ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.1: ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳೂ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರು ಭವಿಷ್ಕಕ್ಕೆ ಪಡೆಯಲು ತಪ್ಪದೇ ಇ-ಶ್ರಮ್ನಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವರ್ಗಗಳ ಕಾರ್ಮಿಕರುಗಳಿಗೆ ಸಂಬAಧಿಸಿದ ಸಮಸ್ಯೆಗಳ ನಿವಾರಣೆ, ಕಾರ್ಮಿಕರಿಗೆ ವಿಶೇಷ ನೀತಿಗಳು, ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಮಗ್ರ ದತ್ತಾಂಶವಿದ್ದಾಗ ಮಾತ್ರ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಸಾಧ್ಯ. ಈ ಹಿನ್ನೆಲೆ ಪ್ರತಿಯೊಬ್ಬರೂ ಇ-ಶ್ರಮ್ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಇವರೆಗೆ 1,85,791 ಜನ ನೋಂದಾಯಿಸಿದ್ದಾರೆ. ಉಳಿದವರು ಸಹ ನೋಂದಾಯಿಸಿಕೊಳ್ಳಬೇಕು. ಇ-ಶ್ರಮ್ ನಲ್ಲಿ ನೋಂದಾಯಿಸಲು ಕಾರ್ಮಿಕರು ಆಧಾರ್ ಕಾರ್ಡ್ನೊಂದಿಗೆ ಬಂದು ತಮ್ಮ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯತೆಯ ವಿಧü, ಕುಟುಂಬದ ವಿವರ, ಬ್ಯಾಂಕ್ ಖಾತೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.1: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೋಟಾರೀಕೃತ ಮೀನುಗಾರಿಕೆ ದೋಣಿಗಳಿಗೆ 2 ತಿಂಗಳ ನಿಷೇಧಿತ ಅವಧಿಯನ್ನು ಹೊರತುಪಡಿಸಿ, ವಾರ್ಷಿಕ 10 ತಿಂಗಳ ಅವಧಿಗೆ ಮಾಸಿಕ ಪ್ರತಿ ದೋಣಿಗೆ 300 ಲೀ. ನಂತೆ ಸೀಮೆಎಣ್ಣೆ ವಿತರಿಸಲು ಸರ್ಕಾರವು ಆದೇಶಿಸಿರುವ ಹಿನ್ನೆಲೆ, ಮೋಟಾರೀಕೃತ ಮೀನುಗಾರಿಕೆ ದೋಣಿಗಳಿಗೆ ಸೀಮೆಎಣ್ಣೆ ಪಡೆಯಲು ಪರ್ಮಿಟ್ಗಾಗಿ ದೋಣಿ ಮಾಲಕರು ಅರ್ಜಿ ಸಲ್ಲಿಸುವ ಮೊದಲು ಇಲಾಖೆಯಿಂದ ದೋಣಿಗಳನ್ನು ಭೌತಿಕ ಪರಿಶೀಲನೆ ಮಾಡಿ ನಂತರ ಪರವಾನಿಗೆ ಹಾಗೂ ಸೀಮೆಎಣ್ಣೆ ರಹದಾರಿಯನ್ನು ದೋಣಿ ಮಾಲಕರಿಗೆ ನೀಡಲಾಗುವುದು. ಆ ಪ್ರಯುಕ್ತ ಸೆಪ್ಟಂಬರ್ 4 ರಂದು ಬೈಂದೂರು ತಾಲೂಕಿನ ಅಳ್ವೆಗದ್ದೆಯ ಮೀನುಗಾರಿಕೆ ಜೆಟ್ಟಿ, ಕಳಿಹಿತ್ಲುವಿನ ಮೀನುಗಾರಿಕೆ ಹರಾಜು ಪ್ರಾಂಗಣ, ಮಡಿಕಲ್ ಮಹೇಶ್ವರ ದೇವಸ್ಥಾನ, ಪಡುವರಿ/ತಾರಾಪತಿಯ ಶ್ರೀ ರಾಮ ಮಂದಿರ, ಕೊಡೇರಿ/ಕಿರಿಮಂಜೇಶ್ವರದ ಕೊಡೇರಿ ಬಂದರು, ಮರವಂತೆ ಬಂದರು, ಕಂಚುಕೋಡು ಮಡಿ, ಗಂಗೊಳ್ಳಿ ಲೈಟ್ಹೌಸ್, ಗಂಗೊಳ್ಳಿ ಬಂದರು, ಕುಂದಾಪುರ, ಕೋಟೇಶ್ವರ ಮತ್ತು ತೆಕ್ಕಟ್ಟೆಯ ಕೋಡಿ ಕಿನಾರೆಯಲ್ಲಿ ತಪಾಸಣೆಗೆ ನಡೆಯಲಿದೆ. ಸೆಪ್ಟಂಬರ್ 5 ರಂದು ರಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಆ.31: ಸಮಾಜದಲ್ಲಿದ್ದ ಅಸ್ಪೃಶ್ಯತೆ, ಅಸಮತೋಲನಗಳನ್ನು ಶಾಂತಿಯ ಮೂಲಕ ಕ್ರಾಂತಿಯ ಬದಲಾವಣೆಯನ್ನು ತರುವ ಕೆಲಸವನ್ನು ಬ್ರಹ್ಮ ಶ್ರೀ ನಾರಾಯಣ ಗುರು ರವರು