Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಇಂತಹ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯ ಸ್ಪರ್ಧೆ ‘ಉಗಮ-2025′ ರ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನೇರಳಕಟ್ಟೆ ನಾರಾಯಣ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆ ವಿದ್ಯಾರ್ಥಿಗಳಿಗೆ ತೆರೆದಿಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಲೆ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲು ಯಕ್ಷಗಾನವು ಆಧಾರವಾಗಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ 50ನೇ ವರ್ಷದ  ಕಾರ್ಯಕ್ರಮ “ಸುವರ್ಣಾಕ್ಷ” ನನ್ನು ಉದ್ಘಾಟಿಸಿ ಮಾತನಾಡಿದರು . ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಉಳಿಸುವಲ್ಲಿ  ಕರ್ನಾಟಕದ ಸಾಂಸ್ಕೃತಿಕ ಕಲೆ ಯಕ್ಷಗಾನವು ಬಹುದೊಡ್ಡ ಪಾತ್ರ ವಹಿಸಿದೆ. ಕಳೆದ 3 ವರ್ಷಗಳಿಂದ ಕುಂದಾಪುರದ 22 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡಿ ವಿದ್ಯಾರ್ಥಿಗಳಿಂದ ಪ್ರದರ್ಶನ ಏರ್ಪಡಿಸಲಾಗುತ್ತದೆ. ಇದರಿಂದ ಭಾಷಾ ಶುದ್ಧಿ ಮತ್ತು ನಿರರ್ಗಳತೆ, ಅಧ್ಯಯನಕ್ಕೂ ಸಹ ಸಹಕಾರಿಯಾಗುತ್ತದೆ.  ಅಲ್ಲದೆ ಕಲಿಕೆಗೆ ಒಳ್ಳೆಯ ವ್ಯವಸ್ಥೆಯಾಗುತ್ತದೆ.  ಈ ಕಲೆಯ ಪ್ರಾಮುಖ್ಯತೆ ಅರಿತು ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ಡಾ.ಹೆಚ್. ಶಾಂತಾರಾಮ್ ಅವರು ಆಶಯದಂತೆ ಆರಂಭವಾದ ಈ  ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಇಂದು ಸುವರ್ಣ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ “ನಿರಾಮಯ ಸೊಸೈಟಿ” ಮೂಲಕ ಅನುಷ್ಠಾನಗೊಳ್ಳುತ್ತಿರುವ” ಸಮುದಾಯ ಉಪ ಶಮನ ಆರೈಕೆ ಕೇಂದ್ರ” ವನ್ನು ಉದ್ಘಾಟಿಸಿ ಮಾತನಾಡಿದದರು, ಪ್ರತಿಯೊಬ್ಬರು ಸಮಾಜ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜ ಸೇವಕರು ಸಮಾಜಕ್ಕೆ ರಾಜ್ಯಕ್ಕೆ ದೇಶಕ್ಕೆ ಆದರ್ಶ ಆಗುತ್ತಾರೆ.‌ ಆರೈಕೆ ಕೇಂದ್ರದ ಮೂಲಕ ವಂಡ್ಸೆ ಗ್ರಾಮ ಪಂಚಾಯತಿ ಸಮಾಜ ಸೇವೆ ಮಾಡುತ್ತಿದೆ. ಜೊತೆಗೆ ಘನತಾಜ್ಯ ಘಟಕ ಲಾಭ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರ ವತಿಯಿಂದ ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್‌ಮೆಟಿಕ್ 2025 ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ಯು. ಪ್ರಥಮ ಸ್ಥಾನ ಹಾಗೂ ಅದ್ವಿತ್ ಐದನೇ ಸ್ಥಾನ ಗಳಿಸಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅವರು ಶನಿವಾರ ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ. ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮೀ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದು, ಇದರಿಂದ ಶೇ.88ರಷ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಿಜಾರಿನ ಶೋಭಾವನ ಆವರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನೂತನವಾಗಿ ಆರಂಭವಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜು, ಈ ಶೈಕ್ಷಣಿಕ ವರ್ಷದಿಂದಲೇ ಬಹು ಬೇಡಿಕೆಯ ನಾಲ್ಕು ವರ್ಷದ ಅವಧಿಯ ಬಿಎಸ್ಸಿ (ಆನರ್ಸ್) ಅಗ್ರಿಕಲ್ಚರ್ ಮತ್ತು ಬಿ.