ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ದೊರೆಯುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ತನ್ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ವಾರ್ಷಿಕೋತ್ಸವ ಸಮಾರಂಭದ ಮೊದಲ ದಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳದ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಪದ್ಮನಾಭ ಗೌಡ ಅವರು ಮಾತನಾಡಿ, ಸಂಸ್ಥೆ ಕೇವಲ ಭೌತಿಕ ವಸ್ತುವಲ್ಲ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವುದು. ಅಭೂತಪೂರ್ವ ವೇದಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ನಿಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಪೋಷಕರು, ಶಿಕ್ಷಕರು ಗುರುತಿಸಬೇಕು. ಉತ್ತಮ ಶಿಕ್ಷಣವು ಪ್ರತಿಭೆಯಾಗಿದೆ. ಇಂತಹ ವೇದಿಕೆಗಳು ನಿಮ್ಮ ಪ್ರತಿಭೆಗೆ ಪ್ರೇರಣೆಯಾಗಲಿ. ಅಲ್ಲದೆ ಕರ್ನಾಟಕದ ಜಾನಪದ ಲೋಕ ಶ್ರೀಮಂತವಾಗಿದೆ. ಯುವಕರು ಇಂತಹ ಜನಪದ ಲೋಕವನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಕಾರ್ಯಕ್ರಮದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ತಾಲೂಕಿನ ಯಡ್ತಾಡಿ ನಿವಾಸಿ ಸೀತಾ ಬಾಯಿ ಅವರು ಪಕ್ಕದ ಮನೆಯ ಕಾರ್ಯಕ್ರಮಕ್ಕೆಂದು ರಸ್ತೆಯಲ್ಲಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಅಲ್ತಾರು ಪಡುಮನೆ ಸಮೀಪ ಬೈಕ್‌ನಲ್ಲಿ ಬಂದ ಆರೋಪಿ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಮಂದಾರ್ತಿ ಕಡೆಗೆ ಪರಾರಿಯಾಗಿದ್ದ ಘಟನೆ ಮಾ. 20ರಂದು ನಡೆದಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಾ. 21ರಂದು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಸಾಲಿಗ್ರಾಮ ಕಾರ್ಕಳ ಭಟ್ರಕಟ್ಟೆ ನಿವಾಸಿ ಮಂಜುನಾಥ ಮಯ್ಯ ಪೊಲೀಸರು ವಶಪಡಿಸಿಕೊಂಡ ಆರೋಪಿ. ಕಳವು ನಡೆದ ಕೂಡಲೇ ಸ್ಥಳೀಯರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸುಮಾರು 20 ಕಿ.ಮೀ. ವ್ಯಾಪ್ತಿಯ ವಿವಿಧ ಕಡೆಗಳ ಸಿ.ಸಿ. ಕೆಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆಗ ಬೈಕ್ ಬಗ್ಗೆ ಮಾಹಿತಿ ದೊರೆತಿದೆ. ಅದರ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಈ ಹಿಂದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಎಸೆಸೆಲ್ಸಿ ಪರೀಕ್ಷಾ ಕೇಂದ್ರದ ಕೋಣೆಯ ಬಾಗಿಲಿನ ಬೀಗ ಒಡೆದು, ಸಿಸಿ ಕೆಮರಾಗಳನ್ನು ಒಡೆದು ಹಾಕಿರುವ ಘಟನೆ ಗುರುವಾರದಂದು ನಡೆದಿದೆ. ಮಾ. 