ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ಜೆಇಇ ಮೈನ್ಸ್ 2025ರ ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಿರೀಶ್ ಪೈ 98.921 ಪರ್ಸಂಟೈಲ್, ನಿಶ್ಚಿತ್ 98.674 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 98.078 ಪರ್ಸಂಟೈಲ್, ಧೀರಜ್ ಜಿ.ಡಿ.97.787ಪರ್ಸಂಟೈಲ್, ಚಿರಂತನ್ 95.866 ಪರ್ಸಂಟೈಲ್, ಶಶಾಂಕ್ 93.722 ಪರ್ಸಂಟೈಲ್, ಪ್ರಸಾದ್ 93.701 ಪರ್ಸಂಟೈಲ್, ಶ್ರದ್ಧಾ 93.155,ಪರ್ಸಂಟೈಲ್, ಲಿಖಿತ್ 90.789 ಪರ್ಸಂಟೈಲ್, ರಿಯಾನ್ 90.563 ಪರ್ಸಂಟೈಲ್, ಅನಿರುದ್ದ್ 90.329 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್ಪ್ರಿನೋರ್ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ. ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಫೆಬ್ರವರಿ 25 ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರಸಕ್ತ ಶೈಕ್ಷಣಿಕ ವರ್ಷದ ಕುಂದಾಪುರದ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಕೆಸರಲ್ಲೊಂದಿನ ಎನ್ನುವ ವಿಶೇಷ ಕಾರ್ಯಕ್ರಮ ಬನ್ನಾಡಿ ಕಂಬಳಗದ್ದೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಮಾತನಾಡಿ, ವಡ್ಡರ್ಸೆ ನಾಡಿಗೆ ಅನೇಕ ಗಣ್ಯರನ್ನು ಕೊಟ್ಟ ಗ್ರಾಮ. ಐತಿಹಾಸಿಕ ಮಹತ್ವ ಹೊಂದಿದ ಬನ್ನಾಡಿ ಕಂಬಳ ಗದ್ದೆಯಲ್ಲಿ ನಮ್ಮ ಸಂಸ್ಥೆಯ ಎನ್.ಎಸ್.ಎಸ್. ಸ್ವಯಂಸೇವಕರು ವೈವಿಧ್ಯಮಯ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಖುಷಿಯ ಸಂಗತಿ. ಗ್ರಾಮದ ಚರಿತ್ರೆಯನ್ನು ಅವಲೋಕಿಸುವುದರ ಜೊತೆಗೆ, ವಿದ್ಯಾರ್ಥಿಗಳು ಊರವರ ಪ್ರೀತಿಗೆ ಪಾತ್ರರಾಗಿರುವುದು ಉಲ್ಲೇಖನೀಯ ಎಂದರು. ಕಂಬಳಗದ್ದೆಯಲ್ಲಿ ನಡೆಯುವ ವಿವಿಧ ಕ್ರೀಡೆಗಳಿಗೆ ಕಂಬಳದ ಕೋಣಗಳಿಗೆ ಆರತಿ ಎತ್ತುವ ಮೂಲಕ ಗೋವಾದ ಓಎನ್ಜಿಸಿಯ ನಿವೃತ್ತ ಚೀಫ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಚಾಲನೆ ನೀಡಿದರು. ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಕೆಸರುಗದ್ದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022 ದಿನಾಂಕ:10-05-2022ರಲ್ಲಿ ನೀಡಲಾದ ಮಾರ್ಗದರ್ಶನಗಳನ್ನು ಸರಿಯಾಗಿ ಕಾರ್ಯಗತಗೊಳಿಸಲು ಹಾಗೂ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಿಗಧಿಪಡಿಸಿದ ಅವಧಿಯೊಳಗೆ ಸಮಾರಂಭವನ್ನು ಮುಕ್ತಾಯಗೊಳಿಸಬೇಕು. ಅಲ್ಲದೇ ವಿಪರೀತವಾಗಿ ಶಬ್ದ ಮಾಲಿನ್ಯ ಹಾಗೂ ಅಕ್ಕ ಪಕ್ಕದವರೆಗೆ ತೊಂದರೆ ಉಂಟಾಗದಂತೆ ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆ ತಯಾರಿಗೆ ಹಾಗೂ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದಲು ಅಡಚಣೆಯಾಗದಂತೆ ಸಾರ್ವಜನಿಕರು ಸಹಕರಿಸಬೇಕು. ಇದರ ಹೊರತಾಗಿಯೂ ಶಬ್ದ ಮಾಲಿನ್ಯದ ಕುರಿತು ದೂರುಗಳು ಸ್ವೀಕೃತವಾದಲ್ಲಿ ಪರಿಸರ (ಸಂರಕ್ಷಣೆ) ಕಾಯಿದೆ 1986 ನಿಯಮ 15 ರಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚೇತನಾ ಪೌಂಡೇಶನ್ ಕರ್ನಾಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ರಿ. ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲ್ಪಡುವ ಶ್ರೀ ಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿಗೆ ಪವಿತ್ರ ದೇವಾಡಿಗ ಆಯ್ಕೆಯಾಗಿರುತ್ತಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 16 ಆದಿತ್ಯವಾರ ಬೆಳಿಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಭವನ ವಿಜಯನಗರ 1ನೇ ಹಂತ ಮೈಸೂರು ಅಲ್ಲಿ ನಡೆಯಲಿರುವುದು. ಅವಳು ಮೂರ್ತಿಮನೆ ಮೊಗೇರಿ ನಾಗರಾಜ್ ದೇವಾಡಿಗ ಹಾಗೂ ಸೀತಾ ದೇವಾಡಿಗ ದಂಪತಿಯ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ ಭಾವೈಕ್ಯ – ವರ್ಷದ ನೆನೆಪು, ದಿ. ಡಾ. ಯಡ್ತರೆ ನರಸಿಂಹ ಶೆಟ್ಟಿ ಶತಮಾನದ ಸಂಸ್ಮರಣೆ ಹಾಗೂ ಯುವ ಬಂಟರ ಸಾಧಕರಿಗೆ ಅಭಿನಂದನ ಕಾರ್ಯಕ್ರಮವು ಇಲ್ಲಿನ ಆರ್. ಏನ್. ಸಭಾಂಗಣದ ಶ್ರೀ ಗಿಳಿಯಾರು ಕುಶಲ ಹೆಗ್ಡೆ ಸಭಾಭವನದಲ್ಲಿ ಫೆ.15 ಶನಿವಾರದಂದು ಸಂಜೆ ನಡೆಯಲಿದೆ. ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಡೆಪ್ಯೂಟಿ ರಿ. ಡಾ. ಬಿ. ವಸಂತ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ರಿ. ನಿರ್ದೇಶಕರಾದ ಬಿ. ಅರುಣ್ ಕುಮಾರ್ ಶೆಟ್ಟಿ ಸಂಸ್ಕರಣೆ ಮಾಡಲಿದ್ದಾರೆ. ಕುಂದಾಪುರದ ಉದ್ಯಮಿ ಎಚ್. ದಯಾನಂದ ಶೆಟ್ಟಿ ಕೃತಿ ಅನಾವರಣ ಮಾಡಲಿದ್ದಾರೆ. ಈ ವೇಳೆ ಕುಂದಾಪುರ ತಾಲೂಕು ಸಮಿತಿ ಬಂಟರ ಯಾನೆ ನಾಡವರ ಮಾತೃಸಂಘದ ಸಂಚಾಲಕರಾದ ಸಂಪತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ, ಶ್ರೀ ದೇವಿಗೆ ಚಂಡಿಕಾ ಹೋಮ ಪೂಜೆ ಮಾಡಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆ. ಬಾಬು ಹೆಗ್ಡೆ, ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಪಂಚಾಯತ್ ಸದಸ್ಯರು ಶಿವರಾಮ್ ಕೃಷ್ಣ ಭಟ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುರುವಿಲ್ಲದ ವಿದ್ಯೆ, ಗುರಿ ಇಲ್ಲದ ಜೀವನ, ಅದು ನಿರರ್ಥಕ ಎಂಬ ಮಾತಿದೆ. ಶಿಕ್ಷಣ ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ತುಂಬಾ ಮುಖ್ಯ ಘಟ್ಟ ಹಾಗೆ ಪ್ರತಿಯೊಬ್ಬರೂ ತಮ್ಮ ಜೀವನದಲ್ಲೊಂದು ಗುರಿಯನ್ನು