Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ರಾಜ್ಯದ ನಂ.೧ ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ೨೦೨೪-೨೫ನೇ ಸಾಲಿನ, ೬ರಿಂದ ೯ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆ, ಮೂಡುಬಿದಿರೆಯ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಂತ ೩೨ ಶೈಕ್ಷಣಿಕ ಜಿಲ್ಲೆಗಳ ೧೯೨೪೪ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ೧೫೯೮೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ೬ನೇ ತರಗತಿಗೆ ೧೧೭೯೫, ೭ನೇ ತರಗತಿಗೆ ೧೪೩೮, ೮ನೇ ತರಗತಿಗೆ ೧೮೮೯ ಹಾಗೂ ೯ನೇ ತರಗತಿಗೆ ೮೬೪ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು. ಬೆಳಗಾವಿ ಜಿಲ್ಲೆಯಿಂದ ೫೨೩೭ ವಿದ್ಯಾರ್ಥಿಗಳು, ಬಾಗಲಕೋಟೆ ಹಾಗೂ ವಿಜಯಪುರದಿಂದ ಕ್ರಮವಾಗಿ ೨೭೮೩ ಹಾಗೂ ೧೫೫೪ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಪರೀಕ್ಷಾ ಅರ್ಜಿ ಸಲ್ಲಿಕಾ ವ್ಯವಸ್ಥೆಯು ಕಳೆದ ವರ್ಷದವರೆಗೆ ಕೈಬರಹದಲ್ಲಿ ಸಲ್ಲಿಕೆಯಾಗುತ್ತಿ ದ್ದು, ಪ್ರತಿಭಾನ್ವಿತ ಮಕ್ಕಳನ್ನು ತಲುಪುವ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಆನ್ಲೈನ್ನಲ್ಲಿ ಅರ್ಜಿ ನಮೂನೆಯನ್ನು ಕ್ಯೂಆರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಡ್ತಾಡಿ ಗ್ರಾಮದ ಸಾಧಮ್ಮ ಶೆಡ್ತಿ ಅವರು ನೂರು ವರ್ಷ ಪೂರೈಸಿದ ಅಂಗವಾಗಿ ಅಲ್ತಾರು ದೇವುಬೆಟ್ಟು ವಠಾರದಲ್ಲಿ ಕೀರ್ತಿ ಶೇಷ ಕೊರಗಯ್ಯ ಶೆಟ್ಟಿಯ ಸುಂದರ ವೇದಿಕೆಯಲ್ಲಿ ಜನ್ಮ ಶತಾಬ್ಧಿ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಉಪನ್ಯಾಸಕಿ ರೇಖಾ ವಿ. ಬನ್ನಾಡಿ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಎಚ್. ಧನಂಜಯ ಶೆಟ್ಟಿ, ಕಾಜ್ರಳ್ಳಿ ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ನಿರಂಜ ಹೆಗ್ಡೆ, ಉದ್ಯಮಿ ಸಮಾಜಸೇವಕ ಕೃಷ್ಣಮೂರ್ತಿ ಮಂಜ, ಯಡ್ತಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಕುಟುಂಬಸ್ಥರಾದ ಅಲ್ತಾರು ಜಯರಾಮ್ ಶೆಟ್ಟಿ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಕಲಚೇತನರು, ಆರೋಗ್ಯ ಸಮಸ್ಸೆ ಉಳ್ಳವರು, ತಂದೆ -ತಾಯಿ ಕಳೆದುಕೊಂಡ ವಿದ್ಯಾರ್ಥಿನಿಗೆ ಮತ್ತು ಅಸಾಹಯಕರಿಗೆ ಧನಸಹಾಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಯರಾಮ್ ಶೆಟ್ಟಿ ಅಲ್ತಾರು ಅವರಿಗೆ ́ಕುಟುಂಬ ರತ್ನʼ ಪ್ರಶಸ್ತಿ ಕೊಟ್ಟು ಗೌರವಿಸಲಾಗಿದೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಚೇತನ್ ನೈಲ್ಯಾಡಿ ಮತ್ತು ತಂಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಂಗಭೂಮಿ ಕ್ಷೇತ್ರದಲ್ಲಿ ಲಾವಣ್ಯ ತನ್ನ ಪರಿಪೂರ್ಣ ಸಾಧನೆಯ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಂದಿನ ಕಾಲಘಟ್ಟಕ್ಕೆ ತಕ್ಕಂತೆ ಅನೇಕ ಬದಲಾವಣೆಗಳಿಗೆ ಒಗ್ಗಿಕೊಂಡು ಅಭಿನಯ, ನಾಟಕದ ಆಯ್ಕೆ ಜತೆಗೆ ಹೊಸ ಪ್ರಸ್ತುತಿಗಳನ್ನು ರಂಗಭೂಮಿಗೆ ನೀಡುತ್ತಿರುವುದು ಸಂಸ್ಥೆ ಹೆಗ್ಗಳಿಕೆಯಾಗಿದೆ ಎಂದು ಘಟಪ್ರಭಾ ಜೆ.ಎನ್.ಎಸ್ ಕನ್ಸ್ಟ್ರಕ್ಷನ್ ಆಡಳಿತ ನಿರ್ದೇಶಕ ಎಚ್. ಜಯಶೀಲ ಎನ್. ಶೆಟ್ಟಿ ಹೇಳಿದರು. ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ಸ್ಥಳೀಯ ಕಲಾಸಂಸ್ಥೆ ಲಾವಣ್ಯದ 47ನೇ ವಾರ್ಷಿಕೋತ್ಸವ ಹಾಗೂ ರಂಗಪಂಚಮಿ – 2024 ಐದು ದಿನಗಳ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ನರಸಿಂಹ ಬಿ. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿ ಸ್ವರ್ಣಪದಕ ಪುರಸ್ಕೃತ ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ., ಉದ್ಯಮಿ ಎಚ್. ಜಯಶೀಲ ಎನ್. ಶೆಟ್ಟಿ ಇವರನ್ನು ಅಭಿನಂದಿಸಲಾಯಿತು. ಹಿರಿಯ ರಂಗ ಕಲಾವಿದ, ಚುಟುಕು ಕವಿ ಬಿ. ವಿಠಲದಾಸ್ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಇವರನ್ನು ಸನ್ಮಾನಿಸಲಾಯಿತು. ಲಾವಣ್ಯದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಪಲ್ಸ್ ಪೋಲಿಯೊ ಕಾರ್ಯಕ್ರಮ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಡೆಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಎಂ.ನಾಗೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಪೋಲಿಯೊ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಭಾರತವು ಪೋಲಿಯೊ ಮುಕ್ತ ದೇಶವಾಗಿದೆ. ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೊವನ್ನು ಲಸಿಕೆ ಮೂಲಕ ಹೋಗಲಾಡಿಸಬಹುದು. ಐದು ವರ್ಷದ ಒಳಗಿನ ಪ್ರತಿ ಮಗುವಿಗೆ ಪೋಲಿಯೊ ಲಸಿಕೆಯನ್ನು, ಮಗುವನ್ನು ಪೋಲಿಯೊದಿಂದ ರಕ್ಷಣೆ ಮಾಡಬಹುದು ಎಂದರು. ರೋಟರಿಯ ಪಲ್ಸ್ ಪೋಲಿಯೊ ಝೋನಲ್ ಕೋ-ಆರ್ಡಿನೇಟರ್ ಪ್ರದೀಪ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮೂಕಾಂಬಿಕಾ ರಸ್ತೆ ಬೈಂದೂರು ರೈಲು ನಿಲ್ದಾಣವು ಕರಾವಳಿ ಕರ್ನಾಟಕದ ಪ್ರಮುಖ ನಿಲ್ದಾಣಗಳಲ್ಲಿ ಒಂದಾಗಿದ್ದು, ಮೂಕಾಂಬಿಕಾ ರಸ್ತೆ ಬೈಂದೂರು ನಿಲ್ದಾಣದಲ್ಲಿ ದಾದರ್-ತಿರುನೆಲ್ವೆಲಿ ರೈಲು ನಿಲುಗಡೆಯಿಂದ ಬೈಂದೂರು ಕ್ಷೇತ್ರದ ಯಾತ್ರಾರ್ಥಿಗಳಿಗೆ ಮಧುರೈ ಮೀನಾಕ್ಷಿ, ಗುರುವಾಯೂರ್ ಮತ್ತು ಶಬರಿಮಲೈ ಅಯ್ಯಪ್ಪ ದೇವಸ್ಥಾನದಂತಹ ಇತರ ಯಾತ್ರಾ ಸ್ಥಳಗಳ ದರ್ಶನಕ್ಕೆ ಅನುಕೂಲವಾಗಲಿದೆ ಹಾಗೂ ಅಲ್ಲಿನ ಭಕ್ತಾದಿಗಳಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬರಲು ಅನುಕೂಲವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡು ರಾಜ್ಯದ ಭಕ್ತರು ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡುವುದರಿಂದ ಕೇರಳ ಹಾಗೂ ಮುಂಬೈಗೆ ಹೋಗುವ ಹೆಚ್ಚಿನ ರೈಲುಗಳಿಗೆ ಇಲ್ಲಿ ನಿಲುಗಡೆ ನೀಡಲಾಗುತ್ತಿದೆ. ದಾದರ್-ತಿರುನೆಲ್ವೆಲಿ ಎಕ್ಸ್ ಪ್ರೆಸ್ ರೈಲು ಸಂಖ್ಯೆ 22629/22630 ರೈಲನ್ನು ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣದಲ್ಲಿ ನಿಲುಗಡೆಗೆ ನೀಡಿದ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ‘ಕೆರೆಬೇಟೆ’ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ. ಇದೀಗ ಸಿನಿಮಾ ತಂಡ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚಿಗಷ್ಟೇ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಸಿನಿಮಾದ ಬಹುನಿರೀಕ್ಷಿಯ ಟೈಟಲ್ ಟ್ರ್ಯಾಕ್ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿದೆ. ವಿಶೇಷ ಎಂದರೆ ಈ ಹಾಡನ್ನು ಶಾಸಕ ಹಾಗೂ ಮಾಜಿ ಹೋಂ ಮಿನಿಸ್ಟರ್ ಆರಗ ಜ್ಞಾನೇಂದ್ರ ಹಾಗೂ ಸಂಸದರಾದ ಬಿ ವೈ ರಾಘವೇಂದ್ರ ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಟೈಟಲ್ ಟ್ರ್ಯಾಕ್ ರಿಲೀಸ್ ಕಾರ್ಯಕ್ರಮದಲ್ಲಿ ಕೆರೆಬೇಟೆ ಚಿತ್ರದ ಹಾಡು ಅದ್ದೂರಿಯಾಗಿ ಬಿಡುಗಡೆಯಾಯಿತು. ‘ಕೆರಿಬ್ಯಾಟಿ ಶುರುವಾತು…’ ಎನ್ನುವ ಈ ಟೈಟಲ್ ಟ್ರ್ಯಾಕ್ ಅನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಂತ್ರಜ್ಞಾನ ಹಾಗೂ ಆಧುನಿಕತೆಯ ಕಾರಣಗಳಿಂದಾಗಿ ಸುಲಭ ವ್ಯವಸ್ಥೆಗಳತ್ತ ಮಾನವರು ಕೇಂದ್ರೀಕೃತರಾಗುತ್ತಿರುವುದರಿಂದ, ನೀರನ್ನು ಹೀರಿಕೊಳ್ಳುವ ನೈಸರ್ಗಿಕ ವ್ಯವಸ್ಥೆಯಿಂದ ನಾವು