ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಲೋಕಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಉಡುಪಿ ಜಿಲ್ಲೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಸದನದಲ್ಲಿ ಅವಾಚ್ಯ ಪದ ಬಳಕೆ ಮಾಡಿದ ಶಾಸಕ ಸಿ.ಟಿ. ರವಿ ವಿರುದ್ಧ ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಸಮಿತಿ, ಎಸ್.ಸಿ ಘಟಕ ಹಾಗೂ ಕಿಸಾನ್ ಘಟಕ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಬಿಜೆಪಿ ನಾಯಕರ ನಡೆಯನ್ನು ಖಂಡಿಸಿದರು. ಈ ವೇಳೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಪೂಜಾರಿ, ಮಾಜಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೂರ್ಯಕಾಂತಿ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಎಸ್.ಸಿ. ಘಟಕದ ಅಧ್ಯಕ್ಷ ಮಂಜುನಾಥ ನಾಗೂರು, ಮುಖಂಡರುಗಳಾದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಊರನ್ನು ಸಾಂಸ್ಕೃತಿಕವಾಗಿ ಶ್ರೀಮಂತವನ್ನಾಗಿಡಲು ಕಲಾ ಸಂಸ್ಥೆಗಳ ಪಾತ್ರ ಹಿರಿದು. ಆ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕದಿಂದ ಸಕ್ರೀಯವಾಗಿರುವ ಯುಸ್ಕೋರ್ಡ್ ಟ್ರಸ್ಟ್ ಇನ್ನಿತರ ಕಲಾ ಸಂಸ್ಥೆಗಳ ಪೋಷಕ ಸಂಸ್ಥೆಯಾಗಿಯೂ ಬೆಳೆದಿದೆ ನಿಂತಿದೆ ಎಂದು ಆಡಿಟರ್ ಹಾಗೂ ಟ್ಯಾಕ್ಸ್ ಕನ್ಸಲ್ಟೆಂಟ್ ಜತೀಂದ್ರ ಮರವಂತೆ ಹೇಳಿದರು. ಅವರು ಶುಕ್ರವಾರ ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ವರ್ಷ ವೈಭವ – 3 ದಿನಗಳ ಯಕ್ಷ – ನಾಟಕೋತ್ಸವದ 2ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲೆಯನ್ನು ಆಸ್ವಾದಿಸುವ ಮನಸ್ಸುಗಳು ಹೆಚ್ಚಿದಂತೆ ಕಲಾವಿದರು ಹಾಗೂ ಕಲಾ ಸಂಸ್ಥೆಗಳು ಇನ್ನಷ್ಟು ಗಟ್ಟಿಗೊಳ್ಳುತ್ತವೆ ಎಂದರು. ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಗುಲಾಬಿ ಮರವಂತೆ, ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಉಪಸ್ಥಿತರಿದ್ದರು. ಯುಸ್ಕೋರ್ಡ್ ಟ್ರಸ್ಟ್ ಅಧ್ಯಕ್ಷ ಸುಧಾಕರ ಪಿ. ಬೈಂದೂರು ಸ್ವಾಗತಿಸಿದರು. ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಗೋದಲಿಯಲ್ಲಿ ಬಾಲ ಯೇಸು ಜನನದ ದರ್ಶನ, ಕ್ಯಾರೆಲ್ ಹಾಡಿದ ವಿದ್ಯಾರ್ಥಿಗಳ ಗುಂಪು, ನಡುವೆ ಬಂದ ಸಂತ ಕ್ಲಾಸ್, ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸಿದ ಕ್ರಿಸ್ಮಸ್ ಮರ- ಸಭಾಂಗಣ, ಏಂಜೆಲ್ಸ್, ಜಿಂಗಲ್ ಬೆಲ್ ಸಂಗೀತ, ಪುಟಾಣಿಗಳ ಬಾಯಿ ಸಿಹಿ ಮಾಡಿದ ಕೇಕ್. ಕರುಣಾಮಯಿ ಬಾಲಯೇಸು ಜನನದ ಕ್ರಿಸ್ಮಸ್ ಸಂಭ್ರಮ, ಭಕ್ತಿ -ಭಾವ , ಆರಾಧನೆಯ ಸಂಪ್ರೀತಿಯು ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗುರುವಾರ ಸಂಜೆ ಮೂಡಿತು. ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್ಮಸ್’ ಸಂಭ್ರಮಾಚರಣೆ. ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ. ಪೀಟರ್ ಪಾವ್ಲ್ ಸಲ್ಡಾನಾ, ‘ಭರವಸೆ ನಿರಾಶೆ ಮೂಡಿಸುವುದಿಲ್ಲ. ಬದುಕು ಪ್ರೀತಿಯ ಪಥ. ಜೀವನದಲ್ಲಿ ಉನ್ನತ ಭರವಸೆಯೇ ಕ್ರಿಸ್ ಮಸ್ ಸಂದೇಶ’ ಎಂದರು. ‘ಹ್ಯಾಪಿ ಕ್ರಿಸ್ ಮಸ್’ ಎಂದು ಶುಭಕೋರಿ ಮಾತು ಆರಂಭಿಸಿದ ಅವರು, ‘ಇಲ್ಲಿಗೆ ಕ್ರಿಸ್ ಮಸ್ ಬಂದಿದೆ. ಸತ್ಯ ಮತ್ತು ಬದುಕು ನಮ್ಮದಾಗಲಿ. ನಮ್ಮೆಲ್ಲ ಒಳಿತಿಗಾಗಿ ದೈವಿಕ ಮನುಷ್ಯನಾದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿಯ ಅನ್ವಯ ರಾಜ್ಯ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲ್ಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆ ಮೂಲಕ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಜಿಲ್ಲೆಯಲ್ಲಿ ಖಾಲಿ ಇರುವ ಯುವ ಪರಿವರ್ತಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಕನಿಷ್ಠ 21 ರಿಂದ 35 ವರ್ಷದೊಳಗಿನ ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿರುವ ಯುವಕ ಹಾಗೂ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಹೆಸರು, ವಯಸ್ಸು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿನ ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ. ಹೊಸ ನೋಂದಣಿ, ಮರು ನೋಂದಣಿ ಹಾಗೂ ಬಯೋ ಮೆಟ್ರಿಕ್ ನೀಡಿ, ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು ವಿತರಿಸುತ್ತಿದೆ. ಎಲ್ಲರೂ ಈ ಗುರುತಿನ ಚೀಟಿಯನ್ನು ಹೊಂದಬೇಕು. ಆಧಾರ್ ಗುರುತಿನ ಚೀಟಿ ಹೊಂದದೇ ಇರುವವರು ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಬೇಕು. ಕಡ್ಡಾಯ ಬಯೋ ಮೆಟ್ರಿಕ್, ನವೀಕರಣ ಹಾಗೂ ಸ್ಯಾಚುರೇಷನ್ ಗೊಳಿಸುವುದರೊಂದಿಗೆ ಮೌಲ್ಯಯುತವಾದ ಆಧಾರ್ ಕಾರ್ಡ್ ಹೊಂದಬೇಕು ಎಂದರು. ಜಿಲ್ಲೆಯಲ್ಲಿ ಈವರೆಗೆ 14,16,407 ಜನರು ಆಧಾರ್ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 5 ವರ್ಷದೊಳಗಿನ 35,750, 5 ರಿಂದ 18 ವರ್ಷದವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆಹರೂ ಮೈದಾನದಲ್ಲಿ ಯಕ್ಷರಾತ್ರಿ ಸಂಯೋಜನೆಯಲ್ಲಿ ಜ.03 ರಂದು ಯಕ್ಷರಾತ್ರಿ ದಶಯಾನ – 2025 ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸತತ 9 ವರ್ಷಗಳಿಂದ ಯಕ್ಷಗಾನ ಪ್ರದರ್ಶನದ ಜೊತೆಗೆ ಗೌರವ ಪುರಸ್ಕಾರ, ಅಶಕ್ತರಿಗೆ ನೆರವು ಹೀಗೆ ಹಲವಾರು ಯೋಜನೆಗಳನ್ನು ಯಕ್ಷರಾತ್ರಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ವರ್ಷ ಯಕ್ಷರಾತ್ರಿಯ ಗೌರವ ಪುರಸ್ಕಾರವಾಗಿ ಯಕ್ಷಗಾನ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ಪಡೆದ ಡಾ. ದೀಪಕ್ ಕುಮಾರ್ ಶೆಟ್ಟಿ ಬಾರ್ಕೂರು, ಯಕ್ಷರಾತ್ರಿ ಕಲಾಗೌರವವಾಗಿ ಮಂದಾರ್ತಿ ಮೇಳದ ಹಿರಿಯ ಹಾಸ್ಯಗಾರರಾದ ಕಮಲಶಿಲೆ ಮಹಾಬಲ ದೇವಾಡಿಗ, ಪೆರ್ಡೂರು ಮೇಳದ ಪ್ರಧಾನ ಹಾಸ್ಯಗಾರರಾದ ಕಮಲಶಿಲೆ ರವೀಂದ್ರ ದೇವಾಡಿಗ, ಯುವ ಕಲಾವಿದ ಸೌಕೂರು ಮೇಳದ ಹುಟ್ಟೂರ ಗೌರವಿತರಾದ ಸುಬ್ರಹ್ಮಣ್ಯ ಗಾಣಿಗ ಕೋಣಿ ಹಾಗೂ ಯಕ್ಷರಾತ್ರಿ ಯಶೋಗಾತೆ ಪುರಸ್ಕಾರವನ್ನು