ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯನ ಜೀವದಲ್ಲಿರುವ ರಕ್ತ ಜಾತಿ ಧರ್ಮಾದಾರಿತವಲ್ಲ. ರಕ್ತದಾನದ ಮೂಲಕ ಅಪಾಯದಲ್ಲಿರುವ ರೋಗಿಯ ಜೀವರಕ್ಷಣೆಯಾಗುವುದನ್ನು ನಾವು ನಿತ್ಯ ಕಾಣುತ್ತಿದ್ದೇವೆ. ಆದರಿಂದ ರಕ್ತದಾನ ಮಾಡುವುದು ಮತ್ತು ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ ಅಮೀನ್ ಕೋಡಿ ಹೇಳಿದರು. ಬೈಂದೂರು ರೋಟರಿ ಭವನದಲ್ಲಿ ಭಾನುವಾರ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ, ಡಾ. ಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ವಿಶ್ವಕರ್ಮ ಯುವಕ ಸಂಘ ಬಂದೂರು, ಜೆಸಿಐ ಬಂದೂರು ಸಿಟಿ, ರೋಟರಿ ಕ್ಲಬ್ ಬಂದೂರು, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ, ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಮಾಡುವುದರಿಂದ ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ. ರಕ್ತದಾನದಿಂದ ಇನ್ನೋರ್ವರ ಜೀವ ಉಳಿಸುವುದು ಮಾತ್ರವಲ್ಲದೆ ಓರ್ವ ವ್ಯಕ್ತಿ ರಕ್ತದಾನ ಮಾಡಿದ್ದಲ್ಲಿ ಮೂರು ಜನರ ಪ್ರಾಣವನ್ನು ಉಳಿಸಬಹುವುದಾಗಿದೆ ಹೀಗಾಗಿ ರಕ್ತದಾನ ಅತ್ಯಂತ ಶ್ರೇಷ್ಟ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾದಾಗ ನೋಂದ ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯವಿರುವ ಕಾನೂನಿನ ನೆರವು, ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳಲ್ಲಿ ಕೌಟುಂಬಿಕ ದೌರ್ಜನ್ಯ ಸಂತ್ರಸ್ತರಿಗೆ, ವಿಚ್ಚೇಧನ, ಬಹು ಪತ್ನಿತ್ವ ಸೇರಿದಂತೆ ಮತ್ತಿತರ ಪ್ರಕರಣಗಳಲ್ಲಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ ನಡೆಸಿ, ಕಾನೂನು ನೆರವುಗಳನ್ನು ಒದಗಿಸಬೇಕು.ಇದರ ಜೊತೆಯಲ್ಲಿಯೇ ಸ್ವ ಉದ್ಯೋಗ ಮಾಡಲು ಉತ್ತೇಜನ ನೀಡಿ, ಆರ್ಥಿಕವಾಗಿ ಸ್ವಾವಲಂಭಿಗಳಾಗಿಸಲು ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ ತಾಯಿ ಕಾರ್ಡ್ ಪಡೆದು ಹೆರಿಗೆಯಾದ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಸಹಾಯಧನವನ್ನು ನೇರವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 9&10 ನೇ ತರಗತಿ ವಿದ್ಯಾರ್ಥಿಗಳಿಗೆ ಫ್ಯೂಷನ್ -2025 ಪ್ರತಿಭಾನ್ವೇಷಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶೋಭಾ ಎಸ್. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಅತ್ತ್ಯುತ್ತಮವಾದ ಅವಕಾಶ ಅದೂ ಸಹ ತಮ್ಮ ಪಾಲಕರ ಉಪಸ್ಥಿತಿಯಲ್ಲಿ ಎಲ್ಲರಿಗೂ ಮನೋರಂಜನೆ ನೀಡುತ್ತಿರುವುದು ನಿಜಕ್ಕೂ ಅವಿಸ್ಮರಣೀಯ. ಹತ್ತನೇ ತರಗತಿ ವಿದ್ಯಾರ್ಥಿಗಳು ಮತ್ತು ಪಾಲಕರನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಒತ್ತಡವಿಲ್ಲದೆ ಸಾಕಷ್ಟು ಪೂರ್ವತಯಾರಿಯೊಂದಿಗೆ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಬೇಕು. ತರಗತಿಯಲ್ಲಿ ಶಿಕ್ಷಕರಿಂದ ಕೇಳಿ ಕಲಿತ ಪಾಠ-ಪ್ರವಚನಗಳನ್ನು ಹಲವು ಸಲ ಓದಿ ಮತ್ತು ಬರೆದು ಪರೀಕ್ಷೆಗೆ ಸಿದ್ದರಾಗಬೇಕು. ನಿಯಮಿತವಾದ ಆಹಾರವನ್ನು ಸೇವಿಸಬೇಕು ಮತ್ತು ನಿದ್ರೆಬಿಟ್ಟು ಓದಬಾರದು. ಟಿವಿ ಮತ್ತು ಮೊಬೈಲ್ಗಳಿಂದ ದೂರವಿರಬೇಕು ಈ ಮೂಲಕ ಉತ್ತಮ ಗುಣಾತ್ಮಕ ಅಂಕಗಳೊಂದಿಗೆ ಉನ್ನತಶ್ರೇಣಿಯಲ್ಲಿ ಉತ್ತೀರ್ಣರಾಗುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಹಿಂದುತ್ವದ ಭದ್ರ ಕೋಟೆ ಉಡುಪಿ ಜಿಲ್ಲೆಗೆ ಸ್ವಾಗತ ಎನ್ನುವ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರಿಗೆ ಅನುಭವದ ಹಾಗೂ ಮಾಹಿತಿಯ ಕೊರತೆಯಿದೆ. ಅವರು ಅಭಿವೃದ್ಧಿಯ, ಜನಪರ ಕಾಳಜಿಯ ಮೂಲಕ ಶಾಸಕರಾದವರಲ್ಲಾ ಬದಲಾಗಿ ಧರ್ಮ ಧರ್ಮದ ನಡುವೆ, ಜಾತಿ ಜಾತಿಯ ನಡುವೆ ವಿಷ ಬೀಜ ಬಿತ್ತಿ ಶಾಸಕರಾದವರು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಅವರು ಹೇಳಿದರು. ಇವತ್ತು ಜಿಲ್ಲೆಯ ಐದು ಶಾಸಕರು, ಸಂಸದರು ಬಿಜೆಪಿಯವರು ಇರಬಹುದು ಆದರೆ ಕರಾವಳಿಯ ಜನತೆ ಬಿಜೆಪಿಗಿಂತ ಹೆಚ್ಚು ಅಧಿಕಾರ ಕೊಟ್ಟದ್ದು ಕಾಂಗ್ರೆಸ್ ನವರಿಗೆ ಎನ್ನುವ ಮಾಹಿತಿ ದೂರದ ಚಿಕ್ಕಮಗಳೂರು ಜಿಲ್ಲೆಯಿಂದ ಬಂದ ಸುನೀಲ್ ಕುಮಾರ್ ಅವರಿಗೆ ತಿಳಿದಿಲ್ಲಾ. ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಮನೋರಮಾ ಮದ್ವರಾಜ್, ಕೆ ಪ್ರತಾಪ್ ಚಂದ್ರ ಶೆಟ್ಟಿ, ವಸಂತ ಸಾಲ್ಯಾನ್, ಕೆ ಜಯಪ್ರಕಾಶ್ ಹೆಗ್ಡೆ, ಕೆ ಗೋಪಾಲ ಪೂಜಾರಿ, ಇವರೆಲ್ಲಾ ನಾಲ್ಕು, ಐದು ಅದಕ್ಕಿಂತ ಹೆಚ್ಚು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಲತೀತವಾದ ವಿಷಯಗಳು ಕಥೆಗಳು, ನಾಟಕದ ಮೂಲಕ ನೋಡುವಾಗ ದಕ್ಕುವ ಅನುಭವ ನಮ್ಮೊಳಗೆ ಸಂಚಲನವನ್ನು ಸೃಷ್ಟಿಸುತ್ತದೆ. ಆ ಮೂಲಕ ಪ್ರತಿಯೊಬ್ಬ ವ್ಯಕ್ತಿಯು ಧನಾತ್ಮಕ ಬದಲಾವಣೆಯಾಗಲು ಸಾಧ್ಯವಿದೆ ಎಂದು ತೆರಿಗೆ ಸಲಹೆಗಾರ ಜತೀಂದ್ರ ಮರವಂತೆ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಲಾವಣ್ಯ ರಿ. ಬೈಂದೂರು ಇದರ 48ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಾಜಿ ಶಾಸಕ ದಿ. ಕೆ. ಲಕ್ಷ್ಮೀನಾರಾಯಣ ಸ್ಮರಣಾರ್ಥ ರಂಗಪಂಚಮಿ -2025ರ ಐದು ದಿನಗಳ ರಂಗೋತ್ಸವ ಉದ್ಘಾಟಿಸಿ ಮಾತನಾಡಿದರು. ನಾಟಕಗಳು ನಮ್ಮೊಳಗಿನ ವಿಷಯಗಳನ್ನು ಅರ್ಥಪೂರ್ಣವಾಗಿ ಸಮಕಾಲಿನ ಅಧ್ಯಯನದ ಮೂಲಕ ಜನರಿಗೆ ತಲುಪಿಸುವ ವೇದಿಕೆಯಾಗಿದೆ. ಸಮಾಜದ ನಡುವಿನ ವಿಚಾರಗಳನ್ನು ಕಾಲದ ಹಾಗೂ ವ್ಯವಸ್ಥೆಯ ಬದಲಾವಣೆಗೆ ಪೂರಕವಾಗಿ ರೂಪಿಸಿಕೊಳ್ಳುವ ಮತ್ತು ಎಚ್ಚರಿಸುವ ಮಾಧ್ಯಮವಾಗಿದೆ. ಬೈಂದೂರಿನಂತಹ ಗ್ರಾಮೀಣ ಭಾಗದಲ್ಲಿ ಕಳೆದ ೪೮ ವ?