ಮಾಡಿದರು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಇಂದು ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು-ಸಮಪಾಲು ಲಭಿಸಬೇಕೆಂಬ ಪರಿಕಲ್ಪನೆಯೊಂದಿಗೆ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರು ದೊಡ್ಡ ಕ್ರಾಂತಿಯನ್ನೇ ಶಾಂತಿಮಾರ್ಗದಲ್ಲಿ ರಕ್ತಕ್ರಾಂತಿ ಇಲ್ಲದೇ ಮಾಡುವುದರೊಂದಿಗೆ ಸಮಾಜದಲ್ಲಿ ಸುಧಾರಣೆಯನ್ನು ತಂದಿದ್ದಾರೆ ಎಂದರು. ಸ್ವಾಮೀ ವಿವೇಕಾನಂದರು ಕೇರಳಕ್ಕೆ ಭೇಟಿ ನೀಡಿದಾಗ, ಅಲ್ಲಿನ ಮನುಷ್ಯತ್ವ ಇಲ್ಲದ ವಾತಾವರಣವನ್ನು ನೋಡಿ, ಇದನ್ನು ಸರಿ ಮಾಡಲು ಸಾಧ್ಯವೇ ಎಂದಿದ್ದರು. ಅಂತಹ ಪ್ರದೇಶದಲ್ಲಿ ನಾರಾಯಣ ಗುರುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರೌಢಶಿಕ್ಷಣ ಇಲಾಖೆ ಹಾಗೂ ಕುಳ್ಳಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಶಂಕರನಾರಾಯಣ ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮದರ್ ತೆರೆಸದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿವಿಧ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ 12 ಪ್ರಥಮ ಬಹುಮಾನವನ್ನು, 14 ದ್ವಿತೀಯ ಬಹುಮಾನವನ್ನು ಹಾಗೂ 9 ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಜಾನಪದ ನೃತ್ಯ ಮತ್ತು ಕವ್ವಾಲಿ ಯಲ್ಲಿ ಪ್ರಥಮ ಬಹುಮಾನವನ್ನು ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆಯುವ ಮೂಲಕ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಬೋಧಕ ಭೋದಕೇತರ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿಯ ತ್ರಿಷಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರೀತಮ್, 40 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮನ್ ಕೆ.ಎಸ್.58 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ / ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ವಿದ್ಯಾರ್ಥಿಗಳಿಗೆ ಕೃಷಿಯ ಕುರಿತು ಆಸಕ್ತಿ ಬೆಳೆಸುವ ಮತ್ತು ಅನ್ನದಾತನ ಕಷ್ಟವನ್ನು ಅರಿಯುವ ಕಾರ್ಯಕ್ರಮದ ಅಂಗವಾಗಿ ಕ್ರಿಯೇಟಿವ್ ಕಾಲೇಜ್ ನ ವಾಣಿಜ್ಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ನೆಡುವ ಕಾರ್ಯಕ್ರಮ ಹಿರ್ಗಾನದ ಬೆಂಗಾಲ್ ನ ಕೃಷಿ ಭೂಮಿಯಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ನೇಜಿ ನೆಡುವ ವಿಧಾನವನ್ನು ತಿಳಿಸಲಾಯಿತು. ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡು ಮಾತನಾಡಿದ ಕ್ರಿಯೇಟಿವ್ನ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಇಂದಿನ ಕಾಲಘಟ್ಟದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ಅನ್ನವನ್ನು ಗಳಿಸಬೇಕಾದರೆ ಅದರ ಹಿಂದೆ ಅಪಾರ ಪರಿಶ್ರಮವಿದೆ. ನಾವೆಲ್ಲರೂ ರೈತರ ಕಷ್ಟವನ್ನು, ಒಕ್ಕಲುತನದ ಆನಂದವನ್ನು ಪಡೆಯಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ಅವರು ಮಾತನಾಡುತ್ತಾ ಹಿಂದಿನ ಕೃಷಿ ಜೀವನ ಹಾಗೂ ಇಂದಿನ ಒತ್ತಡದ ಬದುಕಿನಲ್ಲಿ ಕೃಷಿ ಚಟುವಟಿಕೆಗಳೇ ಮನಸ್ಸಿಗೆ ಸಂತೋಷ ನೀಡುತ್ತವೆ. ಆತ್ಮ ಸಂತೋಷಕ್ಕಾಗಿಯಾದರೂ ನಾವು ರೈತಾಪಿ ಕಸುಬನ್ನು ರೂಢಿಸಿಕೊಳ್ಳಬೇಕಾಗಿದೆ ಎಂದು ನುಡಿದರು. ತದನಂತರ ವಿದ್ಯಾರ್ಥಿಗಳಿಂದಲೇ ಒಂದು ಎಕರೆಯಷ್ಟು ಕೃಷಿಭೂಮಿಯಲ್ಲಿ ನಾಟಿಕಾರ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪಡುಕೋಣೆ ಎಂಬಲ್ಲಿ ಗುರುವಾರ ನಡೆದಿದೆ. ಪಡುಕೋಣೆ ನಿವಾಸಿಯ ಪ್ರಶಾಂತ್ ಎಂಬುವವರ ಪುತ್ರಿ ಸಿಂಧು (16) ಎಂದು ತಿಳಿದುಬಂದಿದೆ. ಸೂಚನೆ: ಯಾವುದೇ ಸಮಸ್ಯೆಗೂ ಆತ್ಮಹತ್ಯೆ ಪರಿಹಾರವಲ್ಲ. ಏನೇ ಸಮಸ್ಯೆ, ತೊಂದರೆಗಳಿದ್ದರೂ ನಿಮ್ಮ ಪೋಷಕರು ಅಥವಾ ಆಪ್ತ ಸಮಾಲೋಚಕರ ಬಳಿ ಹೇಳಿಕೊಳ್ಳಿ. ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದ ಸಿಂಧು, ಸಮೀಪದ ಸರಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು. ಕಳೆದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣಕ್ಕೆ ಶಾಲೆಗೆ ಎರಳಗೆ ತನ್ನ ಮನೆಗೆ ತೆರಳಿದ್ದ ಸಿಂಧುವನ್ನು ಬುಧವಾರ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಗುರುವಾರ ತಂದೆ ಕುಂದಾಪುರಕ್ಕೆ ಬಿಡುವುದಾಗಿ ಹೇಳಿದ್ದರು. ಆದರೆ ಆಕೆ ತಾನು ಬಸ್ಸಿನಲ್ಲಿ ಹೋಗುವುದಾಗಿ ತಿಳಿಸಿದ್ದಳು. ಇದಾದ ಸ್ವಲ್ಪ ಸಮಯದ ನಂತರ ಮನೆಯವರು ಗಮನಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಸಿಂಧು ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್.ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸರಕಾರ ಮಹಾತ್ವಕಾಂಕ್ಷಿ ನಾಲ್ಕನೇ ಗ್ಯಾರೆಂಟಿ ‘ಗೃಹಲಕ್ಷ್ಮೀ’ ರಾಜ್ಯಾದ್ಯಂತ ಜಾರಿಗೆ ಬಂದಿದ್ದು, ಕುಂದಾಪುರ ಬೈಂದೂರು ತಾಲೂಕಿನ ವಿವಿಧೆಡೆ ಚಾಲನೆ ದೊರೆಯಿತು. ಕುಂದಾಪುರ ಪುರಸಭೆಯಿಂದ ಮೊಗವೀರ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಕ್ಕೆ ತಹಶೀಲ್ದಾರ್ ಶೋಭಾಲಕ್ಷ್ಮೀ ಚಾಲನೆ ನೀಡಿದರು. ಬೈಂದೂರು ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯತ್ ವತಿಯಿಂದ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಗೃಹಲಕ್ಷ್ಮೀ ಯೋಜನೆಯ ವೀಕ್ಷಣಾ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಚಾಲನೆ ನೀಡಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನಕುಮಾರ್ ಜಿ. ಎಸ್., ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್. ಭಾರತಿ ಇದ್ದರು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ನೇರಪ್ರಸಾರ ಕಾರ್ಯಕ್ರಮ ವೀಕ್ಷಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.30: ಸಮಯದ ಪರಿವೆಯೇ ಇಲ್ಲದೆ ಭಿನ್ನ ಲೋಕಕ್ಕೆ ಕರೆದೊಯ್ಯುವ ಸಾಮರ್ಥ್ಯ ಸಾಹಿತ್ಯಕ್ಕಿದೆ. ಮನುಷ್ಯನ ಸಂವೇದನೆಯಲ್ಲಿಯೇ ಸಾಹಿತ್ಯ ಅಡಗಿದೆ ಎಂದು ಕಾದಂಬರಿಕಾರ, ಶಿಕ್ಷಕ ಹೆಚ್. ಬಿ. ಇಂದ್ರಕುಮಾರ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಸಾಹಿತ್ಯ ನಮ್ಮನ್ನು ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ. ಯಾವುದೇ ಸಾಹಿತ್ಯ ರಚನೆಯಲ್ಲಿ ಭಾಷೆ ಸಮೃದ್ಧತೆ, ನಿಗೂಢತೆ ಮತ್ತು ಮನಸಿಗೆ ಹಿತವೆನಿಸುವ ವಿಸ್ಮಯಗಳ ಹೂರಣವನ್ನು ಒಳಗೊಂಡಿದ್ದರೆ ಓದುಗರನ್ನು ಹೆಚ್ಚು ಆಕರ್ಷಿಸುತ್ತದೆ ಎಂದ ಅವರು ಈ ಪ್ರಶಸ್ತಿಯು ನನ್ನ ಬರವಣಿಗೆಯ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ ಎಂದು ಅಭಿಪ್ರಾಯಪಟ್ಟರು. ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಹೆಚ್. ಶಾಂತಾರಾಮ್ ಅವರು ಮಾತನಾಡಿ ಸಾಹಿತ್ಯ ಸೇವೆ ಮುಂದುವರಿಯಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಯಂತಹ ಸಂಸ್ಥೆಯಿಂದ ಗ್ರಾಮೀಣ ಭಾಗದ ಪ್ರತಿಭೆಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಹಾಗಾಗಿ ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಡೆಸಾರ್ಟ್ ಸಿಸ್ಟಂ ಗ್ರೂಪ್ನ ಮುಖ್ಯ ಹಣಕಾಸು ಅಧಿಕಾರಿ ವಿಶ್ವನಾಥ ಶೇಟ್ ಹೇಳಿದರು. ಅವರು ಯಡ್ತರೆ ಜೆಎನ್ಆರ್ ಕಲಾಮಂದಿರದಲ್ಲಿ ಜೆಸಿಐ ಬೈಂದೂರು ಸಿಟಿ ಆಥಿತ್ಯದಲ್ಲಿ ಜರುಗಿದ ಜೆಸಿಐ ವಲಯ 15ರ ಮಹಿಳಾ ಜೆಸಿ ಹಾಗೂ ಜ್ಯೂನಿಯರ್ ಜೆಸಿ ಸಮ್ಮೇಳನ – ಚುಕ್ಕಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಇಂದು ಅವಕಾಶಗಳು ಹಲವಿದೆ ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳುವ ಮಾರ್ಗದರ್ಶನ ಯುವಜನತೆಗೆ ಬೇಕಾಗಿದೆ ಎಂದರು. ಜೆಸಿಐ ವಲಯದ ಮೊದಲ ಮಹಿಳೆ ಶಿಲ್ಪಾ ಪುರುಶೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಜೆಸಿಐ ಝೋನ್ 15ರ ಲೇಡಿ ಜೆಸಿ ಕೋ-ಆರ್ಡಿನೇಟರ್ ಸುಮನಾ ಪೊಳಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್.ಜೆ. ನಯನಾ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜೆಸಿಐ ವಲಯಾಧ್ಯಕ್ಷ ಪುರುಶೋತ್ತಮ ಶೆಟ್ಟಿ, ನಿಕಟಪೂರ್ವ ವಲಯಾಧ್ಯಕ್ಷ…