ಸಮಾಜ ಸೇವಕರಾದ ಪದ್ಮಮ್ಮ ಹೊದ್ರೊಳ್ಳಿ ಅವರಿಗೆ ನೀಡಲಾಗುತ್ತಿದೆ. ಶ್ರೀ ಪೆರ್ಡೂರು ಮೇಳದವರ ಈ ವರ್ಷದ ಎರಡನೇ ಪ್ರಸಂಗ ಶ್ವೇತಾ ಬೊಳ್ಳಂಬಳ್ಳಿ ವಿರಚಿತ ಪ್ರಸಾದ ಕುಮಾರ್ ಮೊಗೆಬೆಟ್ಟು ಪದ್ಯ ರಚನೆಯ ಕ್ಷೀರಾ ಸಮುದ್ರ ಯಕ್ಷಕಾಶಿ ಹೊಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉದ್ಯಮಿಯಾಗಿದ್ದ ಐರೋಡಿ ಭಾಸ್ಕರ್ ಎಚ್. ಶೆಟ್ಟಿ (83) ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಡಿ.20ರಂದು ನಿಧನರಾದರು. ಮೃತರು ಪತ್ನಿ, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಇವರು ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಪತ್ನಿಯ ತಂದೆ. ಮೃತರ ಅಂತ್ಯಕ್ರಿಯೆ ಡಿ.21 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಕೊಕ್ಕರ್ಣೆ ಹಳ್ಳಿಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆಜ್ರಿ ಗ್ರಾಮದ ನಿವಾಸಿ ಬಾಬಿ (38) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ.16ರಂದು ಇಲಿ ಪಾಷಣ ಸೇವಿಸಿದ್ದರು. ಅವರನ್ನು ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಡಿ. 18ರಂದು ಮೃತಪಟ್ಟಿದ್ದಾರೆ ಎಂದು ಸಹೋದರ ದಿನೇಶ ಅವರು ಪೋಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ಬಳಿ ಕಾರು ಸ್ಕೂಟರ್ ಡಿಕ್ಕಿಯಾಗಿ ಸವಾರನಿಗೆ ಗಾಯವಾಗಿದೆ. ನೆಂಚಾರು ಗ್ರಾಮದ ನಿವಾಸಿ ವಿಜಯ (46) ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಕೋಟೇಶ್ವರ ಫ್ಲೈ ಓವರ್ ಬಳಿ ಹಿಂದಿನಿಂದ ಕುಂಭಾಶಿ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಸಚಿನ್ ಚಲಾಯಿಸುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಾಯಗೊಂಡಿರುವ ವಿಜಯ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇದು ಗೂಗಲ್ ಮಾಹಿತಿ ಸುನಾಮಿಯ ಕಾಲ, ಆದರೆ ಶಿಕ್ಷಕರ ಸ್ಥಾನ ತುಂಬಲು ಗೂಗಲ್ಗೆ ಸಾಧ್ಯವಿಲ್ಲ. ವಿದ್ಯಾರ್ಥಿಗಳು ನಮ್ಮ ತರಗತಿಯಲ್ಲಿ ಏಕೆ ಕುಳಿತುಕೊಳ್ಳಬೇಕು ಎಂದು ಶಿಕ್ಷಕರು ತಮ್ಮಲ್ಲಿ ಪ್ರಶ್ನಿಸಿಕೊಳ್ಳಬೇಕು. ಆಗ ತರಗತಿಯ ಎಲ್ಲ ವಿದ್ಯಾರ್ಥಿಗಳು ಬುದ್ಧಿವಂತರಾಗುತ್ತಾರೆ ಎಂದು ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. ಆರ್. ರಾಮಚಂದ್ರ ಶೆಟ್ಟಿ ಹೇಳಿದರು. ಆಳ್ವಾಸ್ ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದಲ್ಲಿ ಗುರುವಾರ ಅವರು ಮಾತನಾಡಿದರು. ಈ ಪೀಳಿಗೆಯಲ್ಲಿ ಶಿಕ್ಷಕರು ಸಹ ತಮ್ಮನ್ನು ತಾವು ನವೀಕರಿಸಿಕೊಳ್ಳಬೇಕಾದ ಅವಶ್ಯಕತೆಯಿದೆ. ಇಲ್ಲದಿದ್ದರೆ ಅವರು ಪ್ರಸ್ತುತ ತಂತ್ರಜ್ಞಾನದಿಂದ ಮತ್ತು ಪ್ರಸ್ತುತ ಕಲಿಕಾ ಮಾಧ್ಯಮದಿಂದ ಹಿಂದುಳಿಯುತ್ತಾರೆ. ಆದ್ದರಿಂದ ತರಬೇತಿಯ ಅಗತ್ಯವಿದೆ ಎಂದರು. ವಿದ್ಯಾರ್ಥಿಗೆ ಹೊಸ ವಿಷಯಗಳ ಕುರಿತು ಕಲಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಒಬ್ಬ ಶಿಕ್ಷಕ ತನ್ನನ್ನು ತಾನು ನವೀಕರಿಸಿಕೊಳ್ಳಲು ಪ್ರಶ್ನಾರ್ಥಕ…
