ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಮಲಶಿಲೆ ಗ್ರಾಮದ ಯಳಬೇರು ಶ್ರೀ ಗೋಪಾಲಕೃಷ್ಣ ದೇವಳದ 10ನೇ ವರ್ಷದ ವರ್ಧಂತ್ಯುತ್ಸವ ಎ.3 ಗುರುವಾರದಂದು ಬೆಳಿಗ್ಗೆ 08-00ರಿಂದ ಜರುಗಲಿದೆ. ವರ್ಧಂತ್ಯುತ್ಸವ ಅಂಗವಾಗಿ ಇಷ್ಟದೇವತಾ ಪ್ರಾರ್ಥನಾಪೂರ್ವಕ ಫಲನ್ಯಾಸ, ಪುಣ್ಯಾಹವಾಚನ, ಗೋಪಾಲಕೃಷ್ಣ ದೇವರಿಗೆ ಗಣಹೋಮ, ಪಂಚವಿಂಶತಿ ಕಲಶಸ್ಥಾಪನೆ, ಕಲಾತತ್ವ ಹೋಮ, ಅಧಿವಾಸ ಹೋಮ, ಕಲಶಾಭಿಷೇಕ ಮಹಾಪೂಜೆ, ನಾಗದೇವರಿಗೆ ಕಲಶಾಭಿಷೇಕ ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನಡೆಯಲಿದೆ. ಅದೇ ದಿನ ಬೆಳಿಗ್ಗೆ 10.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಮಾರಣಕಟ್ಟೆ ಸುಬ್ರಹ್ಮಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಅವರು ಉದ್ಘಾಟನೆ ನೆರವೆರಿಸಲಿದ್ದಾರೆ. ಯಳಬೇರು ಶ್ರೀ ಗೋಪಾಲಕೃಷ್ಣ ದೇವಾಸ್ಥಾನದ ಟ್ರಸ್ಟ್ ಅಧ್ಯಕ್ಷರಾದ ನಾಗಶಯನ ಕನ್ನಂತ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಂದು ಶ್ರೀ ಕ್ಷೇತ್ರ ಕಮಲಶಿಲೆ ಆಡಳಿತ ಧರ್ಮದರ್ಶಿಗಳಾದ ಎಸ್. ಸಚ್ಚಿದಾನಂದ ಚಾತ್ರರು, ಶಿರಿಯಾರ ಪಡುಮುಂಡು ವೇ.ಮೂ. ಸುಧೀರ್ ಅಡಿಗರು, ಕುಂದಾಪುರ ಶ್ರೀ ಕ್ಷೇತ್ರ .ಧ.ಗ್ರಾ.ಯೋ., ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ನಾರಾಯಣ್ ಪಾಲನ್ ಹಾಗೂ ಹುಬ್ಬಳ್ಳಿ ಉದ್ಯಮಿ ಹರಿ ಓಂ ಸುಧಾಕರ್ ಶೆಟ್ಟಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 4ನೇ ಮತ್ತು 7ನೇ ತರಗತಿಯಲ್ಲಿ ತೇರ್ಗಡೆಯಾದ ಹಾಗೂ ಕ್ರಮವಾಗಿ ಪ್ರಸ್ತುತ ಶೈಕ್ಷಣಿಕ ಸಾಲಿನ 1ನೇ ಜೂನ್ ಗೆ 11 ಮತ್ತು 14 ವರ್ಷ ಮೀರದ ಬಾಲಕರಿಗೆ ಇಲಾಖೆಯ ವತಿಯಿಂದ ನಡೆಯುತ್ತಿರುವ ಕಾರವಾರ ಕ್ರೀಡಾ ವಸತಿ ನಿಲಯ ಪ್ರವೇಶಾತಿಗೆ ಜಲಸಾಹಸ ಕ್ರೀಡಾ ವಿಭಾಗಗಳ (ಸೇಲಿಂಗ್, ಕಯಾಕಿಂಗ್, ಕನೂಯಿಂಗ್) ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಏಪ್ರಿಲ್ 3 ರಂದು ಬೆಳಗ್ಗೆ 10 ರಿಂದ ನಗರದ ಅಜ್ಜರಕಾಡು ಮಹಾತ್ಮಾಗಾಂದಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸಕ್ತರು ನಿಗದಿಪಡಿಸಿದ ನಮೂನೆಯಲ್ಲಿ ವೈದ್ಯಕೀಯ ಪ್ರಮಾಣಪತ್ರ ಹಾಗೂ ದೃಢೀಕರಿಸಿದ ಜನನ ದಿನಾಂಕ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು, ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ. ಆಯ್ಕೆಗೊಂಡ ಕ್ರೀಡಾಪಟುಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರದೊಂದಿಗೆ ವಿಶೇಷ ಕ್ರೀಡಾ ತರಬೇತಿ – ಇತ್ಯಾದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕಿಗೊಂದು ಗುರಿ ಇರಲಿ, ಅದರೊಂದಿಗೆ ಮಾಡುವ ಕಾರ್ಯದಲ್ಲಿ ಶ್ರದ್ಧೆಯೊಂದಿಗೆ ಪ್ರೀತಿ ಇರಲಿ ಇವೆರಡಕ್ಕೆ ಹಿರಿಯರ ಆಶೀರ್ವಾದ ಇದೆ ಎಂದರೆ ಬದುಕಿನಲ್ಲಿ ಯಶಸ್ಸು ಕಾಣುವಿರಿ. ಈ ಯಶಸ್ಸು ನಿಮ್ಮ ಮುಂದಿನ ಪೀಳಿಗೆಗೆ ಮಾದರಿಯಾಗಲಿ. ಈ ರೀತಿ ಬದುಕುವುದೇ ಜೀವನದ ಮೌಲ್ಯ ಎಂದು ಸೌಕೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಿ. ಕಿಶನ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ “ಜೀವನ ಮೌಲ್ಯ”ವಿಶೇಷ ಉಪನ್ಯಾಸ ಮಾಲಿಕೆ 3ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮನಿಷಾ ಪ್ರಾರ್ಥಿಸಿ, ಪ್ರಥಾ ಆರ್. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಅನುಶ್ರೀ ಕೆ. ಶೆಟ್ಟಿ ನಿರೂಪಿಸಿ, ಪ್ರಥ್ವಿ ಸ್ವಾಗತಿಸಿ, ಜ್ಯೋತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊರಗ ಸಮುದಾಯದ ಯುವಜನರಿಗೆ ನೇರ ನೇಮಕಾತಿ ಮೂಲಕ ಸರಕಾರಿ ಉದ್ಯೋಗ ನೀಡುವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಇತ್ತೀಚಿಗೆ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಯಿತು. ಈ ಸಂದರ್ಭ ವಿದ್ಯಾವಂತ ನಿರುದ್ಯೋಗಿ ಯುವ ಸಮುದಾಯದೊಂದಿಗೆ ಮುಖ್ಯಮಂತ್ರಿ ಮಾತುಕತೆ ಮಾಡಿದರು. ಇನ್ನಿತರ ಬೇಡಿಕೆಗಳಾದ ಕೃಷಿ ಭೂಮಿ, ಆರೋಗ್ಯ ಸಹಿತ ಪ್ರಮುಖ ವಿಚಾರಗಳನ್ನು ಚರ್ಚಿಸಿದರು. ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಣದೀಪ್, ಎಸ್ಸಿ-ಎಸ್ಟಿ ಕೋಶದ ನಿರ್ದೇಶಕರಾದ ಊರ್ಮಿಳಾ, ಬುಡಕಟ್ಟು ಕಲ್ಯಾಣ ಇಲಾಖೆಯ ನಿರ್ದೇಶಕ ಕೆ. ಯೋಗಿಶ್ ಅವರನ್ನು ಭೇಟಿಯಾಗಿ ಕೊರಗ ಸಮುದಾಯದ ಚರ್ಚಿಸಲಾಯಿತು. ಒಕ್ಕೂಟದ ಅಧ್ಯಕ್ಷೆ ಸುಶೀಲ ನಾಡ, ಉಪಾಧ್ಯಕ್ಷೆ ಪವಿತ್ರ, ಸಂಯೋಜಕರಾದ ಪುತ್ರ ಕೆ., ಮುಖಂಡರಾದ ಬೋಗ್ರ ಕೊಕ್ಕರ್ಣೆ, ಶೀನ ಕಾಂಜರಕಟ್ಟಿ, ನರಸಿಂಹ ಪೆರ್ಡೂರು, ಲೀಲಾ ಕಾಪು, ಸಮುದಾಯದ ಯುವಜನರಾದ ಪ್ರೀತಿ, ಸುಪ್ರಿಯಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ. ಡ್ರಗ್ಸ್ ಜಾಗದ ಮೂಲಕ ಭಾರತದ ಪ್ರಗತಿಯನ್ನು ಕುಂದಿಸುವ ಯತ್ನ ನಡೆಯುತ್ತಲೆ ಇದೆ. ಡ್ರಗ್ಸ್ ದಂಧೆಯ ಹಿಂದೆ ಭಯೋತ್ಪಾದಕರ ಜಾಲವಿದೆ. ದೇಶದ ಯುವಜನರು ಡ್ರಗ್ಸ್ ವಿರುದ್ಧ ಹೋರಾಟ ನಡೆಸಬೇಕು. ಸಿಐಎಸ್ಎಫ್ ಡ್ರಗ್ಸ್ ಅರಿವು ಉದ್ದೇಶದಿಂದ ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿ ಏಕಕಾಲಕ್ಕೆ ಸೈಕಲ್ ಜಾಥಾ ಹಮ್ಮಿಕೊಂಡಿದೆ ಎಂದು ಸೆಂಟ್ರಲ್ ಇಂಡಸ್ಟ್ರಿಯಲ್ ಸ್ಪೆಷಲ್ ಫೋರ್ಸ್ ಗೋವಾ ವಿಭಾಗದ ಕಮಾಂಡರ್ ವಿಭು ಸಿಂಗ್ ಹೇಳಿದರು. ಅವರು ಇಲ್ಲಿನ ಮೊಗವೀರ ಭವನದಲ್ಲಿ ಸೇನಾಭಿಮಾನಿ ಬಳಗ ಕುಂದಾಪುರದಲ್ಲಿ ಹಮ್ಮಿಕೊಂಡ ಸಿಐಎಸ್‌ಎಫ್ ಸೈಕಲ್ ಜಾಥಾ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮೃದ್ಧ ಭಾರತಕ್ಕಾಗಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ದೇಶದ ಪಶ್ಚಿಮ ಕರಾವಳಿಯ ಸುರಕ್ಷತೆಗೆ ಒತ್ತು ನೀಡಬೇಕಿದೆ. 125 ಮಂದಿ ಯೋಧರ ಸೈಕಲ್ ಜಾಥಾ ಮಾರ್ಚ್ 31 ರಂದು ಕನ್ಯಾಕುಮಾರಿ ತಲುಪಲಿದೆ ಎಂದರು. ಸಿಐಎಸ್‌ಎಫ್ ಅಸಿಸ್ಟಂಟ್ ಕಮಾಂಡರ್ ಸಾಯಿಸಿಂಗ್ ಮಾತನಾಡಿ, ದೇಶದ ಭದ್ರತೆಯಲ್ಲಿ 5 ಬಗೆಯ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಖಾಸಗಿ ಚಿಂತನೆಯಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಯಾಗುತ್ತಿದೆ ಎಂದು ಕುಷ್ಮಾದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿಪ್ರಾಯಪಟ್ಟರು. ಅವರು ಆಳ್ವಾಸ್‌ನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ಕುಷ್ಮಾ ಜಿಲ್ಲಾವಾರು ಸಮಿತಿಯ ಸಂಯೋಜಕರಿಗೆ ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.