ಗಳ ಸುಧೀರ್ಘ ಅವಧಿಯಲ್ಲಿ ಲಾವಣ್ಯವು ರಂಗ ಕ್ರಾಂತಿಯನ್ನು ಉಂಟು ಮಾಡುವ ಮೂಲಕ ಮುಂದಿನ ತಲೆಮಾರಿನ ಯುವಕಲಾವಿದರನ್ನು ಸೃಷ್ಠಿಸಿದ ಬಂದೂರಿನ ಹೆಮ್ಮೆಯ ಸಂಸ್ಥೆಯಾಗಿದೆ ಎಂದರು. ಲಾವಣ್ಯ ಅಧ್ಯಕ್ಷ ನರಸಿಂಹ ಬಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಕುಂದಾಪುರ ಪ್ರವರ್ತಿತ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿಗೆ ಜಿಲ್ಲೆಯ ವಿವಿಧ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ 26 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಬ್ರಹ್ಮಾವರದ ಶ್ರೀ ಜೈಸನ್ ಲುವಿಸ್ ಅವರು ಉಪಪ್ರಾಂಶುಪಾಲರಾಗಿ ನೇಮಕಗೊಂಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಿ, ಸಿ ಇ ಟಿ /ಜೆ ಇ ಇ ಮೈನ್ಸ್ / ನೀಟ್ /ಐ ಐ ಟಿ ಯಲ್ಲಿ ಅತ್ತ್ಯುತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಉಪಪ್ರಾಂಶುಪಾಲರನ್ನು ನೇಮಿಸಲಾಗಿದೆ. ಉಪಾಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಜೈಸನ್ ಲುವಿಸ್ ಸಂಸ್ಥೆಯ ಉತ್ತರೋತ್ತರ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಗುಣಮಟ್ಟದ ಫಲಿತಾಂಶಕ್ಕೆ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವುದಾಗಿ ಹೇಳಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅರಾಟೆ ಹೊಸ ಸೇತುವೆಯಲ್ಲಿ ಕಳೆದ ಜ.21 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಲೂರಿನ ನಿವಾಸಿ ಮಹಾಬಲ ಜೋಯಿಸ್ ಅವರ ಪುತ್ರ ರತ್ನಾಕರ ಜೋಯಿಸ್ (47) ಅವರು ಇತ್ತೀಚಿಗೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಜ.21ರ ಬೆಳಗ್ಗೆ 4.55 ರ ಸುಮಾರಿಗೆ ಅರಾಟೆ ಹೊಸ ಸೇತುವೆಯಲ್ಲಿ ರತ್ನಾಕರ ಅವರು ಚಲಾಯಿಸುತ್ತಿದ್ದ ಕಾರಿಗೆ ರಫೀಕ್ ಎಂಬುವರು ಚಲಾಯಿಸುತ್ತಿದ್ದ ಲಾರಿ ಢಿಕ್ಕಿಯಾಗಿದೆ. ಪರಿಣಾಮ ರತ್ನಾಕರ ಅವರ ತಲೆಗೆ, ಮುಖಕ್ಕೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕುಂದಾಪುರದ ಆಸ್ಪತ್ರೆಗೆ, ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ತಿಂಗಳಿಗೂ ಹೆಚ್ಚು ಕಾಲ ಜೀವನ್ಮರಣ ಹೋರಾಟ ನಡೆಸಿದ ರತ್ನಾಕರ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಕೇಂದ್ರ ಬಜೆಟ್ 2025ರ ಕುರಿತ ಚರ್ಚಾಗೋಷ್ಠಿ ವಿದ್ಯಾಗಿರಿಯ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ (ಎಸ್ಕೆಡಿಆರ್ಡಿಪಿ) ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್, ಕೇಂದ್ರದ ಈ ಭಾರಿಯ ಬಜೆಟ್ ಹಲವು ಕ್ಷೇತ್ರಗಳ ಬೆಳವಣಿಗೆಗೆ ಸಹಕಾರಿಯಾಗಿದೆ. ಆದರೆ ಭಾರತ, 2048ರ ವೇಳೆಗೆ ವಿಕಸಿತ ಭಾರತವಾಗಿ ಬದಲಾಗಿ ಜಾಗತಿಕ ನಾಯಕನಾಗಲು