Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಪ್ರಮೋದ ಮಧ್ವರಾಜ್ ಅಭಿಮಾನಿ ಬಳಗ ಕುಂದಾಪುರ ಇವರ ಸಹಕಾರದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಗುರುವಾರದಂದು ಗೋ ಡಾ. ನರಸಿಂಹ ಶೆಟ್ಟಿ ಯಡ್ತರೆ  ಸಭಾ ಮಂಚ್ ರೋಟರಿ ಕ್ಲಬ್ ಸಭಾಭವನದಲ್ಲಿ ಜರಗಿತು. ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಟ ಗೀತಾನಂದ ಪೌಂಡೇಶನ್ ಪ್ರವರ್ತಕರಾದ ಆನಂದ್ ಸಿ. ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಪುರಸಭಾ ಅಧ್ಯಕ್ಷರಾದ ಮೋಹನ್ ದಾಸ್ ಶೆಣೈ, ಸರಕಾರಿ ಆಸ್ಪತ್ರೆಯ ಡಾ. ನಾಗೇಶ್ ಫಿಶಿಯನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿಗಳಾದ ಜಯಕರ ಶೆಟ್ಟಿ, ಆನಗಳ್ಳಿ ಚೆನ್ನಕೇಶವ ಭಟ್ ವೇದಮೂರ್ತಿ ಗಾಯತ್ರಿ , ಹಂಗಳೂರು ಲಯನ್ ಕ್ಲಬ್ ಅಧ್ಯಕ್ಷರಾದ ರೋವನ್ ಡಿಕೋಸ್ಟಾ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು ನಾಯ್ಕನಕಟ್ಟೆ ನಿವಾಸಿ ಲಕ್ಷ್ಮೀ (28) ಕುಂದಾಪುರದಿಂದ ಬಸ್ಸಿನಲ್ಲಿ ಮನೆಯ ಕಡೆಗೆ ಹೋದವರು ನಾಪತ್ತೆಯಾಗಿದ್ದಾರೆ. ಲಕ್ಷ್ಮೀ ನಾಯ್ಕನಕಟ್ಟೆಯ ನಂದನವನದಲ್ಲಿ ತನ್ನ ಅಕ್ಕ ಗೀತಾ ಅವರೊಂದಿಗೆ ವಾಸವಾಗಿದ್ದು, ಅಕ್ಟೋಬರ್ 15ರಂದು ಕುಂದಾಪುರ ವಡೇರ ಹೋಬಳಿ ಎಂಬಲ್ಲಿ ಇನ್ನೊಬ್ಬ ಅಕ್ಕ ಪಾರ್ವತಿ ಮನೆಗೆ ಬಂದಿದ್ದರು. ನಂತರ ಅವರ ಪತಿ ಶಂಕರ್ ಅದೇ ದಿನ ಅಪರಾಹ್ನ 3 ಗಂಟೆಗೆ ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುವ ಬಸ್ಸಿಗೆ ಹತ್ತಿಸಿ ಮನೆಗೆ ಕಳುಹಿಸಿದ್ದಾರೆ. ಆದರೆ ಅವರು ಮನೆಗೆ ತೆರಳದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ‘ಲೇಕ್ 2024’ಸಮ್ಮೇಳನವು ಪ್ರಸ್ತುತ ಜ್ವಲಂತ ಸಮಸ್ಯೆಗಳಿಗೆ ಪ್ರಕೃತಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳುವ ಸುಸ್ಥಿರ ಹಾಗೂ ಸದುದ್ದೇಶಗಳನ್ನು ಹೊಂದಿದೆ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಎನರ್ಜಿ ಆಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್, ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ‘ಲೇಕ್ 2024- 14ನೇ ದ್ವೈವಾರ್ಷಿಕ ಕೆರೆ (ಸರೋವರ) ಸಮ್ಮೇಳನ’ವನ್ನು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಹಲವು ವರ್ಷಗಳಿಂದ ದೇಶದಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಹಾನಿ, ಭೂಕುಸಿತ ಮತ್ತು