ್ತದ ಶೇ. 60 ರಷ್ಟು ಸಾಲ ವಿತರಣೆ ಮಾಡುವುದರೊಂದಿಗೆ ಸಿ.ಡಿ ಅನುಪಾತವನ್ನು ಹೆಚ್ಚುವಂತೆ ಎಲ್ಲಾ ಬ್ಯಾಂಕ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಕೆಲವು ಬ್ಯಾಂಕ್‌ಗಳಲ್ಲಿ ಸಿ.ಡಿ. ಅನುಪಾತವು ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಸುಧಾರಣೆ ಆಗಬೇಕು ಎಂದರು. ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳನ್ನು ನಿರ್ಮಿಸಲು ಹಾಗೂ ಹೆಚ್ಚು ಉದ್ಯೋಗಾವಕಾಶಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವು ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ನಮ್ಮ ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡಬೇಕು ಎಂದು ಕರಾವಳಿ ಪೊಲೀಸ್ ಪಡೆಯ ನಿರೀಕ್ಷಕ ಪ್ರಮೋದ್‌ ಕುಮಾರ್‌ ಹೇಳಿದರು. ಅವರು ಇಲ್ಲಿನ ಪಡುಕೇರಿಯ ಒಂಬತ್ತುದಂಡಿಗೆ ಚಿಕ್ಕಮ್ಮ ದೇವಸ್ಥಾನದಲ್ಲಿ ನಡೆದ ಯುವ ಮಿತ್ರವೃಂದದ 30ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಮಾತನಾಡುತ್ತಾ, ಅಧಿಕಾರ, ಅಂತಸ್ತು ಏರಿಕೆಯಾದಾಗ ನಮ್ಮ ಬೆಳವಣಿಗೆಯ ಹಿಂದಿನ ಹೆಜ್ಜೆಗಳನ್ನು ಮರೆಯಬಾರದು. ಆಧುನಿಕತೆಯ ಉಪಯೋಗವನ್ನು ಮಾತ್ರ ಪಡೆದುಕೊಂಡು ಅಪಾಯದಿಂದ ದೂರವಿರಬೇಕು. ಒಗ್ಗಟ್ಟು ಹಾಗೂ ಸಂಘಟನಾ ಆಸಕ್ತಿಗಳು ಸಮೃದ್ಧವಾಗಿದ್ದಾಗ ಸಂಘಟನೆಗಳು ಶಕ್ತಿಯುತವಾಗಿ ಬೆಳೆಯುತ್ತದೆ ಎಂದರು. ಯುವ ಮಿತ್ರ ವೃಂದ ಅಧ್ಯಕ್ಷ ಅಮರ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 2024-25ನೇ ಸಾಲಿನಲ್ಲಿ ಕಾರ್ತಿಕ ದೀಪೋತ್ಸವ, ಧಾರ್ಮಿಕ, ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ, ಸಾಮಾಜಿಕ, ಕ್ರೀಡೆ ಸೇರಿದಂತೆ ಮಾನವೀಯ ಮೌಲ್ಯದ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಮಹತ್ವಾಕಾಂಕ್ಷೆಯ “ ತುರ್ತು ನಿಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯ ಪೂರ್ವದಲ್ಲಿಯೇ ಬ್ರಿಟಿಷ್ ನಿವೃತ್ತ ಅಧಿಕಾರಿ ಪೋವೆಲ್ ರಿಂದ ಸ್ಥಾಪಿತವಾದ ಸ್ಕೌಟ್ಸ್ ಅಂಡ್ ಗೈಡ್ಸ್ ಆಂದೋಲನ ಇಂದು ಜಗತ್ತಿನಾದ್ಯಂತ ಪಸರಿಸಿ ಯುವ ಸಮುದಾಯವನ್ನು ಅದರಲ್ಲಿಯೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ದೈಹಿಕವಾಗಿ ಬೌದ್ಧಿಕವಾಗಿ ಸದೃಢವಾಗಿಸಿ ಉತ್ತಮ ಪ್ರಜೆಗಳಾಗಿ ರೂಪಿಸಲು ಸಹಕಾರಿಯಾಗಿದೆ ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಡಳಿತ ಮಂಡಳಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಇಂದು ಭಾರತದ ಬಹುಪಾಲು ರಾಜ್ಯಗಳಲ್ಲಿ ತರಬೇತಿ ನಡೆಯುತ್ತಿದ್ದು ಬಹುಪಾಲು ಶಾಲೆಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಪಾಲ್ಗೊಂಡು ಉತ್ತಮ ಶಿಸ್ತು ನಡತೆಗಳನ್ನು ಕಲಿತು ಪಠ್ಯ ಮತ್ತು ಪಠ್ಯೇತರ ವಿಭಾಗದಲ್ಲೂ ಉತ್ತಮ ಸಾಧನೆ ತೋರಿಸುತ್ತಿದ್ದಾರೆ. ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲಿಯೇ ಸ್ಕೌಟ್ಸ್ ಅಂಡ್ ಗೈಡ್ಸ್ ಪರಿಚಯ ಮಾಡುವುದರಿಂದ ಉತ್ತಮ ಶಿಸ್ತು, ಗುಣ ನಡತೆಗಳನ್ನು ಜೀವನದುದ್ದಕ್ಕೂ ರೂಡಿಸಿಕೊಳ್ಳಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರ್ಕಾರ ಹೊರಡಿಸುವ ಸುತ್ತೋಲೆ, ಆದೇಶಗಳು ಪಂಚಾಯತ್ ರಾಜ್ ವ್ಯವಸ್ಥೆಯ ಒಂದೊಂದೇ ಕಲ್ಲುಗಳನ್ನು ಬೀಳಿಸುತ್ತಿದೆ. ಇದನ್ನು ತಡೆದು ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಳ್ಳಬೇಕಾದರೆ, ಸ್ಥಳೀಯವಾಗಿ ಗ್ರಾಮ ಸರ್ಕಾರಗಳು ಬಲವಾಗಬೇಕು. ಚುನಾಯಿತ ಪ್ರತಿನಿಧಿಗಳಾದ ನೀವೆಲ್ಲಾ ಒಟ್ಟಾಗಿ ಧ್ವನಿ ಎತ್ತಬೇಕು. ಈ ಹೋರಾಟಕ್ಕೆ ನನ್ನ ವ್ಯಾಪ್ತಿಯಲ್ಲಿ ಆಗುವ ಎಲ್ಲಾ ಸಹಕಾರಗಳನ್ನು ನೀಡುವುದಾಗಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು ಅವರು ಮಂಗಳವಾರದಂದು  ಉಡುಪಿ ಜಿಲ್ಲಾಡಳಿತ ಭವನ, ರಜತಾದ್ರಿ ಮಣಿಪಾಲ ಅಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ನಡೆಸಿದ ಸ್ಥಳೀಯ ಸರ್ಕಾರದ ಉಳಿವಿಗಾಗಿ ಒಕ್ಕೊರಲ ಪ್ರತಿಭಟನೆಯ ಸಮಯದಲ್ಲಿ ಪಂಚಾಯತ್ ಪ್ರತಿನಿಧಿಗಳು ಮಾಡಿದ ಹಕ್ಕೊತ್ತಾಯಗಳಿಗೆ ಪ್ರತಿಕ್ರಿಯಿಸಿದರು. ಕುಂದಾಪುರ ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅವರು ಮಾತನಾಡುತ್ತಾ, ಸ್ಥಳೀಯ ಸ್ವಯಂ ಸರ್ಕಾರವನ್ನು ಉಳಿಸಲು ಮತ್ತು ಬಲಪಡಿಸಲು ನಾವೆಲ್ಲಾ ಒಗ್ಗಟ್ಟಾಗಿ ಕಾರ್ಯಪ್ರವತ್ತರಾಗಬೇಕು. ಹಿಂದಿನಿಂದಲೂ ಹಲವಾರು ರೀತಿಯಲ್ಲಿ ವಿವಿಧ ಹಂತದ ಸರ್ಕಾರಗಳಿಂದ ನಿರಂತರವಾಗಿ ಗ್ರಾಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ನೈರ್ಮಲ್ಯ, ಬ್ಯಾಂಕಿಂಗ್ ಇತ್ಯಾದಿ ಎಲ್ಲಾ ರಂಗಗಳಲ್ಲಿ ಅತ್ಯಂತ ಮುಂಚೂಣಿಯಲ್ಲಿದ್ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇವತ್ತು ಹಿನ್ನಡೆಯನ್ನು ಕಾಣಲು ಇಲ್ಲಿನ ಬಿಜೆಪಿ ಜನಪ್ರತಿನಿದಿನಗಳು ಕೊಡುಗೆ ದೊಡ್ಡದು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಚುನಾವಣೆಯ ಗೆಲುವಿಗಾಗಿ ಭಾವನಾತ್ಮಕ ವಿಚಾರಗಳನ್ನು ಮುಂದೆ ಇಟ್ಟು ಧರ್ಮ ಧರ್ಮದ ನಡುವೆ, ಜಾತಿ ಜಾತಿಯ ನಡುವೆ ವಿಷ ಬೀಜ ಬಿತ್ತಿ ಕೋಮು ಸೌಹಾರ್ದತೆ ಹಾಳಾದ ಕಾರಣ ಪ್ರವಾಸೋದ್ಯಮ, ಇನ್ನಿತರ ಹೂಡಿಕೆಗೆ ಜನ ಹಿಂಜರಿಯುತ್ತಿರುವ ಕಾರಣ ಕರಾವಳಿ ಜಿಲ್ಲೆಗಳು ಉದ್ಯಮ, ಉದ್ದಿಮೆಗಳಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಇವತ್ತು ಪ್ರವಾಸೋದ್ಯಮದಲ್ಲಿ ಕರ್ನಾಟಕ ಕರಾವಳಿಗಿಂತ ಗೋವಾ ಮತ್ತು ಕೇರಳ ಅಭಿವೃದ್ಧಿಯನ್ನು ಹೊಂದಿವೆ. ಆದರೆ ಕೇರಳ ಮತ್ತು ಗೋವಾದಷ್ಟೇ ಪ್ರವಾಸೋದ್ಯಮಕ್ಕೆ ವಿಪಲ ಅವಕಾಶ ಕರ್ನಾಟಕ ಕರಾವಳಿಯಲ್ಲಿ ಇದೆ, ಆದರೆ ಇಲ್ಲಿನ ಜನಪ್ರತಿನಿದಿನಗಳ ಇಚ್ಛಾಶಕ್ತಿಯ ಕೊರತೆಯಿಂದ ನಾವು ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಇತ್ಯಾದಿಗಳ ಪ್ರಗತಿಯಲ್ಲಿ ಹಿನ್ನಡೆಯನ್ನು ಕಾಣುತ್ತಿದ್ದೇವೆ. ಇವತ್ತು ರಾಜ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ಶ್ರೀ ಶಂಕರ ಪಂಚಮಿಯ ವಿಶಿಷ್ಠ ಕಾರ್ಯಕ್ರಮದ ಸಂಕಲ್ಪದೊಂದಿಗೆ ಶ್ರೀ ಶಂಕರ ಭಗವತ್ಪಾದರ ಪಾದುಕೆಯನ್ನು ಹೊತ್ತ ಅದ್ವೈತ ರಥವು ಶ್ರೀ ಕ್ಷೇತ್ರ ಗೋಕರ್ಣದ ಅಶೋಕೆಯಲ್ಲಿ ಶ್ರೀ ಸಂಸ್ಥಾನದವರಿಂದ ಚಾಲನೆಗೊಂಡ ಅದ್ವೈತ ರಥವು ಬೈಂದೂರು ತಾಲೂಕು ಉಪ್ಪುಂದ ಮಠದ ಗಡಿಗೆ ತಲುಪಿದ್ದು ಮಠದ ಶಿಷ್ಯರು ರಥವನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಂಡರು, ಪಾದುಕೆಗೆ ವಿಶೇಷ ಪೂಜೆ ನಡೆಸಲಾಯಿತು ಹಾಗೂ ಶಂಕರರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನೆಡೆಯಿತು, ಅದ್ವೈತ ರಥವು ಕರ್ನಾಟಕ ರಾಜ್ಯ ಸೇರಿದಂತೆ ಕೇರಳ, ತಮಿಳುನಾಡು ರಾಜ್ಯದ ಕೆಲವು ಭಾಗಗಳಲ್ಲಿ ಸಂಚರಿಸಲಿರುವುದು. ವೇದಮೂರ್ತಿ ಶಂಕರ ನಾರಾಯಣ ಭಟ್ ಪೂಜಾ ಕಾರ್ಯ ನಡೆಸಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರ ವಲಯದ ಅಧ್ಯಕ್ಷರಾದ ಪ್ರೋ. ನಾರಾಯಣ ಸ್ವಾಮೀ, ಕಾರ್ಯದರ್ಶಿ ನಾಗರಾಜ ಭಟ್, ಗುರುದತ್ ರಾವ್, ಸತ್ಯನಾರಾಯಣ ಪುರಾಣಿಕ, ಸುಭಾಶ್ಚಂದ್ರ ಪುರಾಣಿಕ, ಯು. ಸಂದೇಶ ಭಟ್, ದಿವಾಕರ ಶೆಟ್ಟಿ,…

Read More