ದೂರವಾಗುತ್ತಿದ್ದೇವೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಶನಿವಾರ ಸಂಜೆ ಬೆಂಗಳೂರಿನ ಫೈನ್ ಪ್ಲಾಂಟ್ ರಿಸರ್ವ್ಯಯರ್ ಕಂಪೆನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ʼ ಫೈನ್ ಪ್ಲಾಂಟ್ ʼ ಮಾರುಕಟ್ಟೆ ಬಿಡುಗಡೆ, ವಿದ್ಯಾರ್ಥಿಗಳಿಗೆ ಪ್ಲಾಂಟ್ ವಿತರಣೆ ಹಾಗೂ ʼಹೊಸ ಪುಟʼ ಅಪ್ಲಿಕೇಶನ್ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಸ್ತೆಗಳ, ಡ್ರೈನೇಜ್ಗಳು, ನೆಲಹಾಸುಗಳು ಕಾಂಕ್ರೀಟ್ಮಯವಾಗಿರುವುದರಿಂದ ನಮ್ಮ ಪಾದಗಳಿಗೆ ನೈಸರ್ಗಿಕ ಮಣ್ಣುಗಳೇ ಸ್ಪರ್ಶವಾಗುತ್ತಿಲ್ಲ. ಬದಲಾವಣೆ ಕಾರಣಗಳಿಂದಾಗಿ ನೀರನ್ನು ಹೀರಿಕೊಳ್ಳುವ ವ್ಯವಸ್ಥೆಯೇ ಈ ಭೂಮಿಯಲ್ಲಿ ಇಲ್ಲದಂತಾಗಿದೆ. ಮಾನವ ಸೃಷ್ಟಿಯಿಂದ ಆಗಿರುವ ಸಮಸ್ಯೆಗಳ ನಿವಾರಣೆಗೆ ಈ ವಿನೂತನವಾದ ಸಂಶೋಧನೆ ನಾಂದಿ ಹಾಡಿದಂತಿದೆ. ಪ್ಲಾಸ್ಟಿಕ್ ನಿರ್ಮೂಲನೆ, ಪರಿಸರ ರಕ್ಷಣೆ ಹಾಗೂ ಹಸಿರು ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸುವ ತುರ್ತು ಅಗತ್ಯವಿದೆ. ಜಲಮೂಲ ನಾಶವಾದಾಗ, ನಾವು ಆತಂಕ ಪಡುತ್ತೇವೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಗೆ ಲಯನ್ಸ್ ಜಿಲ್ಲೆ 317 ಸಿ ಯ ರಾಜ್ಯಪಾಲರಾದ ಡಾ. ನೇರಿ ಕರ್ನೆಲಿಯೋ ಅವರ ಅಧಿಕೃತ ಭೇಟಿ ಕಾರ್ಯಕ್ರಮ ಫಿಲೋಮಿನಾ ಕಮರ್ಷಿಯಲ್ ಹಾಲ್ ವಡೇರಹೋಬಳಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾವೈಕ್ಯ ಕಾರ್ಯಕ್ರಮದ ರೂವಾರಿ ಸಂಘಟನಾ ಚತುರ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಜಿಲ್ಲಾ ಗವರ್ನರ್ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ವಸಂತರಾಜ್ ಶೆಟ್ಟಿ ಮಾತನಾಡಿ ಭಾವೈಕ್ಯ ಬಂಟರ ಮಹಾಸಮಾಗಮ ಕಾರ್ಯಕ್ರಮ ಒಂದು ಮಾದರಿ ಕಾರ್ಯಕ್ರಮವಾಗಿ ಮಾಡಿ ತೋರಿಸುವಲ್ಲಿ ನಿತ್ಯಾನಂದ ಶೆಟ್ಟಿಯವರ ಪರಿಶ್ರಮ ಅಪಾರ. ಅವರು ಕಳೆದ ಒಂದುವರೆ ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಸಮಾಜ ಸೇವೆ ಎಲ್ಲಾ ಸಂಘ-ಸಂಸ್ಥೆಗಳಿಗೂ ಮಾದರಿಯಾದದು. ಅವರ ನಿಸ್ವಾರ್ಥ ಸೇವಾ ಮನೋಭಾವ ಇನ್ನೂ ಹೀಗೆ ಮುಂದುವರೆಯಲಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ನ ವಿಸ್ತರಣಾಧಿಕಾರಿ ಅರುಣ್ ಕುಮಾರ್ ಹೆಗ್ಡೆ, ಮಾಜಿ ಜಿಲ್ಲಾ ಗವರ್ನರ್ ಜಯಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೃಜಶೀಲತೆಯನ್ನು ಸೃಷ್ಟಿಸುವ ಕಥೆ ಬರೆಯುವುದು ಭಾವನೆಗಳನ್ನು ಅಭಿವ್ಯಕ್ತಿಸುವ ಉತ್ತಮ ವೇದಿಕೆ. ಕಥೆ ಓದುವುದು ಕಲ್ಪನಾ ಲೋಕದಲ್ಲಿ ವಿಹರಿಸುವ ಅನುಭವ ನೀಡುತ್ತದೆ. ಕಥೆ ರಚನೆಗೆ ವಸ್ತುಗಳ ಕೊರತೆ ಇಲ್ಲ, ಓದುವ ಹವ್ಯಾಸ, ಬರೆಯುವ ಆಸಕ್ತಿ, ಸೃಜನಶೀಲ ಮನಸು ಉತ್ತಮ ಕಥೆಗಾರರನ್ನಾಗಿ ರೂಪಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರು, ಲೇಖಕರು ಆಗಿರುವ ಡಾ. ಉಮೇಶ ಪುತ್ರನ್ ಹೇಳಿದರು. ಜನಪ್ರತಿನಿಧಿ ಪ್ರಕಾಶನ ಕುಂದಾಪುರ ಮತ್ತು ವೀರಲೋಕ ಪ್ರಕಾಶನ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ಕಾಲೇಜು ರಸ್ತೆಯ ರೋಟರಿ ಕುಂದಾಪುರ ಮಿಡ್‌ಟೌನ್ ಸಭಾಂಗಣದಲ್ಲಿ ನಡೆಯಲಿರುವ ಎರಡು ದಿನಗಳ ’ದೇಸಿ ಜಗಲಿ ಕಥಾ ಕಮ್ಮಟ’ವನ್ನು ಮಾಸ್ತಿಯವರ ಕಥೆ ಓದುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ನಮ್ಮ ಮೆದುಳಿನ ಎಡಭಾಗ ವಿಶ್ಲೇಷಣೆಗೆ ಒತ್ತು ನೀಡುತ್ತದೆ. ಮೆದುಳಿನ ಬಲಭಾಗ ಸೃಜನಶೀಲತೆ, ಭಾವನೆ, ಕಲ್ಪನೆಗಳ ಹುಟ್ಟು ಹಾಕುತ್ತದೆ. ಭಾವನೆಗಳಿಗೆ ಅರ್ಥ ಕಲ್ಪಿಸಲು ಸಹಕರಿಸುತ್ತದೆ. ಹೊಸ ಹೊಸ ಚಿಂತನೆ, ಆಲೋಚನೆಗಳು ಕಥೆಗಳ ಹುಟ್ಟಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರಳು ಹಾಕಲು ಬಂದ ಟಿಪ್ಪರ್ ಮನೆಯ ಅಂಗಳದಲ್ಲಿ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಅಲ್ಲಿಯೇ ನಿಂತಿದ್ದ ರಾಘವೇಂದ್ರ ಆಚಾರ್ಯ(42) ಅವರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ತಂದೆಯ ತಿಥಿಯ ದಿನವೇ ದಿ. ರಾಮಕೃಷ್ಣ ಆಚಾರ್ಯ ಏಕೈಕ ಪುತ್ರ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಕಾಳಾವರದಲ್ಲಿ ನಡೆದಿದೆ. ಕೋಟದಲ್ಲಿ ಗ್ಲಾಸ್ ಅಂಡ್ ಪ್ಲೈವುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಮರದ ಕೆಲಸ, ಕಬ್ಬಿಣ ಕೆಲಸ ಹಾಗೂ ಇಂಜಿನ್ ರಿಪೇರಿ ಮೋಟಾರ್ ರಿಪೇರಿ ಮಾಡುತ್ತಿದ್ದರು. ತನ್ನ ತಂದೆಯ ತಿಥಿ ಕಾರ್ಯ ಮುಗಿಸಿದ ಬಳಿಕ ಮನೆಯ ಕೆಲಸಕ್ಕೆಂದು ಒಂದು ಲೋಡ್ ಮರಳು ತರಿಸಿದ್ದರು. ಈ ಸಂದರ್ಭ ಮರಳು ತುಂಬಿದ ಟಿಪ್ಪರ್ ರಿವರ್ಸ್ ಬರುತ್ತಿದ್ದ ವೇಳೆ ಮನೆಯ ಗೇಟಿನ ಪಕ್ಕದಲ್ಲಿ ನಿಂತಿದ್ದ ರಾಘವೇಂದ್ರ ಆಚಾರ್ಯ ಅವರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದು ಗೇಟಿನ ಪಿಲ್ಲರ್ ಮತ್ತು ಟಿಪ್ಪರ್ ನ ಹಿಂದುಗಡೆಯ ಕಾಂಪೌಂಡ್ ನಡುವೆ ಸಿಕ್ಕಿ ತಲೆ ಒಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಘವೇಂದ್ರ ಅವರ ಸಾವಿನಿಂದಾಗಿ ಮನೆ…

Read More