ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಥಮ ಪಿ.ಯು.ಸಿ.ವ್ಯಾಸಾಂಗ ಮಾಡುತ್ತಿರುವ ತಾಲೂಕಿನ ಕೊಡ್ಲಾಡಿಯ ಶಶಾಂಕ್’ಗೆ ಹೆಮ್ಮಾಡಿಯ ಸಮರ್ಪಣಾ ಎಜುಕೇಶನಲ್ ಟ್ರಸ್ಟ್’ನ ಅಧ್ಯಕ್ಷರು ಹಾಗೂ ಜನತಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ 25,000 ರೂಪಾಯಿಗಳ ಚೆಕ್ ಹಸ್ತಾಂತರಿಸಿದರು. ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾನ್ವಿತ ವಿದ್ಯಾರ್ಥಿಯಾದ ಶಶಾಂಕ್ ಪಿಯುಸಿ ವ್ಯಾಸಂಗದ ಕುರಿತು ಶುಭಹಾರೈಸಿದರು. ಈ ವೇಳೆ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿ, ಅಜಂತಾ ಪ್ರಿಂಟರ್ಸ್ ಮಾಲಕರಾದ ಸಾಮಾಜಿಕ ಧುರೀಣ ಎ. ಅನಂತಕೃಷ್ಣ ಕೊಡ್ಗಿಯವರು (72) ಶನಿವಾರ ನಿಧನರಾದರು. ಹಿರಿಯ ಸಮಾಜ ಸೇವಕರಾಗಿದ್ದು, ಕುಂದಾಪುರದ ಲಯನ್ಸ್ ಕ್ಲಬ್, ಬೋರ್ಡ್ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘ ಮುಂತಾದ ಸಂಘಟನೆಗಳಲ್ಲಿ ಕಾರ್ಯದರ್ಶಿಯಾಗಿ, ಖಜಾಂಚಿಯಾಗಿ ಸೇವೆ ಸಲ್ಲಿಸಿದವರು. ಕುಂದಾಪುರ ತಾಲೂಕು ಬಿಜೆಪಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದವರು. ಈಗ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಕ್ರೀಯಾಶೀಲರಾಗಿದ್ದರು. ತಮ್ಮ ನೇರ ನುಡಿ, ಮಾನವೀಯ ಸಾತ್ವಿಕ ಗುಣಗಳಿಂದ ಸಮಾಜದಲ್ಲಿ ಗೌರವಕ್ಕೆ ಪಾತ್ರರಾದವರು. ಇವರು ಪತ್ನಿ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಮಾಜಿ ಶಾಸಕ, ಅಮಾಸೆಬೈಲು ದಿ. ಎ.ಜಿ.ಕೊಡ್ಗಿಯವರ ಸಹೋದರ ಹಾಗೂ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರ ಚಿಕ್ಕಪ್ಪ. ಹಲವಾರು ಮಂದಿ ಗಣ್ಯರು ಇವರ ನಿಧನಕ್ಕೆ ಸಂತಾಪ ಸೂಚಿಸಿ, ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮೃತರ ಅಂತ್ಯ ಕ್ರಿಯೆಯನ್ನು ಅಮಾಸೆಬೈಲು, ಮಚ್ಚಟ್ಟು ಮೂಲ ಗೃಹದಲ್ಲಿ ನೆರವೇರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಭೇಟಿ ನೀಡಿವಿಶೇಷ ಪೂಜೆ ಸಲ್ಲಿಸಿದರು. ದೇವಳದ ಅರ್ಚಕ ಸುಬ್ರಹ್ಮಣ್ಯ ಅಡಿಗ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಗೃಹಸಚಿವರಿಗೆ ದೇವಿಯ ಪ್ರಸಾದ ನೀಡಿ ಗೌರವಿಸಿದರು. ಈ ವೇಳೆ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡ ರಮೇಶ್ ಗಾಣಿಗ ಹಾಗೂ ಇನ್ನಿತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಧಾರವಾಡದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಪದವಿ ಪೂರ್ವ ವಿಭಾಗದಿಂದ ಭರತನಾಟ್ಯ ಸ್ಪರ್ಧೆಗೆ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದು, ಅಲಕಾ ಹೆಬ್ಬಾರ್ ಕಾಲೇಜಿನ ಸಾಂಸ್ಕೃತಿಕ ತಂಡದ ಉದಯೋನ್ಮುಖ ಪ್ರತಿಭೆ. ಈ ತನಕ ಹಲವು ಕಾರ್ಯಕ್ರಮಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಬಹುಮಾನ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಜೆಇಇ ಮೈನ್ಸ್ 2024 ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ), ಆದಿತ್ಯ ಸಿ.ಚಂದನ್ 90.42 ಪರ್ಸಂಟೈಲ್, ಲಲನ್ ಪಿ. 90.21 ಪರ್ಸಂಟೈಲ್, ಪ್ರಜ್ವಲ್ ಎಸ್.ಪೂಜಾರಿ 89.12ಪರ್ಸಂಟೈಲ್, ರಜತ್ ಪೂಜಾರಿ 87.82 ಪರ್ಸಂಟೈಲ್, ಎನ್. ಕೌಶಿಕ್ 87.52 ಪರ್ಸಂಟೈಲ್, ಪ್ರಾಂಜಲಾ 85.24 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ವಿಭಾಗಕ್ಕೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ ಮೈನ್ಸ್ ನ ಮೊದಲ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳು 95 ಪರ್ಸಂಟೈಲ್ ಗಿಂತ ಅಧಿಕ ಅಂಕಗಳಿಸಿದ್ದಾರೆ 81 ವಿದ್ಯಾರ್ಥಿಗಳು 90 ಪರ್ಸಂಟೈಲ್ ಗಿಂತ ಅಧಿಕ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಪ್ರಣವ್ ಟಿ. ಎಂ 98.6313, ಯುವರಾಜ್ ಬಿ. ಕೆ 98.2878, ಸತೀಶಗೌಡ 97.9123, ಆನ್ಯಾ ಡಿ. ಜೆ ಗೌಡ 97.7325, ಕಾರ್ತಿಕ್ ಎ.ಎಸ್ 97.4489, ಕದಂಬ ಸಿದ್ದಾಂತ್. ಎಸ್ 97.3435, ಸುಜಿತ್ ಡಿ.ಕೆ 97.2340 ಹಾಗೂ ಪ್ರೇಮ್ಸಾಗರ್ ಪಾಟೀಲ್ 97.1615 ಪರ್ಸಂಟೈಲ್ ಗಳಿಸಿದ್ದಾರೆ. ಅತ್ಯಂತ ಕಠಿಣವಾದ ಪರೀಕ್ಷೆಯಲ್ಲಿ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಜೆ.ಇ.ಇ ಸಂಯೋಜಕರಾದ ನಂದೀಶ್ ಹೆಚ್. ಬಿ ಶ್ಲಾಘಿಸಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜನವರಿ 2024ರಲ್ಲಿ ನಡೆದ ಜೆಇಇ ಮೈನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಸಂಸ್ಥೆಯಲ್ಲಿ ಜೆಇಇ ತರಬೇತಿ ಪಡೆದ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಅಧಿಕ ಅಂಕಗಳಿಸಿ ವಿಶೇಷ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಈಶಾ ಶೆಟ್ಟಿ 98.63, ಚಿರಾಗ್ ವಿನಾಯಕ ಮಹಲೆ 97.66, ಎಂ. ಸೃಜನ್ 95.82, ಗೌರವ್ 95.64, ನಿಶಾ 94.50, ನಾಗರಾಜ್ ಸಿದ್ಧಪ್ಪಾ ಉಪ್ಪಾರ್ 94.35, ಸನ್ಮಾನ್ 94.11, ವರುಣ್ ಕೆ ಪಿ 92.58, ಸಮರೇಶ್ 92.40, ರೋಹಿತ್ ಆರ್ ಪೂಜಾರಿ 91.28, ಧನುಷ್ 91.23, ಶಶಾಂಕ್ ಶೆಟ್ಟಿ 91.11, ಪ್ರೀತಮ್ ಶೆಟ್ಟಿ 90.73, ನಿರ್ಮಿತಾ ಎನ್. ಡಿ 90.61, ಅನಿರುದ್ಧ್ ಎಸ್ ಹತ್ವಾರ್ 90.54, ವಿನುತಾ 90.46 ಶೇಕಡಾ ಅಂಕಗಳನ್ನು ಗಳಿಸಿ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಎಕ್ಸಲೆಂಟ್ ಕುಂದಾಪುರ ಸಂಸ್ಥೆಯಲ್ಲಿ ಸರ್ಧಾತ್ಮಕ ಪರೀಕ್ಷೆಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ತೃತೀಯ ಬಿ.