ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 2024 ಡಿಸೆಂಬರ್ನಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಪ್ರೀಮಾ (250), ಮಹೇಶ್ (235), ಕೃತಿ ಎಮ್ (233), ಶ್ರೇಯಾ (223), ಚೇತನ್(223), ಶೆಟ್ಟಿ ತ್ರಿಶಾ(223), ಪ್ರಗತಿ(219), ಅಜ್ವೀನ್(218), ಸ್ವಾತಿ(218), ಜ್ಯೋತಿ(210), ಶ್ರೇಯಾ ಶೆಟ್ಟಿ (200),ಸುರಕ್ಷಾ (200) ಹಾಗೂ ಸಾಯಿ ಪ್ರಸಾದ್(200) ಇವರು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ.ಕುರಿಯನ್, ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ ಕೆ. ಜಿ., ಆಳ್ವಾಸ್ ಪದವಿ ಪೂರ್ವ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ಹಾಗೂ ಸಿ.ಎ. ಸಂಯೋಜಕರು ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ. ಇವತ್ತು ಅಲ್ಪಸಂಖ್ಯಾತರ ತುಷ್ಠಿಕರಣದ ಬಜೆಟ್ ಎನ್ನುವ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರುಗಳು ತಮ್ಮ, ತಮ್ಮ ಕ್ಷೇತ್ರಕ್ಕೆ ತಂದ ಯೋಜನೆಗಳನ್ನು ಸಾರ್ವಜನಿಕವಾಗಿ ತಿಳಿಸಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕೋಳಿ ಅಂಕಕ್ಕೆ ಅನುಮತಿ ಕೇಳುವ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ಸಕ್ಕರೆ ಕಾರ್ಖಾನೆ, ವರಾಹಿ ಯೋಜನೆ, ಸರ್ಕಾರಿ ವೈದ್ಯಕೀಯ ಕಾಲೇಜು, ಪ್ರವಾಸೋದ್ಯಮ ಅಭಿವೃದ್ಧಿ, ಕಿಂಡಿ ಅಣೆಕಟ್ಟುಗಳು, ಬ್ರಹ್ಮಾವರದಲ್ಲಿ ಕೃಷಿ ವಿಜ್ಞಾನ ಕಾಲೇಜು, ಪಶು ಆಹಾರ ಘಟಕ ಸ್ಥಾಪನೆ, ಉದ್ಯೋಗವಕಾಶ ಕಲ್ಪಿಸುವ ಉದ್ಯಮ ಹಾಗೂ ಉದ್ದಿಮೆಗಳು, ಉಪ ಸಾರಿಗೆ ಆಯುಕ್ತರ ಕಚೇರಿ ಇದು ಯಾವುದು ನೆನಪು ಬಾರದೇ ಇದ್ದದ್ದು ನಿಮ್ಮನ್ನು ಆಯ್ಕೆ ಮಾಡಿದ ಜನತೆಗೆ ನೀವು ಮಾಡಿದ ದ್ರೋಹ. ಕೇವಲ ಟೀಕೆ ಮಾತ್ರ ರಾಜಕಾರಣ ಎಂದು ತಿಳಿದಿರುವ ಜಿಲ್ಲೆಯ ಬಿಜೆಪಿ ಶಾಸಕರುಗಳು ಮುಖ್ಯಮಂತ್ರಿಗಳ ಬಳಿ ಹೋಗಿ ಬಜೆಟ್ ಮೇಲಿನ ಚರ್ಚೆಯಲ್ಲಿ ಜಿಲ್ಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಲಾವಿದ ಎನ್. ಗಣೇಶ್ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ತಾಲೂಕಿನ ಗಂಗೊಳ್ಳಿ ನಿವಾಸಿಯಾಗಿರುವ ಗಣೇಶ್ ಗಂಗೊಳ್ಳಿ ಅವರು ಖ್ಯಾತ ಸಂಗೀತ ಕಲಾವಿದರಾಗಿ, ಆಕಾಶವಾಣಿ ಕಲಾವಿದರಾಗಿ ತಮ್ಮ ಸುಶ್ರಾವ್ಯ ಕಂಠದ ಮೂಲಕ ನೂರಾರು ಜಾನಪದ ಗೀತೆಗಳಿಗೆ ಧ್ವನಿಯಾಗಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬೀದರ್ ಜಿಲ್ಲೆಯ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮೇ.15 ರಂದು 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 25,000 ಮೊತ್ತ, ಶಾಲು, ಹಾರ, ಫಲಕ, ಫಲತಾಂಬೂಲ ಒಳಗೊಂಡಿರುತ್ತದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಗುರುವಾರ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ. ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಟಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಊರ ಪರ ಊರಿನ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರವು ಅನೇಕ ಸಂಶೋಧನಾ ನಿರತ ವಿದ್ಯಾರ್ಥಿಗಳಿಗೆ ಸಹಕರಿಸುವುದರೊಂದಿಗೆ, ಕನ್ನಡ ಸಾರಸ್ವತ ಲೋಕಕ್ಕೆ ರಾಷ್ಟ್ರಕವಿ ಗೋವಿಂದ ಪೈ ಅವರ ಸಾಹಿತ್ಯ ಕೃತಿಗಳು ಅಪಾರ ಕೊಡುಗೆ ನೀಡಿವೆ ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ| ಬಿ. ಜಗದೀಶ್ ಶೆಟ್ಟಿ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘವು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ಕನ್ನಡ ಕರಾವಳಿ ಭಾಗದ ಸಾಂಸ್ಕೃತಿಕ ಕಿರುಚಿತ್ರ ಪ್ರದರ್ಶಿಸಲಾಯಿತು. ಸಂಶೋಧನ ಕೇಂದ್ರದ ಡಾ. ಅರುಣ್ ಕುಮಾರ್, ಕಾಲೇಜಿನ ಆಡಳಿತ ನಿಕಾಯಕರು ಮತ್ತು ಯಕ್ಷಗಾನ ಸಂಘದ ಸಂಯೋಜಕರಾದ ರಕ್ಷಿತ್ ರಾವ್ ಗುಜ್ಜಾಡಿ, ಸುಹಾಸ್ ಜಟ್ಟಿಮನೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿಎ ಫೌಂಡೇಶನ್ -2025ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲೇ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಸಾತ್ವಿಕ್ ವಿ. ಶೆಟ್ಟಿ -256, ಸಾನ್ವಿ ಆರ್. ಶೆಟ್ಟಿ -221 ಹಾಗೂ ಶ್ರೇಯಸ್ ಯು -208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷ ತರಬೇತಿ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಜಿಲ್ಲೆಯಲ್ಲೇ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಈ ಸಾಧಕ ಪ್ರತಿಭೆಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐ. ಸಿ. ಸಿ. ಕತಾರ್, ಮುಂಬೈ ಹಾಲ್ ನಲ್ಲಿ ನಡೆದ ಬಿಲ್ಲವಾಸ್ ಕತಾರ್ ನ ಕಾರ್ಯಕಾರಿ ಮತ್ತು ಸಲಹಾ ಮಂಡಳಿಯ ಸಭೆಯಲ್ಲಿ ಪ್ರಸ್ತುತ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಪರ್ಣ ಅವರನ್ನು ಸರ್ವಾನುಮತದಿಂದ ಬಿಲ್ಲವಾಸ್ ಕತಾರ್ ನ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಯಿತು ಎಂದು ಮಾಜಿ ಅಧ್ಯಕ್ಷರಾದ ರಘುನಾಥ್ ಅಂಚನ್ ಅವರು ಘೋಷಿಸಿ ಶುಭ ಹಾರೈಸಿದರು. ಅಪರ್ಣ ಅವರು ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್, ಮಂಗಳೂರು ನಿವಾಸಿಯಾಗಿದ್ದು, ಎಂ.ಬಿ.ಎ. ಮಾನವ ಸಂಪನ್ಮೂಲ ಪದವಿಯನ್ನು ಹೊಂದಿದ್ದಾರೆ. ಕತಾರ್ ನ ಸುಪ್ರಸಿದ್ದ ಕಂಪೆನಿಗಳಲ್ಲಿ ಒಂದಾದ ಗಲ್ಫಾರ್ ಅಲ್ ಮಿಸ್ನಾಡ್ ಕಂಪನಿಯಲ್ಲಿ ಮಾನವ ಸಂಪನ್ಮೂಲ ವಿಭಾಗೀಯ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಲ್ಲವಾಸ್ ಕತಾರ್ ನ ಉಪಾಧ್ಯಕ್ಷರಾಗಿ ಜಯರಾಮ ಸುವರ್ಣ ಅವರನ್ನು ನೇಮಿಸಲಾಯಿತು. ಪ್ರಸ್ತುತ ಕಾರ್ಯಕಾರಿ ಸಮಿತಿಯಲ್ಲಿ ಮಹೇಶ್ ಕುಮಾರ್ ಕಾರ್ಯದರ್ಶಿ, ಸಂದೀಪ್ ಕೋಟ್ಯಾನ್ ಜೊತೆ ಕಾರ್ಯದರ್ಶಿ, ಅಜಯ್ ಕೋಟ್ಯಾನ್ ಕೋಶಾಧಿಕಾರಿ, ಸೀಮಾ ಉಮೇಶ್ ಪೂಜಾರಿ ಕ್ರೀಡಾ ಕಾರ್ಯದರ್ಶಿ, ಪೂಜಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಚರಂಡಿಗೆ ಬಿದ್ದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಗುರುವಾರ ಸಂಭವಿಸಿದೆ. ಬೈಂದೂರು ಬಾಡ ನಿವಾಸಿ ಸಂಜಯ ಕುಮಾರ (52) ಮೃತ ದುರ್ದೈವಿ. ಕೊಂಕಣ ರೈಲ್ವೆಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಟ್ರಾಕ್ಮ್ಯಾನ್ ಕಾರ್ಯನಿರ್ವಹಿಸುತ್ತಿದ್ದು ಇವರು ರಾತ್ರಿ ಪಾಳಿ ಡ್ಯೂಟಿ ಮುಗಿಸಿ ಬೆಳಗ್ಗೆ 7 ರಿಂದ 7:30 ಸುಮಾರಿಗೆ ಭಟ್ಕಳ ದಿಂದ ಬೈಂದೂರು ಕಡೆಗೆ ತಮ್ಮ ಬೈಕ್ ಮೇಲೆ ತೆರಳುವ ಸಂದರ್ಭದಲ್ಲಿ ಘಟನೆ ನಡೆದಿದೆ. ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಆಕಸ್ಮಿಕವಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಇದ್ದ ಚರಂಡಿಯಲ್ಲಿ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದರು. ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ರೈಲ್ವೇ ಜೂನಿಯರ್ ಇಂಜಿನಿಯರ ಆದ ಪಾಯಸ್ ದೂರು ನೀಡಿದ್ದಾರೆ. ಗ್ರಾಮೀಣ ಠಾಣೆ ಪಿ.ಎಸ್.ಐ ರನ್ ಗೌಡ್ ಸ್ಥಳಕ್ಕೆ ತೆರಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮಾನವ ಹಕ್ಕು ಸಂಘವು ಜಂಟಿಯಾಗಿ ಜೆ.ಸಿ.ಐ ಕುಂದಾಪುರದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ “ಮಹಿಳೆ – ಕಾನೂನು ಮತ್ತು ಮಾನಸಿಕ ಒತ್ತಡ” ಎಂಬ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದ ಉಧ್ಘಾಟಕರಾಗಿ ಆಗಮಿಸಿದ ಜೆ.ಸಿ.ಐ ಸೌಜನ್ಯ ಹೆಗ್ಡೆ, ಪೂರ್ವ ರಾಷ್ಟ್ರೀಯ ಕಾನೂನು ಸಲಹೆಗಾರರು, ಜೆ.ಸಿ.ಐ ಇಂಡಿಯಾ ಇವರು “ಮಹಿಳೆ ಆಕೆಯ ಅರ್ಹತೆಗೆ ತಕ್ಕ ಕೆಲಸವನ್ನು ಮಾಡಲು ಅರ್ಹಳು. ಮಹಿಳೆ ತನ್ನ ಕನಸನ್ನು ನನಸಾಗಿಸಲು ಸದಾ ಪ್ರಯತ್ನಿಸುತ್ತಾಳೆ” ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ವಕೀಲರು ಮತ್ತು ವಕೀಲರ ಸಂಘದ ಅಧ್ಯಕ್ಷರಾದ ಪ್ರಮೋದ್ ಹಂದೆ ಅವರು ಮಾತನಾಡಿ “ಮನುಷ್ಯನು ತನ್ನಲ್ಲಿ ಋಣಾತ್ಮಕ ವಿಚಾರವನ್ನು ಬೆಳೆಸಿಕೊಳ್ಳದೇ, ಧನಾತ್ಮಕ ವಿಚಾರವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರು ತಾಳ್ಮೆಯಿಂದ ಯೋಚಿಸಿ ನಿರ್ಧಾರವನ್ನು ಕೈಗೊಳ್ಳಬೇಕೇ ಹೊರತು ದುಡುಕಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳಬಾರದು. ಹಾಗೆಯೇ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವನ್ನು ಮೂಡಿಸಿದರು”. ಕುಂದಾಪುರದ ಜೆ.ಸಿ.ಐ ಸ್ಥಾಪಕ ಅಧ್ಯಕ್ಷರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಯಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ವಿಜ್ಞಾನ ಮೇಳಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ವಿಜ್ಞಾನ, ಕಲೆಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು, ಜೊತೆಯಲ್ಲಿ ಸಂಹವನ ಮಾಡುವ ಸಾಮಾರ್ಥ್ಯವೂ ಬರುತ್ತದೆ. ವಂಡ್ಸೆಯ ಸರಕಾರಿ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ವಿಜ್ಞಾನ ಮತ್ತು ಕಲಾ ಮೇಳ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ. ಇದು ನಿರಂತರವಾಗಿ ನಡೆಯಲಿ ಎಂದು ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಅಭಿಪ್ರಾಯಪಟ್ಟರು. ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ನಡೆದ ವಿಜ್ಞಾನ ಹಾಗೂ ಕಲಾ ಮೇಳವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ. ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ನಿವೃತ್ತ ಸರಕಾರಿ ಅಧಿಕಾರಿ ಬಿ. ಎನ್. ಶೆಟ್ಟಿ ಬಗ್ವಾಡಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ,…
