Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ರಂಗದಲ್ಲಿ ಅವಿರತವಾಗಿ ತೊಡಗಿಸಿಕೊಂಡು ಜನಮಾನಸದಲ್ಲಿ ಸ್ಥಾನ ಪಡೆದಿರುವ ಸುರಭಿ ಸಂಸ್ಥೆಯು ಹಲವು ಸಾಧನೆಯ ಮೈಲುಗಲ್ಲುಗಳನ್ನು ದಾಟಿ 25ನೇ ವರ್ಷದ ಸಂಭ್ರಮದಲ್ಲಿರುವುದು ಶ್ಲಾಘನಾರ್ಹ ಸಂಗತಿಯಾಗಿದೆ ಎಂದು ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಉದ್ಯಮಿ ಪ್ರಸಾದ್ ಪ್ರಭು ಶಿರೂರು ಹೇಳಿದರು. ಅವರು ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಶುಕ್ರವಾರ ಸುರಭಿ ರಿ. ಬೈಂದೂರು ಸಂಸ್ಥೆಯ ಬೆಳ್ಳಿಹಬ್ಬದ ಅಂಗವಾಗಿ ಸೆ.14ರಂದು ಆಯೋಜಿಸಲಾಗಿರುವ ರಜತಯಾನ -2024 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಕೈಗೊಳ್ಳುವುದು ಸವಾಲಿನ ಕೆಲಸವಾಗಿದ್ದು ಸತತ ಆಸಕ್ತಿ ಹಾಗೂ ಬದ್ಧತೆಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು. ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ, ನಿಕಟಪೂರ್ವ ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆದ್ದಾರಿಯಲ್ಲಿ ತೆರಳುತ್ತಿದ್ದ ಟ್ಯಾಂಕರ್‌ನಿಂದ ಸೋಪ್ ಆಯಿಲ್ ಸೋರಿಕೆಯಾದ ಪರಿಣಾಮ ಹಬ್ಬದ ಸಂಭ್ರಮದಲ್ಲಿದ್ದ ಕುಂದಾಪುರದ ಜನತೆ ಸರಣಿ ಅಪಘಾತಗಳನ್ನು ಕಾಣುವಂತಾಗಿತ್ತು. ಸೋಪ್ ಆಯಿಲ್ ಸೋರಿಕೆಯಿಂದಾಗಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ 30ಕ್ಕೂ ಅಧಿಕ ಬೈಕ್ ಸವಾರರ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು, ಈ ಪೈಕಿ 6ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಆದದ್ದೇನು?ಮಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಶನಿವಾರ ಬೆಳಿಗ್ಗೆ 32 ಟನ್ ಸೋಪ್ ಆಯಿಲ್ (ಪಾಮ್ ಪ್ಯಾಟಿ ಆಸಿಡ್ ಡಿಸ್ಟಿಲೇಟ್) ತುಂಬಿದ್ದ ಬೃಹತ್ ಗಾತ್ರದ ಟ್ಯಾಂಕರ್ ತೆರಳುತ್ತಿದ್ದು,ಈ ಮಧ್ಯೆ ತೆಕ್ಕಟ್ಟೆಯಿಂದ ಟ್ಯಾಂಕರ್ ಅಡಿಭಾಗದಲ್ಲಿ ಆಯಿಲ್ ಸೋರಿಕೆಯಾಗಿದೆ. ಅದೇ ಸಮಯದಲ್ಲಿ ಮಳೆಯಿದ್ದ‌ ಕಾರಣ ಇದು ಚಾಲಕನಿಗೆ ಗಮನಕ್ಕೂ ಬಂದಿರಲಿಲ್ಲ. ಹೀಗಾಗಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್ನಿಂದ ಆಯಿಲ್ ಸೋರಿಕೆಯಾಗಿದೆ. ಇದೇ ಮಾರ್ಗದಲ್ಲಿ ಸಾಗಿದ ತೆರಳಿದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ಬೀಳುವಂತಾಗಿದ್ದು