ಇಟ್ಟುಕೊಳ್ಳಬೇಕು ಹಾಗೂ ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಗುರಿ ಸಾಧನೆ ಹೇಗಿರಬೇಕು ಎಂಬುದನ್ನು ಒಂದು ಜೇಡರ ಹುಳುವಿನ ಕಥೆಯ ಮೂಲಕ ಮಕ್ಕಳಿಗೆ ಮನದಟ್ಟು ಮಾಡಿಸಿದರು. ನಿಮ್ಮೆಲ್ಲರಿಗೂ ಇಂದು ಉತ್ತಮ ರೀತಿಯ ಸಂಸ್ಕಾರಯುತ ಶಿಕ್ಷಣ ಈ ಸಂಸ್ಥೆಯಿಂದ ಸಿಗುತ್ತಿದೆ. ಅದರ ಸದುಪಯೋಗ ಪಡೆದುಕೊಂಡು ಛಲವಂತರಾದಾಗ ಮಾತ್ರ ನೀವು ನಿಮ್ಮ ಗುರಿಯನ್ನು, ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ ಹಾಗಾಗಿ ಇವತ್ತಿನಿಂದಲೇ ನೀವೆಲ್ಲರೂ ನಿಮ್ಮ ಗುರಿಯತ್ತ ಹೆಜ್ಜೆ ಹಾಕಲು ಪ್ರಯತ್ನಿಸಿ ಎಂದು ಲೆಫ್ಟಿನೆಂಟ್ ಕರ್ನಲ್ ಎಂ. ಕೃಷ್ಣ ಶೆಟ್ಟಿ ಅವರು ಹೇಳಿದರು. ಅವರು ಗಣರಾಜ್ಯೋತ್ಸವ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾವನ್ನು ಪ್ರತಿನಿಧಿಸಿ ಸಾಧನೆ ಮಾಡಿದ ಸಿಎಸ್ಎಮ್ ನಿರ್ಭಯ್ ಯು. ಶೆಟ್ಟಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಇವರ ಸಾಧನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಾರದಾ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳು ಅವರವರ ಮನೆಯಂಗಳದಲ್ಲಿ ಬೆಳೆದ ಬಣ್ಣ-ಬಣ್ಣದ ವಿವಿಧ ಹೂವುಗಳನ್ನು ತಂದು ವಿದ್ಯಾ ಸರಸ್ವತಿಯಾದ ತಾಯಿ ಶಾರದೆಗೆ ಭಕ್ತಿಭಾವದಿಂದ ಅರ್ಪಿಸಿದರು. ಕಾರ್ಯಕ್ರಮದ ಉದ್ದಕ್ಕೂ ವಿದ್ಯಾರ್ಥಿಗಳು ಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ, ಮಂಗಳಕರವಾದ ವಾತಾವರಣವನ್ನು ಸೃಷ್ಟಿಸಿದರು. ಸಹಶಿಕ್ಷಕರಾದ ರಾಮಕೃಷ್ಣ ಉಡುಪರು ಶಾಸ್ತ್ರೋಕ್ತವಾಗಿ ಮಂತ್ರಗಳನ್ನು ಪಠಿಸಿ ತಾಯಿ ಶಾರದೆಯ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಕ್ಕಳಿಗೆ ತಾಯಿ ಸರಸ್ವತಿಯ ಮಹಿಮೆ ಮತ್ತು ವಿದ್ಯೆಯ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಂ., ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ್, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಾಯಿ ಶಾರದೆಯನ್ನು ಪೂಜಿಸಿ, “ಉತ್ತಮ ವಿದ್ಯೆ ಹಾಗೂ ಬುದ್ಧಿ ಪ್ರಾಪ್ತಿಯಾಗಲಿ” ಎಂಬ ಮಕ್ಕಳ ಮುಗ್ಧ ಮನಸ್ಸಿನ ಪ್ರಾರ್ಥನೆ, ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಘಟಕಗಳ ವಿವರ:ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲಾಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, 10 ಟನ್ ಸಾಮರ್ಥ್ಯದ ಐಸ್ ಪ್ಲಾಯಂಟ್ / ಕೋಲ್ಡ್ ಸ್ಟೋರೇಜ್ ನಿರ್ಮಾಣ ಹಾಗೂ ಮನರಂಜನಾ ಮಿನುಗಾರಿಕೆ ಘಟಕಗಳಿಗೆ ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
