ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-01 ಹುದ್ದೆಯ ನೇಮಕಾತಿಗಾಗಿ ಷರತ್ತಿಗೊಳಪಟ್ಟು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಒಂದು ವರ್ಷ ಹೆಚ್ಚಿನ ಅನುಭವವುಳ್ಳ ಅಭ್ಯರ್ಥಿಗಳು ಜನವರಿ 18 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಇತ್ತೀಚಿಗೆ ನೆರವೇರಿತು. ಬೈಂದೂರು ವಿಧಾನಸಭಾ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ದೇವಾಡಿಗ ಅವರು ಅಧ್ಯಕ್ಷತೆ ವಹಿಸಿದರು. ನಾವುಂದ ಗ್ರಾಮ ಪಂಚಾಯತ್ ಸದಸ್ಯರಾದ ಜಾನಕಿ ಮೊಗವೀರ ಮತ್ತು ರಾಮ ಪೂಜಾರಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜು ಪ್ರಾಂಶುಪಾಲರಾದ ಸುಜಾತಾ ಎಂ., ಉಪಪ್ರಾಂಶುಪಾಲಾರದ ಶಶಿಕಲಾ ನಾಯ್ಕ್, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರವೀಣ್ ಪೂಜಾರಿ, ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಸತೀಶ್ ಚಂದನ್ ಉಪಸ್ಥಿತರಿದ್ದರು. ಗಣಿತ ಅಧ್ಯಾಪಕಿಯಾದ ಮುಕ್ತಾ ಅವರು ಸ್ವಾಗತಿಸಿದರು. ಗಣಿತ ಉಪನ್ಯಾಸಕಿಯಾದ ಸಾವಿತ್ರಿ ಎಸ್. ಅವರು ಧನ್ಯವಾದ ಸಮರ್ಪಿಸಿದರು. ಇತಿಹಾಸ ಉಪನ್ಯಾಸಕರಾದ ಗಣೇಶ ಎಂ. ಮತ್ತು ಅಧ್ಯಾಪಕರಾದ ಕರುಣಾಕರ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ತಾಲೂಕಿನವರಾಗಿದ್ದು, ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ 3.5 ಲಕ್ಷ ರೂ. ವಿದ್ಯಾರ್ಥಿ ಸಹಾಯ ಧನ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ನಿಂದ ವಿತರಿಸಲಾಯಿತು. ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೂರವಾಣಿ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ಜಿ. ಶ್ರೀಧರ ಶೆಟ್ಟಿ ವಂಡ್ಸೆ, ಸಹಾಯ ಧನ ವಿತರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. “ಸಾಮಾಜಿಕ ಧುರೀಣ ದಿವಂಗತ ಗಿಳಿಯಾರು ಕುಶಲ ಹೆಗ್ಡೆ ಅವರು ವಿದ್ಯಾರ್ಥಿಗಳನ್ನು ತುಂಬ ಪ್ರೀತಿಸುತ್ತಿದ್ದರು. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತಿದ್ದರು. ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾಗಿದ್ದು, ವಿಶ್ವಾಸಾರ್ಹವಾದ ಬದುಕು ನಡೆಸುವ ಹೆಜ್ಜೆಯಾಗಿದೆ. ಪೋಷಕರು ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕೃತಿ ಬೆಳೆಸಬೇಕು. ವಿದ್ಯಾರ್ಥಿಗಳೂ ಶಿಕ್ಷಣ ಪೂರೈಸಿ ಸಂಪಾದನೆಯ ಶಕ್ತಿ ಪಡೆದಾಗ ಸಮಾಜ ಮೆಚ್ಚುವಂತೆ ಜೀವನದಲ್ಲಿ ಸಾಧನೆ ಮಾಡಬೇಕು.” ಎಂದರು. ಹಿರಿಯ ವಕೀಲರಾದ ಜಿ. ಸಂತೋಷ ಕುಮಾರ್ ಶೆಟ್ಟಿ ಮಾತನಾಡಿ, “ಹೆತ್ತವರು ಮಕ್ಕಳ ಭವಿಷ್ಯಕ್ಕಾಗಿ ಕಷ್ಟಪಟ್ಟು ಉನ್ನತ ಶಿಕ್ಷಣ ಒದಗಿಸಿದಾಗ ಅವರು ಹೆಮ್ಮೆ ಪಡುವಂತೆ, ಸಮಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಹಿಳಾ ಮಂಡಲ ರಿ. ಕೋಟ ತನ್ನ ಅರವತ್ತರ ಸಡಗರದಲ್ಲಿ ನೀಡುವ ಸಾಧನ ಪುರಸ್ಕಾರವನ್ನು ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ ಅವರಿಗೆ ನೀಡಿ ಗೌರವಿಸಲಿದೆ. ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ, ಕಥೆಗಾರ, ವಿಮರ್ಶಕ, ಲೇಖಕ, ಅಂಕಣ ಬರಹಗಾರ, ನಿರೂಪಕ, ನಟ, ರಾಜ್ಯ ಸಂಪನ್ಮೂಲ ವ್ಯಕ್ತಿ, ಕಿರುಚಿತ್ರಗಳ ನಿರ್ಮಾಪಕ, ಶಿಕ್ಷಣ ಕ್ಷೇತ್ರಗಳ ಕಲಿಕೆಯ ನಾವೀನ್ಯ ವಿನ್ಯಾಸಗಾರ, ಕಾದಂಬರಿಕಾರ 50 ಮಿಕ್ಕಿದ ಲೇಖನಗಳ ಮತ್ತು 28 ಕೃತಿಗಳ ರಚನಕಾರ ಕಾರಂತ ಥೀಮ್ ಪಾರ್ಕಿನ ಕಾರ್ಯಕ್ರಮಗಳ ರೂವಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ’ಸುಗಂಧಿ’ ಚಲನಚಿತ್ರದ ನಿರ್ಮಾಪಕ ಸದಾ ಹೊಸ ಆವಿಷ್ಕಾರದ ಚಿಂತಕರಾಗಿರುವ ಶ್ರೀಯುತರಿಗೆ ನೀಡಿ ಗೌರವಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಬಿ. ಬ್ಲಾಕ್, ರೂ.ನಂ. 201 ರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇಲ್ಲಿ ಅಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿಯೂ ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದ್ದು, ಆಯಾ ತಾಲೂಕಿನ ಅಭ್ಯರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು. ಪ್ರತಿ ತಿಂಗಳು ಪದವಿಧರರಿಗೆ 3,000 ರೂ. ಹಾಗೂ ಡಿಪ್ಲೋಮಾದಾರರಿಗೆ 1,500 ರೂ. ಗಳನ್ನು ನಿರುದ್ಯೋಗ ಭತ್ಯೆಯ ಮೂಲಕ ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು: 2024-25 ರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆ.ಎಸ್.ಹೆಗ್ಡೆ ಮತ್ತು ಎ.ಬಿ. ಶೆಟ್ಟಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ದಿ. ನಾರಾಯಣ ಬಿಲ್ಲವ ಮತ್ತು ದಿ. ಜಾನಕಿ ನಾರಾಯಣ ಬಿಲ್ಲವ ನೆನಪಿನಲ್ಲಿ ಉಚಿತ ದಂತ ಚಿಕಿತ್ಸೆ ಮತ್ತು ಆರೋಗ್ಯ ತಪಾಸಣಾ ಶಿಬಿರವು ಶಿರೂರು ಪಿ.