Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ:  ಶಾಮ್ ಜಿ.ಎನ್. ಪೂಜಾರಿ ತನ್ನ 14ನೇ ವಯಸ್ಸಿನಲ್ಲಿ ಗರಿಷ್ಟ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ  ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆಯನ್ನು ನಿರ್ಮಿಸಿದ್ದಾನೆ. ಈತ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ಅವರ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ಸೋಮವಾರ ಸಂಜೆ 6 ಗಂಟೆಯ ಹೊತ್ತಿಗೆ ನಡೆದಿದೆ. ಕುಂದಾಪುರ ಕಾಲೇಜಿನಿಂದ ಕರಿಕಟ್ಟೆ ಕ್ರಾಸ್‌ ಬಳಿ ಬಸ್ ಇಳಿದು ಅಳ್ಳೆಗದ್ದೆ ರಸ್ತೆಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮೋಟಾರ್ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ವಿದ್ಯಾರ್ಥಿನಿಯ ಕುತ್ತಿಗೆಯಲ್ಲಿದ್ದ 10 ಗ್ರಾಂ ತೂಕದ ಸುಮಾರು 81 ಸಾವಿರ ಮೌಲ್ಯದ ಚಿನ್ನದ ಸರ ಅಪಹರಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 104ನೇ ತಿಂಗಳ ಕಾರ್ಯಕ್ರಮ ಇತ್ತೀಚಿಗೆ ದೇವಕಿ ಸುರೇಶ್ ಪ್ರಭು ತಲ್ಲೂರು ಇವರ ಪ್ರಾರ್ಥನೆಯೊಂದೆಗೆ ಪ್ರಾರಂಭವಾಯಿತು. ವೇದಿಕೆಯಲ್ಲಿ ಹಿರಿಯ ಗೊಂಬೆಯಾಟ ಕಲಾವಿದ ವೆಂಕಟರಮಣ ಬಿಡುವಾಳ್, ಪ್ರಶಾಂತ್ ನಾಯಕ್, ಅನಿತಾ ಪಿ. ನಾಯಕ್, ಎಮ್. ರತ್ನಾಕರ್ ಪೈ, ಎಮ್. ರಾಜಶ್ರೀ ಆರ್. ಪೈ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಭರತನಾಟ್ಯ ಯುವ ಕಲಾವಿದೆ ಪ್ರಣೀತಾ ಪ್ರಶಾಂತ್ ನಾಯಕ್ ಕೋಟ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಕೊನೆಯಲ್ಲಿ ಪ್ರಣೀತಾ ಪ್ರಶಾಂತ್ ನಾಯಕ್ ಕೋಟ ಅವರ ಭರತನಾಟ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್, ಬಂಟ್ವಾಡಿ ಅವರು ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಪ್ರತಿಷ್ಟಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಭಾಜನರಾದ ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ, ಕುಂದಾಪುರಕ್ಕೆ ಆಗಮಿಸಿ, ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕರು ಬಂಟ ಸಮುದಾಯದ ಮಹಾ ದಾನಿಗಳು ಆದ ಎಸ್.ಎಸ್. ಹೆಗ್ಡೆ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅವರ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ವತ್ಸಲಾ ದಯಾನಂದ ಶೆಟ್ಟಿ ಅವರು ಸನ್ಮಾನಿಸಿದರು. ಸಂಘದ ಸ್ಥಾಪಕಾಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಎಸ್ ಎಸ್. ಹೆಗ್ಡೆ ಅವರು ನಮ್ಮ ಸಮಾಜದ ಬಹುದೊಡ್ಡ ಆಸ್ತಿ ಎಂದರು. ಈ ಸಂದರ್ಭದಲ್ಲಿ ವಸಂತಿ ಮಂಜಯ್ಯ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿಧರ ಶೆಟ್ಟಿ ಹುಯ್ಯಾರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಮೂಕಾಂಬಿಕಾ ರೋಡ್‌ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಎಕ್ಸಿಕ್ಯೂಟಿವ್‌ ಲಾಂಜ್‌ ಆರಂಭಿಸಲಾಗಿದ್ದು, ಕೊಂಕಣ ರೈಲ್ವೇ ಮುಂಬೈನ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ನೂತನ ಸೌಕರ್ಯವನ್ನು ಉದ್ಘಾಟಿಸಿದರು. ಈ ವೇಳೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ, ಕಾರವಾರ ವಲಯದ ಆರ್.ಆರ್.ಎಂ ಆಶಾ ಶೆಟ್ಟಿ, ಸೀನಿಯರ್ ರೀಜಿನಲ್ ಟ್ರಾಫಿಕ್ ಮ್ಯಾನೇಜರ್ ದಿಳಿಪ್ ಡಿ. ಭಟ್, ಡಿಪ್ಯೂಟಿ ಸಿಸಿಎಂ ಆರ್.ಡಿ. ಗೋಲಬ್, ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಡೆಪ್ಯೂಟಿ ಚೀಫ್ ಇಂಜಿನಿಯರ್ ವಿಜಯ್ ಕುಮಾರ್, ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ಮಾಜಿ ಸದಸ್ಯ ಕೆ. ವೆಂಕಟೇಶ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು. ಎಕ್ಸಿಕ್ಯೂಟಿವ್‌ ಲಾಂಜ್ʼನಲ್ಲಿ ಎಸಿ, ಉತ್ತಮ ಆಸನ, ವೈ-ಫೈ, ಸುದ್ದಿ ಪತ್ರಿಕೆ ಹಾಗೂ ಪುಸ್ತಕ ಹೊಂದಿರುವ ಓದುಗರ ಗ್ಯಾಲರಿ ಹಾಗೂ ಟಿ.ವಿ ಇರಲಿದೆ. ಜೊತೆಗೆ ಕೆಫೆ, ಚಾರ್ಚಿಂಗ್ ಪಾಯಿಂಟ್ ಮೊದಲಾದ ಸೌಲಭ್ಯವಿದ್ದು, ಪ್ರಯಾಣಿಕರು ಪ್ರತಿಗಂಟೆಗೆ ರೂ.50 ಪಾವತಿಸಿ ರೈಲು ಪ್ರಯಾಣದ ಮೊದಲು ಇದರ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ಶಿಬಿರಾರ್ಥಿಗಳು ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭ ಕುಟುಂಬದ ಸದಸ್ಯರಾದ ರೇಖಾ ಶೆಟ್ಟಿ, ಮನೆಯ ಇತಿಹಾಸ ಹಾಗೂ ವಡ್ಡರ್ಸೆಯವರ ಕುರಿತು ಅನುಭವಗಳನ್ನು ಹಂಚಿಕೊAಡರು. ವಡ್ಡರ್ಸೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೊತ್ತಾಡಿ ವಿಜಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ಶಿಬಿರಧಿಕಾರಿಗಳಾದ ಡಾ| ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ, ಸಹ ಶಿಬಿರಧಿಕಾರಿಗಳಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಹರೀಶ್ ಕಾಂಚನ್, ರಜತ್ ಬಂಗೇರ, ಸುಹಾಸ್ ಜಟ್ಟಿಮನೆ, ಕಿಶೋರ್ ಕೃಷ್ಣ ಕಾಂಚನ್ ಹಾಗೂ ಕಚೇರಿ ಸಿಬ್ಬಂದಿಗಳಾದ ಸಚಿನ್, ಮಂಜುನಾಥ್ ಕುಲಾಲ್, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಾಜಿ ಶಾಸಕ ಎ. ಜಿ. ಕೊಡ್ಗಿ ಅವರ ಕನಸಿನ ಕೂಸಾದ ಪಶ್ಚಿಮವಾಹಿನಿ ಯೋಜನೆಯಿಂದ ಕರಾವಳಿಯ ಮೂರು ಜಿಲ್ಲೆಯ ಕೃಷಿಕರಿಗೆ ಸಾಕಷ್ಟು