Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಸಮಿತಿ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿರುವ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಮಹಾಭಿಯಾನ ಗಂಗೊಳ್ಳಿಯ ಸಮುದ್ರ ಕಿನಾರೆಯಲ್ಲಿ ಭಾನುವಾರ ನಡೆಯಿತು. ಸಮುದ್ರಕ್ಕೆ ಕ್ಷೀರಾರ್ಘ್ಯ ಸಲ್ಲಿಸಿ ಪ್ರಾರ್ಥಿಸಿದ ಬಳಿಕ ಏಕಕಾಲದಲ್ಲಿ 108 ಜನರ ಗುಂಪುಗಳಿಂದ ಗಂಗೊಳ್ಳಿಯ ಮಲ್ಯರಬೆಟ್ಟು, ಖಾರ್ವಿಕೇರಿ ಹಾಗೂ ಲೈಟ್‌ಹೌಸ್ ಸಮೀಪ ಸಮುದ್ರ ಕಿನಾರೆಯ ಮೂರು ಸ್ಥಳಗಳಲ್ಲಿ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರವನ್ನು ಪಠಿಸಲಾಯಿತು. ಸಂಜೆ 4 ಗಂಟೆಯಿಂದ ನಿರಂತರವಾಗಿ 7 ಬಾರಿ ಶ್ರೀ ವಿಷ್ಣು ಸಹಸ್ರನಾಮ ಪಠಿಸಲಾಯಿತು. ಈ ಸಂದರ್ಭ ಮಾತನಾಡಿದ ಉಮಾನಾಥ ದೇವಾಡಿಗ, ವಿಷ್ಣುತತ್ತ್ವ ವಿಶ್ವವ್ಯಾಪಿ. ವಿಶ್ವದ ಆಗುಹೋಗುಗಳ ಮೇಲೆ ಇದರ ಪ್ರಭಾವವಿದೆ. ವಿಶ್ವದುದ್ದಗಲಕ್ಕೂ ಸಮಷ್ಟಿಯ ಒಳಿತಿಗಾಗಿ ವಿಷ್ಣು ಸಹಸ್ರನಾಮ ಪಠಿಸುವ ಪರಿಪಾಠವಿದೆ. ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಾಧ್ಯವೆಂಬುದನ್ನು ಪ್ರಯೋಗಗಳ ಮೂಲಕ ದೃಢಪಟ್ಟಿದೆ. ಸಮುದ್ರೋತ್ಪಾತ, ಪ್ರಕೃತಿ ವಿಕೋಪ, ರಾಷ್ಟ್ರ ಕ್ಷೋಭೆ ಮುಂತಾದ ವಿಕೃತಿಯನ್ನು ಆಧ್ಯಾತ್ಮದ ಹಿನ್ನಲೆಯಲ್ಲಿ ತಡೆಯುವುದು. ವ್ಯಕ್ತಿಗತ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಾಗಿ ಬಂದ ಹಾದಿ ಅದ್ಭುತ. ಗ್ರಾಮೀಣ ಪ್ರದೇಶದಲ್ಲಿ ಶಾಲೆಯನ್ನು ಪ್ರಾರಂಭಿಸಿದ ಈ ಭಾಗದ ಹಿರಿಯರ ಶ್ರಮ ಸಾರ್ಥಕವಾದಂತಿದೆ. ಅಧ್ಯಾಪಕ ವೃತ್ತಿ ನಡೆಸಲು ನಾಚಿಕೆ ಪಡುತ್ತಿದ್ದ ಅಂದಿನ ದಿನಗಳಲ್ಲಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಾಲ್ವರು ಶಿಕ್ಷಕರು ಪ್ರಾತ: ಸ್ಮರಣೀಯರು. ದಾನಿಗಳ, ಹಳೆ ವಿದ್ಯಾರ್ಥಿಗಳ ಹಾಗೂ ವಿದ್ಯಾಭಿಮಾನಿಗಳ ಸಹಕಾರದಿಂದ ಶಾಲೆ ಅದ್ಭುತವಾಗಿ ಬೆಳೆದು ನಿಂತಿದೆ. ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಸಹಸ್ರಾರು ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿರುವ ಈ ಶಾಲೆಯನ್ನು ಬೆಳೆಸಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೆಟ್ಟಿ ಹೇಳಿದರು. ಸೇನಾಪುರ ಗ್ರಾಮದ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಅಮೃತ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉದ್ಯಮಿ ಮಂಜುನಾಥ ಪೂಜಾರಿ ಸೇನಾಪುರ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವಿಶಾಲ ಬಯಲುರಂಗ ಮಂದಿರದಲ್ಲಿ ಕಂಗೊಳಿಸಿದ ದೇಶದ ಐಕ್ಯತೆಯ ಪ್ರತೀಕವಾದ  