ಲಘು ವಾಹನಗಳು ಬ್ರೇಕ್ ತಗುಲದೆ ಸಣ್ಣಪುಟ್ಟ ಅವಘಡ ಸಂಭವಿಸಿತ್ತು. /ಕುಂದಾಪ್ರ ಡಾಟ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್‌ನಿಂದ ಆಯಿಲ್ ಸೋರಿಕೆಯಾದ ಪರಿಣಾಮ 25ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ಸ್ಕಿಡ್‌ ಆಗಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.   ಮಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಬೆಳಿಗ್ಗೆ 32 ಟನ್ ಸೋಪ್ ಆಯಿಲ್ (ಪಾಮ್ ಪ್ಯಾಟಿ ಆಸಿಡ್ ಡಿಸ್ಟಿಲೇಟ್) ತುಂಬಿದ್ದ ಬೃಹತ್ ಗಾತ್ರದ ಟ್ಯಾಂಕರ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಟ್ಯಾಂಕರ್ ಅಡಿಭಾಗದಲ್ಲಿ ಆಯಿಲ್ ಸೋರಿಕೆಯಾಗುತ್ತಿದ್ದು ಅದೇ ವೇಳೆ ಮಳೆಯಿದ್ದ‌ ಕಾರಣ ವಾಹನದ ಕನ್ನಡಿಯಲ್ಲಿ ಚಾಲಕನಿಗೆ ಇದು ಗಮನಕ್ಕೆ ಬಂದಿರಲಿಲ್ಲ. ಹೀಗಾಗಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್ ಸಾಗಿದ ದಾರಿಯಲ್ಲಿ ಮತ್ತೆ ಪ್ರಯಾಣಿಸಿದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ಬೀಳುವಂತಾಗಿದ್ದು ಲಘು ವಾಹನಗಳು ಬ್ರೇಕ್ ತಗುಲದೆ ಸಣ್ಣಪುಟ್ಟ ಅವಘಡ ಸಂಭವಿಸಿತ್ತು. ಪ್ರಾಥಮಿಕ ವರದಿ ಪ್ರಕಾರ 25-30 ಮಂದಿ ಬಿದ್ದಿದ್ದು 6 ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿದ್ದ ಅಪಘಾತದಿಂದ ಹಲವು ವಾಹನಗಳಿಗೆ ಹಾನಿಯಾಗಿದೆ.…

Read More

ಚೈತ್ರ ರಾಜೇಶ್ ಕೋಟ | ಕುಂದಾಪ್ರ ಡಾಟ್ ಕಾಂ ಲೇಖನ.ವಿಭಿನ್ನ ರೂಪ, ಜ್ಞಾನಧಾರೆಯ ಸ್ವರೂಪ, ಬುದ್ದಿವಂತ ಗಣಪ. ವಿಘ್ನಗಳನ್ನು ನಿವಾರಿಸೋ ವಿನಾಯಕ, ನಮ್ಮೆಲ್ಲರ ಆರಾಧ್ಯ ದೇವ ಗಣನಾಯಕ. ಗಣಪತಿ ಎಂದ ತಕ್ಷಣ ನೆನಪಾಗುವುದೇ ಅವನ ರೂಪ. ಇವನ ಈ ರೂಪದಲ್ಲೂ, ಗುಣದಲ್ಲೂ ನಾವು ಕಲಿಯಬೇಕಾದ ಪಾಠಗಳು ಬಹಳ. ಆನೆಯ ತಲೆ ಧರಿಸಿರುವ ಗಜಾನನ, ಆನೆಗಳು ದಟ್ಟವಾದ ಕಾಡಿನಲ್ಲಿ ಮತ್ತು ಮರದ ಸಾಲಿರುವ ದಾರಿಯಲ್ಲಿ ನಡೆಯುವುದರಿಂದ ಇತರೆ ಪ್ರಾಣಿಗಳಿಗೂ ದಾರಿಯನ್ನು ಮಾಡಿಕೊಡುತ್ತದೆ. ಇದೇ ರೀತಿ ಗಜೇಂದ್ರನು ಭಕ್ತರು ನಡೆಯುವ ಮಾರ್ಗದಲ್ಲಿರುವ ಎಲ್ಲಾ ಅಡೆ-ತಡೆಗಳನ್ನು, ವಿಘ್ನಗಳನ್ನು ದೂರ ಮಾಡುವ. ಗಣೇಶನ ದೊಡ್ಡ ತಲೆಯು ಬುದ್ದಿವಂತಿಕೆ ಮತ್ತು ದೊಡ್ಡದಾದ ಆಲೋಚನಾ ಸಾಮರ್ಥ್ಯವನ್ನು ಪ್ರತಿನಿಧಿಸುತ್ತದೆ. ಹೀಗಾಗಿಯೇ ತಂದೆ ಈಶ್ವರನು ಮೂರು ಬಾರಿ ಪ್ರಪಂಚ ಪ್ರದಕ್ಷಿಣೆ ಮಾಡಿ ಮೊದಲಿಗರಾಗಿ ಬರಬೇಕೆಂದು ಗಣೇಶ ಮತ್ತು ಕಾರ್ತಿಕೇಯರಲ್ಲಿ ಹೇಳಿದಾಗಿ ತನ್ನ ಬುದ್ದಿವಂತಿಕೆಯಿಂದ ತನ್ನ ಮಾತಾ-ಪಿತರಲ್ಲಿ ಈಡೀ ಜಗತ್ತೆ ಮೈದುಂಬಿರುವಾಗ ಬೇರೆಲ್ಲೂ ಹೋಗಬೇಕಾದ ಅವಶ್ಯಕತೆ ಇಲ್ಲವೆಂದು ಇವರಿಗೆ ಮೂರು ಸುತ್ತು ಬಂದು, ಪ್ರಥಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಶಿಕ್ಷಕರ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿಯ ಕಾರ್ಯದರ್ಶಿಗಳೂ, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ಶಾಲೆಯಲ್ಲಿ ಕರ್ತವ್ಯ ನಿರತರಾದ ಶಿಕ್ಷಕರನ್ನು ಗೌರವಿಸುವುದರಿಂದ ಮಕ್ಕಳಿಗೆ ಆನಂದ ದೊರೆಯುವುದರೊಂದಿಗೆ, ಶಿಕ್ಷಕರಿಗೆ ತಮ್ಮ ಸ್ಥಾನ ಮತ್ತು ಜವಾಬ್ದಾರಿಯ ಬಗ್ಗೆ ಅರಿವು ಮೂಡುತ್ತದೆ. ಸತ್ಸಮಾಜದ ಸಂರಚನೆಯ ಸದುದ್ದೇಶದಿಂದ ಆರಂಭಗೊಂಡ ಈ ಸಂಸ್ಥೆ ವಿದ್ಯಾರ್ಥಿಗಳನ್ನು ಸುಸಂಸ್ಕೃತರನ್ನಾಗಿಸುತ್ತಾ ಸಾಗಿ ಬಂದಿದ್ದು, ಇದನ್ನು ಮುಂದುವರಿಸಿಕೊಂಡು ಹೋಗಲು ಶಿಕ್ಷಕರು ಒಮ್ಮನಸ್ಸಿನಿಂದ ಶ್ರಮಿಸಬೇಕಾಗಿದೆ”ಎಂದು ತಿಳಿಸಿದರು. ಶಾಲೆಯಲ್ಲಿ ಅಧ್ಯಾಪನ ವೃತ್ತಿಯಲ್ಲಿರುವ ಎಲ್ಲಾ ಶಿಕ್ಷಕರರಿಗೆ ಈ ಸಂದರ್ಭದಲ್ಲಿ ಕಿರು ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. 2023-24ನೇ ಸಾಲಿನಲ್ಲಿ ರೂಬಿಕ್ ಕ್ಯೂಬ್‌ನಲ್ಲಿ ಗಿನ್ನೆಸ್ ದಾಖಲೆಯ ಮೂಲಕ ಇತಿಹಾಸ ಸೃಷ್ಟಿಸಿದ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮೀ ಎಂ. ಹಾಗೂ ಎಲ್ಲಾ ಶಿಕ್ಷಕರುಗಳಿಗೆ ಗಿನ್ನೆಸ್ ದಾಖಲೆಯ ಪದಕ ಮತ್ತು ಪ್ರಮಾಣಪತ್ರಗಳನ್ನುನೀಡಿ ಸನ್ಮಾನಿಸಲಾಯಿತು. ಬಸ್ರೂರಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ವಿದ್ಯಾರ್ಥಿಗಳಾದ ಸಂಜನಾ ಖಾರ್ವಿ, ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಭೂಮಿಕಾ ಖಾರ್ವಿ , ಪೂಜಾ ಪೂಜಾರಿ, ನವ್ಯಶ್ರೀ ಕೋಟೆಗಾರ್, ಸನ್ನಿಧಿ ಕರ್ಣಿಕ್, ತೇಜಸ್ವಿನಿ ಖಾರ್ವಿ ಮತ್ತು ಮಾನ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನ ಖಾರ್ವಿ ಬೆಸ್ಟ್ ರೈಡರ್ ಪ್ರಶಸ್ತಿ ಪಡೆದುಕೊಂಡರು. ಬಾಲಕಿಯರ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಹಿಂದೆ ರಾಜಾಶ್ರಯದಲ್ಲಿ ಬೆಳಕು ಕಾಣುತ್ತಿದ್ದ ಪ್ರತಿಭೆಗಳು ಇಂದು ಶಾಲೆಗಳಲ್ಲಿ ಬೆಳಕು ಕಾಣುತ್ತಿವೆ. ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರ ಜಗತ್ತಿಗೆ ತರಲು ಶಾಲೆಯಷ್ಟು ಒಳ್ಳೆಯ ವೇದಿಕೆ ಬೇರೆ ಎಲ್ಲಿಯೂ ಸಿಗಲು ಸಾಧ್ಯವಿಲ್ಲ” ಎಂದು  ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ. ಜೀವನ್ ರಾಮ್ ಸುಳ್ಯ ಹೇಳಿದರು. ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ – ಮತ್ಯಾಡಿ ಇಲ್ಲಿ ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನಾ ಸಮಾರಂಭ ನಡೆಯಿತು. ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಪ್ರೌಢ ಶಾಲಾ ವಿಭಾಗದ 17 ವರ್ಷ ವಯೋಮಾನದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಸಂಸ್ಥೆಯ ವಿದ್ಯಾರ್ಥಿನಿ  ಪ್ರಕೃತಿ ಪಿ. ಶೆಟ್ಟಿ ಅವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.ಅವಳು ದಬ್ಬೆಕಟ್ಟೆಯ  ಪ್ರಕಾಶ್ ಪಿ. ಶೆಟ್ಟಿ ಮತ್ತು ಸಂಗೀತ ಶೆಟ್ಟಿ ಅವರ ಪುತ್ರಿಯಾಗಿದ್ದು ಪ್ರಸ್ತುತ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯು ಶಿಕ್ಷಣದ ಜೊತೆ ಜೊತೆಗೆ ಕ್ರೀಡೆ, ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತನ್ನದೇ ಆಗಿರುವ ಹೊಸ ಚಾಪನ್ನು ಮೂಡಿಸಿಕೊಂಡು ಬಂದು ಕೇವಲ ತಾಲೂಕು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ  ಮಾತ್ರವಲ್ಲದೇ ಆಂತರ್‌ರಾಜ್ಯ ಮಟ್ಟದಲ್ಲೂ ಸಹ ತನ್ನ ವಿಜಯ ಪತಾಕೆಯನ್ನು ಹಾರಿಸಿದ. ಶಿವಮೊಗ್ಗದಲ್ಲಿ ನಡೆದಂತ ಅಂತರ್‌ರಾಜ್ಯ ಮಟ್ಟದ (ರಾಷ್ಟ್ರೀಯ) ಕರಾಟೆ ಸ್ಪರ್ಧೆಯಲ್ಲಿ ‘ಕಾಟ’ ವಿಭಾಗದಲ್ಲಿ ರಾಷ್ಟ್ರಕ್ಕೆ ದ್ವಿತೀಯ ಸ್ಥಾನವನ್ನು ನಮ್ಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಅನೀಶ್ ಆರ್. ಶೆಟ್ಟಿ ತನ್ನ ಮುಡಿಗೇರಿಸಿಕೊಂಡಿದ್ದಾರೆ. ಅವರು ತರಬೇತುದಾರರಾಗಿ ಕುಂದಾಪುರದ ಅಬ್ಜಲ್ ಕೆ.ಡಿ.ಎಫ್ ಇವರ ಮಾರ್ಗದರ್ಶನದಲ್ಲಿ ಬಹುಮಾನ ಪಡೆದಿರುತ್ತಾರೆ. ಹಾಲಾಡಿ ರಮೇಶ್ ಶೆಟ್ಟಿ ಮತ್ತು ರಜನಿ ಆರ್. ಶೆಟ್ಟಿ ಅವರ ಸುಪುತ್ರರಾಗಿದ್ದಾರೆ. ಅವರ ಸಾಧನೆಯನ್ನು ಎಮ್. ಎಮ್ ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ್‌ ಅಧ್ಯಕ್ಷರಾದ ಎಮ್. ಮಹೇಶ್ ಹೆಗ್ಡೆ ಹಾಗೂ ಕಾರ್ಯದರ್ಶಿಯಾದ ದೀಪಾ ಎಮ್. ಹೆಗ್ಡೆ, ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕೇತರ ಸಿಬ್ಬಂಧಿ ವರ್ಗದವರು ಅಭಿನಂದಿಸಿದ್ದಾರೆ. 