ಜಿಡಿಪಿ ಬೆಳವಣಿಗೆ ದರ 6.7% ದಿಂದ 7% ರಷ್ಟು ಸಾಲುವುದಿಲ್ಲ. ಈ ದೃಷ್ಟಿಯನ್ನು ಸಾಧಿಸಬೇಕಾದರೆ, 12% ದಿಂದ 14% ವರೆಗಿನ ಜಿಡಿಪಿ ಬೆಳವಣಿಗೆ ಅಗತ್ಯ, ಇದು ಪ್ರಸ್ತುತ ಬಜೆಟ್ ನಿಂದ ಸಾಧ್ಯವಿಲ್ಲ ಎಂದರು. ಅಧಿಕಾರಶಾಹಿತ್ವವು ಪ್ರಜಾಪ್ರಭುತ್ವ ವ್ಯವಸ್ಥೆಯ ಬೆನ್ನೆಲುಬಾಗಿದ್ದು ವಿವಿಧ ಕ್ಷೇತ್ರಗಳಾದ್ಯಂತ ಏಕರೂಪದ ಬೆಳವಣಿಗೆಗೆ ಇದು ಪ್ರಮುಖ ಕೊಂಡಿಯಾಗಿದೆ ಎಂದರು. ಶಿಕ್ಷಣ ಮತ್ತು ಆರೋಗ್ಯದ ಮೇಲೆ ಸರ್ಕಾರದ ಗಮನಾರ್ಹ ವ್ಯಯದ ಹೊರತಾಗಿಯೂ, ಅಧಿಕಾರಶಾಹಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಂಭವನೀಯ ಪ್ರಕೃತಿ ವಿಕೋಪದ ಬಗ್ಗೆ ಹವಾಮಾನ ಇಲಾಖೆಯಿಂದ ನೀಡುವ ಮಾಹಿತಿಗಳನ್ನು ಸಾರ್ವಜನಿಕರಿಗೆ ತಲುಪಿಸಿ, ಅವುಗಳಿಂದ ರಕ್ಷಣೆ ಪಡೆಯುವ ಹಾಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಬಿಸಿ ಶಾಖದ ಮಾರುತಗಳು ಬೀಸುತ್ತವೆ ಎಂಬ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ನೀಡಬೇಕು. ಅದರಿಂದ ರಕ್ಷಣೆ ಪಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸಹ ತಿಳಿಸಿ, ಅವುಗಳಿಂದ ಯಾರೊಬ್ಬರಿಗೂ ತೊಂದರೆಯಾಗದAತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಇವುಗಳನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಸೂಚನೆ ನೀಡಿದರು. ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವ ಸಾಧ್ಯತೆಗಳು ಇವೆ. ಈ ದಿನಗಳಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಜನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಉದ್ಯೋಗ ಪಡೆಯುವಲ್ಲಿ ಸ್ವವಿವರ (ರೆಸ್ಯೂಮ್) ತಯಾರಿ ಮಾಡುವುದು ಅತಿ ಮುಖ್ಯ. ತಮ್ಮ ಸ್ವವಿವರ ನೀಡುವಲ್ಲಿ ತಮ್ಮ ವಿದ್ಯಾರ್ಹತೆಯ ಜೊತೆಗೆ ತಮ್ಮಲ್ಲಿರುವ ಕೌಶಲಗಳ ಬಗ್ಗೆ ಹೇಗೆ ಅದರಲ್ಲಿ ಪಡಿಮೂಡಿಸಬೇಕು ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಪ್ಲೇಸ್ಮೆಂಟ್ ವಿಭಾಗದ ಸಂಯೋಜಕ ಮಹೇಶ್ ಕುಮಾರ್ ಹೇಳಿದರು. ಅವರು ಕಾಲೇಜಿನ ಇಂಗ್ಲಿಷ್ ವಿಭಾಗವು ಆಯೋಜಿಸಿದ “ರೆಸ್ಯೂಮ್ ಬಿಲ್ಡಿಂಗ್ ಆಂಡ್ ಪರ್ಸ್ನಲ್ ಬ್ರ್ಯಾಂಡಿಂಗ್” ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮಾತಾನಾಡಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕಿ ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ದೀಪಿಕಾ ಜಿ., ಕಾರ್ಯಕ್ರಮದ ಸಂಯೋಜಕರಾದ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸ್ಟಾಲಿನ್ ಡಿಸೋಜ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸನ್ಮಿತಾ ಸ್ವಾಗತಿಸಿ, ಸ್ವಸ್ತಿಕ್ ವಂದಿಸಿ, ಶ್ರೀರಕ್ಷಾ ನಿರೂಪಿಸಿದರು.