ಎ ವಿದ್ಯಾರ್ಥಿನಿಯರಾದ ಭಾರ್ಗವಿ ಮತ್ತು ಧನ್ಯಶ್ರೀ ಜೋಗಿ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರಿಂದ ರಾಜ್ಯ ಪುರಸ್ಕಾರ ದೊರೆತಿದೆ. ಇವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ , ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಗಂಗೊಳ್ಳಿ, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಗ್ರಾಮ ಮಟ್ಟದ ಬೇಟಿ ಬಚಾವೊ, ಬೇಟಿ ಪಡಾವೊ ಜಾಗೃತಿ ಕಾರ್ಯಕ್ರಮ ಗಂಗೊಳ್ಳಿ ಖಾರ್ವಿಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ವಲಯ ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ., ಸಂಪನ್ಮೂಲ ವ್ಯಕ್ತಿಗಳಾದ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ಶಾಲೆಯ ಸಹಶಿಕ್ಷಕಿ ಉಷಾ ಕುಮಾರಿ, ಎಸ್ಡಿಎಂಸಿ ಉಪಾಧ್ಯಕ್ಷೆ ರೇಣುಕಾ ಮೊಗವೀರ, ಸಮುದಾಯ ಆರೋಗ್ಯ ಅಧಿಕಾರಿ ನಯನಾ ತಾಂಡೇಲ, ಶಾಲೆಯ ವಿದ್ಯಾರ್ಥಿ ಅಂಶು ಖಾರ್ವಿ, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮೊದಲಾದವರು ಉಪಸ್ಥಿತರಿದ್ದರು. ಹೆಣ್ಣು ಮಕ್ಕಳ ಜನನವನ್ನು ಸಂಭ್ರಮಿಸುವ ಸಲುವಾಗಿ ಶಾಲೆಯ ವಠಾರದಲ್ಲಿ ಸಾಂಕೇತಿಕವಾಗಿ ಗಿಡ ನೆಡಲಾಯಿತು. ಬೇಟಿ ಬಚಾವೊ, ಬೇಟಿ ಪಡಾವೊ, ಹೆಣ್ಣು…
ಭಾರತದಲ್ಲಿ ಪಾನ್ ಕಾರ್ಡ್ ಪ್ರಮುಖ ಗುರುತು ದೃಢೀಕರಣ ದಾಖಲೆಯಾಗಿದ್ದು, ಮುಖ್ಯವಾಗಿ ತೆರಿಗೆ ಸಂಬಂಧಿ ಉದ್ದೇಶಗಳಿಗೆ ಬಳಸಲಾಗುತ್ತದೆ. ಒಂದು ವೇಳೆ ನಿಮ್ಮ ಪಾನ್ ಕಾರ್ಡ್ ಕಳೆದು ಹೋಗಿದ್ದರೆ ಪುನಃ ಅರ್ಜಿ ಸಲ್ಲಿಸಬಹುದಾಗಿದೆ. ಆದಾಯ ತೆರಿಗೆ ಇಲಾಖೆ ಆನ್ ಲೈನ್ ಸೌಲಭ್ಯ ಬಳಸಿಕೊಂಡು ಇನ್ ಸ್ಟೆಂಟ್ ಇ-ಪ್ಯಾನ್ ಅಥವಾ ಡಿಜಿಟಲ್ ಪ್ಯಾನ್ ಕಾರ್ಡ್ ಗೆ ಕೂಡ ಅರ್ಜಿ ಸಲ್ಲಿಸಬಹುದು. ಪಾನ್ ಕಾರ್ಡ್ ಕಳೆದು ಹೋದ ತಕ್ಷಣ ಎಫ್ ಐಆರ್ ಫೈಲ್ ಮಾಡೋದು ಅಗತ್ಯ. ಇದರಿಂದ ಬೇರೆಯವರು ನಿಮ್ಮ ಪಾನ್ ಕಾರ್ಡ್ ದುರ್ಬಳಕೆ ಮಾಡದಂತೆ ತಡೆಯಲು ಸಾಧ್ಯವಾಗುತ್ತದೆ. ಆನ್ ಲೈನ್ ನಲ್ಲಿ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದು ಹೇಗೆ? ಈಗ ಪಾವತಿ ಪುಟ ತೆರೆದುಕೊಳ್ಳುತ್ತದೆ. ಒಮ್ಮೆ ಪಾವತಿ ಮಾಡಿದ ಬಳಿಕ ನಿಮ್ಮ ನಕಲಿ ಪ್ಯಾನ್ ಕಾರ್ಡ್ ಸ್ಟೇಟಸ್ ಅನ್ನು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಂದರ್ಭದಲ್ಲಿ ಸೃಷ್ಟಿಯಾದ 15 ಅಂಕೆಗಳ ಸ್ವೀಕೃತಿ ಸಂಖ್ಯೆ ಬಳಸಿಕೊಂಡು ಪರಿಶೀಲಿಸಬಹುದು.
