ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಕ್ಕಳಿಗೆ ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ನಾಟಕಗಳ ಬಗ್ಗೆ ಆಸಕ್ತಿ ಮೂಡಿಸಬೇಕು, ಇವುಗಳಿಂದ ಮಾತ್ರ ಅವರ ಮನಸ್ಸು ಅರಳಲು ಸಾಧ್ಯವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಲಾವಣ್ಯ ಬೈಂದೂರು ಆಶ್ರಯದಲ್ಲಿ ನಡೆದ ಮಾಜಿ ಶಾಸಕ ದಿ. ಕೆ.ಲಕ್ಷ್ಮೀನಾರಾಯಣ ಸ್ಮರಣಾರ್ಥ ಇದರ 48ನೇ ವರ್ಷದ ವಾರ್ಷಿಕೋತ್ಸವ, ರಂಗಪಂಚಮಿ – 2025 ರಂಗೋತ್ಸವ ಇದರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಲಾವಣ್ಯ ಸಂಸ್ಥೆಯ ಬೈಂದೂರು ಭಾಗದ ಜನರಿಗೆ ನಾಟಕಗಳ ಬಗ್ಗೆ ಅಭಿರುಚಿ ಮೂಡಿಸಿದ ಮೊದಲ ಸಂಸ್ಥೆ ಎಂಬ ಹೆಗ್ಗಳಿಗೆ ಗಳಿಸಿದೆ. ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದ ಈ ಸಂಸ್ಥೆ ರಂಗಭೂಮಿಗೆ ಅಪಾರ ಕೊಡುಗೆ ನೀಡಿದೆ. ಪ್ರಬುದ್ದ ಕಲಾವಿದರ ತಂಡವಾಗಿರುವ ಲಾವಣ್ಯ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವುದು ಮಹೋನ್ನತವಾದ ಸಾಧನೆಯಾಗಿದೆ. ಆಧುನಿಕತೆಯ ಬದಲಾವಣೆಗಳೊಂದಿಗೆ ರಂಗಭೂಮಿ ತನ್ನ ಮೌಲ್ಯಗಳನ್ನು ಉಳಿಸಿಕೊಂಡು ಮುನ್ನೆಡೆಯಬೇಕಾಗಿದೆ ಎಂದರು. ಖಂಬದಕೋಣೆ ರೈತರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕೊಠಾರಿ ಸೇವಾ ಸಂಘ ರಿ. ಕರ್ಕಿ ಕನ್ಯಾನ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ., ಕೆಎಂಸಿ ಮಣಿಪಾಲ ರಕ್ತನಿಧಿ ವಿಭಾಗ ಇವರ ಸಹಕಾರದಲ್ಲಿ ಶ್ರೀ ಚೌಡೇಶ್ವರಿ ಕನ್ವೆನ್ಷನ್ ಸೆಂಟರ್, ಕೊಠಾರಿ ಸಮುದಾಯ ಭವನ ಕರ್ಕಿ ಕನ್ಯಾನದಲ್ಲಿ ನಡೆದ ರಕ್ತದಾನ ಶಿಬಿರವನ್ನು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೌಕೂರು ಇದರ ಅಧ್ಯಕ್ಷರಾದ ಕಿಶನ್ ಹೆಗ್ಡೆ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘದ ಅಧ್ಯಕ್ಷರಾದ ಸೀತಾರಾಮ ಕೊಠಾರಿ ಸಭಾಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರಂಗನಾಥ್ ವೈ., ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸತೀಶ್ ಸಾಲ್ಯಾನ್ ಮಣಿಪಾಲ್, ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೋವನ್ ಡಿ’ ಕೋಸ್ತಾ, ಕುಂದಾಪುರ ವಿಜಯ ಕರ್ನಾಟಕ ಪತ್ರಿಕಾ ಸಂಪಾದಕರಾದ ಜಾನ್ ಡಿ’ಸೋಜ, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೀವ ಶೆಟ್ಟಿ, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಕೆ. ನಾಗಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು, ಕೌಶಲ್ ಆಚಾರ್ 209 ಅಂಕಗಳು, ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರು ಕ್ಷೇತ್ರದ ಜ್ವಲಂತ ಸಮಸ್ಯೆಗಳ ಪರಿಹಾರ ಮಾಡುವುದನ್ನು ಬಿಟ್ಟು ಕೇವಲ ಸಚಿವರುಗಳಿಗೆ, ಇಲಾಖಾ ಅಧಿಕಾರಿಗಳಿಗೆ ಪತ್ರಗಳನ್ನು ನೀಡುವುದು ಅದನ್ನಾ ಪತ್ರಿಕೆಗಳಲ್ಲಿ ಪ್ರಚಾರ ಪಡಿಸುವ ಕೆಲಸ ಮಾಡುತ್ತಿದ್ದಾರೆ ಬಿಟ್ಟರೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಮಾಡುವುದಿಲ್ಲಾ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಇವತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು ಕ್ಷೇತ್ರದ ಶಾಸಕರು ವಿರೋಧ ಪಕ್ಷದವರಿರಬಹುದು ಆದರೆ ಕ್ಷೇತ್ರದ ಕೆಲವೊಂದು ಸಮಸ್ಯೆ ಇಂದು ನಿನ್ನೆಯದಲ್ಲಾ, ಅದೆಷ್ಟೋ ವರ್ಷಗಳಿಂದ ಕುಂದಾಪುರದ ಶಾಸಕರು, ಸಂಸದರು, ಪುರಸಭೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಎಲ್ಲಾ ಬಿಜೆಪಿ ಆಡಳಿತದಲ್ಲೇ ಇದೆ ಆದರೆ ಎಲ್ಲಾ ಸಮಸ್ಯೆಗಳು, ಜನರ ಬೇಡಿಕೆಗಳು ಮಾತ್ರ ಹಾಗೆಯೇ ಉಳಿದುಕೊಂಡಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ಸಮಸ್ಯೆಗಳು ರಾಜ್ಯ ಸರಕಾರದಿಂದಲೇ ಪರಿಹಾರವಾಗಬೇಕು ಎಂದಿಲ್ಲಾ, ಕೇಂದ್ರ ಸರ್ಕಾರ ಕೂಡ ಜನರ ಸಮಸ್ಯೆಗಳನ್ನು ಪರಿಹರಿಸಬಹುದು, ಆದರೆ ಶಾಸಕರು ಮತ್ತು ಸಂಸದರು ಕೇಂದ್ರ ಸರ್ಕಾರದ ಪ್ರಯೋಜಿತ ಸಮಸ್ಯೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಡಿಸೆಂಬರ್ 2024ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಅಮನ್ರಾಜ್ (414), ಕಾರ್ತಿಕ್ ಇಂದ್ರ (412), ಸೌಖ್ಯ (389), ಆಕಾಶ್ ಎ. ಕಾಮತ್ (385), ವೈಷ್ಣವಿ ಬಿ.ವಿ. (384), ಕೆ. ದಿಶಾ ರಾವ್ (382), ರಾನ್ಸನ್ ಫೆರ್ನಾಂಡಿಸ್ (379), ರಾಮ್ನಾಥ್ ಎಸ್ ಪ್ರಭು (372), ರ್ಯ ಎಂ (370), ಸುಮಂತ್ ದೇಸಾಯಿ (360), ಸುಶಾಂತ್ ಎಸ್. (354), ಕೃತಿಕಾ (354), ಖುಷಿ ಯು. ಸಾಲಿಯಾನ್ (352), ಮೆಲನಿ (339), ಶಿವಾನಿ (335), ಸ್ಫೂರ್ತಿ (333), ಖುಷಿ ಹರೀಶ್ (331), ಭಾವನಾ (330), ಹರೀಶ್ (328), ಕೃತಿ (325), ಶ್ರೇಯಾ ಪೂಜಾರಿ (325), ಚಿನ್ಮಯ್ (315), ಶಿವಾನಿ ಕೋಟ್ಯಾನ್ (311), ಆಯುಷ್ ಎ ಕಾಮತ್ (307), ಪ್ರಕೃತಿ (307), ಕೌಶಲ್ (301), ಕವನ (300) ಹಾಗೂ ಐಶ್ವರ್ಯ (300) ಇವರು ಗ್ರೂಪ್ -01 ಮತ್ತು ಗ್ರೂಪ್ -02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 8 ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 16 ರಂದು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ನಿಯಮಗಳನ್ನು ಸರಿಯಾಗಿ ಅರಿತುಕೊಂಡರೆ ಅಪಘಾತಗಳಾಗುವುದನ್ನು ದೊಡ್ಡ ಪ್ರಮಾಣದಲ್ಲಿ ತಡೆಯಬಹುದು. ವಿದ್ಯಾರ್ಥಿಗಳು ಹೆಲ್ಮೆಟ್ ಧರಿಸುವುದು, ಚಾಲನೆ ಪರವಾನಿಗೆ ಪತ್ರ ಇಟ್ಟುಕೊಳ್ಳುವುದು ಸೇರಿದಂತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ನರೇಶ್ ಹೇಳಿದರು. ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ಸಂಚಾರಿ ನಿಯಮಗಳ ಕುರಿತ ‘ಟ್ರಾಫಿಕ್ ಅರಿವು’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರವಿಚಂದ್ರ ಸಂಚಾರಿ ನಿಯಮಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಚಾರಿ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸದೆ, ಪ್ರಾಮಾಣಿಕವಾಗಿ ಅದನ್ನು ಪಾಲಿಸಬೇಕು. ಹೆತ್ತವರ ಕನಸುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕು ಎಂದರು. ಕಾಲೇಜಿನ ಉಪ-ಪ್ರಾಂಶುಪಾಲ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಶ್ರದ್ಧಾ, ಮನೀಶ್, ಸಿಂಚನಾ ಅತ್ಯುತ್ತಮ ಅಂಕವನ್ನು ದಾಖಲಿಸಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ -2 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆ ನೇಮಕಾತಿ ಮಾಡಿಕೊಳ್ಳಲು, ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಬಿ.ಎಸ್ ಪದವಿ ಹಾಗೂ ಹೌಸ್ಮೆನ್ ಶಿಪ್ ಆಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಎಂ.ಬಿ.ಬಿ.ಎಸ್ ಎಲ್ಲಾ ವರ್ಷದ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ಕೆ.ಎಂ.ಸಿ ರಿಜಿಸ್ಟ್ರೇಷನ್ ಸರ್ಟಿಫಿಕೇಟ್, ಇಂಟರ್ನ್ಶಿಪ್ ಪ್ರಮಾಣ ಪತ್ರ ಗಳನ್ನು ಅರ್ಜಿ ನಮೂನೆಯನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ. ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮಾರ್ಚ್ 10 ರಂದು ನಡೆಯುವ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಅಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆಟ್ವರ್ಕ್ ಹಾಗೂ ಟವರ್ ಸಮಸ್ಯೆ ಕುರಿತು ಬಿ.ಎಸ್.ಎನ್.ಎಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಗ್ರಾಮೀಣ ಭಾಗದ ಬಿ.ಎಸ್.ಎನ್.ಎಲ್ ಟವರ್ಗಳ ಸೇವೆ ಲಭ್ಯತೆ ಇದ್ದರೂ ಸಹ, ಪೂರ್ಣ ಪ್ರಮಾಣದಲ್ಲಿ ಅವುಗಳ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ಸಾರ್ವಜನಿಕ ದೂರುಗಳು ಕೇಳಿ ಬರುತ್ತಿವೆ. ಗ್ರಾಮೀಣ ಭಾಗದಲ್ಲಿರುವ ಬಿ.ಎಸ್.ಎನ್.ಎಲ್ ಟವರ್ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡುವುದರೊಂದಿಗೆ ನೆಟ್ವರ್ಕ್ಗಳ ಲಭ್ಯತೆಯಾಗಿ ಜನರು ಉಪಯೋಗಪಡಿಸಿಕೊಳ್ಳುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ 196 ಬಿ.ಎಸ್.ಎನ್.ಎಲ್ ಟವರ್ ಗಳು ಕಾರ್ಯ ನಿರ್ವಹಿಸುತ್ತಿವೆ. 41 ಟವರ್ಗಳಿಗೆ 4 ಜಿ ಸಂಪರ್ಕ ನೀಡಲಾಗುತ್ತಿದೆ. 180 ಹೊಸ…
