ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಿ. ಹಾಗೂ ಬೆಂಗಳೂರಿನ ಸಪ್ನ ಬುಕ್ ಹೌಸ್ನ ಸಹಯೋಗದಲ್ಲಿ ನಡೆದ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಡಾ. ಎಂ. ವೀರಪ್ಪ ಮೊಯಿಲಿ ಅವರ ‘’ವಿಶ್ವಸಂಸ್ಕೃತಿ ಮಹಾಯಾನ’’ – ಸಂಪುಟ-2, ಗದ್ಯ ಮಹಾಕಾವ್ಯ ಲೋಕಾರ್ಪಣೆ ಸಮಾರಂಭ ಭಾನುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿ ಆವರಣದ ಡಾ. ವಿಎಸ್ ಆಚರ್ಯ ಸಭಾಭವನದಲ್ಲಿ ಜರುಗಿತು. ಮಹಾಕಾವ್ಯ ಲೋಕಾರ್ಪಣೆಗೊಳಿಸಿ ಮಾತನಾಡಿದ ಮೈಸೂರು ವಿವಿಯ ನಿವೃತ್ತ ಆಂಗ್ಲ ಪ್ರಾಧ್ಯಪಕ ಹಾಗೂ ಖ್ಯಾತ ವಿಮರ್ಶಕ ಪ್ರೋ ನಾಗಣ್ಣ, ಮೊಯಿಲಿಯವರ ಸಂಕಲ್ಪಕ್ಕೂ ಅದರ ಸಾಕ್ಷಾತ್ಕರಕ್ಕೂ ಅಂತರವೇ ಇರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಬರ್ಹಿಲೋಕದಲ್ಲಿ ಜನಕಲ್ಯಾಣದಲ್ಲಿ ತೊಡಗಿರುವಂತೆ, ಅಂತರದಂಗದಲ್ಲಿ ಹಲವಾರು ವಿಚಾರಗಳಿಗೆ ಅಕ್ಷರ ರೂಪಕೊಡುವಲ್ಲಿ ಧ್ಯಾನಸ್ಥರಾಗಿರುತ್ತಾರೆ. ಇವರು ಅಪರೂಪದ ಚೈತನ್ಯವೇ ಸರಿ. ವೀರಪ್ಪ ಮೊಯಿಲಿಯವರ ‘’ವಿಶ್ವಸಂಸ್ಕೃತಿ ಮಹಾಯಾನ’’ದ ಹೋಲಿಕೆ ಏನಾದರೂ ಇದ್ದರೆ, ಅಮೇರಿಕಾದ ಇತಿಹಾಸತಜ್ಞ ವಿಲ್ ಡ್ಯೂರಾಂಟ್ ಬರೆದಿರುವ ‘ನಾಗರೀಕತೆಯ ಕಥೆ’ ಎನ್ನುವ 11 ಸಂಪುಟಕ್ಕೆ ಸರಿಹೊಂದಬಲ್ಲದು. ಪ್ರಾಚ್ಛ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜ.12: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ನೇತೃತ್ವದ ರೈತಶಕ್ತಿ ಸಹಕಾರಿ ಒಕ್ಕೂಟ 13ರಲ್ಲಿ 11 ಸ್ಥಾನಗಳನ್ನು ಗೆದ್ದು ಮೇಲುಗೈ ಸಾಧಿಸಿದೆ. ರೈತಶಕ್ತಿ ಸಹಕಾರಿ ಒಕ್ಕೂಟದಲ್ಲಿ ಸಾಮಾನ್ಯ ಕ್ಷೇತ್ರದಿಂದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಗುರುರಾಜ ಹೆಬ್ಬಾರ್, ಪ್ರಕಾಶ್ ಎನ್. ಪೂಜಾರಿ, ಮಂಜು ದೇವಾಡಿಗ, ರಾಜೇಶ್ ದೇವಾಡಿಗ, ಹಿಂದುಳಿದ ವರ್ಗ ಬಿ ಕ್ಷೇತ್ರದಲ್ಲಿ ಉದಯ್ ಕುಮಾರ್ ಶೆಟ್ಟಿ, ಮಹಿಳಾ ಮೀಸಲು ಕ್ಷೇತ್ರದಿಂದ ದಿನಿತಾ ಶೆಟ್ಟಿ, ಕೆ. ಲೀಲಾ ಪೂಜಾರಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಈಶ್ವರ ಹಕ್ಲತೋಡು, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಹೂವ ನಾಯ್ಕ್ ಗೆಲುವು ಸಾಧಿಸಿದ್ದಾರೆ. ಹಿಂದುಳಿದ ವರ್ಗ ಎ ಕ್ಷೇತ್ರಕ್ಕೆ ಮೋಹನ್ ಪೂಜಾರಿ ಅವರು ಅವಿರೋಧ ಆಯ್ಕೆಯಾಗಿದ್ದರು. ರೈತಬಂಧು ಒಕ್ಕೂಟದಲ್ಲಿ ಸಾಮಾನ್ಯ ಕ್ಷೇತ್ರದಿಂದ ಬಿ.ಎಸ್. ಸುರೇಶ್ ಶೆಟ್ಟಿ, ಭರತ್ ದೇವಾಡಿಗ ಆಯ್ಕೆಯಾಗಿದ್ದಾರೆ. ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಘದ ಚುನಾವಣೆ ನಡೆದಿದ್ದು ಚುನಾವಣಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ಇವರ ಆಶ್ರಯದ 2024ರಲ್ಲಿ ನಡೆದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಯಲ್ಲಿ ಮನ್ವಿತಾ ಬಿ. ವಿ. ತ್ರಾಸಿ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಿರಿಯ ದರ್ಜೆ ಪರೀಕ್ಷೆಯಲ್ಲಿ 88.75%ರಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಲಾವಣ್ಯ ಶ್ರೀಧರ ಶೆಟ್ಟಿಗಾರ್ ತ್ರಾಸಿ ಅವರ ಶಿಷ್ಯೆಯಾಗಿದ್ದು, ತ್ರಾಸಿ ವಿಜಯ ಶೆಟ್ಟಿಗಾರ್ ಮತ್ತು ಭುವನೇಶ್ವರಿ ದಂಪತಿ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜ.10 ರಿಂದ 12ರ ವರೆಗೆ ನಡೆದ ಸೌತ್ ಏಶಿಯನ್ ಕ್ರೀಡಾಕೂಟದಲ್ಲಿ ಭಾರತದ ಪ್ರತಿನಿಧಿಯಾಗಿ 4×100 ರಿಲೇ ಓಟದಲ್ಲಿ ಸ್ಪರ್ಧೆಸಿದ ಉಡುಪಿ ಡಿಎಆರ್ನ ಮೀಸಲು ಪೊಲೀಸ್ ಸಹಾಯಕ ಉಪನಿರೀಕ್ಷಕ ಶಂಕರ ಪೂಜಾರಿ ಅವರು ಚಿನ್ನದ ಪದಕ ಗಳಿಸಿರುತ್ತಾರೆ. ಈ ಕ್ರೀಡಾಕೂಟದಲ್ಲಿ ದೇಶ ವಿದೇಶಗಳ ಸಾವಿರಾರು ಕ್ರೀಡಾ ಪಟುಗಳು ಭಾಗವಹಿಸಿರುತ್ತಾರೆ. ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ. 2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು.ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ಇವರ ಆಶ್ರಯದಲ್ಲಿ 2024ರಲ್ಲಿ ನಡೆದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಯಲ್ಲಿ ಕುಂದಾಪುರದ ನಮಸ್ವಿ ಎಸ್. ಶೆಟ್ಟಿಗಾರ್ ಅವರು ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ 92.85% ಅಂಕಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಶ್ರುತಿ ಭಟ್ ಉದ್ಯಾವರ ಹಾಗೂ ಪ್ರಸ್ತುತ ಆನಂದ್ ಕೇರಳ ಅವರಲ್ಲಿ ಭರತನಾಟ್ಯ ಅಭ್ಯಾಸವನ್ನು ಮಾಡುತ್ತಿದ್ದಳು. ಅವರು ಕುಂದಾಪುರ ತಾಲೂಕಿನ ಶ್ರೀಧರ್ ಕುಮಾರ್ ಹಾಗೂ ಲಾವಣ್ಯ ಶ್ರೀಧರ್ ದಂಪತಿಗಳ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್. ಬೋಸರಾಜು ಇಂದು ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ, ಸದಸ್ಯರಾದ ರಾಜೇಶ ಕಾರಂತ್, ಧನಾಕ್ಷಿ ಪೂಜಾರಿ, ಸುಧಾ ಕೆ. ಮೊಗವೀರ, ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಶೆಟ್ಟಿ ಮತ್ತು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಪ್ರಾರಂಭಿಕ ಹಂತದ ಸಿಎಮ್ಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಮಹೋನ್ನತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವೈಷ್ಣವಿ ಹಾಗೂ ಕಾರ್ತಿಕ್ ಕೆ. ಬಿಲ್ಲವ ಅವರು ಸಿ.