ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಣೂರು ಪಡುಕರೆಯ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ) ವಿಭಾಗದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಕಾ ತರಬೇತಿ ಶಿಬಿರವು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೀತಾನಂದ ಟ್ರಸ್ಟ್‌ನ ಪ್ರವರ್ತಕ ಆನಂದ ಸಿ. ಕುಂದರ್ ಉದ್ಘಾಟಿಸಿ ಮಾತಾನಾಡಿ, ಉಡುಪಿ ಜಿಲ್ಲೆಯ 90 ಶಾಲೆಗಳಲ್ಲಿ ಯಕ್ಷ ಶಿಕ್ಷಣ ತರಬೇತಿ ನಡೆಯುತ್ತಿದ್ದು, ಪಾರಂಪರಿಕ ಕಲೆಯಾದ ಯಕ್ಷಗಾನವು ಹೊಸ ತಲೆಮಾರಿಗೆ ಪರಿಚಯವಾಗಿ ಕಲಾವಿದ ಅಥವಾ ಪ್ರೇಕ್ಷಕನಾಗಿಸುವ ಕಾರ್ಯವು ಆಗಬೇಕಿದೆ. ಇಂತಹ ತರಬೇತಿ ಶಿಬಿರದ ಮೂಲಕ ಯಕ್ಷಕಲೆಯ ವ್ಯಾಪ್ತಿಯನ್ನು ವಿಸ್ತರಿಸಬೇಕಿದೆ. ಶಿಸ್ತುಬದ್ಧ ಜೀವನ ಹಾಗೂ ನಮ್ಮ ಸಂಸ್ಕೃತಿಗಳ ಅನುಕೂಲವಾಗುವ ಯಕ್ಷಕಲೆ ಬೆಳೆಸಬೇಕಿರುವುದು ನಮ್ಮ ನಿಮ್ಮಲ್ಲರ ಹೊಣೆ ಎಂದರು. ಸಮಾರಂಭದ ಕುರಿತು ಪ್ರಾಸ್ತಾವಿಕವಾಗಿ ಶಿಕ್ಷಕ ರಾಘವೇಂದ್ರ ಗಿಳಿಯಾರು ಯಕ್ಷಗುರುಗಳು ವಾಕ್ ಶುದ್ಧಿ ಸಭಾ ಕಂಪನ ಹೋಗಲಾಡಿಸ ಬಹುದಾದ ಯಕ್ಷಕಲೆಯನ್ನು ಶಾಸ್ತ್ರಿಯವಾಗಿ ಕಲಿತು ಮುಂದೆ ಶಿಕ್ಷಣ ಮತ್ತು ಉದ್ಯೋಗ ಹಾಗೂ ಸಮಾದಲ್ಲಿ ಉತ್ತಮ ಸ್ಥಾನಮಾನ ಕೊಡಬಲ್ಲ ಕಲೆಯಾಗಿದೆ ಎಂದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಠಿ, ನೈಸರ್ಗಿಕ ವಿಕೋಪಗಳು ಉಂಟಾದಾಗ ಕೂಡಲೇ ಸ್ಪಂದಿಸಿ, ಪರಿಹಾರ ಕಾರ್ಯಗಳನ್ನು ಕೈಗೊಂಡು ಹಾನಿಗೊಳಗಾದವರಿಗೆ ನಷ್ಟ ಪರಿಹಾರವನ್ನು ಆದಷ್ಟು ತ್ವರಿತವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಈವರೆಗೆ ವಾಡಿಕೆಗೆ 1959 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 2803 ಮಿ.ಮೀ ನಷ್ಟು ಮಳೆಯಾಗಿ ಶೇ. 43 ರಷ್ಟು ಹೆಚ್ಚು ಆಗಿದೆ. ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚು ಮಳೆಯಾಗಬಹುದೆಂಬ ಮುನ್ಸೂಚನೆಯನ್ನು ಈಗಾಗಲೇ ಹವಾಮಾನ ಇಲಾಖೆಯವರು ನೀಡಿದ್ದಾರೆ. ಹವಾಮಾನ ಇಲಾಖೆ ಪ್ರತಿದಿನವೂ ನೀಡುವ ಮುನ್ಸೂಚನೆಗಳನ್ನು ಸಾರ್ವಜನಿಕರಿಗೆ ಹಾಗೂ ಮೀನುಗಾರರಿಗೆ ಮಾಹಿತಿ ನೀಡಬೇಕು. ಇದರಿಂದಾಗಿ ಆಗುವ ಮಾನವ ಜೀವಹಾನಿ ಹಾಗೂ ಪ್ರಾಣಿಗಳ ಜೀವಹಾನಿಯನ್ನು ತಪ್ಪಿಸಲು ಸಾಧ್ಯ ಎಂದರು. ಹೆಚ್ಚಿನ ಮಳೆಯಿಂದಾಗಿ ಮೂಲಸೌಕರ್ಯಗಳಾದ ರಾಜ್ಯಹೆದ್ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.16: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಅಧಿಕ ಮಳೆ ಸಾಧ್ಯತೆಯಿದ್ದು ಹವಮಾನ ಇಲಾಖೆಯಿಂದ ಎಲ್ಲಾ ಅಲರ್ಟ್ ಘೋಷಿಸಿದೆ. ಮಳೆಗಾಲದಲ್ಲಿ ಸಾರ್ವಜನಿರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆ ವತಿಯಿಂದ ಕೇಂದ್ರ ಸರಕಾರದ ಯೋಜನೆ ಜನಸುರಕ್ಷಾ ಅಭಿಯಾನವು ಮಂಗಳವಾರ ಕೆರ್ಗಾಲ್ ಗ್ರಾಮ ಪ್ರಂಚಾಯತ್ ವಠಾರದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕೆರ್ಗಾಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಅವರು ಮಾತನಾಡಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ನವೋದಯ ಸ್ವಸಹಾಯ ಗಂಪುಗಳಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸುವುದರ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಜನಸುರಕ್ಷಾ ಯೋಜನೆಯನ್ನು ಮನೆ ಮನೆಗೆ ತಲುಪಿಸುವುದರಲ್ಲಿ ಹೆಚ್ಚು ಮುತುವರ್ಜಿ ವಹಿಸಿರುವುದು ಶ್ಲಾಘನಾರ್ಹ ಎಂದರು. ಎಸ್‌ಸಿಡಿಸಿಸಿ. ಬ್ಯಾಂಕ್ ಉಪ್ಪುಂದ ಶಾಖಾ ವ್ಯವಸ್ಥಾಪಕರಾದ ಜಿ. ಶಂಕರ ಶೆಟ್ಟಿಯವರು ಪ್ರಸ್ತಾವನೆಯಲ್ಲಿ ಕೇಂದ್ರ ಸರಕಾರದ ಜನ ಸುರಕ್ಷಾ ಯೋಜನೆಯನ್ನು ಕೆರ್ಗಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿಯೊಬ್ಬ ನಾಗರಿಕರು ಆಳವಡಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಕೆರ್ಗಾಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯ ಖಾರ್ವಿ ಗ್ರಾಮ ಪಂಚಾಯತ್, ಸದಸ್ಯ ವಿನೋದ ದೇವಾಡಿಗ, ಗ್ರಾಮ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಕೆರ್ಗಾಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನಾಡ ಗ್ರಾಮ ಪಂಚಾಯತ್ ಸಮೀಪ ರಸ್ತೆಯ ಬದಿಯಲ್ಲಿ ಮಲಗಿದ್ದ ಗೋವುಗಳನ್ನು ಕಾರಿನಲ್ಲಿ ಸಾಗಿಸಲು ಯತ್ನಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಚಾಲಕ ದಿಪೇಶ್ ಖಾರ್ವಿ ಹಾಗೂ ಅವರ ಸ್ನೇಹಿತ ಅಭಿಜಿತ್ ಪಿಕಪ್ ವಾಹನದಲ್ಲಿ ಫಾರ್ಮ್‌ಗಳಿಗೆ ಕೋಳಿಗಳನ್ನು ಅನ್‌ಲೋಡ್ ಮಾಡಲು ತೆರಳುತ್ತಿದ್ದ ಸಂದರ್ಭ ಬೆಳಿಗ್ಗೆ 04-00 ಗಂಟೆಯ ಸುಮಾರಿಗೆ ನಾಡ ಗ್ರಾಮ ಪಂಚಾಯತ್ ಸಮೀಪ ತೆರಳುತ್ತಿದ್ದಾಗ ಒಂದು ಬಿಳಿ ಬಣ್ಣದ ಕಾರಿನಲ್ಲಿ ಮೂರು ಜನರು ಬಂದು ನಾಡ ಶಾನ್ ಮೆಡಿಕಲ್ ಪಕ್ಕದಲ್ಲಿ ಮಲಗಿರುವ ದನಗಳನ್ನು ಕಾರಿಗೆ ತುಂಬಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆ ಸಮಯದಲ್ಲಿ ಬಂದ ಪಿಕಪ್ ವಾಹನವನ್ನು ನೋಡಿ ದನವನ್ನು ತುಂಬಿಸಲು ಪ್ರಯತ್ನಿಸಿದವರು ಓಡಿ ಹೋಗಿದ್ದರು. ಈ ಬಗ್ಗೆ ದಿಪೇಶ್ ಅವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ವಿಶೇಷ ತಂಡ ರಚಿಸಿ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿಗಳಾದ ಬ್ರಹ್ಮಾವರ ಹೊನ್ನಾಳಿಯ ನೌಫಲ (23)…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಬಂದರು ಬಳಿ ಮಂಗಳವಾರ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಸಂಸದ ಬಿ. ವೈ. ರಾಘವೇಂದ್ರ ಅವರು ಮಾತನಾಡಿ, ಇಂತಹ ಘಟನೆ ನಡೆದಿರುವುದು ವಿಷಾದನೀಯ. ಈಗಾಗಲೇ ಶಾಸಕರು, ಉಡುಪಿ ಸಂಸದರು ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ನಾನು ಕೂಡ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದ್ದೇನೆ. ನಾಳೆ ಮಧ್ಯಾಹ್ನದ ತನಕ ಮೃತದೇಹವನ್ನು ಹುಡುಕುವ ಕೆಲಸ ಮಾಡಲಾಗುತ್ತದೆ. ಆಗಲೂ ಮೃತದೇಹ ಪತ್ತೆಯಾಗದಿದ್ದರೇ, ಹೆಲಿಕಾಪ್ಟರ್ ಮೂಲಕ ಪತ್ತೆ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಬೇಕು ಎಂದು ವಿನಂತಿಸಿದರು. ದೋಣಿ ದುರಂತದಲ್ಲಿ ನಾಪತ್ತೆಯಾಗಿರುವ ಪ್ರತಿ ಮೀನುಗಾರರ ಕುಟುಂಬಕ್ಕೆ ಕೇಂದ್ರ ಸರಕಾರದ ಜನತಾ ಪರಿವಾರ್ ಯೋಜನೆಯಡಿ ರೂ, 5 ಲಕ್ಷ, ನಾಡದೋಣಿ ಸಂಘಟನೆಯಿಂದ ಸಂಕಷ್ಟ ಪರಿಹಾರ ನಿಧಿಯಿಂದ ರೂ.10 ಲಕ್ಷ ನೀಡಲಾಗುತ್ತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಪೂರ್ವ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸೋಮವಾರದಂದು ತರಕಾರಿ ದಿನವನ್ನು ಆಚರಿಸಲಾಯಿತು. ಎಲ್‌ಕೆಜಿ ತರಗತಿಯ ಮಕ್ಕಳು ತರಕಾರಿಯ ಕಟೌಟ್‌ಗಳನ್ನು ಧರಿಸಿ ವೇದಿಕೆಯ ಮೇಲೆ ಹೆಜ್ಜೆ ಹಾಕಿದರು. ಯುಕೆಜಿ ತರಗತಿಯ ಮಕ್ಕಳು ತರಕಾರಿ ವ್ಯಾಪಾರಿಗಳ ವೇಷ ಧರಿಸಿ ತರಕಾರಿಗಳ ಮಹತ್ವವನ್ನು ವಿವರಿಸಿದರು. ಈ ಚಟುವಟಿಕೆಯ ಒಂದು ಭಾಗವಾಗಿ ತರಕಾರಿ ಮಾರುಕಟ್ಟೆಯ ಸನ್ನಿವೇಶವನ್ನು ನಿರ್ಮಾಣ ಮಾಡಿ, ಮಾರುಕಟ್ಟೆ ವ್ಯವಹಾರದ ಅನುಭವಾತ್ಮಕ ಕಲಿಕೆಗೆ ಅವಕಾಶ ನೀಡಲಾಯಿತು. ನಂತರ ತರಕಾರಿಗಳನ್ನು ಬಳಸಿ ಸಲಾಡ್ ಮಾಡಿ ಮಕ್ಕಳಿಗೆ ವಿತರಿಸಲಾಯಿತು. ಮಕ್ಕಳು ಈ ಚಟುವಟಿಕೆಯ ಮೂಲಕ ಆರೋಗ್ಯಕರ ಆಹಾರದ ಅವಶ್ಯಕತೆ ಮತ್ತು ತರಕಾರಿಗಳ ಪೋಷಣಾತ್ಮಕ ಮೌಲ್ಯವನ್ನು ಅರಿತರು. ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಹಾಗೂ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ ಅವರ ಉಪಸ್ಥಿತಿಯಲ್ಲಿ 39ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್ ಹಾಗೂ ಚಿನ್ಮಯಿ ಆಸ್ಪತ್ರೆಯ ಸುಮಾ ಉಮೇಶ್ ಪುತ್ರನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಸನ್ಮಾನಿಸಿ ಬೆಳ್ಳೆಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. 600ಕ್ಕಿಂತ ಅಧಿಕ ಅಂಕ ಪಡೆದ 60ವಿದ್ಯಾರ್ಥಿಗಳಿಗೆ 10ಗ್ರಾಂ ಬೆಳ್ಳಿಯ ನಾಣ್ಯವನ್ನು, ಡಿಸ್ಟಿಂಕ್ಷನ್ ಪಡೆದ 88 ವಿದ್ಯಾರ್ಥಿಗಳಿಗೆ 8ಗ್ರಾಂ ಬೆಳ್ಳಿಯ ನಾಣ್ಯವನ್ನು ನೀಡಿ ಪ್ರೋತ್ಸಾಹಿಸಲಾಯಿತು ಹಾಗೂ ಪಿ.ಯು.ಸಿ.ಯ ಸಾಧಕರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು 14 ಬೋಧಕ ಬೋಧಕೇತರ ಸಿಬ್ಬಂದಿಯವರಿಗೆ ಬೆಳ್ಳಿಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. ಸಮಾರಂಭದಲ್ಲಿ ಪದವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯಲ್ಲಿ ಮಂಗಳವಾರ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮಗುಚಿ ಮೂವರು ಸಮುದ್ರಪಾಲಾಗಿದ್ದು, ಓರ್ವ ವ್ಯಕ್ತಿ ಈಜಿ ದಡ ಸೇರಿರುವ ಘಟನೆ ನಡೆದಿದೆ. ಘಟನೆಯಲ್ಲಿ ಗಂಗೊಳ್ಳಿ ನಿವಾಸಿಗಳಾದ ಸುರೇಶ್ ಖಾರ್ವಿ (48), ಲೋಹೀತ್ ಖಾರ್ವಿ (34), ಜಗದೀಶ್ ಖಾರ್ವಿ (50) ಎಂಬ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಕಿರುದೋಣಿಯಲ್ಲಿ ನಾಲ್ವರು ಮೀನುಗಾರರು ಎಂದಿನಂತೆ ಮೀನುಗಾರಿಕೆಗಾಗಿ ತೆರಳಿದ್ದು, ಮೀನು ತುಂಬಿಸಿಕೊಂಡು ಗಂಗೊಳ್ಳಿ ಬಂದರಿಗೆ ಹಿಂದಿರುಗುತ್ತಿದ್ದ ವೇಳೆ ಬ್ರೇಕ್ ವಾಟರ್ ತುದಿಯಲ್ಲಿ ಈ ಅವಘಡ ನಡೆದಿದೆ. ಹಿಂದಿರುಗುವಾಗ ಗಾಳಿ ಹಾಗೂ ಅಬ್ಬರ ತೆರೆಗಳ ರಭಸಕ್ಕೆ ದೋಣಿಯಲ್ಲಿದ್ದ ಓರ್ವ ಮೀನುಗಾರ ಕೆಳಕ್ಕೆ ಬಿದ್ದಿದ್ದರು. ಅವರನ್ನು ರಕ್ಷಣೆ ಮಾಡುವ ಸಲುವಾಗಿ ದೋಣಿಯಲ್ಲಿ ತಿರುಗಿಸಲಾಗಿದ್ದು, ಅದೇ ವೇಳೆದ ಅಬ್ಬರದ ಅಲೆಗಳು ಹೊಡೆದು ದೋಣಿ ಮಗುಚಿದೆ. ಘಟನೆಯಲ್ಲಿ ಸುರೇಶ್ ಖಾರ್ವಿ, ಲೋಹೀತ್, ಜಗದೀಶ್ ಎಂಬ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಸಂತೋಷ ಖಾರ್ವಿ (35) ಎಂಬುವವರು ಈಜಿಕೊಂಡು ದಡ ಸೇರಿದ್ದಾರೆ. /ಕುಂದಾಪ್ರ ಡಾಟ್ ಕಾಂ/…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಫ್ ಎಂ ರೇಡಿಯೋಗಳು ಉಡುಪಿ ಜಿಲ್ಲೆಯಲ್ಲೂ ಅತ್ಯಂತ ಉತ್ತಮವಾಗಿ ಕೇಳುಗರಿಗೆ ದೊರೆಯುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರು ಪ್ರಯತ್ನ ಪಡಲಿ ಎಂದು ಎಫ್ ಎಂ ಕೇಳುಗರ ಪರವಾಗಿ ಕುಂದಾಪುರದ ನ್ಯಾಯವಾದಿ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗೃಹ ಮಾಡಿದ್ದಾರೆ. ಹಲವಾರು ಎಫ್ ಎಂ ರೇಡಿಯೋ ಚಾನಲ್ ಗಳು ಮಂಗಳೂರಿನಲ್ಲಿ ಪ್ರಾರಂಭವಾಗಿ ಹಲವು ವರ್ಷಗಳೇ ಕಳೆದರೂ ಸಹ ಉಡುಪಿ ಜಿಲ್ಲೆಯಲ್ಲಿ ಮಂಗಳೂರಿನ ಎಫ್ ಎಂ ರೇಡಿಯೋ ತರಂಗಾಂತರಗಳು ಸುಲಲಿತವಾಗಿ ಕೇಳುಗರಿಗೆ ಸಿಗುತ್ತಿಲ್ಲ. ಬ್ರಹ್ಮಾವರದಲ್ಲಿನ ಮಂಗಳೂರು ಆಕಾಶವಾಣಿ ಕೇಂದ್ರವು ಎಫ್ ಎಂ ರೇಡಿಯೋ ತರಂಗಾಂತರಳನ್ನು ಉಡುಪಿ ಜಿಲ್ಲೆಯ ಕೇಳುಗರಿಗೆ ಸುಲಲಿತವಾಗಿ ಸಿಗುವಂತೆ ಮಾಡಬೇಕು ಹಾಗೂ ಇದರಿಂದ ಉಡುಪಿ ಜಿಲ್ಲೆ ಮಾತ್ರವಲ್ಲದೆ ಪಕ್ಕದ ಉತ್ತರ ಕನ್ನಡ ಜಿಲ್ಲೆಯ ಹಾಗೂ ಶಿವಮೊಗ್ಗ ಜಿಲ್ಲೆಯ ಹಲವು ತಾಲ್ಲೂಕುಗಳಿಗೂ ಇದರಿಂದ ಉಪಯುಕ್ತವಾಗುತ್ತದೆ. ಈ ಬಗ್ಗೆ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಕ್ರಮವಹಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗೃಹಿದ್ದಾರೆ.
