Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಬದುಕನ್ನು ತಾವೇ ರೂಪಿಸಿಕೊಳ್ಳಬೇಕು ಹಾಗೆಯೇ ಜೀವನದಲ್ಲಿ ನಾವು ಎಂದೂ ಹಿಂದೇಟನ್ನು ಹಾಕದೇ ಧೈರ್ಯಶಾಲಿಗಳಾಗಿ ಬದುಕಬೇಕು. ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿಯಾಗಿದೆ ಎಂದು ಬಸ್ರೂರು ಶ್ರೀ ಶಾರದ ಕಾಲೇಜಿನ ಉಪನ್ಯಾಸಕರಾದ ಅಕ್ಷಯ ಹೆಗ್ಡೆ ಮೊಳಹಳ್ಳಿ ತಿಳಿಸಿದರು. ಅವರು ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್‌ನಲ್ಲಿ ಯು.ಕೆ.ಜಿ. ಮಕ್ಕಳ ಗ್ರಾಜ್ಯುಯೇಶನ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಪೋಷಕರ ಸಹಕಾರವನ್ನು ಸ್ಮರಿಸಿದರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಾಲಾ ಸಿಬಂದ್ದಿಯವರು ಉಪಸ್ಥಿತರಿದ್ದರು. ಸೆಲ್ಫಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಗ್ರಾಮಾಂತರ ಪ್ರದೇಶದಲ್ಲಿ ಸಮಪರ್ಕಕ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯವಿಲ್ಲದ ಕಾರಣ ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯಿಂದ ಮಹಿಳೆಯರು ವಂಚಿತರಾಗುವಂತಾಗಿದೆ. ಕೆಎಸ್‌ಆಟರ್‌ಟಿಸಿ ಫರ್ಮಿಟ್ ಹೊಂದಿರುವ ಎಲ್ಲಾ ಭಾಗಕ್ಕು ಬಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಎಸ್‌ಆಟ್‌ಟಿಸಿ ಅಧಿಕಾರಿ, ತಾಲೂಕು ವ್ಯಾಪ್ತಿಯಲ್ಲಿರುವ ಪರ್ಮಿಟ್ ಹೊಂದಿರುವ ಎಲ್ಲಾ ಭಾಗಗಳಿಗೂ ಬಸ್ ವ್ಯವಸ್ಥೆ ಕಲ್ಪಿಸಲು ನಮ್ಮಲ್ಲಿ ಅಗತ್ಯ ಬಸ್‌ಗಳಿವೆ, ಆದರೆ ಚಾಲಕ, ನಿರ್ವಾಹಕರು ಸೇರಿದಂತೆ ಸುಮಾರು 35 ಸಿಬ್ಬಂದಿಗಳ ಕೊರತೆಯಿರುವುದರಿಂದ ಪ್ರಸ್ತುತ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ, ಶೀಘ್ರ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಗ್ರಾಮೀಣ ಭಾಗಗಳಿಗೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2024-25ನೇ ಸಾಲಿನಲ್ಲಿ 677 ಕೋಟಿ ರೂ. ವ್ಯವಹಾರ ನಡೆಸಿದ್ದು, 1.14 ಕೋಟಿ ರೂ. ನಿವ್ವಳ ಲಾಭ ಗಳಿಸಿ, ನಿರಂತರ ಕಳೆದ 4ನೇ ವರ್ಷಗಳಿಂದ 1ಕೋಟಿಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ. ವೆಂಕಟೇಶ್ ಭಾಸ್ಕರ್ ಶೆಣೈ ತಿಳಿಸಿದ್ದಾರೆ. ಸಂಘದ ವಾರ್ಷಿಕ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ. 17 ಏರಿಕೆ ಕಂಡಿದೆ. 3 ಶಾಖೆಗಳನ್ನು ಹೊಂದಿರುವ ಸಂಘವು ವರ್ಷಾಂತ್ಯಕ್ಕೆ 85.56 ಕೋಟಿ ರೂ. ಠೇವಣಿ, 82 ಕೋಟಿ ರೂ. ಸದಸ್ಯರ ಸಾಲ, 2.66 ಕೋಟಿ ರೂ. ಪಾಲು ಬಂಡವಾಳ, 5.96 ಕೋಟಿ ರೂ. ಲಾಭದಿಂದ ವಿಂಗಡಿಸಿದ ನಿಧಿಗಳನ್ನು ಹೊಂದಿದ್ದು, ಹಾಗೂ 24.53 ಕೋಟಿ ರೂ. ಸಹಕಾರಿ ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ 100 ಕೋಟಿ ದುಡಿಯುವ ಬಂಡವಾಳ ಹೊಂದಿರುವ ಉಡುಪಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವೇಗವಾಗಿ ಬೆಳೆಯುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಹಲವಾರು ಮಾಧ್ಯಮಗಳ ಮೂಲಕ ಇ-ಸಂಪನ್ಮೂಲ ಲಭ್ಯವಿದ್ದು ಇವುಗಳನ್ನು ಶಿಕ್ಷಕರು ಸೂಕ್ತ ರೀತಿಯಲ್ಲಿ ಬಳಸಿಕೊಂಡಲ್ಲಿ ತಮ್ಮ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಉತ್ತಮ ಗುಣಮಟ್ಟದ ಸಂಶೋಧನೆ ಸಾಧ್ಯ ಎಂದು ತೀರ್ಥಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕರಾದ ಪ್ರೇಮ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಒಂದು ದೇಶ ಒಂದು ಚಂದಾದಾರತ್ವ ಈ ವಿಚಾರವಾಗಿ ನಡೆದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ. ವೇದಿಕೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಗ್ನಿಪಥ್ ಯೋಜನೆಯಡಿ ಪ್ರಸಕ್ತ ಸಾಲಿನ ಅಗ್ನಿವೀರ್ ಇನ್‌ಟೇಕ್ ನೇಮಕಾತಿ ಪರೀಕ್ಷೆಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಜಿಲ್ಲೆಯ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಆನ್‌ಲೈನ್ ನೋಂದಣಿಗೆ ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.joinindianarmy.nic.in ಸಹಾಯವಾಣಿ ಸಂಖ್ಯೆ: 0824-2951279, ಎ.ಆರ್.ಓ ಮೊ.ನಂ: 9805505538 ಅಥವಾ ಮಂಗಳೂರು ಸೇನಾ ನೇಮಕಾತಿ ಕಚೇರಿ/ ಸೈನಿಕ ಮಂಡಳಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುಹಿಯುದೀನ್ ಜುಮಾ ಮಸ್ಜಿದ್ ಹೆನ್ನಾಬೈಲ್ ಇಲ್ಲಿಯ ಈದ್ಗಾ ಮೈದಾನದಲ್ಲಿ ಈದುಲ್ ಫಿತರ್ ಪ್ರಾರ್ಥನೆ ನೆರವೇರಿಸಿ, ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯಗಳನ್ನು ಕೋರಿದರು. ಪ್ರಾರ್ಥನೆಯ ನೇತೃತ್ವ ವಹಿಸಿದ ಧರ್ಮಗುರು ಮೌಲಾನಾ ಮುಹಮ್ಮದ್ ಹಫೀಜ್ ರಜ್ವಿ ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಂಜಾನ್ ಇಸ್ಲಾಮಿಕ್ ಧಾರ್ಮಿಕತೆಯ ಅತ್ಯಂತ ಕ್ರಿಯಾಶೀಲ ಮಾಸ. ಉಪವಾಸ, ಗ್ರಂಥ ಪಾರಾಯಣ, ದಾನ, ಆರಾಧನೆಯ ಪರಮೋಚ್ಚ ಅಭಿವ್ಯಕ್ತಿ. ಈ ಅಭಿವ್ಯಕ್ತಿಯಿಂದಲೇ ಮನುಷ್ಯನೊಬ್ಬನ ವ್ಯಕ್ತಿತ್ವ ಮತ್ತು ಭಕ್ತಿ ಪರಿಪೂರ್ಣಗೊಳ್ಳುತ್ತದೆ. ಇಂದು ಜಗತ್ತು ದೈಹಿಕ ಮತ್ತು ಮಾನಸಿಕವಾಗಿ ಹಿಂದೆಂದಿಗಿಂತ ಹೆಚ್ಚು ರೋಗಗ್ರಸ್ತವಾಗಿರಲು ಧಾರ್ಮಿಕತೆಯಿಂದ ದೂರ ಸರಿದದ್ದೇ ಮುಖ್ಯ ಕಾರಣ. ಪ್ರಸ್ತುತ ಜಗತ್ತಿನಲ್ಲಿ ಸ್ವಾರ್ಥಕ್ಕಾಗಿ ಧರ್ಮ ರಾಜಕೀಯದಲ್ಲಿದೆ ಬಿಟ್ಟರೆ ನೈಜ ಆಚರಣೆ ಮತ್ತು ಅಳವಡಿಕೆಯಲ್ಲಿ ಇಲ್ಲ. ಧರ್ಮದ ಆಚರಣೆ ಸೂಕ್ತ ಮತ್ತು ಸದೃಢವಾಗಿ ಜೀವಪರವಾಗಿ ಕಾಣಿಸದೆ ಇದ್ದಾಗ ಧರ್ಮದ ವಿಚಾರಗಳ ಮೇಲೆ ಅಪಚಾರ ಮತ್ತು ಅಪಪ್ರಚಾರಗಳು ನಡೆಯುತ್ತವೆ. ಹೀಗಾಗಿ, ಧಾರ್ಮಿಕರಾದವರು ಧರ್ಮವನ್ನು ಸರಿಯಾಗಿ ಪ್ರತಿನಿಧಿಸುವ ಮತ್ತು ಆಚರಿಸುವ ಮಹತ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 35 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ ಸಿ ದೇವಸ್ಥಾನಗಳ ವಿವರ:ಉಡುಪಿ ತಾಲೂಕಿನ ಉದ್ಯಾವರದ ದೇವಸ್ಥಾನಗಳಾದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ, ಶ್ರೀ ಶಂಭುಕಲ್ಲು ವೀರಭದ್ರ ದೇವಸ್ಥಾನ, ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿ ಶಿವಳ್ಳಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿಯ ಶ್ರೀ ಮಹಾವಿಷ್ಣು ದೇವಸ್ಥಾನ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ. ಕಾಪು ತಾಲೂಕು ಕಟಪಾಡಿ ಚೊಕ್ಕಾಡಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಟ್ಟುವಿನ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ. ಕಾರ್ಕಳ ತಾಲೂಕು ಬೈಲೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮರ್ಣೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಎರ್ಲಪಾಡಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ತಾರಾಪತಿ ಕಡಲ ಕಿನಾರೆಯಲ್ಲಿ ಕಳೆದ 50 ದಿನಗಳಿಂದ ಕಡಲಾಮೆಗಳ ಮೊಟ್ಟೆ ಸಂರಕ್ಷಣೆ ಕಾರ್ಯ ನಡೆಯುತ್ತಿದ್ದು, ಹ್ಯಾಚರಿಯಲ್ಲಿ ಸೋಮವಾರ ಮುಂಜಾನೆಯಿಂದ ಮೊಟ್ಟೆಗಳು ಒಡೆದು 100ಕ್ಕೂ ಅಧಿಕ ಮರಿಗಳು ಹೊರಬಂದು ಕಡಲು ಸೇರಿವೆ. ತಾರಾಪತಿಯಲ್ಲಿ ನಿರ್ಮಿಸಲಾದ ಎರಡು ಹ್ಯಾಚರಿಗಳ ಪೈಕಿ ಒಂದರಲ್ಲಿ ಕಳೆದ ವಾರ 85 ಮರಿಗಳು, ಉಳಿದಂತೆ ಕೊನೆಯ ಹ್ಯಾಚರಿಯಲ್ಲಿ ಸೋಮವಾರ ಮುಂಜಾನೆ 105 ಕಡಲಾಮೆ ಮರಿಗಳನ್ನು ಸುರಕ್ಷಿತವಾಗಿ ಕಡಲು ಸೇರಿದ್ದವು. ಮರವಂತೆಯಲ್ಲಿ ಒಂದು ಹ್ಯಾಚರಿಯಿಂದ 2 ವಾರಗಳ ಹಿಂದೆ 115 ಮರಿಗಳು ಸಮುದ್ರ ಸೇರಿದ್ದವು. ಒಟ್ಟು 3 ಹ್ಯಾಚರಿಗಳಿಂದ 300ಕ್ಕೂ ಅಧಿಕ ಕಡಲಾಮೆ ಮರಿಗಳು ನೈಸರ್ಗಿಕವಾಗಿ ಕಡಲು ಸೇರಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮೀನುಗಾರರು ಒಗ್ಗೂಡಿ ಅನುವು ಮಾಡಿಕೊಟ್ಟರು. ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ, ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಸ್ಥಳೀಯರ ಮಾಹಿತಿಯಂತೆ ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳು ಮುತುವರ್ಜಿ ವಹಿಸಿ ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ರೈಲ್ವೆ ಓವರ್‌ ಬ್ರಿಜ್‌ ಬಳಿ ನಡೆದ ಅಪಘಾತದಲ್ಲಿ ಟ್ರಾಕ್‌ ಮೆನ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಬಿಜೂರು ಗ್ರಾಮದ ಆನಂದ ಪೂಜಾರಿ (43) ಅವರ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರೀಯಗೊಂಡು ಮೃತಪಟ್ಟ ಖೇದಕರ ಘಟನೆ ನಡೆದಿದೆ. ಮೂಡ್ಲಕಟ್ಟೆ ಕೊಂಕಣ್ ರೈಲ್ವೆ ಓವರ್‌ ಬ್ರಿಜ್‌ ಬಳಿಯಲ್ಲಿ ಹೈಟ್‌ ಗೇಜ್‌ ದುರಸ್ತಿ ನಡೆಯುತ್ತಿದ್ದ ಸಂದರ್ಭ, ಸೋಮವಾರ ಕರ್ತವ್ಯದಲ್ಲಿದ್ದ ಆನಂದ ಪೂಜಾರಿ ಅವರ ತಲೆಗೆ ಹೈಟ್‌ ಗೇಜ್‌ನ ಕಂಬಿ ತಾಕಿ ಕೆಳಕ್ಕೆ ಬಿದ್ದದ್ದರಿಂದ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಆನಂದ ಪೂಜಾರಿ ಅವರ ಮೆದುಳು ನಿಷ್ಕ್ರೀಯಗೊಂಡಿರುವ ಬಗ್ಗೆ ತಿಳಿಸಿದ್ದರು. ಎರಡು ದಿನದ ಬಳಿಕ ಅವರು ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ. ಜನಾನುರಾಗಿ ಯುವಕ:ಬೈಂದೂರು ಬಿಲ್ಲವ ಸಂಘಟನೆ, ನಾರಾಯಣಗುರು ಕಲಾ ಮತ್ತು ಕ್ರೀಡಾ ಸಂಘ ಬಿಜೂರು, ಫ್ರೆಂಡ್ಸ್‌ ಕ್ಲಬ್‌ ಉಪ್ಪುಂದ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ಆನಂದ ಪೂಜಾರಿ ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಬೇಸಿಗೆ ಶಿಬಿರಕ್ಕಾಗಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕುಂದಾಪುರ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ 66 ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಬಾಲಕ ಸ್ಥಳೀಯ ಎಸ್ ಎಮ್ ಎಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ವಕ್ವಾಡಿ ಹೆಬ್ಬಾಗಿಲು ಮನೆ ಸಂತೋಷ್‌ ಶೆಟ್ಟಿ ಎಂಬುವರ ಪುತ್ರ ವಂಶಿ ಜಿ. ಶೆಟ್ಟಿ (14) ಎಂದು ಗುರುತಿಸಲಾಗಿದೆ. ಬಾಲಕ ವಂಶಿ ಜಿ. ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More