Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್  https://karnemakaone.kar.nic.in/abcd/ ನಲ್ಲಿ   ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ (ಹೋಮ್ ನರ್ಸಿಂಗ್)  18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್. ಎಸ್. ಎಲ್. ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಪ್ತಸ್ವರ ವಿವಿಧೊದ್ದೇಶ ಸಹಕಾರ ಸಂಘ ರಿ. ತಲ್ಲೂರು, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಉಪ್ಪಿನಕುದ್ರು, ರಕ್ತನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಕಾರದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ತಲ್ಲೂರು ಇಲ್ಲಿ ನಡೆದ ರಕ್ತದಾನ ಶಿಬಿರವನ್ನು ಶ್ರೀ ಸಿದ್ದಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಧರ್ಮದರ್ಶಿಗಳಾದ ಬಾಲಚಂದ್ರ ಭಟ್ ಉದ್ಘಾಟಿಸಿದರು. ಕುಂದಾಪುರ ಲಯನ್ಸ್ ಕ್ಲಬ್ ಸಿಟಿ ಸೆಂಟರ್ ಅಧ್ಯಕ್ಷರಾದ ಶಂಕರ್ ಸೇರುಗಾರ್ ಅಧ್ಯಕ್ಷತೆ ವಹಿಸಿದರು. ಡಾ.ಆದರ್ಶ್ ಹೆಬ್ಬಾರ್, ಡಾ. ಎಚ್.ಅಶೋಕ್, ಮನೋಜ್ ಕುಮಾರ್, ಗಿರೀಶ್ ಎಸ್. ನಾಯ್ಕ್ , ಡಾ‌. ದೀಕ್ಷಾ, ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ರಕ್ತದಾನ ಶಿಬಿರದ ಮುಖ್ಯ ರೂವಾರಿ ಪ್ರಶಾಂತ್ ತಲ್ಲೂರು ಹಾಗೂ ಇತರರು ಉಪಸ್ಥಿತರಿದ್ದರು. ಈ ಯಶಸ್ವಿ ರಕ್ತದಾನ ಶಿಬಿರದಲ್ಲಿ 103 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ 14ರ ವಯೋಮಾನದ ಹುಡುಗಿಯರ ರಿದಮಿಕ್ ಯೋಗ ವಿಭಾಗದಲ್ಲಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ  ವಿದ್ಯಾರ್ಥಿನಿ ಸಾನಿಧ್ಯ ಎಸ್. ಮೊಗವೀರ ಪ್ರಥಮ ಸ್ಥಾನಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಿಕೇತರವರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣಿ ಖಾರ್ವಿ ಸಮಾಜದ ವತಿಯಿಂದ ಕೋಡಿ ಸಮುದ್ರ ಕಿನಾರೆಯಲ್ಲಿ ಸೋಮವಾರದಂದು ಸಮುದ್ರ ಪೂಜೆ ಜರುಗಿತು. ಉತ್ತಮ ಮಳೆ, ಬೆಳೆ, ಮತ್ಸ್ಯ ಸಮೃದ್ಧಿ ಹಾಗೂ ಲೋಕ ಕಲ್ಯಾಣಾರ್ಥ ಪ್ರಾರ್ಥನೆ ಸಲ್ಲಿಸಲಾಯಿತು. ಖಾರ್ವಿಕೇರಿ ಶ್ರೀಮಹಾಕಾಳಿ ಅಮ್ಮನವರ ದೇವಸ್ಥಾನದ ಅಧ್ಯಕ್ಷರಾದ ಅಜಂತ ಖಾರ್ವಿ ಪೂಜೆಯ ನೇತೃತ್ವ ವಹಿಸಿದ್ದರು. ದೇವಳದ ಪ್ರಧಾನ ಅರ್ಚಕರಾದ ಸುಮಂತ್ ಭಟ್ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಳದ ಉಪಾಧ್ಯಕ್ಷರಾದ ಪ್ರಕಾಶ್ ಆರ್. ಖಾರ್ವಿ, ಮುಕ್ತೇಸರರದ ಆನಂದ ನಾಯ್ಕ, ಸಲಹೆಗಾರರಾದ ಜಯಾನಂದ ಖಾರ್ವಿ, ಕಾರ್ಯದರ್ಶಿ ನಾಮದೇವ ಖಾರ್ವಿ, ಖಜಾಂಚಿ ರಾಜು ನಾಯ್ಕ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಖಾರ್ವಿ, ಶ್ರೀ ಮಹಾಕಾಳಿ ದೇವಸ್ಥಾನದ ಆಡಳಿತ ಮಂಡಳಿ ನಿರ್ದೇಶಕರು, ಮಹಾಕಾಳಿ ಮಹಿಳಾ ಮಂಡಳಿ ಸದಸ್ಯರು, ನವರಾತ್ರಿ ಉತ್ಸವದ ಸದಸ್ಯರು ಹಾಗೂ ವಿದ್ಯಾರಂಗ ಮಿತ್ರ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಉಸ್ತುವಾರಿಯನ್ನು ತಲ್ಲೂರು ಸುನಿಲ್ ಖಾರ್ವಿ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನುವಿಕಾಸ ಸಂಸ್ಥೆ ಶಿರಸಿ ಮತ್ತು ನಬಾರ್ಡ್ ಬೆಂಗಳೂರು ಇವರ ಸಹಯೋಗದಲ್ಲಿ ಸೋಮವಾರದಂದು ಮರವಂತೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಮತ್ಸ್ಯಸಿರಿ ಮಹಿಳಾ ಮೀನು ಉತ್ಪಾದಕರ ಮತ್ತು ಜನ ಸಂಘದ ಆಡಳಿತ ಮಂಡಳಿ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಜರುಗಿತು. ಸಭೆಯಲ್ಲಿ ಮನುವಿಕಾಸ ಸಂಸ್ಥೆ ನಿರ್ದೇಶಕರಾದ ಗಣಪತಿ ಭಟ್, ಮರವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಗೀತಾ, ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಖಾರ್ವಿ, ಮತ್ಸ್ಯ ಸಂಜೀವಿನಿ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಖಾರ್ವ, ಜೀವನ ಶಿಕ್ಷಣ ತರಬೇತುದಾರರಾದ ರಾಘವೇಂದ್ರ ಆಚಾರ್ಯ ಹಾಗೂ ಮನುವಿಕಾಸ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ವತಿಯಿಂದ ಥಂಡರ್ಸ್ ಗ್ರ್ಯಾಂಡ್ ಬೇ, ಸುಭಾಸ್‌ನಗರ, ಕುರ್ಕಾಲು ಇಲ್ಲಿ ನಡೆದ ದ್ವಿತೀಯ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಕಟಾ ಮತ್ತು ಕುಮಿಟಿ ಈ ಎರಡೂ ವಿಭಾಗದಲ್ಲಿ ಶ್ರೀಶ ಗುಡ್ರಿ ಅವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. ಅವರು ಈ ಮೊದಲು ದೆಹಲಿಯಲ್ಲಿ ನಡೆದಂತಹ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದಿರುತ್ತಾರೆ. ಶ್ರೀಶ ಗುಡ್ರಿ ಅವರು ವೆಲಾಸಿಟಿ ಅಕಾಡೆಮಿ ಆಫ್ ಮಾರ್ಷಿಯಲ್ ಆರ್ಟ್ಸ್ ಅಂಡ್ ಫಿಟ್ನೆಸ್ ಇದರ ಮುಖ್ಯಸ್ಥ ಅಕ್ಷಯ್ ಹೆಮ್ಮಾಡಿ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕುಂದಾಪುರದ ಸಂತೋಷ್ ಮೊಗವೀರ ಮೇಲ್ ಹರ್ಜಿ ಮತ್ತು ಹೇಮಾವತಿ ಗುಡ್ರಿ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಜತ ಮಹೋತ್ಸವದ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ರಜತ ವರ್ಷದ ಅಧ್ಯಕ್ಷರಾಗಿ ಆನಂದ ಮದ್ದೋಡಿ, ಕಾರ್ಯದರ್ಶಿಯಾಗಿ ರಾಮಕೃಷ್ಣ ದೇವಾಡಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷರುಗಳಾಗಿ ಅಬ್ದುಲ್ ರವೂಫ್, ಲಕ್ಷ್ಮಣ ಕೊರಗ ಬೈಂದೂರು, ಭಾಸ್ಕರ ಭಾಡ, ಸುರೇಶ್ ಹುದಾರ್, ಖಜಾಂಚಿಯಾಗಿ ರಾಘವೇಂದ್ರ ಕೆ. ಪಡುವರಿ, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಹೆಚ್. ಜಿ. ಬೈಂದೂರು, ನಿಶ್ಚಿತಾ ಪಡುವರಿ, ಸುಬ್ರಹ್ಮಣ್ಯ ಗಾಣಿಗ, ಸಂಘಟನಾ ಕಾರ್ಯದರ್ಶಿಯಾಗಿ ವೆಂಕಟರಮಣ ಡಿ. ಮಯ್ಯಾಡಿ, ಶ್ರೀಧರ್ ಆಚಾರ್ಯ ಪಡುವರಿ, ಕಾವೇರಿ ಗಾಣಿಗ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸತ್ಯನಾ ಕೊಡೇರಿ, ಉದಯ ಗಾಣಿಗ ಬೈಂದೂರು, ವಿನೋದಾ ಗಜೇಂದ್ರ ನಾಯ್ಕ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಗೌರವಾಧ್ಯಕ್ಷರಾಗಿ ಚಂದ್ರಶೇಖರ ಹೊಳ್ಳ ಉಪ್ಪುಂದ, ನಿರ್ದೇಶಕರುಗಳಾಗಿ ಸುಧಾಕರ ಪಿ. ಬೈಂದೂರು, ಗಣಪತಿ ಹೋಬಳಿದಾರ್, ವ್ಯವಸ್ಥಾಪಕರಾಗಿ ಕೃಷ್ಣಮೂರ್ತಿ ಉಡುಪ ಕಬ್ಸೆ ಮುಂದುವರಿಯಲಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ನಾಗರಾಜ ಪಿ. ಯಡ್ತರೆ, ಗಣೇಶ್ ಪೂಜಾರಿ ಬೈಂದೂರು, ರಾಘವೇಂದ್ರ ಅರ್ಚಕ ಕಾಲ್ತೋಡು, ಗಣೇಶ್ ಟೈಲರ್, ನಾಗರಾಜ ಬಾಡ, ಚಂದ್ರಶೇಖರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2023-24ನೇ ಸಾಲಿನಲ್ಲಿ ರೂ.200 ಕೋಟಿ ವ್ಯವಹಾರ ನಡೆಸಿ ರೂ.೫೧.೯೬ ಲಕ್ಷ ನಿವ್ವಳ ಲಾಭಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.13 ಲಾಭಾಂಶ ನೀಡಲಾಗುತ್ತಿದೆ ಎಂದು ಸೊಸೈಟಿಯ ಅಧ್ಯಕ್ಷ, ಎಸ್. ರಾಜು ಪೂಜಾರಿ ಹೇಳಿದರು.  ಬೈಂದೂರು ಪ್ರಧಾನ ಕಛೇರಿಯಲ್ಲಿ ಭಾನುವಾರ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ನಾಲ್ಕು ಶಾಖೆಗಳನ್ನು ಹೊಂದಿದ ನಮ್ಮ ಸಂಘವು 15 ವರ್ಷ ಪೂರೈಸಿದೆ. ಸಹಕಾರಿ ಸಂಸ್ಥೆಗಳನ್ನು ಮುನ್ನೆಡೆಸುವಾಗ ಸವಾಲುಗಳು ಸಹಜ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ. ಈ ನಿಟ್ಟಿನಲ್ಲಿ ಸಮಾನ ಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜಿಲ್ಲೆಯಲ್ಲಿಯೇ ಜನಸಾಮಾನ್ಯರ ಸಂಸ್ಥೆಯಾಗಿ ಹೆಸರುಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣಕ್ಕೂ ಸಂಘ ಸಹಕಾರಿಯಾಗಿದೆ. ಗ್ರಾಹಕರ ಸಲಹೆ, ಸೂಚನೆ ಹಾಗೂ ಸಹಕಾರದಿಂದ ಗ್ರಾಮೀಣ ಪ್ರದೇಶದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಸಿಬ್ಬಂದಿಗಳ ಪ್ರಾಮಾಣಿಕ ಕಾರ್ಯದಕ್ಷತೆ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನ, ಆಶೀರ್ವಾದದೊಂದಿಗೆ ಆ.1೦ ರಂದು ಪ್ರಾರಂಭಗೊಂಡ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ’ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು. ಅಂದು ಬೆಳಿಗ್ಗೆ ದೀಪ ವಿಸರ್ಜನೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ವಿಠಲದಾಸ ಭಟ್ ನೇತೃತ್ವದಲ್ಲಿ ನಡೆಯಿತು. ದೇವರಿಗೆ ಮಧ್ಯಾಹ್ನ ಮಹಾಪೂಜೆ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಹಸ್ರಾರು ಭಜಕರ ಸೇವೆಯೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ಊರ ಪರ ಊರಿನ ವಿವಿಧ ಭಜನಾ ತಂಡಗಳು ಪಾಲ್ಗೊಂಡು ಭಜನಾ ಸೇವೆ ಸಮರ್ಪಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು, ಭಜಕರು ಮತ್ತಿತರರು ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

Read More