Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಶ್ರೀ ಇಂದುಧರ ದೇವಸ್ಥಾನ ಇದರ 81ನೇ ವರ್ಷದ ಅಧ್ಯಕ್ಷರಾಗಿ ಗುರುರಾಜ್‌ ಗಂಗೊಳ್ಳಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ  ಸುದೀಪ್ ಜಿ.ಎನ್., ಗೌರವಾಧ್ಯಕ್ಷರಾಗಿ ಮಂಜುನಾಥ ಜಿ.ಟಿ., ಕಾರ್ಯದರ್ಶಿಯಾಗಿ ವರದರಾಜ್ ಜಿ.ಟಿ., ಜೊತೆ ಕಾರ್ಯದರ್ಶಿಯಾಗಿ ಅಶ್ವತ್ ಬಿ., ಆಡಳಿತ ಮೊಕ್ತೇಸರರಾಗಿ ಸಂಜೀವ ಜಿ.ಟಿ., ಖಜಾಂಚಿ ಕರುಣಾಕರ ಎಂ., ಲೆಕ್ಕ ಪರಿಶೋಧಕರು ಕೃಷ್ಣ ಎಸ್. ಮತ್ತು ನರಸಿಂಹ ಎಂ.ಜಿ., ಗೌರವ ಸಲಹೆಗಾರರಾಗಿ ಅಶೋಕ್ ಎನ್.ಡಿ. ಮತ್ತು ಅಯ್ಯಪ್ಪ ಯಾನೆ ಮಹೇಶ್‌, ಅರ್ಚಕರಾಗಿ ಕೃಷ್ಣ ಜಿ.ಟಿ., ಅರುಣ್ ಕುಮಾರ್ ಮತ್ತು ಅಭಿನಂದನ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನುಕ್ಷಣವು ವಿದ್ಯಾರ್ಥಿಯು ತನ್ನನ್ನು ತಾನು ಬದಲಾಗುತ್ತಿರುವ ವಾತಾವರಣಕ್ಕೆ ಅನುಗುಣವಾಗಿ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬೇಕೆಂದು ಉಡುಪಿ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ್ ಭಟ್ ವಿದ್ಯಾರ್ಥಿಗನ್ನುದ್ದೇಶಿಸಿ ಸಲಹೆ ನೀಡಿದರು. ಅವರು ಕುಂದಾಪುರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತುಗಳ್ನನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ಅಂತಿಮ ಬಿ.ಕಾಂ. ವಿದ್ಯಾರ್ಥಿ ಪ್ರತಿನಿಧಿಗಳಾದ ಓಂಕಾರ್ ಮತ್ತು ರಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ. ಕಾರ್ಯಗಾರವನ್ನು ಸಂಯೋಜಿಸಿ, ಅತಿಥಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಸ್‌ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಗೆ ಕುಂದಾಪುರ ಕಡೆಯಿಂದ ಬಂದ ಪಿಕ್‌ ಅಪ್‌ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ಮರವಂತೆ ಗ್ರಾಮದ ರಾ.ಹೆ-66ರಲ್ಲಿ ನಡೆದಿದೆ. ಘಟನೆಯಲ್ಲಿ ಯಳಜಿತದ ಬಾಬು ಎಂಬುವವರ ಪತ್ನಿ ಲಕ್ಷ್ಮೀ (45) ಅವರು ಮೃತಪಟ್ಟಿದ್ದಾರೆ. ರಾ.ಹೆ-66ರಲ್ಲಿ ಭಾನುವಾರ ಮಧ್ಯಾಹ್ನ ತನ್ನ ಪತಿಯೊಂದಿಗೆ ರಸ್ತೆ ದಾಟಿ ಪುಟ್‌ ವಾಕ್‌ ಮೇಲೆ ಬಸ್‌ ನಿಲ್ದಾಣದ ಎದುರು ನಿಂತಿದ್ದ ವೇಳೆ ನಿಯಂತ್ರಿಣ ತಪ್ಪಿದ ಪಿಕ್‌ಅಪ್‌ ವಾಹನವು ಸೀದಾ ಪುಟ್‌ ವಾಕ್‌ ಏರಿ ಮಹಿಳೆಗೆ ಡಿಕ್ಕಿಯಾಗಿ ಚರಂಡಿಗಿಳಿದಿದೆ. ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮೀ ಅವರ ಬೆನ್ನಿಗೆ, ಸೊಂಟಕ್ಕೆ ಹಾಗೂ ಎಡಕಾಲಿಗೆ ರಕ್ತ ಗಾಯವಾಗಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆಂಗು ಬೆಳೆಗೆ ಕಪ್ಪು ಹುಳ ಬಾಧೆ ರೋಗ ತಗುಲಿದ್ದು, ತೆಂಗು ಬೆಳೆಗಾರರಿಗೆ ಪರಿಹಾರ ನೀಡಿಕೆ, ರೋಗ ನಿವಾರಣಾ ಕ್ರಮಗಳು ಹಾಗೂ ತೆಂಗು ಬೆಳೆಗಾರರ ಕುಂದು ಕೊರತೆ ಹಾಗೂ ಅವರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತಾಗಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸರ್ಕಾರವನ್ನು ಪ್ರಶ್ನೆ ಮಾಡಿದರು. ಶಾಸಕರ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ರಾಜ್ಯದಲ್ಲಿ 41,368 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳದ ಬಾಧೆ ಕಂಡು ಬಂದಿದ್ದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮೂವತ್ತು ಮುಡಿ ಮತ್ತು ಕನ್ನಡ ಕುದ್ರು ಗ್ರಾಮಗಳಲ್ಲಿ 20 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳುವಿನ ಬಾಧೆ ರೋಗ ಪ್ರಕರಣ ಗಳು ಕಂಡು ಬಂದಿರುತ್ತದೆ ಎಂದಿದ್ದಾರೆ. ಈ ಬಗ್ಗೆ ಮಾತನಾಡಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮದಲ್ಲಿ ಕೊಂಕಣಿ ಖಾರ್ವಿ ಸಮುದಾಯದವರು ಪ್ರತಿ ವರ್ಷ ಆಚರಿಸುತ್ತಿರುವ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಗಂಗೊಳ್ಳಿ, ಗುಜ್ಜಾಡಿ, ಕಂಚುಗೋಡು, ಹೊಸಪೇಟೆ, ತ್ರಾಸಿ ಮೊದಲಾದ ಕಡೆಗಳಿಂದ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಸಹಸ್ರಾರು ಜನರಿಂದ ಬಣ್ಣಗಳ ಎರಚಾಟ, ಕುಣಿತ, ಗಾನಬಜಾನ ಗಂಗೊಳ್ಳಿ ಪೇಟೆಯುದ್ದಕ್ಕೂ ಕಂಡು ಬಂದಿತು. ಯುವಕ ಯುವತಿಯರು ಹಿರಿಯರು ಮಕ್ಕಳು ಎಂಬ ಭೇದ ಭಾವಗಳಿಲ್ಲದೆ ಪರಸ್ಪರ ಬಣ್ಣ ಹಚ್ಚಿಕೊಂಡು ಡಿಜೆ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಗುಂಪುಗಳನ್ನು ಮಾಡಿಕೊಂಡ ಯುವಕ ಯುವತಿಯರು ತಮ್ಮದೇ ವಿಶಿಷ್ಟ ಧಿರಿಸಿನ ಮೂಲಕ ಮೆರವಣಿಗೆಯಲ್ಲಿ ಸಾಗಿಬಂದು ನೋಡುಗರ ಗಮನ ಸೆಳೆದರು. ವಿವಿಧೆಡೆಗಳಿಂದ ಆಗಮಿಸಿದ ಹೋಳಿ ಪಂಗಡಗಳು ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದ ಬಳಿ ಸೇರಿ ಬೃಹತ್ ಹೋಳಿ ಉತ್ಸವ ನಡೆಸಿದರು. ಸಂಪ್ರದಾಯದಂತೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪುಷ್ಕರಣಿಯಲ್ಲಿ ಸ್ನಾನ ಮಾಡುವ ಮೂಲಕ ಹೋಳಿ ಮೆರವಣಿಗೆ ಸಂಪನ್ನಗೊಂಡಿತು. ಒಟ್ಟಿನಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೊಂಕಣಿ ಖಾರ್ವಿ ಸಮಾಜದವರು ಹೋಳಿ ಹಬ್ಬವನ್ನು ವರ್ಷಂಪ್ರತಿ ಅದ್ದೂರಿಯಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಕೊಂದು ನಿಯಂತ್ರಣ ತಪ್ಪಿ ಕಂಪೌಂಡ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಮೀಪದ ಮೊವಾಡಿ ಸಮೀಪ ಸಂಭವಿಸಿದೆ. ಮೊವಾಡಿ ನಿವಾಸಿ ಕೃಷ್ಣ ಮೊಗವೀರ ಅವರ ಪುತ್ರ ನಿತಿನ್ ಮೊಗವೀರ (26) ಮೃತ ಯುವಕ. ಮೃತ ನಿತಿನ್ ಭಾನುವಾರ ರಾತ್ರಿ 8 ಗಂಟೆಯ ಸುಮಾರಿಗೆ ತನ್ನ ತಂಗಿಯನ್ನು ಬೈಕಿನಲ್ಲಿ ಕುಂದಾಪುರದ ಬಸ್ ಸ್ಟ್ಯಾಂಡ್‌ಗೆ ಬಿಟ್ಟು ಮನೆಗೆ ಹಿಂತಿರುಗುವಾಗ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್‌ಕಾ‍ರ್ಸ್‌ ಕಾಲೇಜಿನ ಆಶ್ರಯದಲ್ಲಿ ಜರುಗಿದ  ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಹಿಳಾ ಮತ್ತು ಪುರುಷರ ಎರಡು ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು.  