Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ಹಾಗೂ ಆಪ್ತ ಸಮಾಲೋಚನೆ, ಅಗತ್ಯ ತುರ್ತು ಸೇವೆಗಳನ್ನು ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದ ಆವರಣದಲ್ಲಿ  24*7ರಂತೆ ಒದಗಿಸಲಾಗುತ್ತಿದೆ. ತುರ್ತು ಸೇವೆಗಾಗಿ ಸರಕಾರವು ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದು ಸದರಿ ವಾಹನಕ್ಕೆ ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನಿರೂಪಾಧಿಕಾರಿ ಅನುರಾಧ ಹಾದಿಮನಿ, ಕಛೇರಿ ಅಧೀಕ್ಷಕರು, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರಿನಲ್ಲಿ ಮೊದಲ ಭಾರಿಗೆ ನೂತನ ಮಾದರಿಯ ಬಸ್ಸುಗಳನ್ನು ಪರಿಚಯಿಸಿದ ಏರೋ ಬಸ್‌ (Aero bus) ಸಂಸ್ಥೆ ಇದೀಗ ಹೊಸತಾಗಿ ನಾಲ್ಕು ಬಸ್ಸುಗಳನ್ನು ಗ್ರಾಹಕರ ಸೇವೆಗೆ ಒದಗಿಸಿಕೊಟ್ಟಿದೆ. ಬಸ್ಸಿನಲ್ಲಿ ಶೌಚಾಲಯ ಸಹಿತ ಸೇವೆ ಹೊಂದಿದ್ದು ಗ್ರಾಹಕರಿಗೆ ಅನುಕೂಲಕರವಾಗಿದೆ. ಏರೋ ಬಸ್‌ ಸಂಸ್ಥೆಯು ಆರಂಭಗೊಂಡು ಒಂದು ವರ್ಷದಲ್ಲೇ ಉದ್ಯಮ ವಿಸ್ತರಿಸಿಕೊಂಡಿದ್ದು, ಒಟ್ಟು ಆರು ಬಸ್ಸುಗಳು ಬೈಂದೂರು – ಬೆಂಗಳೂರು ಮಾರ್ಗದಲ್ಲಿ ಕಾರ್ಯಾಚರಿಸಲಿದೆ. ನೂತನ ಬಸ್ಸುಗಳನ್ನು ಲೋಕಾರ್ಪಣೆಗೊಳಿಸಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಬೈಂದೂರು ಪ್ರವಾಸೋದ್ಯಮ ಅಭಿವೃದ್ಧಿಗೆ ವಿವಿಧ ಯೋಜನೆಗಳು ಜಾರಿಯಲ್ಲಿರುವಾಗ ಯುವ ಉದ್ಯಮಿಗಳಿಬ್ಬರು ಜೊತೆಗೂಡಿ ಹೊಸ ಮಾದರಿಯ ಬಸ್‌ ಸೇವೆ ಆರಂಭಿಸಿದ್ದಾರೆ. ಬೆಂಗಳೂರು – ಬೈಂದೂರು ಸಂಪರ್ಕಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಟೂರ್‌ ಪ್ಯಾಕೇಜ್‌ ಆರಂಭಿಸುವ ಯೋಜನೆ ಹೊಂದಿರುವುದು ಶ್ಲಾಘನೀಯ ಎಂದರು. ಈ ವೇಳೆ ಏರೋ ಬಸ್‌ ಸಂಸ್ಥೆಯ ಪಾಲುದಾರರಾದ ಕಿಶನ್‌ ಬೈಂದೂರು, ಜಿತೇಶ್‌ ಪೂಜಾರಿ ಬೆಳಗಾವಿಯ ಎಂ.ಜಿ ಆಟೋಮೋಟಿವ್‌ ಆಪರೇಷನ್‌ ಹೆಡ್‌ ಪ್ರಕಾಶ್‌ ವರ್ಮಾ, ಆಪರೇಷನ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ. ಪ್ರೀತಿ ಸೌಹಾರ್ದತೆಗಾಗಿ ನಾವು ಜೀವನದುದ್ದಕ್ಕೂ ಶ್ರಮಿಸಬೇಕು ಎಂದು  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ’30ನೇ ಆಳ್ವಾಸ್ ವಿರಾಸಾತ್’ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವದ ಅಂಗವಾಗಿ ರತ್ನಾಕರವರ್ಣಿ ವೇದಿಕೆಯಲ್ಲಿ ಬುಧವಾರ ಅವರು ಉಪನ್ಯಾಸ ನಿಡಿದರು. ಜಾನಪದ ಕಲೆಗಳ ವೈವಿಧ್ಯತೆಯನ್ನು ವಿದ್ಯಾರ್ಥಿಗಳು ಅಪ್ಪಿಕೊಳ್ಳಬೇಕು. ದೇಶದ ಕಲೆಯನ್ನು ಪ್ರೀತಿಸಬೇಕು ಎಂದರು. ಶುಚಿತ್ವವನ್ನು ಬಿಟ್ಟರೆ ಬದುಕೇ ಇಲ್ಲ. ಶುಚಿತ್ವ ಕೇವಲ ಮಾತಿಗೆ, ಬರಹಕ್ಕೆ ಮೀಸಲಾಗಬಾರದು. ನಮ್ಮ ಜೀವನದಲ್ಲಿ ಅಂತರ್ಗತವಾಗಬೇಕು. ಇದರ ಜೊತೆಗೆ ಮಣ್ಣು ಗಾಳಿ ನೀರು ಆಕಾಶವನ್ನು ರಕ್ಷಿಸುವುದು ನಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರ ಆಯೋಜಿಸಿದ ರಾಷ್ಟ್ರೀಯ ಕಲೋತ್ಸವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ  ಏಕಪಾತ್ರಾಭಿನಯ ವಿಭಾಗದಲ್ಲಿ ಸ್ವಾತಂತ್ರ ಸೇನಾನಿ, ಕ್ರಾಂತಿವೀರ ಶ್ರೀ ಭಗತ್ ಸಿಂಗ್ ಅವರ ಪಾತ್ರವನ್ನು ಅಭಿನಯಿಸಿ ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಏಕಾಹ ಅಖಂಡ ಭಜನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ಆರಂಭವಾಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆ ಬಳಿಕ ಏಕಾಹ ಭಜನೆ ದೀಪ ಸ್ಥಾಪನೆಯ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಜಿ. ಮೋಹನದಾಸ ಭಟ್, ಜಿ. ಪ್ರದೀಪ ಭಟ್ ಮತ್ತು ತಾಂತ್ರಿಕ ಜಿ. ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನಗಳು ಜರಗಿತು. ದೇವಸ್ಥಾನದ ಆಡಳಿತ ಮಂಡಳಿ ಉಪಾಧ್ಯಕ್ಷ ಜಿ. ರಾಧಾಕೃಷ್ಣ ನಾಯಕ್ ದೀಪ ಪ್ರಜ್ವಲನೆ ಮಾಡಿ ಏಕಾಹ ಭಜನೆಗೆ ಚಾಲನೆ ನೀಡಿದರು. ಮಧ್ಯಾಹ್ನ ಶ್ರೀ ದೇವರಿಗೆ ವಿಶೇಷ ಪೂಜೆ, ವಿರಾಟರೂಪ ದರ್ಶನ, ಸಂಜೆ ಮಕ್ಕಳ ಉತ್ಸವ ಮತ್ತಿತರ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಡಾ. ಕಾಶೀನಾಥ ಪೈ, ಜಿ. ಗೋವಿಂದ್ರಾಯ ಆಚಾರ್ಯ, ಯು. ಸುರೇಶ ಪೈ, ಬಿ. ವಾಸುದೇವ ಪಡಿಯಾರ್, ಜಿ. ರಾಮಚಂದ್ರ ಪೈ, ಬಿ. ರಾಘವೇಂದ್ರ ಪೈ, ದೇವಸ್ಥಾನದ ವ್ಯವಸ್ಥಾಪಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ ಇಲಾಖೆ ಭಾರತ ಸರ್ಕಾರ ಇವರ ವತಿಯಿಂದ ನಡೆದ ಕಲಾ ಉತ್ಸವ 2024-25ನೇ ಸಾಲಿನ ಜಿಲ್ಲಾ ಮಟ್ಟದ ವಾದ್ಯ ಸಂಗೀತದಲ್ಲಿ (ಕೊಳಲು) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ಯಾಮ್ ಜಿ.ಎನ್. ಪೂಜಾರಿ ಅವರು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈತ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ಅವರ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಿ. 09 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024- 25ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ  ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಮೈಸೂರು ವಿಭಾಗೀಯ ಮಟ್ಟದ ಆಶುಭಾಷಣದಲ್ಲಿ  ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಭಾ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ  ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಿ. ಸಭೆಯು ರಾಜ್ಯ ಸಮಿತಿಯ ಸದಸ್ಯರು ಜಯನ್ ಮಲ್ಪೆ, ಹಾಗೂ ಜಿಲ್ಲಾ ಸಮಿತಿಯ ಸಂಚಾಲಕರಾದ ವಾಸುದೇವ ಮುದೂರು ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಎಲ್ಲಾ ದಲಿತ ಮುಖಂಡರು ಹಾಗೂ ದಲಿತ ಸಮುದಾಯದ ಒಪ್ಪಿಗೆ ಮೇರೆಗೆ ಲಕ್ಷ್ಮಣ್ ಬೈಂದೂರು ಅವರನ್ನು ಅವಿರೋಧವಾಗಿ ಕರ್ನಾಟಕ ದಲಿತ ಸಂಘರ್ಷ ರಿ. ಸಮಿತಿ ತಾಲ್ಲೂಕು ಸಂಚಾಲಕರಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ದಲಿತ ಮುಖಂಡರಾದ ಜಯನ್ ಮಲ್ಪೆ, ವಾಸುದೇವ ಮುದೂರು, ಅಂಬೇಡ್ಕರ್ ಯುವ ಸೇನಾ ಜಿಲ್ಲಾಧ್ಯಕ್ಷರು ಹರೀಶ್ ಸಾಲ್ಯಾನ್ ಮಲ್ಪೆ, ಶಿವರಾಮ್ ಹಳಗೇರಿ, ಚಂದ್ರ ಹಳಗೇರಿ, ಹಿರಿಯ ಹೋರಾಟಗಾರ ಮುಡೂರು ಮಾಸ್ಟರ್ ಅಂಬಾಗಿಲು, ಸುಂದರ ಬಾಬು ನೈಕನಕಟ್ಟೆ, ಅಣ್ಣಪ್ಪ ಯೋಜನಾನಗರ, ಭಾಸ್ಕರ್ ನಾಯ್ಕ್ ಮೂಡುಬಗೆ, ರವೀಂದ್ರ ಬೆಳ್ಳಾರೆ, ಯುವಸೇನೆ ಅಧ್ಯಕ್ಷರಾದ ರಾಮ ಮಯ್ಯಾಡಿ, ಮಂಜುನಾಥ್ ಡಿಸಿಬಿ ಅಧಿದ್ರಾವಿಡ ಸಂಘಟನೆಯ ಮುಖಂಡರು ಮತ್ತಿತರು ಯುವ ನಾಯಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಥೈಲ್ಯಾಂಡ್ ಯೂತ್ ಯೋಗ  ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್  ರಿ. ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ಸೋಮವಾರ ಥೈಲ್ಯಾಂಡ್ ದೇಶದ  ಪಟ್ಟಾಯದಲ್ಲಿ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯು ನಡೆಯಿತು. ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳ  ಸ್ಪರ್ಧಿಗಳಲ್ಲಿ ಸುಮಾರು 80 ಜನ ಸ್ಪರ್ಧಿಗಳು ಭಾಗವಹಿಸಿದ್ದರು. ಇವರ ಜೊತೆ  ಭಾರತ ದೇಶದಿಂದ  11 ರಿಂದ 15 ವರ್ಷದ ವಯಸ್ಸಿನ ವಿಭಾಗದಲ್ಲಿ ಪ್ರತಿನಿಧಿಸಿದ ಧನ್ವಿ ಪೂಜಾರಿ ಮರವಂತೆ ಅವರು ಭಾರತ ದೇಶಕ್ಕೆ ಚಿನ್ನದ ಪದಕ ಪಡೆದು ಪ್ರಥಮ ಸ್ಥಾನ ಪಡೆದಿರುತ್ತಾಳೆ. ಧನ್ವಿ ಹೆಮ್ಮಾಡಿಯ ಜನತಾ ಇಂಡಿಪೆಂಡೆಂಟ್ ಪಿ ಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪ್ರಥಮ ಪಿ ಯು ಸಿ ಯಲ್ಲಿ ಕಲಿಯುತ್ತಿದ್ದಾಳೆ. ಈಕೆ ಮರವಂತೆಯ ಶಿವಾ ಮಾಸ್ತಿ ಮನೆ ಹಾಗೂ ಜ್ಯೋತಿ ಚಂದ್ರ ಶೇಖರ್ ಅವರ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇರಳದ ಮುಹಮ್ಮದ್ ಮುನ್ಸೀರ್ (24) ಅವರ ಬೆಲೆ ಬಾಳುವ ಐಫೋನ್ ರೈಲಿನಲ್ಲಿ ಕಳವಾಗಿದೆ. ಅವರು ಗಂಗಾನಗರ-ಕೊಚುವೇಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಡಗಾಂವ್‌ನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದು ರೈಲು ಕುಂದಾಪುರಕ್ಕೆ ತಲುಪಿದಾಗ 1.50 ಲಕ್ಷ ರೂ.ಗಳ ಐಫೋನ್‌ 16 ಪ್ರೊ ಮೊಬೈಲ್‌ ಕಳವಾಗಿರುವುದು ಗಮನಕ್ಕೆ ಬಂತು. ಮುನ್ಸಿರ್‌ ಕಾಸರಗೋಡು ರೈಲ್ವೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಅದನ್ನು ಕುಂದಾಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

Read More