ಅನುಕೂಲವಾಗಿದ್ದರೂ, ಸಂಬಂತ ಅಧಿಕಾರಿಗಳ ಅಸಮಪರ್ಕಕ ಕಾರ್ಯನಿರ್ವಹಣೆಯಿಂದಾಗಿ ಇತ್ತೀಚಿನ ಬಹುತೇಕ ಕಿಂಡಿ ಅಣೆಕಟ್ಟುಗಳ ಕಾಮಗಾರಿ ಕಳಪೆಯಾಗಿದ್ದು, ರೈತರಿಗೆ ಸಾಕಷ್ಟು ಅನಾನುಕೂಲತೆ ಸೃಷ್ಟಿಸುತ್ತಿದೆ ಎಂದು ಜಿಲ್ಲಾ ರೈತರ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಕಿಡಿಕಾರಿದರು. ಹೇರಂಜಾಲು ಗುಡೇ ದೇವಸ್ಥಾನ ಏತ ನೀರಾವರಿ ಯೋಜನೆಯ ಸಂತ್ರಸ್ತರ ಸಮಾಲೋಚನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಯಾವುದೇ ಕಾಮಗಾರಿ ಪರಿಪೂರ್ಣ ಆಗಬೇಕಾದರೆ ಸ್ಥಳೀಯರು ಕಾಮಗಾರಿಯ ಆರಂಭದಲ್ಲೇ ಜಾಗ್ರತೆಯಿಂದ ಎಚ್ಚರಿಕೆ ವಹಿಸುವುದು ಅಗತ್ಯ, ನಮಗೆ ಅಕಾರಿಗಳೇ ಉತ್ತರದಾಯಿಗಳೇ ಹೊರತು ಗುತ್ತಿಗೆದಾರರಲ್ಲ ಎಂದ ಅವರು ರೈತರ ಹೋರಾಟಕ್ಕೆ ಹಾಗೂ ಸಂತ್ರಸ್ತರ ಜೊತೆಗೆ ನಿಲ್ಲುತ್ತೇವೆ, ನ್ಯಾಯುತ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು. ರೈತ ಸಂಘದ ಮುಖಂಡ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಯೋಜನೆ ಕುರಿತು ಮಾಹಿತಿ ತಿಳಿದುಕೊಳ್ಳಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗುತ್ತಿಗೆದಾರರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತ ದೇಶದಲ್ಲಿ ಯುವಜನತೆ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಶೇ.55ಕ್ಕಿಂತ ಯುವಸಂಪತ್ತು ನಮ್ಮ ದೇಶದಲ್ಲಿದೆ. ಜಾಗೃತ ಯುವಶಕ್ತಿ ಸಂಘಟಿತವಾಗಿ ಸಮಾಜಮುಖಿಯಾಗಿ ತೊಡಗಿಸಿಕೊಳ್ಳುತ್ತಿರುವುದು ಕಾಣುತ್ತಿದ್ದೇವೆ. ಸಶಕ್ತ ಯುವಜನತೆ ಸದುದ್ದೇಶದಿಂದ  ಜಾತಿಮತ ಧರ್ಮಬೇಧವಿಲ್ಲದೆ ಗ್ರಾಮದ ಒಳಿತಿಗೆ ತೊಡಗಿಸಿಕೊಳ್ಳುವುದರಿಂದ ಸಮಾಜದ ಏಳಿಗೆ ಸಾಧ್ಯ ಎಂದು ಎಂ.ಎಸ್ ಮಂಜ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರಾದ ರಾಜ್ಯೋತ್ಸವ ಪ್ರಶಸಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೇಳಿದರು. ಅವರು ವಂಡ್ಸೆ ಆತ್ರಾಡಿಯ ಕಂಬಳಗದ್ದೆ ವಠಾರದಲ್ಲಿ ಜರಗಿದ  ಮಾತೃಭೂಮಿ ಯುವ ಸಂಘಟನೆಯ 8ನೇ ವರ್ಷದ ವರ್ಷೋತ್ಸವ ‘ಯುವ ಸಂಭ್ರಮ-2025’ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರ ಮೇಲು ಹಲವು ಋಣಗಳು ಇರುತ್ತದೆ. ಸಮಾಜದ ಋಣವನ್ನು ಪ್ರತಿಯೊಬ್ಬರು ತೀರಿಸಬೇಕು. ಈ ಸಂಘಟನೆಯನ್ನು ನಾನೇ ಉದ್ಘಾಟಿಸಿದ್ದೆ. ಅಂದಿನಿಂತ ಇಂದಿನ ತನಕ ನಿರಂತರವಾಗಿ ಕಾರ್ಯಚಟುವಟಿಕೆಯಿಂದ ಮುನ್ನೆಡೆಯುತ್ತಿರುವುದು ಸಂತೋಷದ ವಿಚಾರ ಎಂದರು. ಮಾತೃಭೂಮಿ ಯುವ ಸಂಘಟನೆಯ ಅಧ್ಯಕ್ಷ ಶಶಿಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಕೈಗಾರಿಕೋದ್ಯಮಿ ಎನ್. ರಮೇಶ ದೇವಾಡಿಗ ಅಡಿಕೆಕೊಡ್ಲು ಅವರನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಗ್ರಾಮಾಂತರ ಬುದ್ಧಿಜೀವಿಗಳ ಬಳಗ ಮೈಸೂರು ಮತ್ತು ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ ರಿ. ಮೈಸೂರು – ಇವರ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ 40ನೇ ವಾರ್ಷಿಕೋತ್ಸವದ ಅಂಗವಾಗಿ “ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವ”ವು 2025 ಮೈಸೂರಿನ ಮಹಾರಾಜ ಇನ್‌ಸ್ಟಿಟ್ಯೂಟ್ ಆಫ್ ಇಂಜಿನೀಯರ್ಸ್‌ ಆಡಿಟೋರಿಯಂನಲ್ಲಿ ಇತ್ತೀಚಿಗೆ ನಡೆಯಿತು. ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ನಾಡೋಜ ಡಾ. ಮಹೇಶ್ ಜೋಷಿ ಅವರು ತಮ್ಮ ಅಮೃತಹಸ್ತದಿಂದ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕದ ಅಭ್ಯುದಯಕ್ಕೆ ನೀಡಿರುವ ವಿವಿಧ ಅತ್ಯಮೂಲ್ಯ ಕೊಡುಗೆಗಳನ್ನು ಪರಿಗಣಿಸಿ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ “ರಾಷ್ಟ್ರಕವಿ ಕುವೆಂಪು ಸಾಂಸ್ಕೃತಿಕ ಚೇತನ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳು ಹಾಗೂ ವಿವಿಧ ಹಲವಾರು ಕ್ಷೇತ್ರಗಳ ಗಣ್ಯ ಸಾಧಕರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ಕಲಾರಾಧಕರು; ಕಲಾ ಪೋಷಕರೂ ಆದ ಶಯದೇವಿಸುತೆ ಮರವಂತೆಯವರು ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ಪತ್ರಿಕೋದ್ಯಮ ಹಾಗೂ ಹಲವಾರು ಮಾಧ್ಯಮ ರಂಗ -…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳು ಎಳವೆಯಲ್ಲೇ ದುರಾಸೆಗೆ ಬಲಿಯಾಗಿ ದುಶ್ಚಟಗಳ ದಾಸರಾಗುತ್ತಿದ್ದಾರೆ. ಮೋಜಿಗಾಗಿ ಪ್ರಾರಂಭಿಸಿದ ದುಶ್ಚಟಗಳು ಜೀವವನ್ನೇ ಬಲಿ ತೆಗೆದುಕೊಳ್ಳುತ್ತಿದೆ. ವಿದ್ಯಾವಂತರೇ ಅನೇಕ ಕಾರಣಗಳಿಂದ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಪೋಷಕರು ಮಕ್ಕಳ ಮೇಲಿಟ್ಟಿರುವ ಅತಿಯಾದ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯನ್ನು ಯುವ ಜನತೆ ದುರುಪಯೋಗಪಡಿಸಿಕೊಳ್ಳುತ್ತಿದೆ. ಮಾದಕ ವಸ್ತುಗಳ ಸೇವನೆಗೆ ಬಲಿಯಾಗದಂತೆ ನೋಡಿಕೊಳ್ಳುವುದು ಮತ್ತು ಬಲಿಯಾದವರನ್ನು ಅದರ ದುಷ್ಪರಿಣಾಮಗಳಿಂದ ಮುಕ್ತಿಗೊಳಿಸುವ ಕಾರ್ಯ ನಡೆಯಬೇಕಿದೆ ಎಂದು ಬೈಂದೂರು ತಾಲೂಕು ಜನಜಾಜಗೃತಿ ವೇದಿಕೆ ಸದಸ್ಯ ಬಿ. ರಾಘವೇಂದ್ರ ಪೈ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು ತ್ರಾಸಿ ವಲಯ, ಜನಜಾಗೃತಿ ವೇದಿಕೆ ತ್ರಾಸಿ ವಲಯ ಮತ್ತು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಸ.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…

Read More