ಮಹಿಳಾ ತಂಡವು ಒಟ್ಟು 6 ಚಿನ್ನ, 2 ಬೆಳ್ಳಿ ಪದಕ ಪಡೆದು ಒಟ್ಟು 58 ಅಂಕ ಪಡೆದು ಈ ಸಾಧನೆ ಮೆರೆದಿದೆ. ಪುರುಷರ ವಿಭಾಗವು 4 ಚಿನ್ನ, 4 ಬೆಳ್ಳಿ, 1ಕಂಚಿನ ಪದಕ ಗಳಿಸಿ ಒಟ್ಟು 55 ಅಂಕಗಳೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. 55ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕಾಲೇಜಿನ ಪ್ರಶಾಂತ್ ”ಬೆಸ್ಟ್ ಲಿಫ್ಟರ್’ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು. ಪುರುಷರ ವಿಭಾಗದಲ್ಲಿ ಪ್ರಶಾಂತ್, ಸಂತೋಷ್, ಪ್ರತ್ಯೂಶ್, ಜೋಸುವ ರಾಜ್‌ಕುಮಾರ್ ಚಿನ್ನದ ಪದಕ ಪಡೆದರೆ, ನಾಗರಾಜ್, ನಾಗೇಂದ್ರ ಅಣ್ಣಪ್ಪ, ದರ್ಶನ್, ಶಶಾಂಕ್ ಬೆಳ್ಳಿ ಪದಕ ಪಡೆದರು. ಮಹಿಳಾ ವಿಭಾಗದಲ್ಲಿ ಶ್ರಾವ್ಯ, ಸೀಮಾ, ಅನುಷಾ, ತನುಷಾ, ವಿತಶ್ರೀ, ದಿವ್ಯಾ ಚಿನ್ನದ ಗಳಿಸಿದರೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊಂಕಣಿ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ಕರಾವಳಿ ಶಾಸಕರ ನಿಯೋಗ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಸಚಿವರನ್ನು ಭೇಟಿಯಾಗಿ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವುದು ಇದು ಅಭಿವೃದ್ಧಿ ದೃಷ್ಟಿಯಿಂದ ಅವಶ್ಯಕವೆಂದು ಸಂಸದರು ಮತ್ತು ಶಾಸಕರು ಸಚಿವಗೆ ಮನವರಿಕೆ ಮಾಡಿದ್ದು, ಪ್ರಸ್ತಾಪವನ್ನು ಸರಕಾರದ ಮುಂದಿರಿಸುವುದಾಗಿ ತಿಳಿಸಿದ್ದಾರೆ. ಸಂಸದರೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೂಳೆ, ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡಿದೆ. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು ಉತ್ತಮ. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ…

Read More

ಕುಂದಾಪ್ರ ಟಡಾಟ್‌ ಕಾಂ ಸುದ್ದಿ.ಕುಂದಾಪುರ: ಸರ್ಜನ್ ಆಸ್ಪತ್ರೆ ಕೋಟೇಶ್ವರದಲ್ಲಿ ವಿಶ್ವ ಮೂತ್ರಪಿಂಡದ ದಿನಾಚರಣೆಯನ್ನು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನವರು ನಡೆಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಡಾ. ವಿಶ್ವೇಶ್ವರ ರಾವ್ ಸರ್ಜನ್, ಡಾ.ವಿಲಾಸ್ ರಾವ್ ಸರ್ಜನ್, ಮಾಲತಿ ಮತ್ತು ಲಲಿತಾ ನರ್ಸಿಂಗ್ ಸೂಪರಿಂಟೆಂಡೆಂಟ್, ಸರ್ಜನ್ ಆಸ್ಪತ್ರೆ ಕೋಟೇಶ್ವರ ಹಾಗೂ ಹಿರಿಯ ವಯಸ್ಕರು, ಕೀರ್ತನ ಹಾಗೂ ರಕ್ಷಿತಾ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಉಪನ್ಯಾಸಕರು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 3 ನೇ ಸೆಮಿಸ್ಟರ್ ಬಿಎಸ್ ಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಮೂತ್ರಪಿಂಡದ ಕಾಯಿಲೆಗಳ ನಿರ್ವಹಣೆ ಹಾಗೂ ತಡೆಗಟ್ಟುವಿಕೆ,ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು ಡಾ. ವಿಶ್ವೇಶ್ವರ ರಾವ್ ಅವರು ಮೂತ್ರಪಿಂಡದ ಕಾಯಿಲೆಯ ಆರಂಭಿಕ ಪತ್ತೆ ಮತ್ತು ನಿರ್ವಹಣೆಯ ಬಗ್ಗೆ ತಿಳಿಸಿದರು . ಕಾರ್ಯಕ್ರಮವನ್ನು ಆಯೇಷಾ ರಫೀದ ನಿರೂಪಸಿ, ಅಂಕಿತ ಸ್ವಾಗತಿಸಿದರು,

Read More