21ರಂದು ನಡೆಯುವ ಪರೀಕ್ಷೆಗೆ ತರಗತಿಯ ಕೋಣೆಗಳನ್ನು ಸಿದ್ಧಗೊಳಿಸಲಾಗಿತ್ತು. ಈ ಬಾರಿ ನಕಲು ತಡೆಗಟ್ಟಲು ಕಾಲೇಜು ವಠಾರ ಹಾಗೂ ಕೋಣೆಗಳಿಗೆ ಸಿಸಿ ಕೆಮರಾ ಅಳವಡಿಸಲಾಗಿತ್ತು. ಮಾ.20ರಂದು ರಾತ್ರಿ ಸುಮಾರು 9.30 ರಿಂದ 10 ಗಂಟೆ ಹೊತ್ತಿಗೆ ಮುಸುಕುಧಾರಿಗಳು ಕಾಲೇಜಿನ ಆವರಣ ಪ್ರವೇಶಿಸಿ, ಅಲ್ಲಿ ಅಳವಡಿಸಿದ್ದ ಕೆಮರಾ ಕಿತ್ತೆಸೆದು ವಿದ್ಯುತ್ ಮೈನ್ ಸ್ವಿಚ್ ಆಫ್ ಮಾಡಿದ್ದಾರೆ. ಅನಂತರ ಪರೀಕ್ಷಾ ಕೇಂದ್ರದ ಕೋಣೆಯ ಬಾಗಿಲಿನ ಬೀಗ ಒಡೆದು, ಒಳಗೆ ನುಗ್ಗಿದ್ದಾರೆ. 4 ಕೋಣೆಗಳಿಗೆ ಹೋಗಿ 5 ಕೆಮರಾಗಳನ್ನು ಧ್ವಂಸ ಮಾಡಿದ್ದಾರೆ.ಜಾಕೆಟ್ ಧರಿಸಿದ್ದ ಮೂವರು ಮುಸುಕು ಧರಿಸಿ ಆವರಣ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು 15 ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ಬಿ.ಇ/ಬಿ.ಟೆಕ್ ಪದವೀಧರರಾಗಿದ್ದು, ಐ.ಐ.ಎಸ್.ಸಿ, ಐ.ಐ.ಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ಕೋರ್ಸುಗಳಲ್ಲಿ (ತರಬೇತಿ ಅವಧಿ ಕನಿಷ್ಠ 6 ತಿಂಗಳಿನಿಂದ 1 ವರ್ಷ) ಭಾಗವಹಿಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15000 ರೂ. ಶಿಷ್ಯ ವೇತನ ಪಡೆಯಲು ಅವಕಾಶವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯ ಕುಟುಂಬ ಆದಾಯ 5 ಲಕ್ಷ ರೂ. ಮೀರಿರಬಾರದು. ಮೂಲ ನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ, ಸೂಕ್ಷ್ಮ/ ಅತಿ ಸೂಕ್ಷ್ಮ ಸಮುದಾಯಗಳ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ವಿಧಾನ ಸಭೆಯಲ್ಲಿ ಕರಾವಳಿಯ ಶಾಸಕರುಗಳಿಗೆ ವಿಶೇಷವಾದ ಗೌರವವಿದೆ. ಅತ್ಯಂತ ಮೇಧಾವಿಗಳನ್ನು, ಸದನ ಶೂರರನ್ನು, ನೈತಿಕತೆ, ಸಿದ್ದಾಂತಕ್ಕೆ ಬದ್ಧರಾದ ಜನಪ್ರತಿನಿದಿನಗಳನ್ನು ನೀಡಿದ ಪುಣ್ಯ ಭೂಮಿ ನಮ್ಮ ಕರಾವಳಿ. ಇಂತಾ ಹೆಮ್ಮೆಯ ನಾಡಿನಿಂದ ಶಾಸನ ಸಭೆಗೆ ಆಯ್ಕೆಗೊಂಡು ಶಾಸನ ಸಭೆಯ ಅತ್ಯಂತ ಗೌರವಾನ್ವಿತ ಪೀಠವಾದ ಅಧ್ಯಕ್ಷರ ಪೀಠಕ್ಕೆ ಅಗೌರವ ತೋರಿ ವಿಧಾನ ಸಭೆಯ ಅಧಿವೇಶನ ಪ್ರವೇಶಕ್ಕೆ ಆರು ತಿಂಗಳುಗಳ ಕಾಲ ಅಮಾನತುಗೊಂಡ ಕರಾವಳಿಯ ಶಾಸಕರುಗಳಾದ ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ ಹಾಗೂ ಯಶ್‌ಪಾಲ್ ಸುವರ್ಣ ವರ್ತನೆಯು ಸುಶಿಕ್ಷಿತರ ನಾಡಾದ ಕರಾವಳಿ ಜನರಿಗೆ ಮಾಡಿದ ಅವಮಾನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಶಾಸನ ಸಭೆಯ ಘನತೆ ಏತ್ತಿ ಹಿಡಿಯ ಬೇಕಾದ ಸದಸ್ಯರುಗಳು ಅಧ್ಯಕ್ಷರ ಪೀಠಕ್ಕೆ ತೆರಳಿ ಅಧ್ಯಕ್ಷರ ಮೇಲೆ ಕಾಗದವನ್ನು ಹರಿದು ಎಸೆದದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಚಾರವಾಗಿದೆ. ವಿಧಾನ ಮಂಡಲದ ಅಧಿವೇಶನದ ಆಳ ಅಗಲ ತಿಳಿಯದ ಜನಪ್ರತಿನಿದಿನಗಳು ಮಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ಕರ್ಷ ಎನ್ನುವ ಶೀರ್ಷಿಕೆ ಅಡಿಯಲ್ಲಿ ಶುಭ ವಿದಾಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಜಯ ಮಕ್ಕಳ ಕೂಟ ಆತ್ರಾಡಿ ಇಲ್ಲಿನ ಸಂಚಾಲಕರಾದ ಸುಭಾಸ್ ಚಂದ್ರ ಶೆಟ್ಟಿ ಅವರು ಮಾತನಾಡಿ, ಸರಳ ಬದುಕಿನೊಂದಿಗೆ ಮಾನವೀಯ ಮೌಲ್ಯ ಗಳನ್ನು ಅಳವಡಿಸಿ ಕೊಂಡು, ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತಾಗಲಿ ಎಂದು ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಮಾತನಾಡಿ, ತಂದೆ, ತಾಯಿ, ಗುರುಗಳಿಗೆ ಗೌರವ ನೀಡಿ. ಸತ್ಪಜೆಯಾಗಿ ಯಶಸ್ವಿ ಬದುಕನ್ನು ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ, ಹಿರಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನ ಮಂತ್ರಿಗಳು ರಾಷ್ಟ್ರ ಮಟ್ಟದ ಅಥವಾ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿದ್ದು, ಅದರಂತೆ ಅತ್ಯುನ್ನತ ಯೋಗ ಪ್ರಶಸ್ತಿಗಾಗಿ ಯೋಗ ಪಟುಗಳು ಹಾಗೂ ಯೋಗ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು https://innovateindia.mygov.in/pm-yoga-awards-2025/ ವೆಬ್‌ಸೈಟ್ ನಲ್ಲಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ:0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಭಿಪ್ರಾಯಪಟ್ಟರು. ಅವರು ಅಂದು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕೃತಿಕ ವೇದಿಕೆ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜನಪದ ಉತ್ಸವ “ಜನ ಜಲ್ಸಾ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ನಾಡಿನ ಸಾಂಸ್ಕೃತಿಕ ರಾಯಭಾರಿಗಳಾಗಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರಲ್ಲಿ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದ ಅವರು, ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಅದನ್ನು ಗೌರವಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಕೃತಿಯ ಅಧ್ಯಯನವೇ ಈ ಕ್ಯಾಂಪಿನ ಮುಖ್ಯ ಉದ್ದೇಶವಾಗಿದೆ. ನಿರಂತರವಾಗಿ ಪರಿಸರ ಪ್ರಜ್ಞೆಯನ್ನು ಮೂಡಿಸುವೆಡೆಗೆ ಶಿಕ್ಷಣ ನೀಡುತ್ತಿರುವ ಈ ಪರಿಸರದಲ್ಲಿ ಅಧ್ಯಯನ ಮಾಡುವ ಸದಾವಕಾಶ ಸಿಕ್ಕಿದೆ. ಕರ್ನಾಟಕವನ್ನು ಚಿನ್ನದ ನಾಡನ್ನಾಗಿ, ಗಂಧದ ಬೀಡನ್ನಾಗಿ ಮತ್ತು ಸದಾ ಕಾಲ ನೀರಿರುವ ನಾಡನ್ನಾಗಿ ಕಟ್ಟುತ್ತೇವೆ ಎಂಬ ಆಶಯವಿದೆ ಎಂದು ಕರ್ನಾಟಕದ ಮುಖ್ಯ ಆಯುಕ್ತರು ಭಾರತ್ ಸ್ಕೌಟ್ ಎಂಡ್ ಗೈಡ್ಸ್ ಹಾಗೂ ಮಾಜಿ ಕರ್ನಾಟಕ ವಿಧಾನಸಭೆಯ ಸಚಿವರಾದ ಪಿಜಿಆರ್ ಸಿಂಧ್ಯಾ ಹೇಳಿದರು. ಅವರು ಇಲ್ಲಿನ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರೋವರ್ಸ್ ರೇಂಜರ್ಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಈ ಸುಂದರ ಕಡಲ ತೀರ ಪರಿಸರದಲ್ಲಿ ಪರಿಸರ ಪ್ರಜ್ಞೆಯನ್ನು ಮುಖ್ಯ ಧ್ಯೇಯವಾಗಿಟ್ಟುಕೊಂಡು ಶಿಕ್ಷಣ ನೀಡುತ್ತಿರುವ ಬ್ಯಾರೀಸ್ ಸಂಸ್ಥೆ 38 ತಿಂಗಳುಗಳಿಂದ ಸ್ವಚ್ಚ ಕಡಲ ತೀರ – ಹಸಿರು ಕೋಡಿ ಅಭಿಯಾನದ ಅಡಿ ಪ್ಲಾಸ್ಟಿಕ್ ಮುಕ್ತ ಕಡಲ ತೀರವನ್ನಾಗಿ ಮಾರ್ಪಡಿಸುವಲ್ಲಿ ನಿರಂತರವಾಗಿ ಶ್ರಮಿಸುವುದರ ಮೂಲಕ ಎಲ್ಲರಿಗೂ ಮಾದರಿಯಾಗಿದೆ ಎಂದು ಶುಭಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆಯ ಸಾಮಾನ್ಯ ಸಭೆ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಜರುಗಿತು. ಈ ವೇಳೆ ಸಮಗ್ರ ಒಳಚರಂಡಿ ಯೋಜನೆ ಕುರಿತಂತೆ ಗಂಭೀರ ಚರ್ಚೆ ನಡೆಯಿತು. ಪುರಸಭಾ ಸದಸ್ಯ ರಾಘವೇಂದ್ರ ಖಾರ್ವಿ ವಿಷಯ ಪ್ರಸ್ತಾಪಿಸಿ ಖಾರ್ವಿಕೇರಿ, ಮದ್ದುಗುಡ್ಡೆ ಪ್ರದೇಶಗಳು ಪುರಸಭೆಯ 23 ವಾರ್ಡ್‌ಗಳ ಕೊಳಚೆ ನೀರಿನೊಂದಿಗೆ ಬದುಕುವಂತಾಗಿದೆ. ಯೋಜನೆ ಪೂರ್ಣತೆಗೆ ಸರಕಾರ ಈಗ ಅವಕಾಶ ನೀಡಿದ್ದರು ಭೂಸ್ವಾಧೀನತೆ ಗುಮ್ಮ ಮುಂದಿಟ್ಟುಕೊಂಡು ವಿಳಂಬಗೊಳಿಸುವ ಯತ್ನ ಸಲ್ಲ. ಮತ್ತೆ ವಿಳಂಬಗೊಳಿಸಿದ್ದೇ ಆದಲ್ಲಿ ಪುರಸಭೆ ಎದುರು ಕುಳಿತುಕೊಳ್ಳುತ್ತೇವೆ ಎಂದು ಆಕ್ರೋಶ ಹೊರಗೆಡಹಿದರು. ಪುರಸಭಾ ಸದಸ್ಯ ಗಿರೀಶ್ ಜಿ.ಕೆ. ಮಾತನಾಡಿ ನಗರದಲ್ಲಿ ಸಮಗ್ರ ಒಳಚರಂಡಿ ಯೋಜನೆ ಜಾರಿಗೊಂಡು ದಶಕ ಸಂದರೂ ಯೋಜನೆ ಪೂರ್ಣಗೊಂಡಿಲ್ಲ. ಸಮಯ ವಿಳಂಬಗೊಳಿಸದೆ ಯೋಜನೆ ಪೂರ್ಣ ಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನಾಮನಿರ್ದೇಶಿತ ಸದಸ್ಯ ಗಣೇಶ್ ಶೇರುಗಾರ್ ಮಾತನಾಡಿ, ಸಿದ್ದರಾಮಯ್ಯ ಈ ಅವರ ಮೊದಲ ಅವಧಿಯ ಸರಕಾರದಲ್ಲಿ ಯೋಜನೆ ಮಂಜೂರುಗೊಂಡು, ಯಡಿಯೂರಪ್ಪ ಅವರ ಅವಧಿಯಲ್ಲಿ ಅನುಷ್ಠಾನಗೊಂಡು ಮತ್ತೆ ಸಿದ್ದರಾಮಯ್ಯ…