ಟೆಕ್ ಫುಡ್ ಟೆಕ್ನಾಲಜಿ ಕೋರ್ಸಗಳನ್ನು ಪ್ರಾರಂಭಿಸುತ್ತಿದೆ. ಈ ಕಾಲೇಜು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯದಡಿಯಲ್ಲಿ ಕರ‍್ಯನಿರ್ವಹಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಇದು ಕರಾವಳಿ ಕರ್ನಾಟಕದಲ್ಲಿ, ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣವನ್ನು ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಮತ್ತು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಹಟ್ಟಿಅಂಗಡಿ ವಲಯ ಇವುಗಳ ಸಂಯುಕ್ತ ಆಯೋಜನೆಯಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ  ಶುಕ್ರವಾರದಂದು ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಸುಬ್ರಹ್ಮಣ್ಯ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲೇ ಜೀವನದ ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಬೇಕಾದ ಜವಾಬ್ದಾರಿ ಪಾಲಕರ ಮತ್ತು ಅಧ್ಯಾಪಕರ ಹೆಗಲ ಮೇಲಿದೆ. ಮಕ್ಕಳೂ ತಮ್ಮ ಬಗ್ಗೆ ತಾವು ಅರಿತುಕೊಂಡಿರಬೇಕಾಗುತ್ತದೆ. ಮಕ್ಕಳು ಪ್ರೌಢಶಾಲೆಯಲ್ಲಿ ಇರುವಾಗಲೇ ಜೀವನಕ್ಕೆ ಸ್ಪಷ್ಟವಾದ ಗುರಿಯನ್ನು ನಿರ್ಧರಿಸಿಕೊಂಡಿರಬೇಕು. ಕೈಮುಷ್ಟಿಯಲ್ಲಿರುವ ಚಿಟ್ಟೆಯ ಭವಿಷ್ಯ ಆ ಕೈಯಲ್ಲಿರುವಂತೆ, ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಎನ್ನುತ್ತಾ ಪ್ರಾಪಂಚಿಕ ಘಟನೆಗಳ ಮೂಲಕ ಮಕ್ಕಳಿಗೆ ತಿಳಿ ಹೇಳಿದರು. ಮತ್ತೋರ್ವ ಮುಖ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: 2025ನೇ ಸಾಲಿನ ರಾಜ್ಯೋತ್ಸವದ ಉಡುಪಿ ಜಿಲ್ಲೆಯ ಸನ್ಮಾನಿತರ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ 77 ಮಂದಿಯ ಹೆಸರು ಗೌರವಕ್ಕೆ ಆಯ್ಕೆಗೊಂಡಿದೆ. ಪ್ರಶಸ್ತಿ ಪುರಸ್ಕೃತರ ವಿವರ ಈ ಕೆಳಕಂಡಂತಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ಸಚಿವರು, ಅಧಿಕಾರಿಗಳು ಬದ್ಧತೆಯಿಂದ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತಯಾರಿ ಮಾಡಲಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ 8000 ಕೋಟಿ ರೂಪಾಯಿ ಅನುದಾನವನ್ನು ನೀಡುತ್ತಿದೆ‌. ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದರು. ವಾರಾಹಿ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಈವರೆಗೂ ರೈತರಿಗೆ ಸರ್ಕಾರದಿಂದ ಪರಿಹಾರ ನೀಡಿರುವುದಿಲ್ಲ, ಈ ಕುರಿತು ಸರ್ಕಾರದಿಂದ ಹಣ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು. ಈ ಯೋಜನೆಯಲ್ಲಿ ಕೆಲವು ಜಮೀನುಗಳು ಡೀಮ್ಡ್ ಫಾರೆಸ್ಟ್ ಹಾಗೂ ಮೀಸಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ ಆಶ್ರಯದಲ್ಲಿ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ-2025, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 35ನೇ ಸಂಸ್ಥಾಪನಾ ದಿನಾಚರಣೆ ಮತ್ತು ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಕಾರ್ಯಕ್ರಮವು ನವಂಬರ್ 4ರಂದು ಮೀಪುಗುರಿ-ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಗ್ಗೆ 6.30ರಿಂದ ಕನ್ನಡ ಗ್ರಾಮದಲ್ಲಿ ಸುಪ್ರಭಾತ ಗಾಯನ, ಬೆಳಗ್ಗೆ 10.00ಕ್ಕೆ ಕಾಸರಗೋಡು ನಗರಸಭಾ ಕೌನ್ಸಿಲರ್ ಶಾರದಾ ಬಿ. ರಾಷ್ಟ್ರ ಧ್ವಜಾರೋಹಣ ಗೈಯಲಿದ್ದಾರೆ. ಕೌನ್ಸಿಲರ್ ವರಪ್ರಸಾದ್ ಕೋಟೆಕಣಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪಾರಾಧನೆ ಗೈಯುವರು. 10.30ಕ್ಕೆ ಡಾ| ಕನ್ಯಾನ ಸದಾಶಿವ ಶೆಟ್ಟಿ, ಸೇವಾ ಬಳಗ ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ, ಚಾರ್ಲ ಶಿವರಾಮ ಕಾಸರಗೋಡು 60 ಫೋಟೋ ಗ್ಯಾಲರಿ ಅನಾವರಣಗೊಳಿಸುವರು. 11.00ಕ್ಕೆ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ-2025 ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಉದ್ಘಾಟಿಸಲಿರುವರು. ಅಖಿಲ…

Read More