ʼಆಳ್ವಾಸ್‌ʼ ಸೇರಿದ್ದ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿ, ಸಿಬ್ಬಂದಿ, ಪೋಷಕರು, ಅತಿಥಿಗಳ ಕೈಯಲ್ಲಿ ಹಾರಾಡಿದ ರಾಷ್ಟ್ರ ಧ್ವಜ, ಆವರಣದ ಸುತ್ತಲೂ ತ್ರಿವರ್ಣ ಸ್ಥಂಭಗಳು, ದೇಶಪ್ರೇಮ ಮೂಡಿಸುವ ತ್ರಿವರ್ಣ ಚಿತ್ತಾರಗಳು, ತ್ರಿವರ್ಣದ ಪುರುಲಿಯೋ ಸಿಂಹಗಳು, ಜನ ಗಣ ಮನ, ವಂದೇ ಮಾತರಂ, ಕೋಟಿ ಕಂಠೋ ಸೇ… ರಾಷ್ಟ್ರ ಹಾಗೂ ದೇಶಭಕ್ತಿ ಗೀತೆಗಳು. ಸಂವಿಧಾನ ಅನುಷ್ಠಾನದ ಭಕ್ತಿ, ಗೌರವ, ಪ್ರೀತಿಯ ದೇಶಭಕ್ತಿಯ ಕ್ಷಣಗಳು ಇಲ್ಲಿನ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮೂಡಿಬಂತು. ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕರ್ನಾಟಕ ವಿಧಾನ ಪರಿಷತ್ತಿನ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ’ನಾವೆಲ್ಲರೂ ಸಂವಿಧಾನ ಬದ್ಧವಾಗಿ ಕರ್ತವ್ಯ ಹಾಗೂ ಹಕ್ಕುಗಳನ್ನು ಪಾಲಿಸುವ ಸಂಕಲ್ಪವನ್ನು ಮಾಡುವ ದಿನ ಇದಾಗಿದೆ’ಎಂದರು. ಆಳ್ವಾಸ್ ಅಂಗಣದಲ್ಲಿ ಗಣರಾಜ್ಯೋತ್ಸವವು ಐತಿಹಾಸಿಕ ವಿರಾಟ ರಾಷ್ಟ್ರೀಯ ಹಬ್ಬವಾಗಿದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.  ಶೆಪ್ಟಾಕ್ ಫುಡ್ ಮತ್ತು ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಗೋವಿಂದ ಬಾಬು ಪೂಜಾರಿ ಹಾಗೂ ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆರ್ಥೋಪೆಡಿಕ್ ಶಸ್ತ್ರ ಚಿಕಿತ್ಸಕರಾದ ಡಾ. ದಿನೇಶ್ ಕುಮಾರ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ಮಾಡಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಡಾ. ಗೋವಿಂದ ಬಾಬು ಪೂಜಾರಿ ಸಭೆಯನ್ನುದ್ದೇಶಿಸಿ ಮಾತನಾಡಿ, ಯಾವುದೇ ಕಾರ್ಯ ಸುಗಮವಾಗಿ ಸಾಗಬೇಕಾದರೆ ವ್ಯವಸ್ಥಿತ ಯೋಜನೆ ಅಗತ್ಯ. ಹಾಗೆಯೇ ದೇಶದ ಕಾರ್ಯ ಚಟುವಟಿಕೆಗಳು ವ್ಯವಸ್ಥಿತವಾಗಿ ಸಾಗುವಲ್ಲಿ ಸಂವಿಧಾನ ಅತ್ಯಗತ್ಯ. ವ್ಯವಸ್ಥಿತ ಸಂವಿಧಾನವನ್ನು ರೂಪಿಸುವಲ್ಲಿ ಈ ದೇಶದ ಹಲವಾರು ಮಹನೀಯರ ಕೊಡುಗೆಯಿದೆ. ಅವರೆಲ್ಲ ಕೊಡುಗೆಗಳನ್ನು ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜೀವನದಲ್ಲಿ ಯಶಸ್ಸನ್ನು ಗಳಿಸುವುದರೊಂದಿಗೆ ದೇಶದ ಪ್ರಗತಿಯತ್ತಲೂ ನಾವೆಲ್ಲ ಚಿತ್ತ ಹರಿಸಬೇಕು. ದೇಶದಲ್ಲಿನ ಜನರ ಕಷ್ಟಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಉತ್ತಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾಡಳಿತ, ಜಿ.ಪಂ. ಹಾಗೂ ತೋಟಗಾರಿಕಾ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ದೊಡ್ಡನಗುಡ್ಡೆಯ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ನಡೆಯುವ ಫಲ ಪುಷ್ಪ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ.ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾತನಾಡಿ, ರಾಜ್ಯ ಸರಕಾರದ ಪಂಚ ಗ್ಯಾರಂಟಿ ಪರಿಕಲ್ಪನೆಯನ್ನು ಉಡುಪಿಯ ಫಲ ಪುಷ್ಪ ಪ್ರದರ್ಶನದಲ್ಲಿ ಹೂವುಗಳ ಕಲಾಕೃತಿಯನ್ನು ಕಲಾವಿದರು ಸಾಕಾರಗೊಳಿಸಿದ್ದು ಅನಾವರಣ ಮಾಡಲಾಗಿದೆ. ಅವು ಆಕರ್ಷಣೆ ಕೇಂದ್ರಬಿಂದು ಆಗಿದೆ ಸಾರ್ವಜನಿಕರಿಗೆ ಮುಕ್ತ ವೀಕ್ಷಣೆಗೆ ಅವಕಾಶ ಇದೆ ಎಂದರು. ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಹೂವುಗಳ ಕಲಾಕೃತಿಯಿಂದ ಅರಳಿ ಜನರ ಗಮನ ಸೆಳೆಯುತ್ತಿವೆ, ಸೆಲ್ಫಿ ಆಕರ್ಷಣೆ ಕೇಂದ್ರ ಬಿಂದುಗಳಾಗಿವೆ.ಹಳದಿ, ಕೆಂಪು ಗುಲಾಬಿಯಲ್ಲಿ ಮೂಡಿದ ಕರ್ನಾಟಕ ನಕಾಶೆ, ಹೂವಿನಿಂದ ಮಾಡಿದ ಮಾವಿನ ಹಣ್ಣಿನ ಕಲಾಕೃತಿಯ ಸೆಲ್ಫಿ ವಲಯ, ಸ್ಥಳೀಯವಾಗಿ ಬೆಳೆದ ತರಕಾರಿ, ಹಣ್ಣುಹಂಪಲು, 1.27ಲಕ್ಷದಷ್ಟು ಬಣ್ಣಬಣ್ಣದ ಹೂವಿನ ಗಿಡಗಳು ಗಮನ ಸೆಳೆದವು. ಅನ್ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದೇಶದ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನದ ಹಕ್ಕನ್ನು ಹೊಂದಿ ಚುನಾವಣಾ ಪ್ರಕ್ರೀಯೆಯಲ್ಲಿ ತಪ್ಪದೇ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಎಸ್. ಗಂಗಣ್ಣನವರ್ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಪರಿಕಲ್ಪನೆಯು ನಮ್ಮ ಪ್ರಾಚೀನ ಸಂಸ್ಕೃತಿಯಲ್ಲಿ ರಾಜರುಗಳು ತಮ್ಮ ಆಳ್ವಿಕೆಯಲ್ಲಿ ನಡೆಸುತ್ತಿದ್ದ ಸಭೆ, ಓಲಗ, ಒಡ್ಡಲೊಗಳಲ್ಲಿ ಸಮಾಜ ಕಟ್ಟುವಂತಹ ಜನ ಸಮಾನ್ಯರ ಅನಿಸಿಕೆ ಅಭಿಪ್ರಾಯಗಳನ್ನು ಹೇಳಲು ಅವಕಾಶವಿತ್ತು ಇದು ಪ್ರಜಾಪ್ರಭುತ್ವದ ಒಂದು ಅಂಗ, ಪ್ರಸ್ತತ ಪ್ರಜಾಪ್ರಭುತ್ವದಲ್ಲಿ ಸಹಾ ವಿಧಾನಪರಿಷತ್ತು ವಿಧಾನಸಭೆ ಸಂಸತ್ತು ಮೇಲ್ಮನೆ ಕೆಳಮನೆ ಅಂತಹ ಸಂಸ್ಥೆಗಳು ನಿಯಮಾನುಸಾರ ತಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು. ” ಎಂದು ವಿದ್ಯಾರ್ಥಿಗಳನ್ನು ಕುರಿತು ಶುಭನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು , ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ಕಾಣುವುದರೊಂದಿಗೆ ಅವರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಗೆ ಕಳೆದ ಸಾಲಿನಲ್ಲಿ 4.5 ಕೋಟಿಗೆ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಪ್ರವಾಸಿಗರ ರಕ್ಷಣೆ ಹಾಗೂ ಅನುಕೂಲಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಶೇಕಡ 70ಕ್ಕಿಂತ ಹೆಚ್ಚು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರವನ್ನು