ಎಂ.ಎ. ಇಂಟರ್ಮೀಡಿಯೇಟ್ ಪ್ರೋಗ್ರಾಮ್ಗೆ ಅರ್ಹತೆ ಪಡೆದಿದ್ದಾರೆ. ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳು ತರಬೇತಿ ಹಾಗೂ ಮಾರ್ಗದರ್ಶನ ಪಡೆದು ಈ ಸಾಧನೆಗೈದಿದ್ದಾರೆ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರ ಮಡಾಮಕ್ಕಿ ಗ್ರಾಮದ ಶಿರಂಗೂರು ಎನ್ನುವಲ್ಲಿ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಸತೀಶ್ (47) ಅವರು ಸಾವನ್ನಪ್ಪಿದ ಘಟನೆ ಜ. 9ರಂದು ರಾತ್ರಿ ಸಂಭವಿಸಿದೆ. ಅವರು ತಾಯಿ ಗಂಗಮ್ಮ ಅವರೊಂದಿಗೆ ಶಿರಂಗೂರಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಜ. 9ರ ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದು, ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋದವರು ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಜ. 17 ರಿಂದ 23 ರವರೆಗೆ ಕರ್ನಾಟಕ ಕ್ರೀಡಾಕೂಟವನ್ನು ಸುವ್ಯವಸ್ಥಿತವಾಗಿ ನಡೆಸಲು ರಚಿಸಿರುವ ಸಮಿತಿಯ ಸದಸ್ಯರುಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025 ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸುವ ಕ್ರೀಡಾ ಪಟುಗಳಿಗೆ, ತೀರ್ಪುಗಾರರಿಗೆ ಹಾಗೂ ಅಧಿಕಾರಿಗಳಿಗೆ ತಂಗಲು ವಸತಿ ಗೃಹಗಳ ವ್ಯವಸ್ಥೆ, ಊಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾ ಚಟುವಟಿಕೆ ನಡೆಸಲು ಸುವ್ಯವಸ್ಥಿತ ಮೈದಾನ ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡುವುದರ ಜೊತೆಗೆ ಯಾವುದೇ ರೀತಿಯಲ್ಲಿ ಕಿಂಚಿತ್ತೂ ತೊಂದರೆಗಳಾಗದಂತೆ ಉಪ ಸಮಿತಿಯ ಸದಸ್ಯರುಗಳು ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲೆಗೆ ಕ್ರೀಡಾ ಕೂಟಕ್ಕೆ ಆಗಮಿಸುವ ಪ್ರತಿಯೊಬ್ಬರೂ ನಮಗೆ ಅತಿಥಿಗಳಿದ್ದಂತೆ. ಅವರ ಸಂಚಾರಕ್ಕೆ ಅನುಗುಣವಾಗಿ ವಾಹನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಜ.5 ರಿಂದ 6 ರವರೆಗೆ ಯಾದಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿ ಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಸಹನಾ ಖಾರ್ವಿ ಮತ್ತು ಮಾನ್ಯ ಖಾರ್ವಿ ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಸಹನಾ ಖಾರ್ವಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ಬಳಗ ಅಭಿನಂದನೆ ಸಲ್ಲಿಸಿದೆ.