ಎಂ. ಶ್ರೀ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಜ.12 ರಂದು ಪೂ.9 ರಿಂದ ಅ.2ರ ತನಕ ನಡೆಯಲಿದೆ. ಶಿಬಿರದಲ್ಲಿ ನುರಿತ ದಂತ ವೈದ್ಯರು, ಕಿವಿ ಮೂಗು ಗಂಟಲು ತಜ್ಞರು, ಮಕ್ಕಳ ತಜ್ಞರು ಹಾಗೂ ಇತರೇ ತಜ್ಞ ವೈದ್ಯರಿಂದ ದಂತ ತಪಾಸಣೆ, ಇಸಿವೆ, ರಕ್ತ ಪರೀಕ್ಷೆ, ಶುಗರ್ ಟೆಸ್ಟ್ ಕಿವು ಮೂಗು ಗಂಟಲು ಪರೀಕ್ಷೆ, 12 ವರ್ಷ ಒಳಗಿನ ಮಕ್ಕಳಿಗೆ ತಪಾಸಣೆ, ಇತ್ಯಾದಿ ಆರೋಗ್ಯ ತಪಾಸಣೆ ಮಾಡಲಾಗುವುದು. ಅಗತ್ಯ ಲಭ್ಯ ಔಷಧಿಗಳನ್ನು ಒದಗಿಸಲಾಗುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯು ಹೋಮ್ ಸೈನ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಳ್ಳಲಾಯಿತು. ತಾಳಿಪಾಡಿ ನೇಕಾರರ ಸಹಕಾರಿ ಸಂಘ ಕಿನ್ನಿಗೋಳಿ, ಮೂಲ್ಕಿ, ದಕ್ಷಿಣಕನ್ನಡ ಜಿಲ್ಲೆ ಇಲ್ಲಿಗೆ ಭೇಟಿ ನೀಡಿ, ಕೈಮಗ್ಗದ ಸೀರೆ ತಯಾರಿ, ವಿವಿಧ ಪರಿಸರ ಸ್ನೇಹಿ ಬಣ್ಣಗಳ ಬಳಕೆ, ಓಝೋಪ್ರೀ ಬಣ್ಣದ ಬಳಕೆ, ನವೀನ ವಿನ್ಯಾಸ, ಲಾಳಿ, ಪನ್ನೆ, ಕಾಲುಮಣೆ, ಅಚ್ಚು, ಕೈಮಗ್ಗದಲ್ಲಿ ಸಾಮಾನ್ಯವಾಗಿ ತಯಾರುಮಾಡುವ ವಿವಿಧ ಬಟ್ಟೆಗಳ ಮಾಹಿತಿ, ಅಚ್ಚಿನ ಕುಣಿಕೆಗಳ ಮೂಲಕ ಹಾಸುನೂಲುಗಳ ಹಾದು ಹೋಗುವಿಕೆ, ಎಳೆಗಳ ಸಮೂಹ ಮತ್ತು ನೇಕಾರರ ಇತಿಹಾಸ ಮತ್ತು ಕೈಮಗ್ಗದ ಉತ್ಪಾದನೆ ಪ್ರಾಯೋಗಿಕವಾಗಿ ನೋಡಿ ಹೆಚ್ಚಿನ ತಿಳುವಳಿಕೆಯನ್ನು ಪಡೆದುಕೊಂಡರು. ಮಾಧವ ಶೆಟ್ಟಿಗಾರ್ ಉಪಯುಕ್ತ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಉಪನ್ಯಾಸಕಿ ವಿನಂತಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಊರು ಪ್ರಸಿದ್ಧಿಗೆ ಬರಬೇಕಿದ್ದರೂ ಅಲ್ಲಿನ ಸಂಸ್ಕೃತಿಯ ಬೇರು ಗಟ್ಟಿಯಾಗಿರಬೇಕು. ಜೊತೆಗೆ ಜನರಲ್ಲಿ ಸಾಂಸ್ಕೃತಿಕ ಮನೋಭಾವವಿದ್ದರೆ ಬದುಕು ಸಂದರವಾಗುತ್ತದೆ ಎಂದು ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಂದುಕಾ ಎ.ಎಸ್ ಹೇಳಿದರು. ಅವರು ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಶಾರದಾ ವೇದಿಕೆಯಲ್ಲಿ ಹಮ್ಮಿಕೊಂಡ ಯಕ್ಷ – ಗೊಂಬೆ ವೈಭವ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಧರ್ಮ ಹಾಗೂ ಸಂಸ್ಕೃತಿಗೆ ನಿಕಟವಾದ ನಂಟಿದೆ. ಅಧರ್ಮದ ಕಾರ್ಯವನ್ನು ಮಾಡದಿರುವುದೇ ಧರ್ಮ ಎಂದು ಭಾವಿಸಬೇಕಾಗುತ್ತದೆ. ಜನರಿಗೆ ಉತ್ತಮ ಸಂದೇಶ ನೀಡುವ, ಮನಸ್ಸನ್ನು ಉಲ್ಲಾಸಗೊಳಿಸುವ ಹಾಗೂ ಒಳಿತನ್ನು ಮಾಡುವ ಕಾರ್ಯವನ್ನು ಸಂಘ ಸಂಸ್ಥೆಗಳ ಮೂಲಕ ಮಾಡಬೇಕಾಗಿದೆ ಎಂದರು. ಉದ್ಯಮಿ ನಾಕಟ್ಟೆ ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಶುಪಾಲನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಾ. ಶಂಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ 9ನೇ ಪುಣ್ಯತಿಥಿ ಆರಾಧನಾ ಮಹೋತ್ಸವ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು. ಬೆಳಿಗ್ಗೆ ಸ್ತೋತ್ರ ಪಠಣ, ಮಧ್ಯಾಹ್ನ ಶ್ರೀದೇವರಿಗೆ ಮಹಾಮಂಗಳಾರತಿ, ಗುರುಪೂಜೆ, ಪುಷ್ಪಾರ್ಚನೆ, ತೀರ್ಥ ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ತಾಂತ್ರಿಕ ವೇದಮೂರ್ತಿ ಜಿ. ರಾಘವೇಂದ್ರ ಆಚಾರ್ಯ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಡಾ. ಕಾಶೀನಾಥ ಪೈ ಮತ್ತು ಎಂ.ಜಿ. ಪ್ರಕಾಶ ಪೈ ಅವರು ಶ್ರೀಗಳ ಗುರು ಗುಣಗಾನ ಮಾಡಿದರು. ರಾತ್ರಿ ಭಜನೆ, ಶ್ರೀದೇವರಿಗೆ ಪ್ರಸನ್ನಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಮೋಹನದಾಸ ಭಟ್ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನಗಳು ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಈಗಾಗಲೇ ವಿದ್ಯಾರ್ಜನೆ ಮುಗಿಸಿರುವ ಹಳೆಯ ವಿದ್ಯಾರ್ಥಿಗಳಿಗಾಗಿ ಸಮ್ಮಿಲನ ಕಾರ್ಯಕ್ರಮವು ಇತ್ತೀಚಿಗೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಡಿಯಲ್ಲಿ ಬಾಲಕರಿಗಾಗಿ ಕ್ರಿಕೆಟ್, ಅಂಬಾರಿ ರೇಸ್, ರನ್ನಿಂಗ್ ರೇಸ್ ಹಾಗೂ ಬಾಲಕಿಯರಿಗಾಗಿ ಥ್ರೋ ಬಾಲ್, ಗೋಣಿಚೀಲ ಓಟ, ರಂಗೋಲಿ, ಮೆಹಂದಿ ಬಿಡಿಸುವ ಸ್ಪರ್ಧೆಗಳನ್ನು ನಡೆಸಲಾಯಿತು. ಸಂಜೆಯ ಅವಧಿಯಲ್ಲಿ ಹಳೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಅಂತಾರಾಷ್ಟ್ರೀಯ ಮಟ್ಟದ ಜಾದೂಗಾರರಾದ ಸತೀಶ್ ಹೆಮ್ಮಾಡಿ ಸಾರಥ್ಯದ ‘ಭ್ರಮಾಲೋಕ’ ಜಾದೂ ತಂಡದಿಂದ ಮನಮೋಹಕ ಜಾದೂ ಪ್ರದರ್ಶನ ಹಾಗೂ ಕುಂದಾಪುರ ತಾಲ್ಲೂಕಿನ ಖ್ಯಾತ ಸುಗಮ ಸಂಗೀತ ಗಾಯಕರುಗಳಾದ ಡಾ. ಗಣೇಶ್ ಗಂಗೊಳ್ಳಿ ಮತ್ತು ರಾಜೇಶ್ ಶ್ಯಾನುಭಾಗ್ ರಿಂದ ‘ಸಂಗೀತ ರಸಸಂಜೆ ಕಾರ್ಯಕ್ರಮಗಳು ನಡೆಯಲ್ಪಟ್ಟವು. ಇದೇ ಸಂದರ್ಭದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ಉಪನ್ಯಾಸಕರಾದ ಚವನ್ ಹೆಗ್ಡೆ ಮತ್ತು ತಂಡದವರು ವಿಶಿಷ್ಟ ಟೆಲಿಸ್ಕೊಪ್ ನ ಮೂಲಕ ಆಕಾಶಕಾಯಗಳನ್ನು ದರ್ಶಿಸಿ, ಅವುಗಳ ಸ್ಥಾನ ಮತ್ತು ಪರಿಭ್ರಮಣ, ಸೂರ್ಯ ಮತ್ತು ಚಂದ್ರ ಗ್ರಹಣಗಳ ಕುರಿತಾದ…