ಪ್ರವಾಸೊದ್ಯಮದ ಭಾಗವಾಗಿರಬೇಕು ಎಂಬ ಮುಖ್ಯ ಉದ್ದೇಶದಿಂದ ಅದನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಯ ಉಳಿವಿಗೆ ಡಾ. ಗೋವಿಂದ ಬಾಬು ಪೂಜಾರಿ ಅವರು ನೀಡಿರುವ ಕೊಡುಗೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರಕಾರಿ ಶಾಲೆಗಳ ಪ್ರಾಮುಖ್ಯತೆ ಹೆಚ್ಚಿದೆ ಇದಕ್ಕಾಗಿ ನನ್ನ ವತಿಯಿಂದ ಸಹಕಾರ ನೀಡುತ್ತಿದ್ದು ನಮ್ಮೂರ ಶಾಲೆಯ ಉಳುವಿಗೆ ಸಹಕಾರ ನೀಡುವುದು ನಮ್ಮೆಲ್ಲರ ಜವಬ್ದಾರಿ ಎಂದು ಹಿರಿಯ ಉದ್ಯಮಿ ನಾಗರಿಕರಾದ ನಾಡೋಜ ಷಡಕ್ಷರಿ ಅವರು ಹೇಳಿದರು.  ಅವರು ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಗೋವಿಂದ ಬಾಬು ಪೂಜಾರಿ ಅವರು ಆಡಳಿತ ಕಚೇರಿಗೆ ಕೊಡುಗೆಯಾಗಿ ಸುಮಾರು ರೂ. 3ಲಕ್ಷ ವೆಚ್ಚದ ವಿವಿಧ ಸವಲತ್ತುಗಳ ಉದ್ಘಾಟಿಸಿ ಮಾತನಾಡಿದರು. ಬಳಿಕ ಮಾತನಾಡಿ ಡಾ. ಗೋವಿಂದ ಬಾಬು ಪೂಜಾರಿ ಮಾತನಾಡಿ, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದತ್ತು ಸ್ವೀಕಾರ ಮಾಡಿದ್ದು ಯಾವುದೇ ಖಾಸಗಿ ಶಾಲೆಯ ವ್ಯವಸ್ಥೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಒಂದೊಂದಾಗಿ ಪೂರ್ಣಗೊಳಿಸಲಾಗುತ್ತಿದೆ ಮಾದರಿ ಶಾಲೆಯನ್ನಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಕರು, ಎಸ್.ಡಿ.ಎಂ.ಸಿ ಹಾಗೂ ಹಳೆವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ಇಲ್ಲಿ ಕಲಿತ ವಿದ್ಯಾರ್ಥಿಗಳು ಯಾವುದೇ ಸ್ಥಾನದಲ್ಲಿದ್ದರೂ ಅಭಿಮಾನದಿಂದ ಶಾಲೆಯತ್ತ ಮತ್ತೆ ಹಿಂದಿರುಗಿ ನೋಡಿದರೆ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಬೇಕಿಲ್ಲ. ಅಂತಹ ವಾತಾವರಣವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹೇಳಿದರು. ಅವರು ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶನಿವಾರ ಸ್ವಯಂಸ್ಪೂರ್ತಿ ಫೌಂಡೇಶನ್ ರಿ. ಬೆಂಗಳೂರು ವತಿಯಿಂದ ಕೊಡುಗೆಯಾಗಿ ನೀಡಿದ ಟೇಬಲ್ ಕುರ್ಚಿ ಸಹಿತ ನಾಲ್ಕು ಕಂಪ್ಯೂಟರ್ ಸೆಟ್, ಬುಕ್ ರ್ಯಾಕ್ ಹಾಗೂ ಆಟದ ಸಾಮಾಗ್ರಿಗಳನ್ನು ಒಳಗೊಂಡ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಲೋಪಾರ್ಪಣೆಗೊಳಿಸಿ ಮಾತನಾಡಿ, ಶಾಲೆ ಹಾಗೂ ದೇವಸ್ಥಾನದ ಆವರಣದಲ್ಲಿ ಅಭಿಮಾನ ಹಾಗೂ ಭಕ್ತಿ ಮಾತ್ರವೇ ಪ್ರಧಾನವಾಗಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಆಲೋಚನಾ ಕ್ರಮವನ್ನು ರೂಪಿಸುವ ಶಕ್ತಿ ಸರಕಾರಿ ಶಾಲೆಗಳಲ್ಲಿದೆ ಎಂದರು. ಸ್ವಯಂಸ್ಪೂರ್ತಿ ಫೌಂಡೇಶನ್ ಸಂಸ್ಥಾಪಕ ಸಿ.ಎಸ್. ನಾಗರಾಜ ಶೆಟ್ಟಿ ಜಡ್ಕಲ್ ಅವರು ಮಾತನಾಡಿ, ಸಂಸ್ಥೆಯ…

Read More