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಕುಂದಾಪುರದ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ನಡೆದಿದೆ . ಮೃತ ವ್ಯಕ್ತಿಯನ್ನು ಪ್ರಶಾಂತ್ ಕುಮಾರ (42) ಎಂದು ಗುರುತಿಸಲಾಗಿದೆ. ಮನೆಯಿಂದ ಕೆಲಸಕ್ಕೆ ಹೋಗಿಬರುವುದಾಗಿ ಹೇಳಿ ತೆರಳಿದ್ದ ಪ್ರಶಾಂತ್‌, ಗುರುವಾರ ಕುಂದಾಪುರದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು. ಅನಾರೋಗ್ಯದ ಸಮಸ್ಯೆಯಿಂದ ಹೃದಯಾಘಾತ ಅಥವಾ ಇನ್ಯಾವುದೋ ಖಾಯಿಲೆಯಿಂದಾಗಿ ಲಾಡ್ಜ್‌ನಲ್ಲಿ ಮಲಗಿದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ತಿಳಿದುಬಂದಿದೆ. ಶಿವಮೊಗ್ಗ ಮೂಲದ ಪ್ರಶಾಂತ್‌ ಕೊರ್ಗಿ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿಕೊಂಡಿದ್ದು, ಇತ್ತಿಚಿಗೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದು, ಅಧಿಕ ರಕ್ತದ ಒತ್ತಡ ಖಾಯಿಲೆ ಹಾಗೂ ಮಾನಸಿಕ ಖಾಯಿಲೆ ಬಗ್ಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. ಸ್ನೇಹಿತರು ಆತನಿಗೆ ಬುದ್ಧಿ ಹೇಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:ಸತತ ಪ್ರಯತ್ನವೇ ಗೆಲುವಿನ ಮೂಲ. ಸೋತರೂ ಕಠಿಣ ಪರಿಶ್ರಮದಿಂದ ಮತ್ತೆ ಪ್ರಯತ್ನಿಸಿ ಗೆದ್ದಾಗ ಆ ಗೆಲುವಿಗೆ ಕಾರಣರಾದ ಶಿಕ್ಷಕರನ್ನು ಮರೆಯದಿರಿ, ನಿಮ್ಮ ಯಶಸ್ಸನ್ನು ಬಯಸುವ ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿ ಎಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಳದ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕರಾದ ಪ್ರಭಾಕರ್ ಶೆಟ್ಟಿಗಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕಿ ಸುಷ್ಮಾ ಶೆಣೈ ಮಾತನಾಡಿ, ಶೈಕ್ಷಣಿಕ ಕಾಳಜಿಯೊಂದಿಗೆ ವಿದ್ಯಾರ್ಥಿಗಳನ್ನು ಸಂಸ್ಕಾರಯುತ ಬದುಕಿಗೆ ಅಣಿಗೊಳಿಸುವುದು ಶಿಕ್ಷಕರ ಆದ್ಯ ಕರ್ತವ್ಯ ಎಂದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಕೆ.ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಶಿಕ್ಷಕರು ಹೇಳುವ ಪಾಠವನ್ನಷ್ಟೇ ಅರಿತರೆ ಸಾಲದು, ಅವರನ್ನು ಗೌರವಿಸಿ ಬದುಕುವಂತಾಗಬೇಕು ಎಂದರು. ಕನ್ನಡ…

Read More