ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: 7ನೇ ತರಗತಿಯ ವಿದ್ಯಾರ್ಥಿ ಪ್ರಥ್ವಿ ಎಂಬಾತನನ್ನು ಸೈಕಲ್ನಲ್ಲಿ ಆಟವಾಡುತ್ತಿರುವಾಗ ಶಾಂತಾರಾಮ ಶೆಟ್ಟಿ ನಾರುಮಕ್ಕಿ ಎಂಬಾತ ಜೂ.17 ರಂದು ಗಂಭೀರವಾಗಿ ಹಲ್ಲೆ ನಡೆಸಿದ್ದು, ಈ ಬಗ್ಗೆ ದೂರು ದಾಖಲಾಗಿ ಆರು ದಿನಗಳು ಕಳೆದರು ಆರೋಪಿಯನ್ನು ಪೊಲೀಸರು ಬಂಧಿಸದ ಹಿನ್ನಲೆಯಲ್ಲಿ ಭಾನುವಾರ ಶಂಕರನಾರಾಯಣ ಪೊಲೀಸ್ ಠಾಣೆಗೆ ವಿಶ್ವಕರ್ಮ ಸಂಘಟನೆಗಳ ನೇತ್ರತ್ವದಲ್ಲಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಮನವಿಗೂ ಮೊದಲು ಶಂಕರನಾರಾಯಣ ಪೊಲೀಸ್ ಠಾಣೆಯ ಎದುರು ಸಂಘಟನೆಯ ಮುಖಂಡರು ಸೇರಿ ಸಭೆ ನಡೆಸಿದರು. ಸಭೆಯಲ್ಲಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ಯ ಕಳಿ ಮಾತನಾಡಿ, ಆರೋಪಿ ನಾರುಮಕ್ಕಿ ಶಾಂತರಾಮ ಶೆಟ್ಟಿ ಎಂಬ ವ್ಯಕ್ತಿ ಸಣ್ಣ ಬಾಲಕನ ಮೇಲೆ ಹಲ್ಲೆ ನಡೆಸಿರುವುದು ಹೇಯ ಕೃತ್ಯ. ಕೆಟ್ಟ ಮನಸ್ಥಿತಿ ಇರುವ ವ್ಯಕ್ತಿಗಳು ಮಾಡು ಕೃತ್ಯವಾಗಿದೆ. ಈ ಕೃತ್ಯದ ವಿರುದ್ಧ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಕೂಡುವಳಿಯ ಎಲ್ಲಾ ಸಮಾಜದವರು ಮತ್ತು ವಿಶ್ವಕರ್ಮ ಸಮಾಜ ಎಲ್ಲಾ ಸಂಘಟನೆಗಳು ಖಂಡಿಸುತ್ತದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಅಮಾಸೆಬೈಲು: ಎಸ್.ಎಸ್. ಎಲ್.ಸಿ.ಯು ವಿದ್ಯಾರ್ಥಿಗಳ ಜೀವನದಲ್ಲಿ ಮೈಲಿಗಲ್ಲು, ಮುಂದಿನ ವಿದ್ಯಾಭ್ಯಾಸಕ್ಕೆ ಅಡಿಗಲ್ಲು, ಅಂತಹ ಅಡಿಗಲ್ಲು ಹಾಕಿ ಕೊಟ್ಟ ಶಾಲೆಯನ್ನು ಎಂದೂ ಮರೆಯಬಾರದು ಎಂದು ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹೆಂಗವಳ್ಳಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ನವೀನ್ ಚಂದ್ರ ಹೆಗ್ಡೆ ಹೆಂಗವಳ್ಳಿಯವರು ಅಭಿಪ್ರಾಯಪಟ್ಟರು. ಡ್ಯುಯಲ್ ಸ್ಟಾರ್ ಶಾಲೆ ಅಮಾಸೆಬೈಲಿನಲ್ಲಿ ದ್ವಿತೀಯ ಬ್ಯಾಚ್ ಎಸ್. ಎಸ್.ಎಲ್.ಸಿ.ಯ ವಿದ್ಯಾರ್ಥಿಗಳ ಪ್ರಶಂಸಾ ಸಭೆಯ ಮುಖ್ಯ ಅತಿಥಿಯಾಗಿ ಉತ್ತಮ ಅಂಕಗಳಿಸಿದಂತೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ಮಾಡಬೇಕು. ನಿಮ್ಮನ್ನು ಅನುಸರಿಸುವವರಿಗೆ ಮಾದರಿಯಾಗಿರಬೇಕು ಎಂದು ಹೇಳಿದರು. ಅತಿಥಿಯಾದ ಶಿವಾನಂದ ಆಚಾರ್ಯ ರವರು ಮಾತನಾಡುತ್ತಾ ಮಕ್ಕಳು ಉತ್ತಮ ರೀತಿಯಲ್ಲಿ ತಯಾರಿಯನ್ನು ನಡೆಸಿ ಉತ್ತಮ ಅಂಕಗಳನ್ನು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ವಡ್ಡರ್ಸೆ ಪ್ರಕಾಶ್ ಆಚಾರ್ಯರು ವಹಿಸಿ ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಯೊಂದಿಗೆ ಶಿಕ್ಷಕರ ಮತ್ತು ಪೋಷಕರ ಸಹಕಾರವೂ ಬಹಳ ಮುಖ್ಯವಾಗಿರುತ್ತದೆ ಅದನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಿಗೆ ಸಮರ್ಪಣಾ ಭಾವದಿಂದ ತನ್ನನ್ನು ಅರ್ಪಿಸಿಕೊಂಡು ಮಾದರಿಯಾದ ಗಿಳಿಯಾರು ಕುಶಲ ಹೆಗ್ಡೆಯವರ ಸ್ಮರಣೆಯಲ್ಲಿ ದತ್ತಿ ನಿಧಿ ಮೂಲಕ ವಿದ್ಯಾರ್ಥಿಗಳಿಗೆ, ಅಸಹಾಯಕರಿಗೆ ೨೩ ವರ್ಷಗಳಿಂದ ಮಾಡುವ ಸಹಾಯ ಒಂದು ಪವಿತ್ರ ಯಜ್ಞ ಎಂದು ಕರೆಯಬಹುದಾಗಿದೆ. ಕೆಲವೇ ಮನುಷ್ಯರು ನಿಧನರಾದ ನಂತರ ಬದುಕಿದಂತೆ ಇರುತ್ತಾರೆ. ಅವರಲ್ಲಿ ಗಿಳಿಯಾರು ಕುಶಲ ಹೆಗ್ಡೆಯವರು ಪ್ರಮುಖರು. ಇಂದು ವಿಸ್ಮತಿಯ ಕಾಲ. ಜನರು ಕೆಲವೇ ವರ್ಷಗಳಲ್ಲಿ ಹಿರಿಯರನ್ನು, ಸಾಧಕರನ್ನು ಮರೆತು ಬಿಡುತ್ತಾರೆ. ಆದರೆ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನವರು, ಕುಶಲ ಹೆಗ್ಡೆಯವರ ಕುಟುಂಬ ಸದಸ್ಯರ ಸಹಕಾರದಿಂದ ನೆಲದ ಋಣ ತೀರಿಸುವ ಸತ್ಕಾರ್ಯ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಹಿರಿಯ ಸಾಹಿತಿ, ಸಂಶೋಧಕ ಪ್ರೊ. ಎ. ವಿ. ನಾವಡ ಹೇಳಿದರು. ಕುಂದಾಪುರದ ಸರಕಾರಿ ಪ. ಪೂ. ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಆಯೋಜಿಸಿದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ, ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ ನರೇಂದ್ರ ನಾಯಕ್ರು ಶೈಕ್ಷಣಿಕ ಕ್ಷೇತ್ರದಲ್ಲೂ ಕೃಷಿಯ ಮೂಲಸತ್ವಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ(ಕುಪ್ಮಾ) ಅಧ್ಯಕ್ಷ ಡಾ ಎಂ ಮೋಹನ ಆಳ್ವ ನುಡಿದರು. ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಮೂಡುಬಿದಿರೆಯ ಆಳ್ವಾಸ್ನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡ ಕಲಾ ಪ್ರೇಮಿ, ಶಿಕ್ಷಣ ತಜ್ಞ ಪ್ರೋ. ನರೇಂದ್ರ ಎಲ್ ನಾಯಕ್ ಅವರ ಷಷ್ಟಬ್ದಿ ’ನಮ್ಮೊಲುಮೆ’ ಸಂಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಸಾಧನೆಯಿಂದ ಪ್ರೇರೆಪಿತರಾಗೋಣ:ಒಬ್ಬ ಕೃಷಿಕನಲ್ಲಿರುವ ಎಲ್ಲಾ ಮೂಲ ಗುಣಗಳನ್ನು ತಾನು ಸ್ಥಾಪಿಸಿರುವ ಎಕ್ಸ್ಪರ್ಟ್ ಕಾಲೇಜಿನಲ್ಲಿ ಆಳವಡಿಸಿಕೊಳ್ಳಲಾಗಿದೆ. ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯದ ನಡುವೆ ಶೈಕ್ಷಣಿಕ ಕೃಷಿಯನ್ನು ನಡೆಸುತ್ತಾ ಕರ್ನಾಟಕದ ವಿಶ್ವಾಸಾರ್ಹ ಪದವಿಪೂರ್ವ ಕಾಲೇಜನ್ನು ಸ್ಥಾಪಿಸಿದ್ದಾರೆ. ಅವರ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಶಾಲಾ ಸಂಸತ್ ಚುನಾವಣೆ ನಡೆಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನ ಆಯ್ಕೆಗೆ ಇಬ್ಬರು ಮತ್ತು ಉಪನಾಯಕನ ಆಯ್ಕೆಗೆ ಇಬ್ಬರು ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದರೆ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನ ಆಯ್ಕೆಗೆ ಏಳು ವಿದ್ಯಾರ್ಥಿಗಳು ಮತ್ತು ಉಪನಾಯಕನ ಆಯ್ಕೆಗೆ ಒಂಬತ್ತು ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದರು. ಪ್ರಜಾಪ್ರಭುತ್ವ ಮಾದರಿಯಲ್ಲಿ ನಡೆದ ಈ ಚುನಾವಣೆಯಲ್ಲಿ ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಮತ ಚಲಾಯಿಸಿದರು. ಮತದಾನ ಪೂರ್ಣಗೊಂಡ ಬಳಿಕ ಅಭ್ಯರ್ಥಿಗಳ ಸಮ್ಮುಖದಲ್ಲಿ ಮತ ಎಣಿಕೆ ನಡೆಸಲಾಯಿತು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕನಾಗಿ ೧೦ನೇ ತರಗತಿಯ ರಿತೇಶ ಮೊಗವೀರ ಮತ್ತು ಉಪನಾಯಕನಾಗಿ ಜೊಯಲ್ ಫೆರ್ನಾಂಡಿಸ್ ಆಯ್ಕೆಯಾದರು. ಹಿರಿಯ ಪ್ರಾಥಮಿಕ ವಿಭಾಗದಿಂದ ಅನನ್ಯ ವಿದ್ಯಾರ್ಥಿ ನಾಯಕಿಯಾಗಿ ಮತ್ತು ಅಹೀಶ್ ಎಂ.ಕೆ. ಉಪನಾಯಕನಾಗಿ ಆಯ್ಕೆಯಾದರು. ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯಶಿಕ್ಷಕಿ ಸುಜಾತ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ನಾಯಕನೆಂದರೆ ಜವಾಬ್ದಾರಿ, ಅಹಂ ತೊರೆದು ವಿಧೇಯತೆಯಿಂದ ಕಾರ್ಯ ನಿರ್ವಹಿಸುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಇಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಸಭಾಂಗಣ (ಕೃಷಿ ಸಿರಿ ವೇದಿಕೆ)ದಲ್ಲಿ ನಡೆದ ಪುತ್ತಿಗೆಯ ವಿವೇಕಾನಂದ ನಗರ ಆಳ್ವಾಸ್ ಕೇಂದ್ರೀಯ ಶಾಲೆಯ ‘ಸ್ವಾಗತ ದಿನ ಮತ್ತು ಇನ್ವೆಸ್ಟಿಚರ್ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬನಲ್ಲೂ ತಾನು ನಾಯಕನಾಗಬೇಕೆಂಬ ಹಂಬಲ ಇರಬೇಕು. ನಾಯಕನಾಗಲು ನಾನು ಅರ್ಹನಲ್ಲ ಎಂಬ ಹಿಂಜರಿಕೆ ಇರಬಾರದು. ಪ್ರತಿ ವಿದ್ಯಾರ್ಥಿಗಳು ಇಲ್ಲಿ ನಾಯಕರೇ. ನಾಯಕನಾದವನು ಅಹಂ ತೊರೆದು ತನಗಿರುವ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹಿತವಚನ ಹೇಳಿದರು. ಶಾಲೆಯು ನಮ್ಮ ಪ್ರಗತಿಗೆ ಮಹತ್ವದ ಸಮಯವನ್ನು ಒದಗಿಸುತ್ತದೆ. ಸರಿ ಹಾಗೂ ತಪ್ಪು ಈ ಎರಡೂ ವಿಷಯಗಳಲ್ಲೂ ವಿದ್ಯೆಯನ್ನು ಪಡೆಯುತ್ತೇವೆ. ಆದರೆ ತಪ್ಪೆಂದು ತಿಳಿದ ತಪ್ಪುದಾರಿಗೆ ಸಾಗುವುದು ಸೂಕ್ತವಲ್ಲ ಎಂದರು. ಹಲವಾರು ಕಾರ್ಯಕ್ರಮಗಳು ವಿಭಿನ್ನ ವಿಚಾರಗಳನ್ನು ತಿಳಿಸುತ್ತದೆ. ಈ ಮೂಲಕ ಕಣ್ಣ ಮುಂದೆ ನಡೆಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.22: ಕಳ್ಳತನ ಮಾಡುತ್ತಿರುವಾಗಲೇ ಸಿಸಿ ಕ್ಯಾಮೆರಾ ಲೈವ್ ಮಾನಿಟರಿಂಗ್ ಆಧರಿಸಿ ಕಳ್ಳನೋರ್ವ ಸೆರೆಯಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ. ಹೊಸಾಡು ಶಾಖೆಯ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಿಕಿಯ ಸರಳು ಮುರಿದು ಕಳ್ಳತನ ನಡೆದಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತ 10 ನಿಮಿಷದಲ್ಲೇ ಕಳ್ಳನ ಹೆಡೆಮುರಿ ಕಟ್ಟಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 1.47 ಕ್ಕೆ ಮುಳ್ಳಿಕಟ್ಟೆಯಲ್ಲಿರುವ ಸಹಕಾರಿ ಸಂಘ ಕಿಟಕಿಯ ಗ್ರಿಲ್ ಒಡೆದು ಕಳ್ಳ ಒಳನುಗ್ಗಿದ್ದಾನೆ. ಕುಂದಾಪುರ ಅಂಕದಕಟ್ಟೆಯಲ್ಲಿರುವ ಸೈನ್ ಇನ್ ಸೆಕ್ಯುರಿಟಿಯ ಸಿಸಿಟಿವಿ ಲೈವ್ ಮಾನಿಟರಿಂಗ್ನಲ್ಲಿ ಘಟನೆ ಬೆಳಕಿಗೆ ಬಂದು ಬೀಟ್ ಪೊಲೀಸರಿಗೆ ಮಾಹಿತಿ ನೀಡಲಾಯಿತು. 10 ನಿಮಿಷದಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಕಳ್ಳನನ್ನು ಹಿಡಿದರು. ಕಳ್ಳ ಕೇರಳದಿಂದ ಬಂದವನು ಎನ್ನಲಾಗಿದೆ. ಪೊಲೀಸ್ ಇಲಾಖೆಯಿಂದ ಹೆಚ್ಚಿನ ಮಾಹಿತಿ ಕುರಿತು ತನಿಖೆ ನಡೆಯುತ್ತಿದೆ. ಗಂಗೊಳ್ಳಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಸೈನ್ ಇನ್ ಸೆಕ್ಯೂರಿಟಿಯ ಲೈವ್ ಮಾನಿಟರಿಂಗ್ ಸಿಬ್ಬಂದಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಅಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ನಿರುದ್ಯೋಗಿ ಯುವಕ ಹಾಗೂ ಯುವತಿಯರು ಗರಿಷ್ಠ ಯೋಜನಾ ವೆಚ್ಚ ರೂ. 50 ಲಕ್ಷ ರೂ. ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20 ಲಕ್ಷ ರೂ. ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, ಯೋಜನಾ ವೆಚ್ಚದ ಶೇ.90 ರಿಂದ 95 ರಷ್ಟು ಸಾಲ ಸೌಲಭ್ಯಕ್ಕಾಗಿ ಬ್ಯಾಂಕುಗಳಿಗೆ ಶಿಫಾರಸ್ಸು ಮಾಡಲಾಗುವುದು. ಯೋಜನಾ ವೆಚ್ಚದ ಮೇಲೆ ಶೇ.15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಅರ್ಜಿದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಉತ್ಪಾದನಾ ಘಟಕವಾಗಿದ್ದಲ್ಲಿ 10 ಲಕ್ಷ ರೂ. ಮತ್ತು ಸೇವಾ ಘಟಕವಾಗಿದ್ದಲ್ಲಿ 5 ಲಕ್ಷ ರೂ. ಗಳಿಗಿಂತ ಮೇಲ್ಪಟ್ಟ ಯೋಜನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಯೋಜನೆಯಡಿ ಬಡಗಿತನ / ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ ತಯಾರಕರು, ಆಭರಣ ತಯಾರಿಕೆ, ಕುಂಬಾರಿಕೆ, ಶಿಲ್ಪಿ, ಪಾದರಕ್ಷೆ ತಯಾರಿಕೆ /ಚರ್ಮಗಾರಿಕೆ, ಗಾರೆ ಕೆಲಸದವರು / ಕಲ್ಲು ಕುಟ್ಟಿಗ, ಬುಟ್ಟಿ / ಚಾಪೆ / ಕಸಪೊರಕೆ ತಯಾರಿಕರು / ತೆಂಗಿನನಾರಿನ ಕೆಲಸಗಾರರು, ಗೊಂಬೆ / ಆಟಿಕೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಅಗಸರು, ಟೈಲರ್, ಮೀನಿನ ಬಲೆಗಳನ್ನು ನೇಯ್ಗೆ ಮಾಡುವವರು ಮುಂತಾದ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದು, ಜಿಲ್ಲೆಯಲ್ಲಿ ಸುಮಾರು 13,500 ವಿವಿಧ ಕುಶಲಕರ್ಮಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಂಡಿದ್ದು, ಈವರೆಗೂ ನೋಂದಣಿ ಮಾಡದೇ ಇರುವ ಕುಶಲಕರ್ಮಿಗಳೂ ಸಹಾ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಮೇಲ್ಕಂಡ ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರುವ, 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರಾಗಿರುವವರು ಕಳೆದ 5 ವರ್ಷಗಳಲ್ಲಿ ಸ್ವಯಂ ಉದ್ಯೋಗ /…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಓಂ ಶ್ರೀ ಯೋಗ ಕೇಂದ್ರದಿಂದ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ .ರಾಧಾಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು. 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದ ಬಸ್ರೂರು ಗ್ರಾಮದ ಸಾಧಕ ವಿದ್ಯಾರ್ಥಿ ಗಳಾದ ವಿಭಾ, ಸ್ಪಂದನ ಉಳ್ಳೂರು, ಸಾನಿಕಾ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಉದ್ಯಮಿ ಅನಿಲ್ ಕುಮಾರ್ ಶೆಟ್ಟಿ ಹಾಗೂ ನಿರುಪಮ ಹೆಗ್ಡೆ ಉಪಸ್ಥಿತರಿದ್ದರು. ಓಂ ಶ್ರೀ ಯೋಗ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ್ ಐತಾಳ್ ಸ್ವಾಗತಿಸಿದರು. ಕಾರ್ಯದರ್ಶಿ ಅಶೋಕ್ ಕೆರೆಕಟ್ಟೆ ವಂದಿಸಿದರು. ಶಿಕ್ಷಕಿ ಸಾರಿಕಾ ಅಶೋಕ್ ನಿರೂಪಿಸಿದರು.