ಜಲಪ್ರಳಯದ ಆಘಾತಕಾರಿ ಘಟನೆಗಳು ನಡೆಯುತ್ತಿವೆ. ಪ್ರಕೃತಿ, ಪ್ರಾಣಿಸಂಕುಲ, ಸಸ್ಯವರ್ಗ ನಾಶವಾಗುತ್ತಿವೆ. ಈ ನಿಟ್ಟಿನಲ್ಲಿ ಕೆರೆಗಳ ಕುರಿತು ಚಿಂತನ ನಡೆಸುವುದು ಬಹಳ ಅವಶ್ಯಕವಾಗಿದೆ ಎಂದು ಅವರು ವಿವರಿಸಿದರು. ಅಳಿವೆ ಉಳಿಸುವ ಕಾರ್ಯ, ಹಸಿರು ಬಜೆಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ, ಕುಂದಾಪುರ ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿನಿ  ರಿಷಿಕಾ ಆರ್. ದೇವಾಡಿಗ ಅವರು ಪರಂಪರಾ ಕಲ್ಚರಲ್ ಫೌಂಡೇಶನ್, ಬೆಂಗಳೂರು ಇವರು ನಡೆಸಿದ ರಾಜ್ಯಮಟ್ಟದ ದೇಶಭಕ್ತಿ ಗೀತಾ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.  ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶ ಮತ್ತು ವಿದೇಶದ ಅನಿವಾಸಿ ಭಾರತೀಯ ವಿದ್ಯಾರ್ಥಿಗಳೂ ಸೇರಿದಂತೆ ಸುಮಾರು 262 ಸ್ಪರ್ಧಾರ್ಥಿಗಳು ಪಾಲ್ಗೊಂಡಿರುತ್ತಾರೆ. ರಿಷಿಕಾ ಈಗಾಗಲೇ ಜಿಲ್ಲಾ ಮತ್ತು ರಾಜ್ಯಮಟ್ಟದ ಹಲವಾರು ಸ್ಪರ್ಧೆಗಳಲ್ಲಿ ವಿಜೇತಳಾಗಿದ್ದಳು. ಅವಳಿಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಪ್ರಾಚಾರ್ಯರೂ ಆದ  ಶರಣ ಕುಮಾರ ಅವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಮಂಗಳೂರು, ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ ಇಲ್ಲಿನ ಶಿಕ್ಷಕರಿಗೆ ಸೈoಟ್ ಅಲೋಷಿಯಸ್ ಕಾಲೇಜು ಡೀಮಡ್ ಟು ಬಿ ಯೂನಿವರ್ಸಿಟಿ ಮಂಗಳೂರು ಇಲ್ಲಿನ ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಅಲಿಟಾ ಡೇಸ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಆಂಗ್ಲ ಭಾಷೆ ಮತ್ತು ಸಂವಹನ ಕುರಿತು ಒಂದು ದಿನದ ಕಾರ್ಯಾಗಾರವನ್ನು ನಡೆಸಿದರು. ಆಂಗ್ಲ ಭಾಷೆಯ ಆಳ ಜ್ಞಾನವನ್ನು ಹೊಂದಿರುವ ಇವರು ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಅತ್ಯಂತ ಕ್ರಿಯಾಶೀಲರಾಗಿ ಚಟುವಟಿಕೆಗಳ ಮೂಲಕ ಶಿಕ್ಷಕರಿಗೆ ಭಾಷೆಯಲ್ಲಿ ಗೊಂದಲ ಮತ್ತು ಪರಿಹಾರ, ಶಬ್ದಗಳ ಬಳಕೆ, ವ್ಯಾಕರಣ, ಉಚ್ಚಾರ ದೋಷ, ಸಾಮಾನ್ಯ ಪದಗಳ ಪ್ರಯೋಗ ಮತ್ತು ಸ್ಪಷ್ಟತೆ, ತರಗತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಆಂಗ್ಲ ಭಾಷೆ ಸಂವಹನ ಇತ್ಯಾದಿಗಳ ಕುರಿತು ಉದಾಹರಣೆಯೊಂದಿಗೆ ಮನೋಜ್ಞವಾಗಿ ತಿಳಿಸಿದರು. ಎಲ್ಲಾ ಶಿಕ್ಷಕರು ತಮ್ಮನ್ನು ಸಂಪೂರ್ಣವಾಗಿ ಕ್ರಿಯಾಶೀಲತೆಯಿಂದ ಕಾರ್ಯಾಗಾರದಲ್ಲಿ ತೊಡಗಿಸಿಕೊಂಡು ಆಂಗ್ಲ ಭಾಷೆಯ ಕುರಿತು ಅತ್ಯಮೂಲ್ಯ ಮಾಹಿತಿಯನ್ನು ಪಡೆದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಶಮಿತಾ ರಾವ್, ರೆನಿಟಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಹಾಗೂ ಸೂರ್ಯಫೌಂಡೇಶನ್ ವತಿಯಿಂದ ಇಂಡೋಗ್ಲೋಬ್ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ 2024ನೇ ಸಾಲಿನ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಸಮ್ಮೇಳನದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆಗೈದಿರುವ ಶಾಲೆಯನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಾಲಿನಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ಶಾಲೆಗೆ ನೀಡುವ “ಶಿಕ್ಷಣ ಚೈತನ್ಯ ಪ್ರಶಸ್ತಿ – 2024″ಯು ಕುಂದಾಪುರದ ಯಡಾಡಿ – ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಗೆ ದೊರಕಿತು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮುನ್ನೆಡೆಸುವ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಹಾಗೂ ಖಜಾಂಚಿ ಭರತ್ ಶೆಟ್ಟಿ ಸಮಾರಂಭದಲ್ಲಿ ಉಪಸ್ಥಿತರಿದ್ದು ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದರು. ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯು ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ರ ಸ್ಥಾನದಲ್ಲಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಣಿ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಪಕ್ಕದಲ್ಲೇ ಇದ್ದ ಬ್ಯಾಂಕಿನ ಎಟಿಎಂಗೆ ನುಗ್ಗಿ ಯಂತ್ರ ತೆರೆಯಲು ಯತ್ನಿಸುತ್ತಿರುವಾಗ ಹೈದರಾಬಾದ್ ನಿಂದ ಸೆಕ್ಯೂರಿಟಿ ಸಂಸ್ಥೆಯವರು ಎಚ್ಚರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಕಳ್ಳರು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಕೋಣಿಯಲ್ಲಿರುವ ಕರ್ನಾಟಕ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಇಬ್ಬರು ವ್ಯಕ್ತಿಗಳು ಜಾಲಾಡಿದ್ದಾರೆ. ಲಾಕರ್ ತೆರೆಯುವ ಯತ್ನ ಫಲ ನೀಡಲಿಲ್ಲ, ಕೊನೆಗೆ ಅದರ ಪಕ್ಕದಲ್ಲಿರುವ ಎಟಿಎಂಗೆ ಪ್ರವೇಶಿಸಿದ್ದಾರೆ. ಎಟಿಎಂ ಯಂತ್ರವನ್ನು ತಡೆಯಲು ಯತ್ನಿಸಿದಾಗ ಸೈರನ್ ಮೊಳಗಿದೆ. ಎಟಿಎಂ ನಿರ್ವಹಿಸುವ ಸಂಸ್ಥೆಯ ಭದ್ರತಾ ನಿಗಾ ವಹಿಸುವವರು ಹೈದರಾಬಾದಿನಲ್ಲಿ ಸಿಸಿಟಿವಿ ಮಾನಿಟರಿಂಗ್ ಮಾಡುತ್ತಿದ್ದು, ಅವರ ಗಮನಕ್ಕೆ ಬಂದ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಎಸ್ಐ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ವಾತಂತ್ರ್ಯ  ಹೋರಾಟಗಾರರ ನೆನಪು ಸ್ವಾತಂತ್ರ್ಯೋತ್ಸವ ದಿನಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ. ಸ್ವಾತಂತ್ರ ಹೋರಾಟಗಾರರನ್ನು ಗೌರವಿಸುವುದು ಕುಟುಂಬಸ್ಥರ ತ್ಯಾಗವನ್ನು ಸ್ಮರಿಸಿಕೊಳ್ಳವುದು ಅಗತ್ಯದ ವಿಷಯವಾಗಿದೆ. ಈ ದಿಸೆಯಲ್ಲಿ ಈ ಕಾರ್ಯಕ್ರಮ ಶ್ಲಾಘನೀಯ ಮತ್ತು ಅನುಕರಣೀಯವಾಗಿದೆ ಎಂದು ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಮ ಪಂಚಾಯತ್ ಪ್ರಸ್ತುತಿ ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ, ಜಿಲ್ಲಾಮಟ್ಟದ ಚಿತ್ರರಚನೆ ಮತ್ತು ಕಾರಂತರ ಕೃತಿಗಳ ಹೆಸರು ಬರೆಯುವ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಆನಂದ ಸಿ. ಕುಂದರ್‌ ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವಂತಾಗಲಿ ಎಂದು ಹಾರೈಸಿ ಕುಟುಂಬಸ್ಥರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದೇಶದಲ್ಲಿ ಪ್ರಸ್ತುತ ಬಾಧಿಸುತ್ತಿರುವ ಕ್ಯಾನ್ಸರ್‌ಗಳ ಪಟ್ಟಿಯಲ್ಲಿ ಗರ್ಭಕಂಠದ ಕ್ಯಾನ್ಸರ್ ಎರಡನೇ ಸ್ಥಾನದಲ್ಲಿದ್ದು, ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಬಲಿಯಾಗುತ್ತಿದ್ದಾಳೆ ಎಂದು ಎ.ಜೆ. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕಿ ಡಾ. ಮರಿಯಾ ನೆಲ್ಲಿಯನಿಲ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮೂಡುಬಿದಿರೆ ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡ ’ಗರ್ಭಕಂಠದ ಕ್ಯಾನ್ಸರ್ ಮತ್ತು ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಬಗ್ಗೆ ಅರಿವುʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಚ್‌ಪಿವಿ ಸೋಂಕು ನಿಯಂತ್ರಣಕ್ಕಾಗಿ ದೇಶದಲ್ಲಿ ಶೇಕಡಾ 1ರಷ್ಟು ಜನ ಲಸಿಕೆ ಪಡೆದುಕೊಳ್ಳುತ್ತಿದ್ದು, ಶೇಕಡಾ 2ರಷ್ಟು ಜನ ಸ್ಕ್ರೀನಿಂಗ್‌ಗೆ ಒಳಪಟ್ಟಿದ್ದಾರೆ ಎಂದರು. ಎಚ್‌ಪಿವಿ ಸೋಂಕು ಮಾತ್ರವಲ್ಲದೇ ಧೂಮಪಾನ, ಅಸುರಕ್ಷಿತ ಲೈಂಗಿಕ ಕ್ರಿಯೆ, ಬಹು ಗರ್ಭಧಾರಣೆ ಇನ್ನಿತರ ಅಂಶಗಳು ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗುವ ಅಂಶಗಳೆಂದು ಹೇಳಲಾಗುತ್ತದೆ ಎಂದು ವಿಶ್ಲೇಷಿಸಿದರು. ಎಚ್‌ಪಿವಿ ಲಸಿಕೆಯಿಂದ ಮುಂಜಾಗ್ರತೆ ಹಾಗೂ ರಕ್ಷಣೆ ಸಿಗುತ್ತದೆ…

Read More