ರಾಜ್ಯದಲ್ಲಿ ಶೇಕಡಾ 50ರಷ್ಟು ಮಕ್ಕಳು ಖಾಸಗಿ ವ್ಯವಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಸರಕಾರಿ ಸಂಸ್ಥೆಗಳಿಗೆ ಹೋಲಿಸಿದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಫಲಿತಾಂಶ ಉತ್ತಮವಾಗಿದೆ. ಕಳೆದ ಬಾರಿಯ ಬೋರ್ಡ್ ಪರೀಕ್ಷೆಯಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳು 75 ಶೇಕಡಾ ಫಲಿತಾಂಶ ದಾಖಲಿಸಿದರೆ, ಅನುದಾನಿತ ಸಂಸ್ಥೆಗಳಲ್ಲಿ 79 ಶೇಕಡಾ ಫಲಿತಾಂಶ ಲಭಿಸಿದರೆ ಹಾಗೂ ಖಾಸಗಿ ಸಂಸ್ಥೆಗಳು 90.46 ಶೇಕಡಾ ಫಲಿತಾಂಶ ನೀಡಿವೆ. ಇವುಗಳ ಜೊತೆಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲೂ ಖಾಸಗಿ ಸಂಸ್ಥೆಗಳು ಅಗ್ರಗಣ್ಯ ಸ್ಥಾನದಲ್ಲಿ ನಿಂತಿವೆ. ಇದು ರಾಜ್ಯದ ಒಟ್ಟು ಫಲಿತಾಂಶದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವೆಲ್ಲರೂ ತಿನ್ನುತ್ತಿರುವ ಆಹಾರದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಎಷ್ಟು, ಏನು, ಯಾವಾಗ, ಮತ್ತು ಯಾವುದನ್ನು ತಿನ್ನಬೇಕು ಎಂಬುವುದು ಬಹಳ ಮುಖ್ಯ ಹಾಗೂ ನಮ್ಮ ಆರೋಗ್ಯದ ಸೂಚ್ಯಂಕಗಳೆಂದು ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ. ಜಿ. ಹೆಚ್. ಪ್ರಭಾಕರ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಮಾರ್ಗದರ್ಶನದಲ್ಲಿ ಕಾಲೇಜಿನ ವಿಜ್ಞಾನ ಕ್ಲಬ್ ಮತ್ತು ಇಕೋ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ʼನಾವೇನನ್ನ ತಿನ್ನುತ್ತಿದ್ದೇವೆʼ ಎಂಬ ಶಿರ್ಷಿಕೆ ಅಡಿಯಲ್ಲಿ ಆಹಾರ ಮತ್ತು ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಮಾತಾನಾಡುತ್ತಾ, ಅದರ ಬಯಸುವ ಆಹಾರಕ್ಕಿಂತ ಉದರ ಬಯಸುವ ಆಹಾರವನ್ನು ಹಿತಮಿತವಾಗಿ ಸೇವಿಸಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯ 2ನೇ ಸ್ಥಾನ ಹಾಗೂ ಹಿತಿಕ್ಷಾ16ನೇ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕುಗಳಲ್ಲಿ ಭೂಮಿಗಳನ್ನುನ್ನು ಗುರುತಿಸಲಾಗಿದೆ. ಕೆ.ಐ.ಎ.ಡಿ.ಬಿ ಅವರು ಈ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿ, ಹೊಸ ಕೈಗಾರಿಕೆಗಳು ಸ್ಥಾಪನೆಗೊಂಡು ಜನರಿಗೆ ಉದ್ಯೋಗ ದೊರಕಿಸಿಸುವಂತಾಗಬೇಕೆಂದರು. ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸಿನ ಮಿತಿ 33 ರಿಂದ 65 ವರ್ಷ ದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ…
