Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭವು ಸಂಪನ್ನಗೊಂಡಿತ್ತು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಲೇಖಕಿ, ಭಂಡಾರ್‌ಕಾರ್ಸ್ ಕಾಲೇಜಿನ ನಿವೃತ್ತ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ. ಪಾರ್ವತಿ ಜಿ. ಐತಾಳ್ ಅವರು ವಿಜೇತರಿಗೆ ಬಹುಮಾನ ವಿತರಿಸಿ, ಮಾತೃಭಾಷೆ ಹಾಗೂ ಆಂಗ್ಲ ಭಾಷೆಗಳ ಮಹತ್ವವನ್ನು ಮಕ್ಕಳಿಗೆ ಮನದಟ್ಟಾಗುವಂತೆ ವಿವರಿಸಿದರು. ನಾಲ್ಕು ಗೋಡೆಗಳ ನಡುವೆ ಕಲಿಯುವುದಷ್ಟೇ ಶಿಕ್ಷಣವಲ್ಲಾ ಪಠ್ಯಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅತಿ ಅವಶ್ಯಕವಾಗಿದೆ. ಬಹುಮಾನಗಳಿಸುವುದೇ ಮುಖ್ಯವಲ್ಲ ಸ್ಪರ್ಧೆಗಳಲ್ಲಿ ಆಗಾಗ್ಗೆ ಭಾಗವಹಿಸುತ್ತಿರುವುದು ತುಂಬಾ ಮುಖ್ಯವಾಗುತ್ತದೆ. ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣವು ಸಾಧನೆಯ ಪಥದಲ್ಲಿ ಸಾಗಲು ಪೂರಕವಾಗಿದ್ದು, ಈ ಶಾಲೆಯಲ್ಲಿ ಅದಕ್ಕೆ ಒತ್ತು ನೀಡಲಾಗುತ್ತಿರುವುದನ್ನು ನೋಡಿ ಪ್ರಶಂಶಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ಕೌಸ್ತುಭ್‌ ಪೂಜಾರಿ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ. ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕೌಸ್ತುಭ್‌, ಕೇಶವ ಪೂಜಾರಿ ಹಾಗೂ ಭಾರತಿ ಪೂಜಾರಿ ದಂಪತಿಯ ಪುತ್ರಿ. ಈತನಿಗೆ ಶಿಕ್ಷಕರಾದ ಪ್ರಸನ್ನ ಮತ್ತು ಸುನೀತಾ ಅವರು ತರಬೇತಿ ನೀಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮರವಂತೆ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸಂಭ್ರಮವು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನದೊಂದಿಗೆ ಸಂಪನ್ನವಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಜಾತಾ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಅಥಿತಿಯಾಗಿದ್ದ ಶಾಸಕ ಗುರುರಾಜ ಗಂಟಿಹೊಳೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಅಭಿವೃದ್ಧಿ ಸಮಿತಿ, ಸಾರ್ವಜನಿಕರು, ಶಿಕ್ಷಕರು ದಾನಿಗಳಿಂದ ಅಗತ್ಯ ಪರಿಕರಗಳನ್ನು ಹೊಂದಿಸಿಕೊಂಡು ನಡೆಸುತ್ತಿರುವ ಪ್ರಯತ್ನವನ್ನು ಶ್ಲಾಘಿಸಿ, ಇಲ್ಲಿ ಮೆಟ್ರಿಕ್‌ಪೂರ್ವ ವಿದ್ಯಾರ್ಥಿನಿಲಯ ಆರಂಭಿಸಲು ಪ್ರಯತ್ನಿಸಲಾಗುವುದು ಎಂದರು. ಇನ್ನೋರ್ವ ಅತಿಥಿಯಾಗಿದ್ದ ಹಿರಿಯ ಗುತ್ತಿಗೆದಾರ ಉಪ್ಪಿನಕುದ್ರು ರಾಜೇಶ ಕಾರಂತ ಮಾತನಾಡಿ, ಶಾಲೆಯು ವಿಶಾಲ ನಿವೇಶನವನ್ನು ಹೊಂದಿರುವುದರಿಂದ ಇಲ್ಲಿ ಅಗತ್ಯವಾಗಿರುವ ಸುಸಜ್ಜಿತ, ಬಹೂಪಯೋಗಿ ಕ್ರಿಡಾಂಗಣವನ್ನು ನಿರ್ಮಿಸಿಕೊಡುವ ಭರವಸೆ ನೀಡಿದರು. ಶಾಲಾ ಸಂಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಜನಾರ್ದನ ಧ್ವಜಾರೋಹಣ ಗೈದರು. ಮುಖ್ಯೋಪಾಧ್ಯಾಯ ಎಂ. ಭಾಸ್ಕರ ಮಯ್ಯ ವರದಿ ಓದಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ ಖಾರ್ವಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ದಯಾನಂದ ಬಳೆಗಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆ, ಉಡುಪಿ ಇವರ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಜ. 26ರಿಂದ 28ರ ವರೆಗೆ ರೈತ ಸೇವಾ ಕೇಂದ್ರ, ಶಿವಳ್ಳಿ ತೋಟಗಾರಿಕೆ ಕ್ಷೇತ್ರ, ದೊಡ್ಡಣಗುಡ್ಡೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಸದರಿ ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ಯಮದಾರರು, ಯಂತ್ರೋಪಕರಣ ಮಾರಾಟಗಾರರು, ಬ್ಯಾಂಕ್ ಹಾಗೂ ಆಹಾರ ಮಳಿಗೆದಾರರಿಗೆ 100 ಚದರ ಅಡಿ ಗಾತ್ರದ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಸದರಿ ಮಳಿಗೆಗೆ ರೂ. 3500/- ರಂತೆ ದರವನ್ನು ನಿಗದಿಪಡಿಸಲಾಗಿದ್ದು, ಸದರಿ ಮಳಿಗೆಗಳಲ್ಲಿ ತೋಟಗಾರಿಕೆ ಚಟುವಟಿಕೆ ಹೊಂದಿರುವವರಿಗೆ ಹಾಗೂ ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುವುದು. ಮಳಿಗೆ ತೆರೆಯಲು ಆಸಕ್ತರು ಮಳಿಗೆಗಳ ಮೊತ್ತವನ್ನು ಆನ್‌ಲೈನ್ ಮೂಲಕವೇ ರೈತ ಸೇವಾ ಕೇಂದ್ರ ಖಾತೆಗೆ ಪಾವತಿಸಿ ತಮ್ಮ ಹೆಸರನ್ನು ಜನವರಿ 20ರ ಒಳಗಾಗಿ ನೊಂದಾಯಿಸಿಕೊಳ್ಳಬಹುದಾಗಿದೆ. ಮಳಿಗೆ ಹೆಸರು ನೋಂದಾಯಿಸಲು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು, ರಾಜ್ಯವಲಯ, ಉಡುಪಿ ದೂರವಾಣಿ ಸಂಖ್ಯೆ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ ಪ್ರವರ್ತಿತ  ಮದರ್ ತೆರೇಸಾಸ್ ಪಿಯು ಕಾಲೇಜಿನ ಪ್ರಥಮ ಪಿಯು ವಾಣಿಜ್ಯ ವಿದ್ಯಾರ್ಥಿಗಳಿಗೆ ʼಮನ್ವಂತರ – 2025ʼ ಕಾಲೇಜು ಮಟ್ಟದ ಪ್ರತಿಭಾನ್ವೇಷಣೆ ಕಾರ್ಯಕ್ರಮ ನಡೆಯಿತು. ಶಿಕ್ಷಣದೊಂದಿಗೆ ಸದಾ ನವೀನತೆಯನ್ನು ಪರಿಚಯಿಸುತ್ತಿರುವ ಸಂಸ್ಥೆಯು ನೂತನವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವನೆ ಮತ್ತು ಆಧುನಿಕತೆ ಹಾಗೂ ವ್ಯವಾಹಾರಿಕ ಜ್ಞಾನವನ್ನು ಪರಿಚಯಿಸಿ ವಿದ್ಯಾರ್ಥಿಗಳಿಗೆ ಹೊಸ ಅನುಭವವನ್ನು ನೀಡುವ ಉದ್ದೇಶವೇ ಮನ್ವಂತರ – 2025. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆ. ಪಿ. ಎಸ್. ಬಿದ್ಕಲಕಟ್ಟೆ ಉಪಪ್ರಾಂಶುಪಾಲರಾದ ಕರುಣಾಕರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಪ್ರತಿಭಾನ್ವೇಷಣೆ ಕಾರ್ಯಕ್ರಮದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಅತ್ಯುತ್ತಮ ಪ್ರಜೆಗಳಾಗಿ ಇತರರಿಗೆ ಮಾದರಿಯಾಗಬೇಕು ಈ ದಿಶೇಯತ್ತ ಬುನಾದಿ ತರಬೇತಿಯನ್ನು ನೀಡಿ ಸಮಾಜದಲ್ಲಿ ಗುರುತರ ಕಾರ್ಯವನ್ನು ಮಾಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕೊಡುಗೆ ನಿಜಕ್ಕೂ ಶ್ಲಾಘನೀಯ. ಈಗಾಗಲೇ ಹತ್ತು ಹಲವು ಪಾಟೇತರ ಚಟುವಟಿಕೆಯಿಂದ  ಮನೆಮಾತಾಗಿರುವ ಸಂಸ್ಥೆಯ ಹೆಸರು ಇನ್ನೂ ಎತ್ತರಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ರಿಂಗ್‌ ರೋಡ್‌ ಕಾಮಗಾರಿಗಾಗಿ ಖಾರ್ವಿಕೇರಿ ಬಳಿ ಶಿಲೆಗಲ್ಲುಗಳನ್ನು ಅನ್‌ಲೋಡ್‌ ಮಾಡುತ್ತಿದ್ದ ವೇಳೆ ಪಂಚಗಂಗಾವಳಿ ಹೊಳೆಗೆ ಟಿಪ್ಪರ್‌ ಮಗುಚಿಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ರಿಂಗ್‌ರೋಡ್‌ ಕಾಮಗಾರಿಗಾಗಿ ಖಾರ್ವಿಕೇರಿ ಪ್ರದೇಶದಲ್ಲಿ ಪಂಚಗಂಗಾವಳಿ ಹೊಳೆ ಬದಿಯಲ್ಲಿ ಟಿಪ್ಪರ್‌ ನಿಲ್ಲಿಸಿ ಶಿಲೆಗಲ್ಲುಗಳನ್ನು ಅನ್‌ಲೋಡ್‌ ಮಾಡುತ್ತಿದ್ದ ಸಂದರ್ಭ ಬದಿಯ ಮಣ್ಣು ಕುಸಿದಿದ್ದರಿಂದ ನಿಯಂತ್ರಣ ತಪ್ಪಿದ ಟಿಪ್ಪರ್‌ ಹೊಳೆಗೆ ಮಗುಚಿ ಬಿದ್ದಿದೆ. ತಕ್ಷಣ ಸಮೀಪದಲ್ಲೇ ಇದ್ದ ಸ್ಥಳೀಯರು ಟಿಪ್ಪರ್‌ ಒಳಗೆ ನೀರಿನಲ್ಲಿದ್ದ ಚಾಲಕನನ್ನು ರಕ್ಷಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿಟಾಚಿ ಸಹಾಯದಿಂದ ಟಿಪ್ಪರ್‌ ಮೇಲಕ್ಕೆತ್ತಲಾಗುತ್ತಿದೆ. ಚಿತ್ರಗಳು: ಗುರುಪ್ರಸಾದ್‌ ಯಾದವ್

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ನಡೆಸಿದ 2024ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಅದಿತಿ ನಾವಡ 99.5% ಅಂಕಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯದಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅದಿತಿ, ಕುಂದಾಪುರದ ಡಾ. ಸಂದೀಪ ನಾವಡ ಹಾಗೂ ಡಾ. ಪ್ರೀತಿ ನಾವಡ ದಂಪತಿಯ ಪುತ್ರಿ. ಈಕೆ ನೃತ್ಯ ವಸಂತ ನಾಟ್ಯಾಲಯ ಕುಂದಾಪುರದಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್‌ ಮತ್ತು ಮೆಂಟಲ್‌ ಅರಿಥಮೆಟಿಕ್ ಹಾಗೂ 16ನೇ ರಾಷ್ಟ್ರ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಛಾಯಾ ವಿಶ್ವನಾಥ್‌ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕುಂದಾಪುರದ ಎಚ್‍ಎಮ್‍ಎಮ್‍ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿರುವ ಛಾಯಾ, ಛಾಯಾಗ್ರಾಹಕ ವಿಶ್ವನಾಥ ಮುನ್ನ ಹಾಗೂ ರಜನಿ ದಂಪತಿಯ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏರ್‌ಮ್ಯಾನ್ ಆಗಿ ಗ್ರೂಪ್ ವೈ (ತಾಂತ್ರಿಕವಲ್ಲದ) (ಎ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು 10+2 ವಿದ್ಯಾರ್ಹತೆ ಹೊಂದಿದ ಅವಿವಾಹಿತ ಅಭ್ಯರ್ಥಿಯು 2004 ರ ಜುಲೈ 3 ಮತ್ತು 2008 ರ ಜುಲೈ 03 ರ ನಡುವೆ ಜನಿಸಿರಬೇಕು. (ಬಿ) ವೈದ್ಯಕೀಯ ಸಹಾಯಕ ವೃತ್ತಿಗೆ ಫಾರ್ಮಸಿಯಲ್ಲಿ ಡಿಪ್ಲೋಮಾ/ ಬಿ.ಎಸ್ಸಿ ಆಗಿರುವ ಅವಿವಾಹಿತ ಅಭ್ಯರ್ಥಿಯು 2001 ರ ಜುಲೈ 03 ಮತ್ತು 2006 ರ ಜುಲೈ 03 ನಡುವೆ ಜನಿಸಿರಬೇಕು. ವಿವಾಹಿತ ಅಭ್ಯರ್ಥಿಯು 2001 ರ ಜುಲೈ 03 ಮತ್ತು 2004 ರ ಜುಲೈ 03 ನಡುವೆ ಜನಿಸಿರಬೇಕು. ರ್ಯಾಲಿಯು ಕೇರಳ ಕೊಚ್ಚಿಯ ಎರ್ನಾಕುಲಂ ಪಿ.ಟಿ. ಉಷಾ ರಸ್ತೆಯ ಮಹಾರಾಜ ಕಾಲೇಜು ಮೈದಾನದಲ್ಲಿ ಜನವರಿ 29 ರಿಂದ ಫೆಬ್ರವರಿ 6 ರ ವರೆಗೆ ಮುಂಜಾನೆ 6 ಘಂಟೆ ಯಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೇವಾ ಚೇತನ ಟ್ರಸ್ಟ್ ರಿ. ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರ ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ನಮ್ಮೂರ ಸಂಭ್ರಮ  ಕಾರ್ಯಕ್ರಮದಲ್ಲಿ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2024ರ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರು, ಜಯದೇವ ಹೃದ್ರೋಗ ಆಸ್ಪತ್ರೆಯ ಆಡಳಿತ ನಿರ್ದೇಶಕರು ಅದ ಡಾ. ಸಿ.ಎನ್. ಮಂಜುನಾಥ್ ಪ್ರಶಸ್ತಿ ಪ್ರದಾನ ಮಾಡಿದರು. ಸೌತ್ ಫೀಲ್ಡ್ ಪೇಂಟ್ಸ್ ನ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿ.ಎ ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ  ಪ್ರವೀಣ್ ಶೆಟ್ಟಿ, ಬೆಂಗಳೂರಿನ ಹಿರಿಯ ಉದ್ಯಮಿ…

Read More