ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯು ಭವಿಷ್ಯದ ಪೀಳಿಗೆಯ ವಿಜ್ಞಾನಿಗಳು ಮತ್ತು ನಾವಿನ್ಯಕಾರರಿಗೆ ಸ್ಪೂರ್ತಿ ನೀಡುವ ವೇದಿಕೆಯಾಗಿಯೂ ಹಾಗೂ ಯುವ ಮನಸ್ಸುಗಳಲ್ಲಿ ವಿಜ್ಞಾನ ಮತ್ತು ಪರಿಶೋಧನೆಯ ಬಗ್ಗೆ ಉತ್ಸಾಹ ತುಂಬುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಒಳಕಾಡು ಸಂಯುಕ್ತ ಪ್ರೌಢಶಾಲೆಯಲ್ಲಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ಮಂಡಳಿ, ಬಾರತೀಯ ವಿಜ್ಞಾನ ಸಂಸ್ಥೆ ಆವರಣ ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ ಸಿ.ವಿ.ರಾಮನ್ ಅವರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು. ಭಾರತೀಯ ಭೌತಶಾಸ್ತ್ರ ವಿಜ್ಞಾನಿ ಸರ್ ಸಿ.ವಿ ರಾಮನ್ ಅವರು, ರಾಮನ್ ಪರಿಣಾಮವನ್ನು ಕಂಡು ಹಿಡಿದ ನೆನೆಪಿಗಾಗಿ ಪ್ರತಿ ವರ್ಷ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸುವುದರಿಂದ ಅವರುಗಳು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಮಪೂಜ್ಯ ಯೋಗ ಬ್ರಹ್ಮ ಶ್ರೀ ಋಷಿ ಪ್ರಭಾಕರ್ ಗುರೂಜಿಯವರ ಆಶಿರ್ವಾದದೊಂದಿಗೆ, ಸಿದ್ದ ಸಮಾಧಿ ಯೋಗ ಬೈಂದೂರು ವಲಯದ ಆಚಾರ್ಯ ಶ್ರೀ ಕೇಶವ್ಜೀ ಬೆಳ್ನಿ ಇವರ ನೇತೃತ್ವದಲ್ಲಿ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಸ್ಥಾನಕ್ಕೆ 5ನೇ ವರ್ಷದ ಪಾದಯಾತ್ರೆಯು ಮಾ.2 ಆದಿತ್ಯವಾರ ಬೆಳಿಗ್ಗೆ ಗಂಟೆ 4.00ಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಬರುವ ಮೇ ತಿಂಗಳಿನಲ್ಲಿ ಬೈಂದೂರಿನಲ್ಲಿ ನಡೆಯುವ ವೈಭವದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ನಿಮಿತ್ತ ಕಾರ್ಯಕ್ರಮದ ಸಂಕಲ್ಪದಾರರಿಂದ ಕೊಲ್ಲೂರು ಪಾದಯಾತ್ರೆಯಿಂದ ಮುಂದುವರಿದು ತಿರುಪತಿಗೆ ಪಾದಯಾತ್ರೆ ನಡೆಯುವುದು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜಕಾರಣ ಬೇರೆ ಧರ್ಮ ಬೇರೆ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಒಬ್ಬ ಅಪ್ಪಟ ಹಿಂದೂ ಅದರ ಜೊತೆಯಲ್ಲಿ ಒಬ್ಬ ಅಂಬೇಡ್ಕರ್ ಕೊಟ್ಟ ಸಂವಿಧಾನದ ಆಶಯಗಳನ್ನು ಏತ್ತಿ ಹಿಡಿಯುವ ಜಾತ್ಯತೀತ ಮನಸ್ಥಿತಿಯ ನಾಯಕ. ಬಿಜೆಪಿ ನಾಯಕರುಗಳು ಹಿಂದೂ ಧರ್ಮವನ್ನು ಗುತ್ತಿಗೆ ಪಡೆಯಲಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ಬಿಜೆಪಿಯವರು ಮಾತ್ರ ಹಿಂದೂಗಳು ಉಳಿದವರು ಯಾರೂ ಹಿಂದೂಗಳಲ್ಲಾ ಎನ್ನುವ ಭಾವನೆ ಬಿಜೆಪಿಯವರಲ್ಲಿದೆ. ರಾಜಕೀಯವನ್ನು ಧರ್ಮದ ಜೊತೆ ಬೆರೆಸಿ ಧರ್ಮ ಹಾಗೂ ದೇವರನ್ನು ಬೀದಿಗೆ ತಂದವರು ಬಿಜೆಪಿಯವರು. ಇವತ್ತು ರಾಜ್ಯದಲ್ಲಿ ಒಡೆದ ಮನೆಯಾಗಿರುವ ಬಿಜೆಪಿಗೆ ನಾಯಕತ್ವದ ಕೊರತೆಯಿದ್ದು ಅದನ್ನು ನೀಗಿಸಲು ಡಿ. ಕೆ. ಶಿವಕುಮಾರ್ ರಂತಹ ಜನಪರ ಕಾಳಜಿಯ ನಾಯಕರಿಗೆ ಗಾಳ ಹಾಕುವ ಕೆಲಸ ಬಿಜೆಪಿ ನಾಯಕರುಗಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಹಲವು ಬಣಗಳಾಗಿ ಹಂಚಿ ಹೋಗಿರುವ ಬಿಜೆಪಿ ಒಡೆದ ಮನೆಯಾಗಿದೆ. ಬಿಜೆಪಿ ನಾಯಕರುಗಳದ್ದು ಬೂಟಾಟಿಕೆಯ ಹಿಂದುತ್ವ. ಕೇವಲ ಅಧಿಕಾರಕ್ಕಾಗಿ ಧರ್ಮ, ಧರ್ಮದ ನಡುವೆ, ಜಾತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹವಾಮಾನ ಇಲಾಖೆ ಈ ಕೆಳಕಂಡಂತೆ ಸಲಹೆ-ಸೂಚನೆಗಳನ್ನು ನೀಡಿದೆ. ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ಹಾಗೂ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಬಳಸಬಾರದು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದಲ್ಲಿ 80ನೇ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು. ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗಂಗೊಳ್ಳಿ ಪರ್ಶಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಡಿವಾಳ ವಹಿಸಿದ್ದರು. ಧಾರ್ಮಿಕ ಮುಖಂಡರಾದ ಬಿ. ಸದಾನಂದ ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಜಾನಪದ ಪರಿ?ತ್ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ, ಜಾನಪದ ಗಾಯಕ, ಕಲಾವಿದ ಡಾ. ಸಚಿನ್ ಸಾಲಿಯಾನ್ ಮತ್ತು ಗಾಯಕರು, ತಬಲಾ ವಾದಕ ಬಿ.ಪ್ರಕಾಶ್ ಶೆಣೈ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಯಿತು. ಉಪವಲಯ ಅರಣ್ಯಾಧಿಕಾರಿ ಕೆ. ಸದಾಶಿವ ಮಾವಿನಕಟ್ಟೆ, ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಗಂಗೊಳ್ಳಿ, ಗಂಗೊಳ್ಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ದೇವಸ್ಥಾನದ ಅಧ್ಯಕ್ಷ ಗುರುರಾಜ್ ಗಂಗೊಳ್ಳಿ, ಕಾರ್ಯದರ್ಶಿ ನರಸಿಂಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಸುಷ್ಮಾ ಅವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಹಾಗೂ ಗ್ರೂಪ್ 2 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈಕೆ ಹಾಲಾಡಿಯ ಸಂಜೀವ ಹಾಗೂ ಹೇಮಾವತಿ ದಂಪತಿಗಳ ಪುತ್ರಿ. ಕಾಲೇಜಿನಲ್ಲಿ ಓದುತ್ತಿರುವಾಗಲೇ ಪದವಿಯ ಜೊತೆಗೆ ಪರೀಕ್ಷೆಯನ್ನು ತೇರ್ಗಡೆ ಹೊಂದಿ, ನಿರಂತರ ಪರಿಶ್ರಮ ಹಾಗೂ ಶೃದ್ಧೆಯಿಂದ ಅಧ್ಯಯನ ನಡೆಸಿ ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಯನ್ನು ಶಾಸ್ತ್ರೋಕ್ತವಾಗಿ ಆಚರಿಸಲಾಯಿತು. ವಿದ್ಯಾರ್ಥಿ ವೃಂದದವರು ಭಕ್ತಿಗೀತಾ ಗಾಯನ, ಉಪವಾಸ, ಶಿವಸ್ತೋತ್ರ ಪಠಣದ ಮುಖೇನ ಆದಿಯೋಗಿಯನ್ನು ಆರಾಧಿಸಿ, ಕೃತಾರ್ಥತೆ ಹೊಂದಿದರು. ಸಂಜೆಯ ಭಜನಾ ಕಾರ್ಯಕ್ರಮದ ಅವಧಿಯಲ್ಲಿ ಶಿವಾರಾಧನೆಯ ಕ್ರಮವನ್ನು ಬಣ್ಣಿಸುತ್ತಾ ಶಿವಪೂಜೆ ಮತ್ತು ಶಿವಭಜನೆ ಕೇವಲ ಒಂದು ದಿನದ್ದಲ್ಲ, ನಮ್ಮ ಜೀವನವೇ ಒಂದು ಶಿವಪೂಜೆಯಾಗಬೇಕು. ಶಂಕರನೆಂದರೆ ಉತ್ತಮವಾದದ್ದನ್ನು ಮಾಡುವವನೆಂದರ್ಥ. ಸಮಾಜದ, ದೇಶದ ಹಿತವನ್ನು ಕಾಪಾಡುವ ಕಾರ್ಯಗಳ ಮೂಲಕ ಸದಾ ಶಂಕರನನ್ನು ಆರಾಧಿಸಬೇಕು ಮತ್ತು ಅನುಸರಿಸಬೇಕು. ಅಂತಸಾಕ್ಷಿ ಸ್ವರೂಪದಲ್ಲಿದ್ದು ನಮ್ಮನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯುವವ ಶಿವನಾಗಿದ್ದಾನೆ. ಭಗೀರಥನ ಪ್ರಾರ್ಥನೆಗೆ ಓಗೊಟ್ಟು ಧರೆಗೆ ಧುಮುಕಿದ ಗಂಗೆಯನ್ನು ಶಿರದೊಳು ಧರಿಸಿ ಭೂಮಾತೆಗೆ ನಿಧಾನವಾಗಿ ನೀರನ್ನು ಇಳಿಸಿದವನು ಗಂಗಾಧರ. ದೇಶದ ರಕ್ಷಣೆಯನ್ನು ಉತ್ತರ ದಿಕ್ಕಿನಲ್ಲಿ ಸದಾ ನಡೆಸುತ್ತಿರುವವನು ಕೈಲಾಸ ಪರ್ವತವಾಸಿ ಈಶನಾಗಿದ್ದಾನೆ. ಸಮುದ್ರಮಥನದ ಕಾಲದಲ್ಲಿ ಉತ್ಪನ್ನವಾದ ವಿಷವನ್ನು ಕುಡಿದು ಜಗತ್ತನ್ನು ರಕ್ಷಿಸಿದವನು ನೀಲಕಂಠನಾಗಿದ್ದಾನೆ. ಮಾರ್ಕಂಡೇಯನ ರಕ್ಷಣೆಗೆ ನಿಂತು ಯಮನನ್ನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಣ್ಣ ಕೈಗಾರಿಕೆಗಳ ಉದ್ಯಮಗಳನ್ನು ಉತ್ತೇಜಿಸಲು ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರಗಳು ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಉದ್ದಿಮೆದಾರರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಕಡಿಯಾಳಿ ಜಂಕ್ಷನ್ನ ದಿ ಓಷನ್ ಪರ್ಲ್ ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕರ್ನಾಟಕ ಸರಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಹಯೋಗದಲ್ಲಿ ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು (ಆರ್.ಎ.ಎಂ.ಪಿ) ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಉದ್ದಿಮೆಗಳನ್ನು ಇನ್ನಷ್ಟು ಸ್ಥಾಪಿಸುವ ಮೂಲಕ ಸ್ಥಳಿಯರಿಗೆ ಉದ್ಯೋಗ ದೊರಕಿಸಲು ಮುಂದಾಗಬೇಕು. ಉದ್ಯಮಿಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಕೊಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾವಣ್ಯ ರಿ. ಬೈಂದೂರು 48ನೇ ವಾರ್ಷಿಕೋತ್ಸವ ಹಾಗೂ ಬೈಂದೂರು ಮಾಜಿ ಶಾಸಕ ದಿ. ಕೆ. ಲಕ್ಷ್ಮೀನಾರಾಯಣ ಸ್ಮರಣಾರ್ಥ “ರಂಗಪಂಚಮಿ-2025” ರಂಗತೋತ್ಸವ ಮಾರ್ಚ್ 1 ರಿಂದ 5ರ ವರೆಗೆ ಶ್ರೀ ಶಾರಾದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯಲಿದೆ. ಮಾರ್ಚ್ 1ರಂದು 48ನೇ ವಾರ್ಷಿಕೋತ್ಸವ ಹಾಗೂ ರಂಗೋತ್ಸವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಲಾವಣ್ಯ ಅಧ್ಯಕ್ಷರಾದ ನರಸಿಂಹ ಬಿ. ನಾಯಕ್ ಅವರು ವಹಿಸಲಿದ್ದಾರೆ. ಧಾರವಾಡ ಉದ್ಯಮಿ ಯು.ಬಿ.ಶೆಟ್ಟಿ ಅವರು ಉದ್ಘಾಟನೆ ನೆರವೆರಿಸಲಿದ್ದಾರೆ. ಕುಂದಾಪುರ ಪ್ರಥಮ ದರ್ಜೆ ಗುತ್ತಿಗೆದಾರರಾದ ಬಿಜೂರು ರಾಮಕೃಷ್ಣ ಶೇರುಗಾರ್ ಅವರು ಶುಭಸಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಇನ್ನಿತರರು ಉಪಸ್ಥಿರಿರುವರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಅಭಿನಂದನೆ ಮಾಡಲಿದ್ದಾರೆ. ಈ ವೇಳೆ ಹಿರಿಯ ಕಲಾವಿದರಾದ ಗೋವಿಂದ ಎಂ. ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಜಪ್ತಿಯ ಶಶಿಧರ ಉಡುಪ ಹಾಗೂ ಕಾವೇರಿ ಉಡುಪ ಅವರ ಪುತ್ರನಾದ ಶ್ರೀಕಾಂತ್ ಉಡುಪ ಹಾಗೂ ಶಿರೂರಿನ ರಾಜು ಪೂಜಾರಿ ಹಾಗೂ ಸುಶೀಲ ಪೂಜಾರಿ ಅವರ ಪುತ್ರನಾದ ನಿಖಿಲ್ ಆರ್. ಪೂಜಾರಿ ಅವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
